the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಈಶ್ವರಪ್ಪ ಬಂಡಾಯ; ಸಿಎಂ ಹಸ್ತಕ್ಷೇಪ ಕುರಿತು ತಿಂಗಳ ಮೊದಲೇ ಬಹಿರಂಗಪಡಿಸಿದ್ದ ‘ದಿ ಫೈಲ್‌’

thefilestack by thefilestack
April 1, 2021
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ತಮ್ಮ ಇಲಾಖೆಯಲ್ಲಿ ಯಡಿಯೂರಪ್ಪ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆಪಾದಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ನೀಡುವ ಒಂದು ತಿಂಗಳ ಮುನ್ನವೇ ‘ದಿ ಫೈಲ್‌’, ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ 65 ಕೋಟಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳ ಸಚಿವಾಲಯ ಒತ್ತಡ ಹೇರಿತ್ತು ಎಂಬುದನ್ನು ಬಹಿರಂಗಪಡಿಸಿತ್ತು.

ಮುಖ್ಯಮಂತ್ರಿ ಸಚಿವಾಲಯವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕುರಿತು ‘ದಿ ಫೈಲ್‌’ ಫೆ.11ರಂದು ‘ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ’ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು.

https://stack.thefile.in/2021/02/governance/6609/

ಆಡಳಿತಾರೂಢ ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿರುವ ಈಶ್ವರಪ್ಪ ಅವರು ನೀಡಿರುವ ದೂರಿನ ಮೂರನೇ ಪುಟದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ 65 ಕೋಟಿ ರು ಬಿಡುಗಡೆ ಮಾಡಿಸಲು ಮುಖ್ಯಮಂತ್ರಿಗಳ ಸಚಿವಾಲಯ ಒತ್ತಡ ಹೇರಿದೆ ಎಂಬುದನ್ನು ಪ್ರಸ್ತಾಪಿಸಿದ್ದಾರೆ. ‘ಇದಕ್ಕೆ ಸಂಬಂಧಿಸಿದ ಕಡತ ತಮ್ಮ ಕಚೇರಿಯಲ್ಲಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ನೇರವಾಗಿ ಕಡತ ಸಲ್ಲಿಸಲು ಸೂಚಿಸಿದ್ದಾರೆ,’ ಎಂದು ಈಶ್ವರಪ್ಪ ಅವರು ದೂರಿನಲ್ಲಿ ವಿವರಿಸಿದ್ದಾರೆ.

ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ರಸ್ತೆ ಕಾಮಗಾರಿ ಸಂಬಂಧಿಸಿದಂತೆ 65 ಕೋಟಿ ರು.ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಮೇಲೆ ನಿರಂತರ ಒತ್ತಡ ಹಾಕುತ್ತಿದ್ದಾರೆ ಎಂದು ವರದಿ ಮಾಡಿತ್ತು.

ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಮರಿಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ನಿಕಟವರ್ತಿಗಳು ಎಂಬ ಒಂದೇ ಕಾರಣಕ್ಕೆ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿ ಮುತುವರ್ಜಿ ವಹಿಸುತ್ತಿದ್ದಾರೆ ಎಂದು ‘ದಿ ಫೈಲ್‌’ ಹೊರಗೆಡವಿತ್ತು.

ಕಾಮಗಾರಿಗೆ ಅನುಮೋದನೆ ದೊರೆತಿದೆಯಾದರೂ ಇದನ್ನು ತುಂಡು ಗುತ್ತಿಗೆ ಕೊಡಬೇಕೇ ಅಥವಾ ನೇರವಾಗಿ ಟೆಂಡರ್‌ ಕರೆಯಬೇಕೆ ಎಂಬ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯೂ ನಿರ್ಧರಿಸಿಲ್ಲ. ಕಾಮಗಾರಿ ನಡೆಸಲು ಟೆಂಡರ್‌ ಪ್ರಕ್ರಿಯೆ ನಡೆಯದೆಯೇ ಅಷ್ಟೊಂದು ಮೊತ್ತವನ್ನು ಏಕಾಏಕಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಹೇಳುತ್ತಿದೆ. ಆದರೂ ಮುಖ್ಯಮಂತ್ರಿಗಳ ಸಚಿವಾಲಯವು ಹಣ ಬಿಡುಗಡೆ ಸಂಬಂಧ ಒತ್ತಡವನ್ನು ಮುಂದುವರೆಸಿದ್ದನ್ನು ‘ದಿ ಫೈಲ್‌’ ಬಹಿರಂಗಪಡಿಸಿತ್ತು.

ದೂರಿನಲ್ಲಿ ಇನ್ನೇನಿದೆ?

ಗ್ರಾಮೀಣ ಸುಮಾರ್ಗ ಯೋಜನೆಯಡಿ 5 ವರ್ಷಗಳಲ್ಲಿ 20 ಸಾವಿರ ಕಿ.ಮೀ ರಸ್ತೆ ಅಭಿವೃದ್ಧಿಪಡಿಸುವ ಉದ್ದೇಶದಿಂದ ನಿಗದಿಪಡಿಸಿದ್ದ 780 ಕೋಟಿ ಹಣಕಾಸು ಇಲಾಖೆ ಬಿಡುಗಡೆ ಮಾಡಿಲ್ಲ. ಇದಕ್ಕೆ ಕಾರಣವೇನೆಂದು ಗೊತ್ತಿಲ್ಲ ಎಂದು ಈಶ್ವರಪ್ಪ ಅವರು ದೂರಿನಲ್ಲಿ ತಿಳಿಸಿದ್ದಾರೆ.

2020–21 ರ ಬಜೆಟ್‌ನಲ್ಲಿ ಪ್ರಕಟಿಸಿದ ಇತರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣಕಾಸು ಇಲಾಖೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ವಿಶೇಷ ಅನುದಾನದ ಹೆಸರಿನಲ್ಲಿ (ಬಜೆಟ್‌ ಹೊರತುಪಡಿಸಿ) 1,439.25 ಕೋಟಿಗೆ ಅನುಮೋದನೆ (ಹಿಂದಿನ ಸರ್ಕಾರದ ಬಿಡುಗಡೆ ಮಾಡಿದ ₹973.80 ಕೋಟಿ ಬಿಟ್ಟು) ನೀಡಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

81 ವಿಧಾನಸಭಾ ಕ್ಷೇತ್ರಗಳಿಗೆ 775 ಕೋಟಿ ರು.ಗೆ ಹಣಕಾಸು ಇಲಾಖೆ ಇತ್ತೀಚೆಗೆ ಅನುಮೋದನೆ ನೀಡಿದೆ. ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ 5 ಕೋಟಿಯಿಂದ 23 ಕೋಟಿವರೆಗೆ ಅನುದಾನ ಹಂಚಿಕೆ ಮಾಡಿದೆ. ಬೇಕಾಬಿಟ್ಟಿ ಹಣ ನೀಡುವುದರಿಂದ ಗ್ರಾಮೀಣ ಮೂಲಸೌಕರ್ಯ ಯೋಜನೆಗಳ ಮೇಲೆ ದೀರ್ಘಾವಧಿಯಲ್ಲಿ ಪರಿಣಾಮ ಬೀರಲಿದೆ ಎಂದು ದೂರಿನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ವಿಶೇಷ ಅನುದಾನ ಯೋಜನೆಯಡಿ ಜಾರಿಗೊಳಿಸಿರುವ 5 ಲಕ್ಷದೊಳಗೆ ರಸ್ತೆ ಕಾಮಗಾರಿಯು ರಸ್ತೆಗಳ ಗುಣಮಟ್ಟದ ಮೇಲೆ ಪರಿಣಾಮ ಬೀರುವುದಲ್ಲದೆ, ಅಕ್ರಮದ ಆರೋಪಕ್ಕೂ ಒಳಗಾಗಬೇಕಾಗುತ್ತದೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಈಗಾಗಲೇ 3,998.56 ಕೋಟಿ ಅನುಮೋದನೆ ನೀಡಿದೆ. ಅದರಲ್ಲಿ 1,600.42 ಕೋಟಿ ಮಾತ್ರ ಬಿಡುಗಡೆ ಮಾಡಲಾಗಿದೆ. ಇನ್ನೂ 2,398.18 ಕೋಟಿ. ಬಿಡುಗಡೆ ಮಾಡಬೇಕಿದೆ. ಇದರ ಅರ್ಥ ನನ್ನ ಇಲಾಖೆಯ ಯೋಜನೆಗಳನ್ನು ಕಡೆಗಣಿಸಲಾಗುತ್ತಿದೆ. ಈಗಿನ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಸಾರ್ವಜನಿಕರ ಹಣ ದುರುಪಯೋಗ ಎಂದೇ ಕರೆಯಬೇಕಾಗುತ್ತದೆ’ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

Tags: Amit ShahBengaluru Urban Zilla PanchayatChief Minister Interferingcivil worksD K Shivakmarh d kumarswamyK S EshwarappaKarnataka (Transaction of Business) RulesL K AtheeqPrime MinisterRandeep SurjewalaSiddaramaiahState Administrationvajubhai valaviolation of Panchayati Raj Actಅಮಿತ್‌ ಶಾಆಡಳಿತಎಚ್‌ ಡಿ ಕುಮಾರಸ್ವಾಮಿಎಲ್‌ ಕೆ ಅತೀಕ್‌ಕೆ ಎಸ್‌ ಈಶ್ವರಪ್ಪಡಿ ಕೆ ಶಿವಕುಮಾರ್ಪಂಚಾಯತ್‌ರಾಜ್‌ ಕಾಯ್ದೆ ಉಲ್ಲಂಘನೆಪ್ರಧಾನಮಂತ್ರಿಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಮುಖ್ಯಮಂತ್ರಿ ಹಸ್ತಕ್ಷೇಪರಣದೀಪ್‌ ಸುರ್ಜೆವಾಲಾವಜುಭಾಯ್‌ ವಾಲಾಸಿದ್ದರಾಮಯ್ಯಸಿವಿಲ್‌ ಕಾಮಗಾರಿ
Advertisement Banner
Previous Post

ಗಣಿಗಾರಿಕೆ; ಬಿಜೆಪಿ ಸರ್ಕಾರದಲ್ಲೇ ಬೊಕ್ಕಸಕ್ಕೆ 1.43 ಲಕ್ಷ ಸಾವಿರ ಕೋಟಿ ರು ನಷ್ಟ

Next Post

ಸಹಭಾಗಿ ಪತ್ರಿಕೋದ್ಯಮ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

thefilestack

thefilestack

Next Post

ಸಹಭಾಗಿ ಪತ್ರಿಕೋದ್ಯಮ; 'ದಿ ಫೈಲ್‌' ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

Discussion about this post

Recommended

ಪ್ರತಾಪ್‌ ಸೋದರ ವಿಕ್ರಂ ಸಿಂಹ ವಿರುದ್ಧ ಪ್ರಕರಣ; ತಹಶೀಲ್ದಾರ್‍‌ ನೇತೃತ್ವದ ಮಹಜರು ವರದಿ ಬಹಿರಂಗ

2 years ago

8,000 ಎಕರೆ ಅರಣ್ಯ ಪ್ರದೇಶ ಕಣ್ಮರೆ;ತನಿಖೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶರ ಸಮಿತಿ ರಚನೆ, ಹೈಕೋರ್ಟ್‌ಗೆ ಪತ್ರ

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd