the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಒಂದೇ ಹುದ್ದೆಗೆ ಇಬ್ಬರ ವರ್ಗಾವಣೆ; ಇಲಾಖೆಯಲ್ಲಿ ಅಧಿಕಾರಿಗಳಿಬ್ಬರ ನಡುವೆ ಪೈಪೋಟಿ

thefilestack by thefilestack
July 31, 2024
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿನ ವರ್ಗಾವಣೆ  ಭರಾಟೆ ಎರಡನೇ ಅವಧಿಯಲ್ಲಿಯೂ ಮುಂದುವರೆದಿದೆ. ಮೊದಲ ಅವಧಿಯಲ್ಲಿ ಒಂದೇ ಹುದ್ದೆಗೆ ನಾಲ್ಕು ಮಂದಿಯನ್ನು ವರ್ಗಾವಣೆ ಮಾಡಲು ಖುದ್ದು ಮುಖ್ಯಮಂತ್ರಿಯೇ ಮಾಡಿದ್ದ  ಶಿಫಾರಸ್ಸು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

 

ಇದೀಗ ಎರಡನೇ ಅವಧಿಯಲ್ಲಿಯೂ ಇಂತಹದ್ದೇ ಪ್ರಕರಣಗಳು ಮರುಕಳಿಸುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಅಧಿಕಾರಿ ನೌಕರರ ವರ್ಗಾವಣೆಯಲ್ಲಿಯೂ ಮೊದಲ ಅವಧಿಯಲ್ಲಿ ಕಂಡುಬಂದಿದ್ದ ಪ್ರಮಾದಗಳೇ ಪುನರಾವರ್ತನೆ ಆಗಿರುವುದು ತಿಳಿದು ಬಂದಿದೆ.

 

2024-25ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ವೃಂದದ ನೌಕರರನ್ನು 2024ರ ಜುಲೈ 5 ಮತ್ತು 26ರಂದು ಹೊರಡಿಸಿರುವ  ವರ್ಗಾವಣೆ ಆದೇಶಗಳಲ್ಲಿ ಎಡವಟ್ಟುಗಳು ಕಂಡು ಬಂದಿವೆ. ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊರಡಿಸಿರುವ ಆದೇಶವು ಈಗ ಅಧಿಕಾರಿಗಳಿಬ್ಬರ ಕಚ್ಚಾಟಕ್ಕೆ ಕಾರಣವಾಗಿದೆ.

 

ಜುಲೈ 5 ಮತ್ತು 26ರಂದು ಹೊರಡಿಸಿರುವ ಆದೇಶದ ಪ್ರತಿಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

2024-25ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ವೃಂದದ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಜುಲೈ 5ರಂದು 43 ಅಧಿಕಾರಿ, ನೌಕರರನ್ನು ವರ್ಗಾವಣೆ ಮಾಡಲಾಗಿತ್ತು.

 

ಈ ಪೈಕಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ ರಾಘವೇಂದ್ರ ಅವರನ್ನು ಹರಿಹರ ತಾಲೂಕಿನಿಂದ ದಾವಣಗೆರೆ ಜಿಲ್ಲೆಯ ಉಪನಿರ್ದೇಶಕರ ಕಚೇರಿಯಲ್ಲಿನ  ಅಧೀಕ್ಷಕರು ದರ್ಜೆ-2 ಹುದ್ದೆಗೆ  ಜುಲೈ 5ರಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.

 

ಆದರೇ ಇದೇ ಇಲಾಖೆಯು ಜುಲೈ 26ರಂದು ಮತ್ತೊಂದು ವರ್ಗಾವಣೆ ಆದೇಶ ಹೊರಡಿಸಿತ್ತು. 106 ಮಂದಿ ಅಧಿಕಾರಿ ನೌಕರರನ್ನು ರಾಜ್ಯದ ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿತ್ತು.

 

ದಾವಣಗೆರೆ ಜಿಲ್ಲೆಯ ಉಪ ನಿರ್ದೇಶಕರ ಕಚೇರಿಗೆ ಸಿ ರಾಘವೇಂದ್ರ ಎಂಬುವರನ್ನು ಅಧೀಕ್ಷಕರು ದರ್ಜೆ-2 ಹುದ್ದೆಗೆ ಜುಲೈ 5ರಂದು ವರ್ಗಾವಣೆ ಆದೇಶ ಹೊರಡಿಸಿದ್ದರೂ ಸಹ ಜುಲೈ 26ರಂದು ಇದೇ ಹುದ್ದೆಗೆ ರಾಜ್ಯ ಮಹಿಳಾ ನಿಲಯದ ಮಂಜುಳ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

 

 

ರಾಘವೇಂದ್ರ ಸಿ ಎಂಬುವರನ್ನು ಅದೇ ಹುದ್ದೆಗೆ ವರ್ಗಾವಣೆ ಮಾಡಿ ಹೊರಡಿಸಿರುವ ಆದೇಶವು ರದ್ದುಪಡಿಸದೇ  ಅಥವಾ ಹಿಂಪಡೆಯದೇ ಮತ್ತೊಬ್ಬ ಅಧಿಕಾರಿ ಮಂಜುಳ ಅವರನ್ನೂ ಅದೇ ಹುದ್ದೆಗೆ ವರ್ಗಾವಣೆ ಮಾಡಿರುವುದು ಅಧಿಕಾರಿಗಳಿಬ್ಬರ ನಡುವೆ ಪೈಪೋಟಿ ಮತ್ತು  ಕಿತ್ತಾಟಕ್ಕೆ ಇಲಾಖೆಯೇ ದಾರಿಮಾಡಿಕೊಟ್ಟಂತಾಗಿದೆ.

 

ಈ ವರ್ಗಾವಣೆ ಆದೇಶಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರು ಅನುಮೋದಿಸಿದ ನಂತರ ಇಲಾಖೆಯ ನಿರ್ದೇಶಕರೂ  ಪಟ್ಟಿಗೆ ಅನುಮತಿ ನೀಡಿದ್ದಾರೆ ಎಂದು ಗೊತ್ತಾಗಿದೆ.

 

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿನ ಒಂದೇ ಒಂದು ಲೆಕ್ಕಾಧಿಕಾರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಲೆಕ್ಕ ಪರಿಶೋಧನಾಧಿಕಾರಿಗಳನ್ನು ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

 

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿ ಒಂದು ವರ್ಷ 4 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿರುವ ಎಂ ಜಿ ಮಂಜುನಾಥ ಅವರು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಯೋಜನಾ ಮುಖ್ಯಸ್ಥರು, ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪ್ರಧಾನ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಆದರೂ  ಸಹ ಇವರ ಹುದ್ದೆಗೆ ನಾಲ್ವರು ಲೆಕ್ಕಪರಿಶೋಧನಾಕಾರಿಗಳನ್ನು ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದು  ನಾಲ್ವರು ಅಧಿಕಾರಿಗಳ ಮಧ್ಯೆಯೇ ಪೈಪೋಟಿ ಸೃಷ್ಟಿಸಿತ್ತು.

 

ಇರುವ ಒಂದು ಹುದ್ದೆಗೆ ನಾಲ್ವರ ವರ್ಗಾವಣೆಗೆ ಶಿಫಾರಸ್ಸು

 

ಬಿಬಿಎಂಪಿಯಲ್ಲಿ ಲೆಕ್ಕ ಪರಿಶೋಧನಾಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್‌ ಕೆ ಜಗದೀಶ್‌ ಅವರನ್ನು ರಾಜ್ಯ ರಸ್ತೆ ಅಭಿವೃದ್ದಿ ನಿಗಮದಲ್ಲಿ ಎಂ ಜಿ ಮಂಜುನಾಥ್ ಇವರ ಸ್ಥಳಕ್ಕೆ ವರ್ಗಾಯಿಸಲು ಸೂಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಯಿಂದ ಟಿಪ್ಪಣಿ ಹೊರಡಿಸಿತ್ತು.

https://stack.thefile.in/2023/06/governance/16981/

 

ಇದೇ ಹುದ್ದೆಗೆ ಬಿಬಿಎಂಪಿಯಲ್ಲಿ ಮುಖ್ಯ ಲೆಕ್ಕಾಧಿಕಾರಿಯವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತೊಬ್ಬ ಲೆಕ್ಕಪರಿಶೋಧನಾಕಾರಿ ಕೆ ಎಚ್‌ ಶ್ರೀನಿವಾಸ್‌ ಅವರನ್ನು ಎಂ ಜಿ ಮಂಜುನಾಥ್‌ ಅವರ ಹುದ್ದೆಯ ಜಾಗಕ್ಕೆ ವರ್ಗಾಯಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಲ್ಲಿಸಿದ್ದ ಮನವಿ ಮೇಲೆಯೇ ಸಿದ್ದರಾಮಯ್ಯ ಅವರು ಇದನ್ನು ಪರಿಗಣಿಸಿ ಎಂದು ಷರಾ ಬರೆದಿದ್ದನ್ನು ಸ್ಮರಿಸಬಹುದು.

 

https://stack.thefile.in/2023/07/governance/17126/

ಅದೇ ರೀತಿ ಪೊಲೀಸ್‌ ಮಹಾನಿರ್ದೇಶಕರ ಕಚೇರಿಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ ನಾಗರಾಜು ಅವರು ಸಲ್ಲಿಸಿದ್ದ ಮನವಿ ಮೇಲೆಯೇ ಸಿದ್ದರಾಮಯ್ಯ ಅವರು ಮಂಜುನಾಥ್‌ ಅವರ ಜಾಗಕ್ಕೆ ಪರಿಗಣಿಸಿ ಎಂದು 2023ರ ಜೂನ್‌ 8ರಂದು ಷರಾ ಬರೆದಿದ್ದಾರೆ.

 

ಅದೇ ರೀತಿ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ ಎಸ್‌ ಪ್ರತಿಭ ಅವರನ್ನೂ ಮಂಜುನಾಥ ಜಿ ಇವರ ಸ್ಥಳಕ್ಕೆ ನಿಯುಕ್ತಿಗೊಳಿಸಲು ಸಿದ್ದರಾಮಯ್ಯ ಅವರು ಟಿಪ್ಪಣಿಯಲ್ಲಿ ಸೂಚಿಸಿರುವುದು ಟಿಪ್ಪಣಿ ಪ್ರತಿಯಿಂದ ಗೊತ್ತಾಗಿದೆ.

 

ಆದರೆ ಮಂಜುನಾಥ್‌ ಅವರ ಕಾರ್ಯಕ್ಷಮತೆ ಬಗ್ಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದ ಯೋಜನಾ ಮುಖ್ಯಸ್ಥರು ತೃಪ್ತಿ ವ್ಯಕ್ತಪಡಿಸಿದ್ದಾರೆ. ಇವರ ವರ್ಗಾವಣೆ ಸುಳಿವು ಹಿಡಿದ ಯೋಜನಾ ಮುಖ್ಯಸ್ಥರು ಕರ್ನಾಟಕ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪ್ರಧಾನ ನಿರ್ದೇಶಕರಿಗೆ 2023ರ ಜೂನ್‌ 23ರಂದು ಪತ್ರವನ್ನೂ ಬರೆದಿದ್ದರು.

 

Tags: bjpChildD K ShivakumarDavanageredepartmentDevelopmentgovernmenth d kumarswamyHariharHebbalkarkarnatakaLaxmiManjular ashokRaghavendraSiddaramaiahaTransfersWomenಅಭಿವೃದ್ದಿಆರ್‌ ಅಶೋಕ್‌ಇಲಾಖೆಒಂದೇ ಹುದ್ದೆಕಲ್ಯಾಣಡಿ ಕೆ ಶಿವಕುಮಾರ್ದಾವಣಗೆರೆನೌಕರರುಪ್ರತಿಪಕ್ಷಬಸನಗೌಡ ಪಾಟೀಲ್‌ ಯತ್ನಾಳ್‌ಬಿಜೆಪಿಮಕ್ಕಳುಮಹಿಳಾಲಕ್ಷ್ಮಿ ಹೆಬ್ಬಾಳಕರ್‌ವರ್ಗಾವಣೆಸಿದ್ದರಾಮಯ್ಯಹರಿಹರಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಮೈಕ್‌, ಹಾಡು, ಡ್ಯಾನ್ಸ್‌, ಊಟದ ವ್ಯವಸ್ಥೆ; ಸ್ವ ಹಿತಾಸಕ್ತಿ ಉದ್ದೇಶ, ಮರೆಮಾಚಿದ್ದ ಸತ್ಯ ಬಯಲು

Next Post

ಖಾಸಗಿ ಬ್ಯಾಂಕ್‌ಗಳಲ್ಲಿ 1,731.16 ಕೋಟಿ ಠೇವಣಿ; ಕಡತ ಬಹಿರಂಗಕ್ಕೆ ನಕಾರ, ಆರ್‍‌ಟಿಐ ಅರ್ಜಿ ತಿರಸ್ಕಾರ

thefilestack

thefilestack

Next Post

ಖಾಸಗಿ ಬ್ಯಾಂಕ್‌ಗಳಲ್ಲಿ 1,731.16 ಕೋಟಿ ಠೇವಣಿ; ಕಡತ ಬಹಿರಂಗಕ್ಕೆ ನಕಾರ, ಆರ್‍‌ಟಿಐ ಅರ್ಜಿ ತಿರಸ್ಕಾರ

Recommended

ಪರಿಶಿಷ್ಟರ ಅನುದಾನ ಬಳಕೆ ಮಾಡದೇ 2013ರ ಕಾಯ್ದೆ ಉಲ್ಲಂಘನೆ; 3 ವರ್ಷದಿಂದಲೂ ಶಿಸ್ತು ಕ್ರಮವಿಲ್ಲ

4 years ago

ಬ್ರಿಮ್ಸ್‌ ಅವ್ಯವಹಾರ; 12 ವರ್ಷಗಳಾದರೂ ಮುಗಿಯದ ವಿಚಾರಣೆ, ಆರೋಪಿಗಳಿಗೆ ಬಡ್ತಿ

4 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd