the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ

thefilestack by thefilestack
February 11, 2021
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬಹುತೇಕ ಜಿಲ್ಲಾ ಪಂಚಾಯ್ತಿಗಳು ಕ್ರಿಯಾ ಯೋಜನೆಗಳನ್ನೇ ರೂಪಿಸಿಲ್ಲ. ಹಾಗೆಯೇ ಕಾಮಗಾರಿಯನ್ನೂ ಅನುಷ್ಠಾನಗೊಳಿಸಿಲ್ಲ. ಆದರೂ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರು. ಮೊತ್ತದ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಸಚಿವಾಲಯವು ಆರ್ಥಿಕ ಇಲಾಖೆ ಮೇಲೆ ಒತ್ತಡ ಹೇರುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.

ಕ್ರಿಯಾ ಯೋಜನೆ ತಯಾರಾಗದಿದ್ದ ಮೇಲೆ ಅನುದಾನವನ್ನು ಹೇಗೆ ಬಿಡುಗಡೆ ಮಾಡಬೇಕು ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಇತ್ತ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ರಸ್ತೆ ಕಾಮಗಾರಿ ಸಂಬಂಧಿಸಿದಂತೆ 65 ಕೋಟಿ ರು.ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಮೇಲೆ ನಿರಂತರ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಮರಿಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ನಿಕಟವರ್ತಿಗಳು ಎಂಬ ಒಂದೇ ಕಾರಣಕ್ಕೆ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿ ಮುತುವರ್ಜಿ ವಹಿಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಕಾಮಗಾರಿಗೆ ಅನುಮೋದನೆ ದೊರೆತಿದೆಯಾದರೂ ಇದನ್ನು ತುಂಡು ಗುತ್ತಿಗೆ ಕೊಡಬೇಕೇ ಅಥವಾ ನೇರವಾಗಿ ಟೆಂಡರ್‌ ಕರೆಯಬೇಕೆ ಎಂಬ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯೂ ನಿರ್ಧರಿಸಿಲ್ಲ. ಕಾಮಗಾರಿ ನಡೆಸಲು ಟೆಂಡರ್‌ ಪ್ರಕ್ರಿಯೆ ನಡೆಯದೆಯೇ ಅಷ್ಟೊಂದು ಮೊತ್ತವನ್ನು ಏಕಾಏಕಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಹೇಳುತ್ತಿದೆ. ಆದರೂ ಮುಖ್ಯಮಂತ್ರಿಗಳ ಸಚಿವಾಲಯವು ಹಣ ಬಿಡುಗಡೆ ಸಂಬಂಧ ಒತ್ತಡವನ್ನು ಮುಂದುವರೆಸಿದೆ.

ಕಳೆದ ಬಾರಿ ಬಿದ್ದ ಭಾರೀ ಮಳೆಯಿಂದ ಉತ್ತರ ಕರ್ನಾಟಕದ ಬಹುತೇಕ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳು ಹಾಳಾಗಿವೆ. ಬೊಕ್ಕಸದಲ್ಲಿ ಹಣವಿಲ್ಲ ಎಂಬ ನೆಪವನ್ನೊಡ್ಡುತ್ತಿರುವ ಸರ್ಕಾರ ರಸ್ತೆ ದುರಸ್ತಿಗೆ ಅನುದಾನ ನೀಡುತ್ತಿಲ್ಲ. ಅಲ್ಲದೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ 1,600 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ.

ಹೀಗಿರುವಾಗ ಕ್ರಿಯಾ ಯೋಜನೆಯನ್ನೇ ತಯಾರಿಸದ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ 65 ಕೋಟಿ ರು. ಬಿಡುಗಡೆ ಮಾಡಿಸಲು ಮುಖ್ಯಮಂತ್ರಿಗಳ ಸಚಿವಾಲಯವು ತರಾತುರಿಯಿಂದ ಓಡಾಡುತ್ತಿರುವುದು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

Tags: b l santhoshB S YediyurappaBengaluru Zilla PanchayatChief Minister OfficeChief SecretaryD K ShivakumarFinance Departmenth d kumarswamyK S EshwarappaL K AtheeqN RavikumarP RavikumarPanchayat RajRoad WorksRural DevelopmentSiddaramaiahUttara KarnatakaZP Presidentಆರ್ಥಿಕ ಇಲಾಖೆಎಚ್‌ ಡಿ ಕುಮಾರಸ್ವಾಮಿಎನ್‌ ರವಿಕುಮಾರ್‌ಐಎಸ್‌ಎನ್‌ ಪ್ರಸಾದ್‌ಕೆಪಿಸಿಸಿಡಿ ಕೆ ಶಿವಕುಮಾರ್ಬಿ ಎಲ್‌ ಸಂತೋಷ್‌ಬಿ ಎಸ್‌ ಯಡಿಯೂರಪ್ಪಬಿಜೆಪಿ ಕರ್ನಾಟಕಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಮುಖ್ಯಮಂತ್ರಿಗಳ ಕಚೇರಿರಸ್ತೆ ಕಾಮಗಾರಿಸಿದ್ದರಾಮಯ್ಯ
Advertisement Banner
Previous Post

50 ಲಕ್ಷ ಥೈಲಿ ಸಿಕ್ಕಿಬಿದ್ದ ಪ್ರಕರಣ; ಪಿಡಬ್ಲ್ಯುಡಿ ಅಧಿಕಾರಿ ವಿರುದ್ಧ ತನಿಖೆ ವಿಳಂಬ?

Next Post

ಕೆಎಎಸ್‌ ಅಕ್ರಮ ಫಲಾನುಭವಿಗಳ ರಕ್ಷಣೆಯ ಸುಗ್ರೀವಾಜ್ಞೆಗೆ ಕುತ್ತು?; ಹೈಕೋರ್ಟ್‌ ನೋಟೀಸ್‌

thefilestack

thefilestack

Next Post

ಕೆಎಎಸ್‌ ಅಕ್ರಮ ಫಲಾನುಭವಿಗಳ ರಕ್ಷಣೆಯ ಸುಗ್ರೀವಾಜ್ಞೆಗೆ ಕುತ್ತು?; ಹೈಕೋರ್ಟ್‌ ನೋಟೀಸ್‌

Discussion about this post

Recommended

ಅವರೆಕಾಳು ದಾಸ್ತಾನು ಹಗರಣ; 23 ಕೋಟಿ ರು. ನಷ್ಟದ ತನಿಖಾ ವರದಿ ಸಲ್ಲಿಸಲು ಸಿಐಡಿಗೆ ನಿರ್ದೇಶನ

4 years ago

ಅಕ್ರಮ ಅದಿರು ಸಾಗಾಟ; ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಕೆಗೆ ಮೂಡದ ಒಮ್ಮತ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd