the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ಸಿಬಿಐ ತನಿಖೆಗೆ ಒಳಪಡಿಸಿ, ಅಪೆಕ್ಸ್‌ ಬ್ಯಾಂಕ್‌ ಹಗರಣ ಮರೆತಿತೇ?

thefilestack by thefilestack
July 18, 2023
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ವ್ಯಾಪಕ ಅಕ್ರಮಗಳ ಕುರಿತು ತನಿಖೆ ನಡೆಸಲು ಈ ತಿಂಗಳಾಂತ್ಯಕ್ಕೆ ಸಿಬಿಐಗೆ ವಹಿಸಲಾಗುವುದು ಎಂದು ವಿಧಾನ ಮಂಡಲದ ಅಧಿವೇಶನದಲ್ಲಿ ಹೇಳಿರುವ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಅವರು, ಅಪೆಕ್ಸ್‌ ಬ್ಯಾಂಕ್‌ನಲ್ಲಿಯೂ ಸಾಲ ಮಂಜೂರಾತಿಯಲ್ಲಿ ನಡೆದಿದ್ದ ಅಕ್ರಮ, ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಬೇಕು ಎಂದು ಸಹಕಾರ ಸಂಘಗಳ ಹಿಂದಿನ ರಿಜಸ್ಟ್ರಾರ್‍‌ ಅವರು ಬರೆದಿದ್ದ ಗೌಪ್ಯ ಪತ್ರವನ್ನಾಧರಿಸಿ ಸಿಬಿಐ ತನಿಖೆಗೆ ವಹಿಸುವ ಸಂಬಂಧ ಇದುವರೆಗೂ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ.

 

ವಿಶೇಷವೆಂದರೆ ಸಹಕಾರ ಇಲಾಖೆಯ ಹಾಲಿ ಸಚಿವರಾಗಿರುವ ಕೆ ಎನ್‌ ರಾಜಣ್ಣ ಅವರು ಅಪೆಕ್ಸ್‌ ಬ್ಯಾಂಕ್‌ನಲ್ಲಿ ಅಧ್ಯಕ್ಷರಾಗಿದ್ದರು. ಮತ್ತು ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿಯೇ ಅಕ್ರಮಗಳಾಗಿದ್ದವು ಎಂದು ನಬಾರ್ಡ್‌,  ಆರ್‍‌ಬಿಐ, ಹಣಕಾಸು ಸಚಿವರಾಗಿದ್ದ ಅರುಣ್‌ ಜೇಟ್ಲಿ ಅವರಿಗೂ ದೂರು ಸಲ್ಲಿಕೆಯಾಗಿತ್ತು. ಈ ದೂರನ್ನಾಧರಿಸಿ ತನಿಖೆ ನಡೆಸುವ ಸಂಬಂಧ ಕ್ರಮಕೈಗೊಳ್ಳಬೇಕು ಎಂದು ಸಹಕಾರ ಸಂಘಗಳ ರಿಜಿಸ್ಟ್ರಾರ್‍‌ ಆಗಿದ್ದ ಪ್ರಸನ್ನಕುಮಾರ್‍‌ ಅವರು ಸರ್ಕಾರಕ್ಕೆ ಗೌಪ್ಯ ಪತ್ರ ಬರೆದಿದ್ದರು. ಈ ಪತ್ರವನ್ನು ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿಕೂಟ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಸದ ಬುಟ್ಟಿಗೆ ಸೇರಿತ್ತು.

 

 

ಬ್ಯಾಂಕ್‌ನ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಕೇಂದ್ರದ ಗೃಹ ಮತ್ತು ಸಹಕಾರ ಸಚಿವಾಲಯದ ಕೇಂದ್ರ ಸಹಕಾರ ಸಂಘಗಳ ನಿಬಂಧಕರು 2022ರ ಫೆ.21ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು. ಈ ಪತ್ರವನ್ನಾಧರಿಸಿಯೇ ಸಿಬಿಐ ತನಿಖೆಗೆ ಒಳಪಡಿಸುವ ಸಂಬಂಧ ಜೆಡಿಎಸ್‌ ಶಾಸಕರಾಗಿದ್ದ ಸಾ ರಾ ಮಹೇಶ್‌ ಅವರು ಕೇಳಿದ್ದ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ಹಿಂದಿನ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‍‌ ಅವರು ಸಿಬಿಐ ತನಿಖೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ಲಿಖಿತ ಉತ್ತರ ನೀಡಿದ್ದರು.

 

 

ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ  ಸಾಲದ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಬೇಕು ಎಂದು  ಉದ್ಯೋಗಿಗಳು ಮತ್ತು ಅಧಿಕಾರಿಗಳ ಒಕ್ಕೂಟವು 2019ರ ಫೆ.4ರಂದು ಕೇಂದ್ರ ಹಣಕಾಸು ಸಚಿವರಿಗೆ ಸಲ್ಲಿಸಿದ್ದ ದೂರು ಸಲ್ಲಿಸಿತ್ತು. ಆದರೆ ಅದೊಂದು ಅನಾಮಧೇಯ ದೂರು ಅರ್ಜಿ ಎಂದು ಅಪೆಕ್ಸ್‌ ಬ್ಯಾಂಕ್‌ ನೀಡಿರುವ ಉತ್ತರಕ್ಕೆ ಸಹಕಾರ ಇಲಾಖೆಯು ಮಣೆ ಹಾಕಿತ್ತು.

 

 

ಈ ಕುರಿತು ಜೆಡಿಎಸ್‌ ಶಾಸಕ ಸಾ ರಾ ಮಹೇಶ್‌ ಅವರು ನೀಡಿದ್ದ ನಿಯಮ 351ರ ಅಡಿ ಸೂಚನೆಗೆ ಸಂಬಂಧಿಸಿದಂತೆ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಸಿಬಿಐ ತನಿಖೆಗೆ ಒಳಪಡಿಸುವ ಅಗತ್ಯತೆ ಕಂಡು ಬರುವುದಿಲ್ಲ ಎಂದು ಮಾಹಿತಿ ಒದಗಿಸಿದ್ದರು.

 

 

 

 

ಕೆ ಎನ್‌ ರಾಜಣ್ಣ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಶಾಸಕರು ಮತ್ತು ರಾಜಕಾರಣಿಗಳ ಒಡೆತನದ ಸಕ್ಕರೆ ಕಾರ್ಖಾನೆಗಳಿಗೆ ಅಪೆಕ್ಸ್‌ ಬ್ಯಾಂಕ್‌ ಮೂಲಕ ಸಾಲ ಮಂಜೂರಾತಿಯಲ್ಲಿ ನಡೆದಿದೆ ಎನ್ನಲಾಗಿರುವ 2 ಸಾವಿರ ಕೋಟಿ ರು. ಹಗರಣ ತನಿಖೆ ನಡೆಸಬೇಕು ಸಹಕಾರ ಸಂಘಗಳ ರಿಜಿಸ್ಟ್ರಾರ್‌ ಎನ್‌ ಎಸ್‌ ಪ್ರಸನ್ನಕುಮಾರ್‌ ಅವರು 4  ವರ್ಷದ ಹಿಂದೆ ಗೌಪ್ಯ ಪತ್ರ ಬರೆದಿದ್ದರು.

 

ಬ್ಯಾಂಕ್‌ನ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ದೂರು ಅರ್ಜಿಗಳಲ್ಲಿನ ಅಂಶಗಳನ್ನು ಬ್ಯಾಂಕ್‌ನ ದಾಖಲಾತಿಗಳೊಂದಿಗೆ ಪರಿಶೀಲಿಸಲು ಅಧಿಕಾರಿಗಳ ತಂಡ ನಿಯೋಜಿಸಲಾಗಿತ್ತು. ದೂರು ಅರ್ಜಿಯಲ್ಲಿನ ಅಂಶಗಳನ್ನು ಪರಿಶೀಲಿಸಿದ್ದ ಈ ಪರಿಶೀಲನಾ ತಂಡವು ಕೆಲವೊಂದು ಅಂಶಗಳನ್ನು ಸಾಬೀತುಗೊಳಿಸಿತ್ತು.

 

ಹೀಗಾಗಿ ಹೆಚ್ಚಿನ ತನಿಖೆಯು ಅವಶ್ಯವಿರುವುದದರಿಂದ ಸಹಕಾರ ಸಂಘಗಳ ಕಾಯ್ದೆ 1959ರಕಲಂ 64ರ ವಿಚಾರಣೆ/65 ರಡಿಯಲ್ಲಿ ಪರಿವೀಕ್ಷಣೆ ಅಥವಾ ಉನ್ನತ ಸಂಸ್ಥೆಯ ತನಿಖೆ ಅಗತ್ಯವಿದೆ ಎಂದು ವರದಿಯು ಅಭಿಪ್ರಾಯಪಟ್ಟಿತ್ತು. ಆದರೂ ಸಿಬಿಐ ತನಿಖೆಗೆ ಒಳಪಡಿಸುವ ಅಗತ್ಯತೆ ಕಂಡು ಬರುವುದಿಲ್ಲ ಎಂದು ಸಚಿವರಾಗಿದ್ದ  ಎಸ್‌ ಟಿ ಸೋಮಶೇಖರ್‌ ಅವರು ಉತ್ತರಿಸಿದ್ದರು.

 

 

ಪರಿಶೀಲನಾ ತಂಡದ ವರದಿಯನ್ನಾಧರಿಸಿ ಉನ್ನತ ಸಂಸ್ಥೆಯ ತನಿಖೆಗೆ ಆದೇಶಿಸಬೇಕಿತ್ತಾದರೂ ಪರಿಶೀಲನಾ ವರದಿ ಆಧರಿಸಿ ವಿಚಾರಣೆಗೆ ಒಳಪಡಿಸಬೇಕಾದ 10 ಅಂಶಗಳ ಬಗ್ಗೆ 64 ಅಡಿಯಲ್ಲಿ ವಿಚಾರಣೆ ನಡೆದಿತ್ತು ಎಂಬುದು ಸಚಿವ ಸೋಮಶೇಖರ್‌ ಅವರು ನೀಡಿರುವ ಮಾಹಿತಿಯಿಂದ ತಿಳಿದು ಬಂದಿದೆ.

 

ಅಪೆಕ್ಸ್‌ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸಿದ ಅವಧಿಯ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಂದ ಪ್ರಮಾಣೀಕರಿಸಿದ ಲಿಖಿತ ಹೇಳಿಕೆ, ಪ್ರಕರಣವಾರು ಸಂಬಂಧಪಟ್ಟ ದಾಖಲೆಗಳನ್ನು ಪಡೆದಿರುವುದು ಕಂಡು ಬರುವುದಿಲ್ಲ. ನಬಾರ್ಡ್‌ ಸುತ್ತೋಲೆ, ಸಾಲ ನಿಯಮಗಳು, ಸಕ್ಕರೆ ಸಾಲದ ನಿಯಮಗಳು, ಪಡೆದಿರುವ ಭದ್ರತೆ, ಸಾಲ ವಸೂಲಾತಿ, ಬ್ಯಾಂಕ್‌ನ ಬೈಲಾ, ಆಡಳಿತ ಮಂಡಳಿ ಠರಾವುಗಳನ್ನು ಮತ್ತು ಸಂಬಂಧಪಟ್ಟ ಎಲ್ಲಾ ದಾಖಲಾತಿಗಳನ್ನು ಪುನಃ ಪರಿಶೀಲಿಸಿ ಸಾಲ ಸಾಲ ಪಡೆದಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳ ಎಲ್ಲಾ ಪ್ರಕರಣಗಳನ್ನೂ ಪರಿಶೀಲಿಸಿತ್ತು.

 

ಹಾಗೆಯೇ ಈ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿ ದಾಖಲಾತಿಗಳೊಂದಿಗೆ ಸ್ಪಷ್ಟವಾಗಿ ಆರೋಪ ದೃಢಪಟ್ಟಿರುವ ಅಥವಾ ದೃಢಪಡದಿರುವ ಬಗ್ಗೆ ವಿಚಾರಣಾಧಿಕಾರಿ ನಮೂದಿಸಿ ಜವಾಬ್ದಾರಿ ನಿಗದಿಪಡಿಸಿ ಮುಂದುವರೆದ ವಿಚಾರಣೆಗೆ ಆದೇಶಿಸುವುದು ಸೂಕ್ತವೆಂದು 2020ರ ಅಕ್ಟೋಬರ್‌ 17ರಂದು ಆದೇಶಿಸಲಾಗಿತ್ತು. ಈ ಸಂಬಂಧ 2021ರ ಡಿಸೆಂಬರ್‌ 31ರಂದು ಬ್ಯಾಂಕ್‌ ಅನುಪಾಲನಾ ವರದಿ ಸಲ್ಲಿಸಿರುವುದು ಗೊತ್ತಾಗಿದೆ.

 

ದೂರರ್ಜಿಯೇ ಅನಾಮಧೇಯವೆಂದ ಬ್ಯಾಂಕ್‌

 

ಸಕ್ಕರೆ ಕಾರ್ಖಾನೆಗಳಿಗೆ ನಿಯಮಬಾಹಿರವಾಗಿ ಸಾಲ ನೀಡಿದೆ ಎಂದು ಅಪೆಕ್ಸ್‌ ಬ್ಯಾಂಕ್‌ ಉದ್ಯೋಗಿಗಳು ಮತ್ತು ಅಧಿಕಾರಿಗಳ ಒಕ್ಕೂಟವು ಕೇಂದ್ರ ಹಣಕಾಸು ಸಚಿವಾಲಯ, ನಬಾರ್ಡ್‌ ಮತ್ತು ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ 2019ರ ಫೆ. 4ರಂದು ದೂರು ಸಲ್ಲಿಸಿತ್ತು.

 

ಈ ದೂರು ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಿಸರ್ವ್‌ಬ್ಯಾಂಕ್‌, ನಬಾರ್ಡ್‌ನ ಮುಖ್ಯ ವ್ಯವಸ್ಥಾಪಕರಿಗೆ 2019ರ ಏಪ್ರಿಲ್‌8 ರಂದು ಪತ್ರ ಮುಖೇನ ಸೂಚಿಸಿದ್ದರು.

 

 

ಆದರೆ ಅಪೆಕ್ಸ್‌ ಬ್ಯಾಂಕ್‌ನ ಆಡಳಿತ ಮಂಡಳಿಯು ತನ್ನ ಅನುಪಾಲನಾ ವರದಿಯಲ್ಲಿ ಬ್ಯಾಂಕ್‌ನ ವಿರುದ್ಧ ಅನಾಮಧೇಯ ಅರ್ಜಿ ಆಧಾರದ ಮೇಲೆ ಒತ್ತಡಕ್ಕೆ ಒಳಗಾಗಿ ಕಲಂ 64ರ ವಿಚಾರಣೆಗೆ ಆದೇಶಿಸಿತ್ತು ಎಂದು ಸಮಜಾಯಿಷಿ ನೀಡಿರುವುದು ಸೋಮಶೇಖರ್‌ ಅವರು ನೀಡಿರುವ ಮಾಹಿತಿಯಿಂದ ಗೊತ್ತಾಗಿದೆ. ‘ಯಾವುದೇ ಅನಾಮಧೇಯ ದೂರು ಅರ್ಜಿ ಅಥವಾ ಪತ್ರಗಳ ಮೇಲೆ ಯಾವುದೇ ಕ್ರಮ ಅಗತ್ಯವಿರುವುದಿಲ್ಲ ಎಂಬ ಅಂಶವನ್ನು ಉಲ್ಲೇಖಿಸಿರುತ್ತಾರೆ. ಹೀಗಾಗಿ ಕಲಂ 64ರ ಅಡಿ ವಿಚಾರಣೆಯು ಕಾನೂನು ದೃಷ್ಟಿಯಲ್ಲಿ ಊರ್ಜಿತವಾಗುವುದಿಲ್ಲ,’ ಎಂದು ಬ್ಯಾಂಕ್‌ ತಿಳಿಸಿದೆ.

 

 

ಕೆ ಎನ್ ರಾಜಣ್ಣ ಅಧ್ಯಕ್ಷರಾಗಿದ್ದ ಅವಧಿಯಲ್ಲಿಯೇ ಅಪೆಕ್ಸ್‌ ಬ್ಯಾಂಕ್‌ ಮಧ್ಯಸ್ಥಿಕೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ಮತ್ತು ರಮೇಶ್‌ ಜಾರಕಿಹೊಳಿ ಸೇರಿದಂತೆ ಹಲವು ಪ್ರಭಾವಿಗಳ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳ ಮೂಲಕ ನೂರಾರು ಕೋಟಿ ರು.ಮೊತ್ತದಲ್ಲಿ ಸಾಲ ವಿತರಣೆಯಾಗಿದೆ.

 

 

ಅದರಲ್ಲೂ ತುಂಬಾ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ವೊಂದೇ 1 ಸಾವಿರ ಕೋಟಿ ರು.ಗೂ ಅಧಿಕ ಮೊತ್ತದಲ್ಲಿ ಸಾಲ ಮಂಜೂರು ಮಾಡಿದೆ. ಮಂಜೂರಾಗಿದ್ದ ಒಟ್ಟು ಸಾಲ ಮೊತ್ತದ ಪೈಕಿ ಶೇ.50ರಷ್ಟು ಮೊತ್ತ ಅಪೆಕ್ಸ್‌ ಬ್ಯಾಂಕ್‌ಮಧ್ಯಸ್ಥಿಕೆ ಮತ್ತು ಖಾತರಿ ಮೇರೆಗೆ ನೀಡಲಾಗಿದೆ.

 

ದೂರಿನಲ್ಲಿ ಹೇಳಿರುವ ಅಂಶಗಳು ಗಂಭೀರ ಸ್ವರೂಪದಲ್ಲಿವೆ. ಶಾಸಕರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಸೂಕ್ತ ದಾಖಲೆಗಳಿಲ್ಲದೆಯೇ 2,000 ಕೋಟಿ ರು.ಮೊತ್ತದ ಸಾಲ ನೀಡಲಾಗಿದೆ. ನೀಡಿರುವ ಸಾಲ ವಸೂಲಿಯಾಗಿಲ್ಲ. ಬ್ಯಾಂಕ್‌ನ ಹಾಲಿ ಅಧ್ಯಕ್ಷ ರಾಜಣ್ಣ, ಬ್ಯಾಂಕ್‌ನ ಹಿಂದಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವರಾಜ್‌, ಮುಖ್ಯ ವ್ಯವಸ್ಥಾಪಕ ಜಂಗಮಪ್ಪ ಮತ್ತು ಇತರ ನಿರ್ದೇಶಕರು ಇದರಲ್ಲಿ ಭಾಗಿ ಆಗಿದ್ದಾರೆ ಸಹಕಾರ ಸಂಘಗಳ ನಿಬಂಧಕರಾಗಿದ್ದ ಐಎಎಸ್‌ ಅಧಿಕಾರಿ ಎನ್‌ ಎಸ್‌ ಪ್ರಸನ್ನಕುಮಾರ್‌ ಗೌಪ್ಯ ಪತ್ರ ಬರೆದಿದ್ದರು.

 

 

ಹೀಗಾಗಿ ಈ ಪ್ರಕರಣದ ತನಿಖೆಯನ್ನು ವಿಸ್ತೃತವಾಗಿ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಲೆಕ್ಕಪರಿಶೋಧಕರು, ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕರು ನಬಾರ್ಡ್‌ ಪ್ರತಿನಿಧಿಯನ್ನೊಳಗೊಂಡ ಸಮಿತಿ ರಚಿಸಿ ನವೆಂಬರ್‌30ರೊಳಗೆ ವರದಿ ಸಲ್ಲಿಸಲು ಸೂಚಿಸಬೇಕು,' ಎಂದು ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ ಎನ್‌ನಾಗಾಂಬಿಕಾದೇವಿ ಅವರಿಗೆ ಪತ್ರದಲ್ಲಿ ಕೋರಿದ್ದನ್ನು ಸ್ಮರಿಸಬಹುದು.

https://stack.thefile.in/2021/10/governance/9202/

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಗರಣಗಳನ್ನೂ ಮೀರಿಸಿ ಅಪೆಕ್ಸ್ಸ್ ಬ್ಯಾಂಕ್‌ನಲ್ಲಿ ಸಾವಿರಾರು ಕೋಟಿ ರುಪಾಯಿ ಅಕ್ರಮ ನಡೆದಿದೆ. ಆದರೂ ಸರ್ಕಾರವು ಕೇವಲ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಹಗರಣಗಳನ್ನಷ್ಟೇ ಸಿಬಿಐಗೆ ವಹಿಸಿ, ಅಪೆಕ್ಸ್‌ ಬ್ಯಾಂಕ್‌ ಹಗರಣದ ಕುರಿತು ಯಾವುದೇ ತನಿಖೆ ನಡೆಸಲು ಇನ್ನೂ ನಿರ್ಧಾರ ಪ್ರಕಟಿಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

Tags: 2 ಸಾವಿರ ಕೋಟಿ ಸಾಲApex BankBJP governmentcbiCo Op RegistrarD K ShivakumarGuru Raghavendra Sahakara Bankh d kumarswamyK N RajannaLoansS R MaheshS T SomshekharscamSiddaramaiahaಅಕ್ರಮಅನುತ್ಪಾದಕ ಆಸ್ತಿಅರುಣ್‌ ಜೇಟ್ಲಿಆಡಳಿತ ಮಂಡಳಿಉನ್ನತ ತನಿಖೆಎಸ್‌ ಟಿ ಸೋಮಶೇಖರ್‌ಕೆ ಎನ್‌ ರಾಜಣ್ಣಕೇಂದ್ರ ಹಣಕಾಸು ಸಚಿವರುಗುರು ರಾಘವೇಂದ್ರ ಬ್ಯಾಂಕ್‌ಡಿ ಕೆ ಶಿವಕುಮಾರ್ತನಿಖೆನಿಯಮಬಾಹಿರ ಸಾಲಭದ್ರತೆ ಸಾಲವಿಚಾರಣೆಸಕ್ಕರೆ ಕಾರ್ಖಾನೆಗಳುಸಕ್ಕರೆ ಸಾಲಸಹಕಾರ ಬ್ಯಾಂಕ್‌ಸಾ ರಾ ಮಹೇಶ್‌ಸಾಲ ವಸೂಲಾತಿಸಿಬಿಐಹಗರಣಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಎಸ್‌ ಟಿ ಕಲ್ಯಾಣ ಇಲಾಖೆ ನಿರ್ದೇಶಕರ ಹುದ್ದೆ; ಮೂರೇ ಮೂರು ದಿನದಲ್ಲಿ ಇಬ್ಬರು ಅಧಿಕಾರಿಗಳ ವರ್ಗಾವಣೆ

Next Post

ಎಪಿಪಿ ನೇಮಕಾತಿಯಲ್ಲಿ ಅಕ್ರಮ; ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿರುದ್ಧದ ದೂರು ಬಹಿರಂಗ

thefilestack

thefilestack

Next Post

ಎಪಿಪಿ ನೇಮಕಾತಿಯಲ್ಲಿ ಅಕ್ರಮ; ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿರುದ್ಧದ ದೂರು ಬಹಿರಂಗ

Recommended

ಕಾರ್ಬನ್ ಬ್ಲ್ಯಾಕ್ ಫೀಡ್, ಪ್ಯಾರಾಫಿನ್ ಉತ್ಪನ್ನ ಶೇಖರಣೆ; ನಿರ್ಬಂಧ ತೆರವಿಗೆ ಅದಾನಿ ಮನವಿ, ವರದಿಗೆ ನಿರ್ದೇಶನ

2 years ago

ವರ್ಗಾವಣೆ ಪಟ್ಟಿಗೆ ಕತ್ತರಿ; ಲಾಡ್‌ ಶಿಫಾರಸ್ಸಿನ ಪೈಕಿ 40 ಮಂದಿ ಕೈಬಿಟ್ಟು ಹೊಸಪಟ್ಟಿ ರಚಿಸಿದ ಸಿಎಂ ಸಚಿವಾಲಯ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd