the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಕೇಂದ್ರ ಪುರಸ್ಕೃತ ಯೋಜನೆ; 2,948 ಕೋಟಿಯಲ್ಲಿ 523 ಕೋಟಿ ಕೊಟ್ಟರೂ ತುಟಿಬಿಚ್ಚದ ಸರ್ಕಾರ

thefilestack by thefilestack
January 25, 2021
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಸ್ವಚ್ಛ ಭಾರತ, ಪೂರಕ ಪೌಷ್ಠಿಕ ಆಹಾರ, ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆ ಸೇರಿದಂತೆ 17ಕ್ಕೂ ಹೆಚ್ಚಿನ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು ಅನುದಾನದಲ್ಲಿ ಶೇ. 50ಕ್ಕಿಂತಲೂ ಕಡಿಮೆ ಬಿಡುಗಡೆ ಮಾಡಿದೆ. ಕೇಂದ್ರ ಪುರಸ್ಕೃತ ಯೋಜನೆ, ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರವು ಒಟ್ಟು ಅನುದಾನದಲ್ಲಿ ಇನ್ನೂ 2,419.01 ಕೋಟಿ ರು. ಬಾಕಿ ಉಳಿಸಿಕೊಂಡಿದೆ. ಸಕಾಲದಲ್ಲಿ ಅನುದಾನ ಬಿಡುಗಡೆ ಆಗದ ಕಾರಣ ಕೇಂದ್ರ ಪುರಸ್ಕೃತ ಯೋಜನೆಗಳು ರಾಜ್ಯದಲ್ಲಿ ತೆವಳುತ್ತಿವೆ.

ವಿಶೇಷ ಎಂದರೆ ವಸತಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಬೈರತಿ ಬಸವರಾಜು ಗೋವಿಂದ ಕಾರಜೋಳ, ಡಾ ಕೆ ಸುಧಾಕರ್‌, ಬಿ ಶ್ರೀರಾಮುಲು ಇಲಾಖೆಗಳಿಗೆ ಕೇಂದ್ರ ಪುರಸ್ಕೃತದ ಕೆಲ ಯೋಜನೆಗಳಿಗೆ ಬಿಡಿಗಾಸನ್ನೂ ನೀಡದಿದ್ದರೂ ಈ ಸಚಿವರ್ಯಾರು ತುಟಿ ಬಿಚ್ಚಿಲ್ಲ.
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖಾವಾರು ಮತ್ತು ಕಾರ್ಯಕ್ರಮವಾರು ಪ್ರಗತಿ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಅಧ್ಯಕ್ಷತೆಯಲ್ಲಿ 2021ರ ಜನವರಿ 21ರಂದು ನಡೆದ ಸಭೆಯಲ್ಲಿ ಶೇ. 50ಕ್ಕಿಂತಲೂ ಕಡಿಮೆ ಅನುದಾನ ಬಿಡುಗಡೆಯಾಗಿರುವ ಸಂಗತಿ ತಿಳಿದು ಬಂದಿದೆ.

100 ಕೋಟಿ ರು.ಗಿಂತ ಹೆಚ್ಚಿನ ಅನುದಾನವಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ 2020-21ನೇ ಸಾಲಿಗೆ ಒಟ್ಟು 2,948.94 ಕೋಟಿ ರು. ಅನುದಾನವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಿತ್ತು. ಆದರೆ ಈ ಪೈಕಿ 2020ರ ಡಿಸೆಂಬರ್‌ ಅಂತ್ಯಕ್ಕೆ ಕೇವಲ 529.93 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇನ್ನೂ 2,419.01 ಕೋಟಿ ರು.ಗಳನ್ನು ಬಿಡುಗಡೆ ಮಾಡಿಲ್ಲ ಎಂಬುದು ದಾಖಲೆಯಿಂದ ಗೊತ್ತಾಗಿದೆ.

ಅದೇ ರೀತಿ 10 ಕೋಟಿ ರು.ಗಳಿಗಿಂತ ಹೆಚ್ಚಿನ ಅನುದಾನವಿರುವ ಕಾರ್ಯಕ್ರಮಗಳಲ್ಲೂ ಶೇ.50ಕ್ಕಿಂತ ಕಡಿಮೆ ಬಿಡುಗಡೆಯಾಗಿದೆ. ತುಂಗಾ ಮೇಲ್ದಂಡೆ ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೆ 242.29 ಕೋಟಿ ರು.ಗಳನ್ನು ಕೇಂದ್ರ ಸರ್ಕಾರವು ಅನುದಾನ ಒದಗಿಸಬೇಕಿತ್ತು. ಆದರೆ ಡಿಸೆಂಬರ್‌ 2020ರ ಅಂತ್ಯಕ್ಕೆ ಕೇವಲ 23.72 ಕೋಟಿ ರು. ಮಾತ್ರ ಬಿಡುಗಡೆ ಮಾಡಿ ಇನ್ನೂ 218.57 ಕೋಟಿ ರು. ಬಾಕಿ ಉಳಿಸಿಕೊಂಡಿದೆ.

ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡಿರುವ ಸ್ವಚ್ಛ ಭಾರತ (ನಗರ) ಯೋಜನೆಗೆ ಒಟ್ಟು 120 ಕೋಟಿ ರು.ಅನುದಾನ ಘೋಷಿಸಿದ್ದ ಕೇಂದ್ರ ಸರ್ಕಾರವು ಡಿಸೆಂಬರ್‌ 2020ರ ಅಂತ್ಯದವರೆಗೂ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಅದೇ ರೀತಿ ವಸತಿ ಇಲಾಖೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡಿರುವ ಪ್ರಧಾನ ಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ)ಗೆ 300 ಕೋಟಿ ರು. ಅನುದಾನ ಘೋಷಣೆಯಾಗಿದೆಯಾದರೂ ಡಿಸೆಂಬರ್‌ 2020ರ ಅಂತ್ಯಕ್ಕೆ ಬಿಡಿಗಾಸನ್ನೂ ನೀಡದಿರುವುದು ಪ್ರಗತಿ ಸಭೆಯ ನಡವಳಿಯಿಂದ ತಿಳಿದು ಬಂದಿದೆ.

ಪೂರಕ ಪೌಷ್ಠಿಕ ಆಹಾರ ಯೋಜನೆಗೆ ಕೇಂದ್ರ ಸರ್ಕಾರವು ಘೋಷಿಸಿದ್ದ 599.44 ಕೋಟಿ ರು. ಅನುದಾನದ ಪೈಕಿ ಡಿಸೆಂಬರ್‌ 2020ರ ಅಂತ್ಯಕ್ಕೆ 156.60 ಕೋಟಿ ರು.ಮಾತ್ರ ಬಿಡುಗಡೆ ಮಾಡಿದೆ. ಪ್ರಧಾನಮಂತ್ರಿ ಆವಾಜ್‌ ಯೋಜನೆ (ನಗರ)ಗೆ 515.00 ಕೋಟಿ ರು ಪೈಕಿ ಕೇವಲ 9.19 ಕೋಟಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್‌)ಗೆ 402.05 ಕೋಟಿ ರು. ಪೈಕಿ 117.29 ಕೋಟಿ, ಅಮೃತ್‌ ಮಿಷನ್‌ ಯೋಜನೆಗೆ 290.57 ಕೋಟಿ ರು. ಪೈಕಿ ಕೇವಲ 0.51 ಕೋಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ 237.50 ಕೋಟಿ ರು.ನಲ್ಲಿ 79.13 ಕೋಟಿ, ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಗೆ 218.97 ಕೋಟಿ ರು.ನಲ್ಲಿ 109.48 ಕೋಟಿ ರು., ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ 145.50 ಕೋಟಿ ರು. ಪೈಕಿ 11.22 ಕೋಟಿ, ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಯೋಜನೆಗೆ 119.91 ಕೋಟಿ ರು.ನಲ್ಲಿ 46.51 ಕೋಟಿ ರು.ಮಾತ್ರ ಬಿಡುಗಡೆ ಮಾಡಿರುವುದು ಗೊತ್ತಾಗಿದೆ.

ಅದೇ ರೀತಿ 10 ಕೋಟಿಗಿಂತ ಹೆಚ್ಚಿನ ಅನುದಾನವಿರುವ ಕಾರ್ಯಕ್ರಮಗಳಾದ ತುಂಗಾ ಮೇಲ್ದಂಡೆ ಯೋಜನೆಗೆ 66.89 ಕೋಟಿ ರು.ಪೈಕಿ ಬಿಡುಗಡೆ ಮಾಡಿದ್ದು ಕೇವಲ 4.45 ಕೋಟಿ ಮಾತ್ರ. ಸಮಗ್ರ ಮಕ್ಕಳ ಸಂರಕ್ಷಣಾ ಯೋಜನೆಗೆ 55.08 ಕೋಟಿ ರು.ನಲ್ಲಿ 14.63 ಕೋಟಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರವು ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನಕ್ಕೆ ಘೋಷಿಸಿದ್ದ 50.40 ಕೋಟಿ ರು.ನಲ್ಲಿ, ರಾಷ್ಟ್ರೀಯ ಆಯುಷ್‌ ಅಭಿಯಾನಕ್ಕೆ 19.63 ಕೋಟಿ, ಮೀನುಗಾರಿಕೆ ಬಂದರುಗಳ ನಿರ್ಮಾಣಕ್ಕೆ 18.75 ಕೋಟಿ, ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನಕ್ಕೆ 18.15 ಕೋಟಿ ರು.ನಲ್ಲಿ ಬಿಡಿಗಾಸನ್ನೂ ನೀಡಿಲ್ಲ.

ಜಿಎಸ್‌ಟಿ ಹಣ ಬಿಡುಗಡೆ, ಪ್ರಕೃತಿ ವಿಕೋಪ ಸೇರಿದಂತೆ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ನಿಗದಿಯಂತೆ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ತಾರತಮ್ಯವನ್ನು ಮುಂದುವರೆಸಿದೆ.

Tags: Amrut Mission SchemeAYUSHb l santhoshB S YediyurappaBasavaraj BommaiBJP KarnatakaCentral Sponsered SchemesD K ShivakumarFinance Departmenth d kumarswamyHousingIrrigation ProjectsKPCCnarendra modiNirmala SitaramanPMAY SchemePrime MinisterSiddaramaiahSwach BharatUpper Tunga ProjectUrban Developmentv somannaಅಮೃತ್‌ ಮಿಷನ್‌ ಯೋಜನೆಆಯುಷ್‌ಎಚ್‌ ಡಿ ಕುಮಾರಸ್ವಾಮಿಎನ್‌ ರವಿಕುಮಾರ್‌ಕೆಪಿಸಿಸಿಕೇಂದ್ರ ಪುರಸ್ಕೃತ ಯೋಜನೆಡಿ ಕೆ ಶಿವಕುಮಾರ್ತುಂಗಾ ಮೇಲ್ದಂಡೆ ಯೋಜನೆನಗರಾಭಿವೃದ್ಧಿನರೇಂದ್ರ ಮೋದಿನಳಿನ್‌ಕುಮಾರ್‌ ಕಟಿಲುನಿರ್ಮಲಾ ಸೀತಾರಾಮನ್‌ನೀರಾವರಿ ಯೋಜನೆಗಳುಪ್ರಧಾನಮಂತ್ರಿ ಆವಾಸ್‌ ಯೋಜನೆಪ್ರಧಾನಮಂತ್ರಿ ಕಚೇರಿಬಸವರಾಜ ಬೊಮ್ಮಾಯಿಬಿ ಎಲ್‌ ಸಂತೋಷ್‌ಬಿ ಎಸ್‌ ಯಡಿಯೂರಪ್ಪಬಿಜೆಪಿ ಕರ್ನಾಟಕವಸತಿ ಇಲಾಖೆವಿ ಸೋಮಣ್ಣಸಿದ್ದರಾಮಯ್ಯಸ್ವಚ್ಛ ಭಾರತ್‌ಹಣಕಾಸು ಇಲಾಖೆ
Advertisement Banner
Previous Post

ಎಂಇಎಸ್‌ ಮುಖಂಡನ ಸೊಸೈಟಿ ಮೇಲೆ ಹಿಡಿತವಿಲ್ಲ; ಸಿಐಡಿ ತನಿಖೆ ಜಾರಿಯಲ್ಲಿದ್ದರೂ ಠೇವಣಿ ಆಕರ್ಷಣೆ

Next Post

ಸಚಿವ ಅಶೋಕ್‌ ಆಪ್ತ ಸಹಾಯಕನಿಂದ ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ?

thefilestack

thefilestack

Next Post

ಸಚಿವ ಅಶೋಕ್‌ ಆಪ್ತ ಸಹಾಯಕನಿಂದ ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ?

Discussion about this post

Recommended

ಬ್ರಿಮ್ಸ್‌ ಅವ್ಯವಹಾರ; 12 ವರ್ಷಗಳಾದರೂ ಮುಗಿಯದ ವಿಚಾರಣೆ, ಆರೋಪಿಗಳಿಗೆ ಬಡ್ತಿ

4 years ago

ನೃಪತುಂಗ ವಿವಿ ಕಾಮಗಾರಿ; ಕೆಟಿಪಿಪಿ ಕಾಯ್ದೆ ಉಲ್ಲಂಘನೆ, ಟೆಂಡರ್‌ ಮೊತ್ತಕ್ಕಿಂತ ಹೆಚ್ಚಳ ನಮೂದು

4 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd