the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಅಧಿಸೂಚನೆ ಹಿಂತೆಗೆತಕ್ಕೆ ಲಾಬಿ; ಪಶು ವೈದ್ಯಾಧಿಕಾರಿಗಳ ಒತ್ತಡಕ್ಕೆ ಮಣಿಯುವರೇ ಪ್ರಭು ಚವ್ಹಾಣ್‌?

ಜಿ ಮಹಂತೇಶ್ by ಜಿ ಮಹಂತೇಶ್
June 15, 2020
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಿಯೋಜನೆಯಡಿಯಲ್ಲಿ ಹಲವು ವರ್ಷಗಳಿಂದಲೂ ತಳವೂರಿರುವ ಮುಖ್ಯ ಪಶು ವೈದ್ಯಾಧಿಕಾರಿಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಹಿಂಪಡೆಯಲು ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಲು ನಡೆಸಿರುವ ಕಸರತ್ತು ಇದೀಗ ಬಹಿರಂಗವಾಗಿದೆ.

ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪಶು ವೈದ್ಯಾಧಿಕಾರಿಗಳು, ಪಶು ವಿಜ್ಞಾನಗಳ ವಿಶ್ವವಿದ್ಯಾಲಯ, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಹಿಂಬಾಗಿಲ ಮೂಲಕ ಶಾಶ್ವತವಾಗಿ ವಿಲೀನಗೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿರುವುದೇ ಇದಕ್ಕೆ ಮೂಲ ಕಾರಣ.

ಸರ್ಕಾರಿ ಆದೇಶದ ಪ್ರಕಾರ ಮಾತೃ ಇಲಾಖೆಗೆ ತೆರಳಿದರೆ ವಿಶ್ವವಿದ್ಯಾಲಯದ ಆಯಕಟ್ಟಿನ ಜಾಗ ತಪ್ಪಿ ಹೋದೀತು ಎಂಬ ಕಾರಣಕ್ಕೆ ಆದೇಶವನ್ನೇ ರದ್ದುಗೊಳಿಸಲು ಸಚಿವ ಪ್ರಭು ಚವ್ಹಾಣ್‌ ಮೇಲೆ ತೀವ್ರ ಒತ್ತಡ ಹೇರಿರುವ ಪಶು ವೈದ್ಯಾಧಿಕಾರಿಗಳು, ಪಶು ವೈದ್ಯಕೀಯ ವಿಜ್ಞಾನ ಪದವೀಧರರ ಉದ್ಯೋಗಗಳನ್ನು ಕಬಳಿಸಲಿದ್ದಾರೆ ಎಂದು ಹೇಳಲಾಗಿದೆ. ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಬಹುತೇಕ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಬಲ ಸಮುದಾಯಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

ಸರ್ಕಾರದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆ ಅಥವಾ ನಿಗಮ, ಮಂಡಳಿ, ವಿಶ್ವವಿದ್ಯಾಲಯದಲ್ಲಿ 5 ವರ್ಷ ಅವಧಿಯವರೆಗೆ ಮಾತ್ರ ನಿಯೋಜನೆಯಲ್ಲಿ ಕಾರ್ಯನಿರ್ವಹಿಸಲು ಅವಕಾಶವಿದೆ. ಆದರೆ ಪಶು ವೈದ್ಯಕೀಯ ಕಾಲೇಜು ಮತ್ತು ಪಶು ವಿಜ್ಞಾನಗಳ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕಳೆದ 5 ವರ್ಷಗಳಿಗೂ ಮೀರಿ ನಿಯೋಜನೆಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಪಶು ವೈದ್ಯಾಧಿಕಾರಿಗಳಾಗಿ ನೇಮಕ ಹೊಂದಿರುವವರ ಪೈಕಿ 36 ಮಂದಿ ಮುಖ್ಯ ಪಶುವೈದ್ಯಾಧಿಕಾರಿಗಳು, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ, ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಶಿವಮೊಗ್ಗದಲ್ಲಿರುವ ವನ್ಯಜೀವಿ ಘಟಕ ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ, ಶಿವಮೊಗ್ಗ, ಹಾಸನ, ಹೆಬ್ಬಾಳ, ಬೀದರ್‌ ಪಶು ವೈದ್ಯಕೀಯ ಕಾಲೇಜುಗಳಲ್ಲಿ 5 ವರ್ಷಗಳಿಗೂ ಮೀರಿ ನಿಯೋಜನೆಯಲ್ಲಿಯೇ ಮುಂದುವರೆದಿದ್ದಾರೆ. ಇವರಲ್ಲಿ 30 ಮಂದಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಮತ್ತು ಕರ್ನಾಟಕ ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವುದು ತಿಳಿದು ಬಂದಿದೆ.

ಈ ವೈದ್ಯಾಧಿಕಾರಿಗಳ ಸೇವೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮಾತೃ ಇಲಾಖೆಯಾಗಿರುವ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಹಿಂಪಡೆಯಲು 2020ರ ಜೂನ್‌ 9ರಂದು ಇಲಾಖೆ ಆದೇಶ ಹೊರಡಿಸಿತ್ತು. ಪಶು ವೈದ್ಯಾಧಿಕಾರಿಗಳ ತೀವ್ರ ಕೊರತೆಯಿಂದಾಗಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಹಲವು ಯೋಜನೆಗಳು ಮುಗ್ಗರಿಸಿ ಬಿದ್ದಿವೆ. ಹೀಗಾಗಿ ನಿಯೋಜನೆ ಮೇರೆಗೆ ತೆರಳಿರುವ ಎಲ್ಲಾ ಪಶು ವೈದ್ಯಾಧಿಕಾರಿಗಳನ್ನು ಇಲಾಖೆಗೆ ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ತಳವೂರಿರುವರ ಪಟ್ಟಿ

ಮುಖ್ಯ ಪಶುವೈದ್ಯಾಧಿಕಾರಿ ಡಾ ರವಿ ಸಾಲಿಗೌಡ(ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ) ಡಾ ಡಿ ಎನ್‌ ನಾಗರಾಜು(ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ), ಡಾ ವಿನಯ್‌ ಎಸ್‌ (ವನ್ಯಜೀವಿ ಘಟಕ, ಶಿವಮೊಗ್ಗ), ಡಾ ಎಂ ಎಲ್‌ ಕ್ಷಮಾ(ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ), ಡಾ ವಸಂತಕುಮಾರ್‌ ಶೆಟ್ಟಿ, ಡಾ ಗಣೇಶ್‌ ಹೆಗಡೆ, ಡಾ ರಾಜಶೇಖರ ಬಿ , ಡಾ ಲೋಹಿತ್‌ ಟಿ ಎಸ್‌, ಡಾ ಪ್ರವೀಣ್‌ಕುಮಾರ್ ಜಿ ಆರ್‌, ಡಾ ರಂಗನಾಥ್‌ ಎಸ್‌, ಡಾ ಸುಮಂತ್‌ಕುಮಾರ್‌ ಆರ್‌, ಡಾ ಶ್ರೀವತ್ಸ ವಿ, ಡಾ ರಶ್ಮಿ ಎಸ್‌, ಡಾ ಮಂಜುನಾಥ್‌ ವಿ., ಡಾ ಶಿವಮೂರ್ತಿ ವಕಾರೆ, ಡಾ ಕೆ ಪಿ ಮಂಜುನಾಥ, ಇವರು ಬೆಂಗಳೂರಿನ ಪಶು ಆರೋಗ್ಯ ಜೈವಿಕ ಸಂಸ್ಥೆಯಲ್ಲಿ ನಿಯೋಜನೆ ಮೇರೆಗೆ ಕಳೆದ 5 ವರ್ಷಗಳಿಗೂ ಮೀರಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಅದೇ ರೀತಿ ಡಾ ಎಸ್‌ ಸುಂದರೇಶನ್‌,ಡಾ ಬಿ ಎ ದೇಸಾಯಿ( ಪಶು ವೈದ್ಯಕೀಯ ಕಾಲೇಜು ಶಿವಮೊಗ್ಗ),ಡಾ ಕೆ ಎಲ್‌ ಫಣಿರಾಜ್‌, ಡಾ ಸಿ ಆರ್‌ ಗೋಪಿನಾಥ, ಡಾ ಪಿ ಎಂ ಗುರುರಾಜ ( ಪಶು ವೈದ್ಯಕೀಯ ಕಾಲೇಜು ಬೆಂಗಳೂರು), ಡಾ ಕೆ ಎನ್‌ ಪವನಕುಮಾರ್‌, ಡಾ ಚಂದ್ರಶೇಖರ್‌, ಡಾ ಚಂದ್ರೇಗೌಡ, ಡಾ ಅಶ್ವಥನಾರಾಯಣಪ್ಪ, ಡಾ ಎಂ ಎ ಸುನೀಲಕುಮಾರ, ಡಾ ಶಂಭುಲಿಂಗಪ್ಪ ಬಡ್ಡಿ ಅವರು ಹಾಸನದಲ್ಲಿರುವ ಪಶು ವೈದ್ಯಕೀಯ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, ಡಾ ಮುತ್ತುರಾಜ್ ಪಚ್ಚನ್ನವರ, ಡಾ ಸುದರ್ಶನ ಗಡದ, ಡಾ ನಾಗಪ್ಪ ಭಾನುವಳ್ಳಿ, ಡಾ ಕೆ ಪಿ ಹರೀಶಕುಮಾರ, ಡಾ ಜಿ ಚಂದ್ರಶೇಖರ್, ಡಾ ಎಂ ಭರತಭೂಷಣ, ಡಾ ಎಂ ನವೀನ್‌, ಡಾ ವೈ ಮಧುರಾ ಶಿವಮೊಗ್ಗದಲ್ಲಿರುವ ಪಶು ವೈದ್ಯಕೀಯ ಕಾಲೇಜಿನಲ್ಲಿ ಮತ್ತು ಡಾ ಅನಂತರಾವ್ ದೇಸಾಯಿ(ಬೀದರ್‌ನ ಪಶುವೈದ್ಯಕೀಯ ಕಾಲೇಜು) ಕಾರ್ಯನಿರ್ವಹಿಸುತ್ತಿರುವುದು ಸರ್ಕಾರದ ಆದೇಶದಿಂದ ತಿಳಿದು ಬಂದಿದೆ.

5 ವರ್ಷಗಳಿಗೂ ಮೀರಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಅಧಿಕಾರಿಗಳಿಗೆ ಒಂದೊಮ್ಮೆ ಹಿಂಬಾಗಿಲಿನ ಮೂಲಕ ಶಾಶ್ವತವಾಗಿ ವಿಲೀನಗೊಂಡಿದ್ದೇ ಆದಲ್ಲಿ ನಿವೃತ್ತಿ ಆಗುವವರೆಗೂ ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುವುದಿಲ್ಲ. ಹೀಗಾಗಿ ಮೀಸಲಾತಿ ನೀತಿಗೂ ಭಾರೀ ಪೆಟ್ಟು ಬೀಳಲಿದೆ ಎಂದು ಹೇಳಲಾಗಿದೆ.

ಅಲ್ಲದೆ, ಪಶು ವೈದ್ಯಕೀಯ ವಿಜ್ಞಾನಗಳ ಪದವೀಧರರಿಗೆ ವಿಶ್ವವಿದ್ಯಾಲಯ ಮತ್ತು ಪಶು ವೈದ್ಯಕೀಯ ಕಾಲೇಜುಗಳಲ್ಲಿ ಉದ್ಯೋಗ ಅವಕಾಶಗಳಿಂದ ವಂಚಿತರಾಗಲಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಪದವೀಧರರಿಗೆ ಅನ್ಯಾಯವಾಗಲಿದೆ ಎಂಬ ಅರೋಪವೂ ಕೇಳಿ ಬಂದಿದೆ.

Tags: AnimalAnimal husbandryAssistant ProfessorB S YediyurappaBidarBJP governmentChief SecretaryFisheriesh d kumaraswamyH D RevannaHasanHebbalakarnatakaKPCCObsorbPrabhu ChavhanReservationShivamoggaSiddaramaiahUniversityV RashmiMaheshVeterinaryVeterinary College
Advertisement Banner
Previous Post

ಹೊಸ ಪದ್ಧತಿ; ರಾಷ್ಟ್ರೀಯ ಭಾವನೆ ಹೆಸರಿನಲ್ಲಿ ‘ಜೈ ಹಿಂದ್‌’ ಹೇಳಲು ಪೊಲೀಸರಿಗೆ ವಿಚಿತ್ರ ಸೂಚನೆ

Next Post

ಎಲ್‌ಕೆಜಿಯಿಂದ 5ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣ ನಿರ್ಬಂಧಿಸಲು ನಿರ್ಧಾರ; ಶೀಘ್ರದಲ್ಲೇ ಆದೇಶ

ಜಿ ಮಹಂತೇಶ್

ಜಿ ಮಹಂತೇಶ್

Next Post

ಎಲ್‌ಕೆಜಿಯಿಂದ 5ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣ ನಿರ್ಬಂಧಿಸಲು ನಿರ್ಧಾರ; ಶೀಘ್ರದಲ್ಲೇ ಆದೇಶ

Discussion about this post

Recommended

ದಿವ್ಯಾ ಹಾಗರಗಿ ತಲೆಮರೆಸಿಕೊಳ್ಳಲು ನೆರವು ಸಿಕ್ಕಿದ್ದರ ಹಿಂದಿನ ರಹಸ್ಯ ಬಯಲು; ಮರಳು ಗಣಿಗಾರಿಕೆ ನಂಟು!

4 years ago

ದುಬಾರಿ ಸಹಾಯಧನದಿಂದ ತೆರಿಗೆಯೇತರ ರಾಜಸ್ವ ಪ್ರಮಾಣ ನಗಣ್ಯ; ತೆರಿಗೆ ಭಾರ ಹೊರಿಸಲಿದೆಯೇ?

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd