the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LEGISLATURE

ಎರಡು ವರ್ಷಗಳಲ್ಲಿ 2,747 ಎಕರೆ ಕೃಷಿ ಭೂಮಿ ಪರಿವರ್ತನೆ; ಧಾರವಾಡ ಜಿಲ್ಲೆಯಲ್ಲಿಯೇ ಅತಿಹೆಚ್ಚು

thefilestack by thefilestack
August 12, 2025
in LEGISLATURE
0
agricultural land conversion
0
SHARES
1
VIEWS
Share on FacebookShare on Twitter

ಬೆಂಗಳೂರು:  ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿಯೇ  2,747 ಎಕರೆ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಭೂ ಪರಿವರ್ತನೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ 395.40 ಎಕರೆ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ನೀಡಲಾಗಿದೆ.

 

ಮಂಡ್ಯ ಜಿಲ್ಲೆಯಲ್ಲಿ ಅತಿ ಕಡಿಮೆ, ಕೇವಲ 0.075 ಎಕರೆ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಪರಿವರ್ತಿಸಲಾಗಿದೆ. ಉತ್ತರ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕಳೆದ ಎರಡು ವರ್ಷಗಳಲ್ಲಿ ಯಾವುದೇ ಭೂಮಿಯನ್ನು ಪರಿವರ್ತನೆ ಮಾಡಲಾಗಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್‌. ಸುರೇಶ್‌ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ.

 

ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌. ನವೀನ್‌ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ʻಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ- 1961ʼರ ಕಲಂ 14-ಎ ಅನ್ವಯ ವಿಸ್ತೀರ್ಣದ ಮಿತಿಯಿಲ್ಲದೇ ಭೂ ಉಪಯೋಗ ಬದಲಾವಣೆಯ ಎಲ್ಲ ಪ್ರಸ್ತಾವನೆಗಳನ್ನು ಇಲಾಖಾ ಸಚಿವರ ಅನುಮೋದನೆ ಪಡೆದು ಸರ್ಕಾರಿ ಆದೇಶ ಹೊರಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

agriculture land conversion Karnataka

 

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ಮತ್ತು ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಪ್ರಾಧಿಕಾರ ಭೂ ಪರಿವರ್ತನೆ ಮಾಡಿದ ಕೃಷಿ ಭೂಮಿಯನ್ನು ಈ ಲೆಕ್ಕಾಚಾರದಲ್ಲಿ ಸೇರಿಸಲಾಗಿಲ್ಲ.

 

ಬಾಗಲಗೋಟೆ ಜಿಲ್ಲೆಯಲ್ಲಿ 131.82 ಎಕರೆ, ಬೆಳಗಾವಿ ಜಿಲ್ಲೆಯಲ್ಲಿ 73.31 ಎಕರೆ, ಬಳ್ಲಾರಿ ಜಿಲ್ಲೆಯಲ್ಲಿ 39.98, ಬೀದರ್‌ ಜಿಲ್ಲೆಯಲ್ಲಿ 40.12, ವಿಜಯಪುರ ಜಿಲ್ಲೆಯಲ್ಲಿ 26.78, ಚಿಕ್ಕಮಗಳೂರು ಜಿಲ್ಲೆಯಲ್ಲಿ 124.68, ಚಿತ್ರದುರ್ಗ ಜಿಲ್ಲೆಯಲ್ಲಿ 280.73, ದಾವಣಗೆರೆ ಜಿಲ್ಲೆಯಲ್ಲಿ 17.07, ಗದಗ ಜಿಲ್ಲೆಯಲ್ಲಿ 154.90, ಕಲಬುರಗಿ ಜಿಲ್ಲೆಯಲ್ಲಿ 147.92, ಹಾಸನ ಜಿಲ್ಲೆಯಲ್ಲಿ 19.35, ವಿಜಯನಗರ ಜಿಲ್ಲೆಯಲ್ಲಿ 82.49, ಕೋಲಾರ ಜಿಲ್ಲೆಯಲ್ಲಿ90.55,  ಧಾರವಾಡ ಜಿಲ್ಲೆಯಲ್ಲಿ-395.40, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ44.21, ಮೈಸೂರು ಜಿಲ್ಲೆಯಲ್ಲಿ 361.17, ರಾಯಚೂರು ಜಿಲ್ಲೆಯಲ್ಲಿ71.57, ಶಿವಮೊಗ್ಗ ಜಿಲ್ಲೆಯಲ್ಲಿ 198.37, ತುಮಕೂರು ಜಿಲ್ಲೆಯಲ್ಲಿ 46.65, ಉಡುಪಿ ಜಿಲ್ಲೆಯಲ್ಲಿ 12.55, ಕೊಡಗು ಜಿಲ್ಲೆಯಲ್ಲಿ 63.59, ಯಾದಗರಿ ಜಿಲ್ಲೆಯಲ್ಲಿ 124.88,ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 36.88, ಹಾವೇರಿ ಜಿಲ್ಲೆಯಲ್ಲಿ 154.15 ಮತ್ತು ಕೊಪ್ಪಳ ಜಿಲ್ಲೆಯಲ್ಲಿ 8.27 ಎಕರೆ ಕೃಷಿ ಭೂಮಿಯನ್ನು ಪರಿವರ್ತಿಸಲಾಗಿದೆ ಎಂದು ಈ ಉತ್ತರದಲ್ಲಿ ತಿಳಿಸಲಾಗಿದೆ.

 

agriculture land conversion Karnataka

 

ಕರ್ನಾಟಕ ಭೂ ಕಂದಾಯ ಕಾಯಿದೆ-1964ರ ಸೆಕ್ಷನ್ 95, 96, 97ರ ಪ್ರಕಾರ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಜಮೀನುಗಳು ಕೃಷಿಯೇತರ ಚಟುವಟಿಕೆಗಳಿಗೆ ಒಳಪಡುತ್ತವೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಹೀಗಾಗಿ, ಆ ಜಮೀನನ್ನು ಪ್ರತ್ಯೇಕವಾಗಿ ವಾಣಿಜ್ಯ ಉದ್ದೇಶಕ್ಕೆಂದು ಪರಿವರ್ತಿಸುವ ಅಗತ್ಯವಿಲ್ಲ ಎಂದು ರಾಜ್ಯ ಹೈಕೋರ್ಟ್‌ 2024ರ ಜನವರಿಯಲ್ಲಿ ತೀರ್ಪು ನೀಡಿತ್ತು. ಹೀಗಾಗಿ ಈ ಭೂ ಪರಿವರ್ತನೆಗಳು ಈ ಲೆಕ್ಕಾಚಾರದಲ್ಲಿ ಸೇರಿಲ್ಲ.

 

ರಾಜ್ಯದಲ್ಲಿ ಈಗ ಭೂದಾಖಲೆಗಳನ್ನು ಆಧಾರ್‌ ನಂಬರ್‌ಗೆ ಲಿಂಕ್‌ ಮಾಡಲಾಗಿದೆ. ಈ ಲಿಂಕ್‌ ಮಾಡುವ ಸಂದರ್ಭದಲ್ಲಿ 72.11 ಲಕ್ಷ ಕೃಷಿ ಭೂಮಿಯು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆಯಾಗುತ್ತಿರುವುದು ಬೆಳಕಿಗೆ ಬಂದಿತ್ತು. ಇದರಲ್ಲಿ ಕೇವಲ 4.69 ಲಕ್ಷ ಕೃಷಿ ಭೂಮಿಯನ್ನು ಮಾತ್ರ ಕಾನೂನುಬದ್ಧವಾಗಿ ಪರಿವರ್ತಿಸಲಾಗಿತ್ತು. ಹೀಗಾಗಿ ಕಳೆದ ಎರಡು ವರ್ಷಗಳಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ಪರಿವರ್ತನೆಯಾಗಿರುವ ಕೃಷಿ ಭೂಮಿಯ ಪ್ರಮಾಣ ಇನ್ನೂ ಹೆಚ್ಚಿರಬಹುದೆಂದು ಅಂದಾಜಿಸಲಾಗುತ್ತಿದೆ.

 

ʻಕರ್ನಾಟಕ ಭೂಕಂದಾಯ (ಎರಡನೇ ತಿದ್ದು ಪಡಿ) ಅಧಿನಿಯಮ- 2022ʼ ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಬಳಸಲು ಪರಿವರ್ತನೆಗೆ ಅನುಮತಿ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ. ಜಿಲ್ಲಾಧಿಕಾರಿಯು ಅರ್ಜಿಯನ್ನು ಸ್ವೀಕರಿಸಿದ ದಿನಾಂಕದಿಂದ ಏಳು ದಿನಗಳ ಒಳಗೆ ಅದಕ್ಕೆ ಅನುಮೋದನೆ ನೀಡುವ ಆದೇಶವನ್ನು ನೀಡಬೇಕು ಎಂದು ಈ ಅಧಿನಿಯಮದಲ್ಲಿ ಹೇಳಲಾಗಿದೆ. ಇದರಿಂದಾಗಿ ಕೃಷಿ ಭೂಮಿ ಪರಿವರ್ತನೆ ಈಗ ಸಲೀಸಾಗಿದೆ.

 

https://stack.thefile.in/2024/03/governance/22749/#google_vignette

 

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (ನಬಾರ್ಡ್‌)ನ ʻಅಖಿಲ ಭಾರತ ಗ್ರಾಮೀಣ ಆರ್ಥಿಕ ಒಳಗೊಳ್ಳುವಿಕೆ ಸಮಿಕ್ಷೆ-2021-22 (ಎನ್‌ಎಎಫ್‌ಐಎಸ್‌) ಪ್ರಕಾರ ರೈತ ಕುಟುಂಬಗಳು ಹೊಂದಿರುವ ಕೃಷಿ ಭೂಮಿಯ ವಿಸ್ತೀರ್ಣ ಕಡಿಮೆಯಾಗುತ್ತಿದೆ. ಕೃಷಿ ಭೂಮಿಯ ವ್ಯಾಪ್ತಿ ಮೂರನೇ ಒಂದರಷ್ಟು ಇಳಿಕೆಯಾಗಿದೆ. ನಮ್ಮ ರಾಜ್ಯದಲ್ಲಿ 2016-17ರಲ್ಲಿ ಹೊಂದಿದ್ದ ಕೃಷಿ ಜಮೀನಿನ ಸರಾಸರಿ ವಿಸ್ತೀರ್ಣ 2.47 ಎಕರೆ ಆಗಿದ್ದರೆ 2021-22ರಲ್ಲಿ 1.83 ಎಕರೆಗೆ ಇಳಿದಿತ್ತು.

Tags: Agricultral LandAgriculturalagricultural land conversionAgricultural LandsB S YediiyurappaByrati SureshDharawadLand Conversionland conversion statusNABARDSiddaaramaiahaಕೃಷಿಕೃಷಿ ಭೂಮಿಕೃಷಿ ಭೂಮಿ ಪರಿವರ್ತನೆಧಾರವಾಡಭೂ ಹಗರಣ
Advertisement Banner
Previous Post

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಚಿಲ್ಲರೆ ದರದಲ್ಲಿ 2 ಎಕರೆ ಜಮೀನು; ಹರಾಜು ನಡೆಸದೇ ಮಂಜೂರು, ನಿಯಮ ಉಲ್ಲಂಘನೆ

Next Post

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮೈಸೂರು ಸೇರಿ ರಾಜ್ಯಾದ್ಯಂತ 2 ವರ್ಷದಲ್ಲಿ 10,510 ಪ್ರಕರಣ ದಾಖಲು

thefilestack

thefilestack

Next Post

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮೈಸೂರು ಸೇರಿ ರಾಜ್ಯಾದ್ಯಂತ 2 ವರ್ಷದಲ್ಲಿ 10,510 ಪ್ರಕರಣ ದಾಖಲು

Recommended

ಸುತ್ತೋಲೆ ಬದಿಗಿರಿಸಿ 208 ಪಿಡಿಒಗಳ ವರ್ಗಾ, ಒಂದೇ ಪಂಚಾಯ್ತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

3 years ago
ಲಕ್ಷಾಂತರ ರುಪಾಯಿ ಲಂಚ; ಹಣ್ಣು, ತರಕಾರಿ ಮಾರುಕಟ್ಟೆ ಮಳಿಗೆಗಳಿಗೆ ಅನಧಿಕೃತ ನೋಂದಣಿ, 4.74 ಕೋಟಿ ನಷ್ಟ

ಲಕ್ಷಾಂತರ ರುಪಾಯಿ ಲಂಚ; ಹಣ್ಣು, ತರಕಾರಿ ಮಾರುಕಟ್ಟೆ ಮಳಿಗೆಗಳಿಗೆ ಅನಧಿಕೃತ ನೋಂದಣಿ, 4.74 ಕೋಟಿ ನಷ್ಟ

1 year ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd