the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home RTI

ಕೋಟಿ ರು. ಸಮೀಕ್ಷೆ; 20 ಲಕ್ಷರು ಮುಂಗಡ ನೀಡಿ ದಾಖಲೆಗಳನ್ನೇ ಒದಗಿಸದ ಕೆಎಸ್‌ಆರ್‍‌ಟಿಸಿ

thefilestack by thefilestack
January 4, 2024
in RTI
0
0
SHARES
0
VIEWS
Share on FacebookShare on Twitter

ಬೆಂಗಳೂರು; ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ಮುಂಗಡವಾಗಿ 20 ಲಕ್ಷ ರು. ಬಿಡುಗಡೆ ಮಾಡಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಈ ಸಂಬಂಧ ಯಾವುದೇ ದಾಖಲೆಗಳನ್ನೂ ಒದಗಿಸಿಲ್ಲ.

 

ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯ ಸಮೀಕ್ಷೆ ಸಂಬಂಧವೂ ಎರಡೂ ಇಲಾಖೆಗಳೂ ಆರ್‍‌ಟಿಐ ಅಡಿ ಯಾವುದೇ ದಾಖಲೆಗಳನ್ನೂ ನೀಡಿಲ್ಲ. ಇದರ ನಡುವೆಯೇ ಸಾರಿಗೆ ಇಲಾಖೆಯು ಸಹ 20 ಲಕ್ಷ ರು. ಮುಂಗಡವಾಗಿ ಬಿಡುಗಡೆ ಮಾಡಿರುವ ಸಂಬಂಧದ ಕಡತವನ್ನೇ ಒದಗಿಸಿಲ್ಲ. ಬದಲಿಗೆ ಸಾರಿಗೆ ಇಲಾಖೆಯು ಹೊರಡಿಸಿದ್ದ ಆದೇಶವನ್ನೇ ಒದಗಿಸಿ ಕೈ ತೊಳೆದುಕೊಂಡಿದೆ.

 

ಆರ್ಥಿಕ ಇಲಾಖೆಯ ಅಧಿಸೂಚನೆಯನ್ನಾಧರಿಸಿ ಸಮೀಕ್ಷೆ ನಡೆಸಲು ಸಾರಿಗೆ ಇಲಾಖೆಯು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ಗೆ 2023ರ ಸೆ.20ರಂದು ಆದೇಶ ನೀಡಿತ್ತು. 25 ಲಕ್ಷ ರು.ಗಳನ್ನು ಕೆಎಸ್‌ಆರ್‍‌ಟಿಸಿ ಸಂಸ್ಥೆಗೆ ಬಿಡುಗಡೆಗೊಳಿಸಿತ್ತು.

 

ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ಶೇ.80ರಷ್ಟು ಮೊತ್ತವನ್ನು ಬಿಡುಗಡೆಗೊಳಿಸಬೇಕು ಎಂದು ಸಾರಿಗೆ ಇಲಾಖೆಯು ಆದೇಶಿಸಿತ್ತು.

 

ಕರ್ನಾಟಕ ಸರ್ಕಾರದಿಂದ ಅನುಷ್ಠಾನಗೊಳಿಸಿರುವ ನಾಲ್ಕು ಖಾತರಿಗಳ ಕುರಿತು ಎಂ2ಎಂ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್‌ನಿಂದ ಸಮೀಕ್ಷೆ ನಡೆಸಲು ಸಾರಿಗೆ ಇಲಾಖೆಯ ಪಾಲಿನ ಮೊತ್ತವಾದ 25 ಲಕ್ಷ ರು.ಗಳ ಅನುದಾನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮಕ್ಕೆ ಬಿಡುಗಡೆಗೊಳಿಸಿ ಆದೇಶಿಸಲಾಗಿದೆ.ಬಿಡುಗಡೆ ಮಾಡಿರುವ ಶೇ.80ರಷ್ಟು ಮೊತ್ತವನ್ನು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಎಲ್‌ಎಲ್‌ಪಿಗೆ ಕೂಡಲೇ ಪಾವತಿಸಿ ಸರ್ಕಾರಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು. ಉಳಿದ ಶೇ.20ರಷ್ಟು ಮೊತ್ತವನ್ನು ಸೆ.2023ರ ಒಳಗಾಗಿ ಪಾವತಿಸಿ ಸರ್ಕಾರಕ್ಕೆ ಸೂಕ್ತ ದಾಖಲೆ ಒದಗಿಸಬೇಕು ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ ಎಸ್‌ ಅವರು 2023ರ ಸೆ.20ರಂದು ಆದೇಶದಲ್ಲಿ ಸೂಚಿಸಿದ್ದರು.

https://stack.thefile.in/2023/12/rti/20995/

'ಅನುದಾನ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ. ಆದರೆ ವರದಿಯನ್ನು ಸಾರಿಗೆ ಇಲಾಖೆಗೆ ಸಲ್ಲಿಸಬೇಕೇ ಅಥವಾ ಸರ್ಕಾರಕ್ಕೆ ಸಲ್ಲಿಸಬೇಕೇ ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಹೀಗಾಗಿ  ಸಮೀಕ್ಷೆ ವರದಿ ಬಗ್ಗೆ ನಮಗೇನು ಮಾಹಿತಿಯಿಲ್ಲ,' ಎಂದು ಗ್ಯಾರಂಟಿ ಅನುಷ್ಠಾನ ಹೊಣೆ ಹೊತ್ತಿರುವ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು 'ದಿ ಫೈಲ್‌'ಗೆ ತಿಳಿಸಿದ್ದರು.

 

ಆದರೆ ಈ ಸಂಬಂಧ ಕೆಎಸ್‌ಆರ್‍‌ಟಿಸಿಯು ಸಾರಿಗೆ ಇಲಾಖೆಯು ಹೊರಡಿಸಿರುವ ಆದೇಶವನ್ನು ಹೊರತುಪಡಿಸಿ ನಿಗಮದಲ್ಲಿ ನಡೆದಿರುವ ಪತ್ರ ವ್ಯವಹಾರಗಳು, ವ್ಯವಹಾರ ಪುಟಗಳು, ಟಿಪ್ಪಣಿ ಹಾಳೆಗಳು, ಎಂ2ಎಂ ಮೀಡಿಯಾ ನೆಟ್‌ವರ್ಕ್‌ನೊಂದಿಗೆ ಮಾಡಿಕೊಂಡಿರುವ ಎಂಒಯು ಸೇರಿದಂತೆ ಒಂದೇ ಒಂದು ದಾಖಲೆಯನ್ನೂ ನೀಡಿಲ್ಲ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಈ ನಡೆಯು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

 

ಸಚಿವ ರಾಮಲಿಂಗಾರೆಡ್ಡಿ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರ ಪ್ರತಿಕ್ರಿಯೆಗಾಗಿ 'ದಿ ಫೈಲ್‌' ಪ್ರಯತ್ನಿಸಿತು. ಆದರೆ ಇಬ್ಬರೂ ಸಂಪರ್ಕಕ್ಕೆ ಸಿಗಲಿಲ್ಲ. ಪ್ರತಿಕ್ರಿಯೆ ದೊರಕಿದ ಬಳಿಕ ಈ ವರದಿಯನ್ನು ನವೀಕರಿಸಲಾಗುತ್ತದೆ.

 

ಟೆಂಡರ್‌, ದರಪಟ್ಟಿ ಅಹ್ವಾನವಿಲ್ಲ

 

ಇನ್ನು, ಸಮೀಕ್ಷೆ ವೆಚ್ಚವು 5 ಲಕ್ಷ ರು. ಮಿತಿ ದಾಟಿರುವ ಕಾರಣ ಸರ್ಕಾರವು ಟೆಂಡರ್‌, ದರಪಟ್ಟಿ ಆಹ್ವಾನಿಸಬೇಕಿತ್ತು. ಆದರೆ ಈ ಎಲ್ಲಾ ಪ್ರಕ್ರಿಯೆಗಳನ್ನು ಬದಿಗೊತ್ತಿ ನೇರವಾಗಿ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ಸಮೀಕ್ಷೆ ಹೊಣೆಗಾರಿಕೆ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು.  ಅಲ್ಲದೇ ಈ  ಪ್ರಕರಣದಲ್ಲಿ 4(ಜಿ) ವಿನಾಯಿತಿಯನ್ನೂ ಸರ್ಕಾರವು  ದುರ್ಬಳಕೆ ಮಾಡಿಕೊಂಡಿತ್ತು ಎಂಬ ಆರೋಪ ಕೇಳಿ ಬಂದಿತ್ತು.

 

5 ಲಕ್ಷ ರು. ಮೇಲ್ಪಟ್ಟ ಕೆಲಸವಾಗಿರುವುದರಿಂದ ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್‍‌ ಕರೆಯಲು ಆರ್ಥಿಕ ಇಲಾಖೆಯು ಸೂಚಿಸಬೇಕಿತ್ತು. ಮೇಲಾಗಿ ಗ್ಯಾರಂಟಿ ಯೋಜನೆಗಳ ಕುರಿತಾಗಿ ನಡೆಸುವ ಸಮೀಕ್ಷೆಯು ಅತ್ಯಂತ ಅಗತ್ಯ ಮತ್ತು ತುರ್ತಿನ ಕಾಮಗಾರಿ, ಅಥವಾ ಸಂಗ್ರಹಣೆ ಅಲ್ಲದಿದ್ದರೂ ಇದೇ ಕಂಪನಿಗೇ ಆರ್ಥಿಕ ಇಲಾಖೆಯು 4 (ಜಿ) ವಿನಾಯಿತಿ ನೀಡಿದ್ದು ಸಂಶಯಗಳಿಗೆ ಕಾರಣವಾಗಿತ್ತು.

Tags: bjpcongressCroreD K ShivakumarGuranteeh d kumarswamyKSRTCRamlingareddySchemesShakthiSiddaramaiahaSurveyTransportಕರ್ನಾಟಕಕಾಂಗ್ರೆಸ್‌ಕೆಎಸ್‌ಆರ್‌ಟಿಸಿಕೋಟಿಕೋಟಿ ರು ವೆಚ್ಚಗ್ಯಾರಂಟಿ ಸಮೀಕ್ಷೆಡಿ ಕೆ ಶಿವಕುಮಾರ್ಬಿಜೆಪಿಯೋಜನೆರಸ್ತೆರಾಜ್ಯರಾಮಲಿಂಗಾರೆಡ್ಡಿಶಕ್ತಿಸಮೀಕ್ಷೆಸಂಸ್ಥೆಸಾರಿಗೆಸಿದ್ದರಾಮಯ್ಯ
Advertisement Banner
Previous Post

ಪ್ರತಾಪ್‌ ಸೋದರ ವಿಕ್ರಂ ಸಿಂಹ ವಿರುದ್ಧ ಪ್ರಕರಣ; ತಹಶೀಲ್ದಾರ್‍‌ ನೇತೃತ್ವದ ಮಹಜರು ವರದಿ ಬಹಿರಂಗ

Next Post

ದತ್ತ ಮಾಲಾಧಾರಿಗಳ ವಿರುದ್ಧದ ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರ್ಕಾರ; ಮುನ್ನೆಲೆಗೆ ಬಂದ ದಾಖಲೆ

thefilestack

thefilestack

Next Post

ದತ್ತ ಮಾಲಾಧಾರಿಗಳ ವಿರುದ್ಧದ ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರ್ಕಾರ; ಮುನ್ನೆಲೆಗೆ ಬಂದ ದಾಖಲೆ

Recommended

ಖರ್ಗೆ ಕುಟುಂಬದಿಂದ ಜಮೀನು ಕಬಳಿಕೆ ಆರೋಪ; ಟ್ರಸ್ಟಿಗಳ ವಿರುದ್ಧ ದೂರು, ದಾಖಲಾಗದ ಎಫ್‌ಐಆರ್

1 year ago

ಬೀದರ್‌ ಡಿಸಿಸಿ ಬ್ಯಾಂಕ್‌ ಬಹುಕೋಟಿ ಹಗರಣ; ಸಿಬಿಐ ತನಿಖೆ ಪ್ರಸ್ತಾವನೆಗೆ ಮರು ಜೀವ

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd