the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

‘ದಿ ಫೈಲ್‌’ನ ವರದಿಗಳ ಉಲ್ಲೇಖ; ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ?

thefilestack by thefilestack
November 14, 2023
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಗ್ಯಾರಂಟಿ ಯೋಜನೆಗಳ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ  ಮಧ್ಯೆ ಟ್ವೀಟ್‌ ಸಮರ ಆರಂಭವಾಗಿದೆ. ಗೃಹ ಲಕ್ಷ್ಮಿ ಯೋಜನೆ ಕುರಿತು ನಿರ್ದಿಷ್ಟವಾಗಿ ಪ್ರತಿಕ್ರಿಯಿಸಿರುವ ಹೆಚ್‌ ಡಿ ಕುಮಾರಸ್ವಾಮಿ ಅವರು  'ದಿ ಫೈಲ್‌' ಪ್ರಕಟಿಸಿದ್ದ  ಎರಡು ವರದಿಗಳನ್ನು  ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ.

 

ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಮಾಧ್ಯಮ ಸಂಸ್ಥೆಗೆ 1 ಕೋಟಿ ರು. ನೀಡಿರುವ ವಿಚಾರವು ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಮಾಡಿರುವ ಸರಣಿ ಟ್ವೀಟ್‌ಗಳು ಮುನ್ನೆಲೆಗೆ ಬಂದಿವೆ.

 

ಗ್ಯಾರಂಟಿ ಯೋಜನೆಗಳ ಬಗ್ಗೆ ಸಮೀಕ್ಷೆ ನಡೆಸಲು ಮಾಧ್ಯಮ ಸಂಸ್ಥೆಗೆ 1 ಕೋಟಿ ರು. ನೀಡಿದ್ದನ್ನು 'ದಿ ಫೈಲ್‌' ವರದಿ ಪ್ರಕಟಿಸಿತ್ತು.

 

https://stack.thefile.in/2023/11/governance/19902/

 

ಈ ವರದಿಯನ್ನು ಹೆಚ್‌ ಡಿ ಕುಮಾರಸ್ವಾಮಿ ಅವರು ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 

‘ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ.

 

ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? * ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ,  ಸರಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ,’ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ.

 

 

ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ (ಟ್ವಿಟರ್‌) ನಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಹರಿಹಾಯ್ದಿದ್ದರು.

 

‘ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಘೋಷಣೆಗಳು. ಅದನ್ನು ಒಪ್ಪಿಕೊಂಡೇ ರಾಜ್ಯದ ಜನ ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ. ಈ ಯೋಜನೆಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡೂ ವಿರೋಧಿಸಿದ್ದವು, ಈ ಪಕ್ಷಗಳ ಸೋಲಿಗೆ ಗ್ಯಾರಂಟಿ ಯೋಜನೆಗಳ ಬಗೆಗಿನ ನಿಮ್ಮ ವಿರೋಧವೂ ಕಾರಣ ಎನ್ನುವುದು ನಿಮಗೆ ಇನ್ನೂ ಅರ್ಥವಾಗದೆ ಇರುವುದು ದುರಂತ.

 

ಇದೇ ರೀತಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಹೋದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡಕ್ಕೂ ರಾಜ್ಯದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ,’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು   ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದರು.

 

 

 

ಇದಕ್ಕೂ ಹೆಚ್‌ ಡಿ ಕುಮಾರಸ್ವಾಮಿ ಅವರು ಉತ್ತರಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಕುರಿತು ‘ದಿ ಫೈಲ್‌’ ಕಳೆದ 5 ತಿಂಗಳ ಹಿಂದೆ ಆರ್‌ಟಿಐ ದಾಖಲೆ ಸಹಿತ ಪ್ರಕಟಿಸಿದ್ದ ವರದಿಯನ್ನು ಹಂಚಿಕೊಂಡಿರುವ ಹೆಚ್‌ ಡಿ ಕುಮಾರಸ್ವಾಮಿ ಅವರು ವಿತ್ತ ಸಚಿವರೇ ವಿತ್ತೀಯ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

 

ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ? ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು. 5 ಗ್ಯಾರಂಟಿ ಕೊಟ್ಟಿದ್ದೀರಿ, ಸರಿ. ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೇ ಬರುತ್ತೇನೆ. ಎಲ್ಲಿಗೆ ಬರಲಿ? ಎಂದು ಸವಾಲು ಎಸೆದಿದ್ದಾರೆ. 

 

 

‘ದೂರದೃಷ್ಟಿ ಇಲ್ಲದ ಗ್ಯಾರಂಟಿಗಳು ಕರ್ನಾಟಕವನ್ನು ಆರ್ಥಿಕ ಆಪತ್ತಿಗೆ ದೂಡುತ್ತವೆ ಎಂದು ಆರ್ಥಿಕ ಇಲಾಖೆ ಕಳೆದ ಜೂನ್ (1-6-2023) ನಲ್ಲಿಯೇ ಎಚ್ಚರಿಸಿತ್ತು. ಗೃಹಲಕ್ಷ್ಮೀ ಯೋಜನೆ ರಾಜ್ಯವನ್ನು ಆದಾಯ ಕೊರತೆಗೆ ನೂಕಲಿದೆ, ಪ್ರತೀವರ್ಷ ಇಷ್ಟು ಬೃಹತ್ ಮೊತ್ತ ಹೊಂದಿಸುವುದು ಕಷ್ಟ. ರಾಜ್ಯ ದಿವಾಳಿ ಆಗುತ್ತದೆ ಎಂಬ ಎಚ್ಚರಿಕೆಯನ್ನು ಹಣಕಾಸು ಸಚಿವರಾಗಿ ಉಪೇಕ್ಷೆ ಮಾಡಿದ್ದು ನೀವಲ್ಲವೇ? ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ?

 

ಸೋಲು, ಗೆಲುವು ಜನಾಧೀನ. ಆ ಸತ್ಯ ನನಗೂ ಗೊತ್ತು, ನಿಮಗೂ ಗೊತ್ತು. ಆದರೆ, ಅರೆಬರೆ ಗ್ಯಾರಂಟಿಗಳಿಂದ ಲೋಕಸಭೆ ಗೆಲ್ಲುತ್ತೇವೆ ಎಂದು ಹೊರಟಿದ್ದೀರಿ. ಬನ್ನಿ ಅಖಾಡಕ್ಕೆ. ನಮ್ಮ ಸತ್ಯಕ್ಕೆ ಸೋಲೋ, ನಿಮ್ಮ ಸುಳ್ಳಿಗೆ ಗೆಲುವೋ.. ಎಂದು ನೋಡೋಣ.,' 'ಸಾಲದ ಶೂಲ', 'ಆರ್ಥಿಕ ದಿವಾಳಿತನ', 'ಆರ್ಥಿಕ ಅಸ್ಥಿರತೆ-ಅದಕ್ಷತೆ', 'ಪರಾಧೀನ ಬದುಕು', 'ಕಮೀಷನ್‌ ಕಾಂಡ' ; ಇವು ನಿಮ್ಮ ಸರಕಾರ ರಾಜ್ಯಕ್ಕೆ ಕೊಟ್ಟಿರುವ 5 ಹೊಸ ಗ್ಯಾರಂಟಿಗಳು! ಇನ್ನು, ರಾಜ್ಯದ ಭವಿಷ್ಯ, ಪ್ರತಿಷ್ಠೆ ಎಲ್ಲವೂ ದೈವಾಧೀನ!! ಎಂದಿದ್ದಾರೆ.

ಆರ್ಥಿಕತೆಯ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು, ಆರ್ಥಿಕ ಇಲಾಖೆಯು ನೀಡಿದ್ದ ಎಚ್ಚರಿಕೆಯನ್ನೂ ಗಂಭೀರವಾಗಿ ಪರಿಗಣಿಸದೇ ರಾಜ್ಯವನ್ನು ಬೃಹತ್‌ ಆದಾಯ ಕೊರತೆಗೆ ದೂಡಲಿದೆ ಎಂಬುದನ್ನು 'ದಿ ಫೈಲ್‌'  ದಾಖಲೆ ಸಹಿತ  ಹೊರಗೆಡವಿತ್ತು.

 

ಅಲ್ಲದೇ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲು ಆರ್ಥಿಕ ಇಲಾಖೆಯು ಪ್ರಸ್ತುತ ಇರುವ ಹಣಕಾಸಿನ ನಿರ್ಬಂಧ ಮತ್ತು ಆರ್ಥಿಕ ಮುಗ್ಗಟ್ಟುಗಳಿರುವ ಕಾರಣ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ಯೋಜನೆಗೆ ಅವಕಾಶ ಕಲ್ಪಿಸುವುದು ಕಷ್ಟಕರ. ಪ್ರತಿ ಆರ್ಥಿಕ ವರ್ಷದಲ್ಲಿ ಅಗಾಧ ಪ್ರಮಾಣದ ಹಣವನ್ನು ಈ ಯೋಜನೆಗೆ ಒದಗಿಸಲು ಸಾಧ್ಯವಿಲ್ಲ. ಈ ಯೋಜನೆಗೆ ಮಾನದಂಡಗಳನ್ನು ನಿಗದಿಪಡಿಸುವ ಮೂಲಕ ಫಲಾನುಭವಿಗಳ ಸಂಖ್ಯೆಯನ್ನೂ ಅತ್ಯಗತ್ಯವಾಗಿ ಕಡಿತಗೊಳಿಸಬೇಕು ಎಂದು ಆರ್ಥಿಕ ಇಲಾಖೆಯು ಕಠಿಣ ಅಭಿಪ್ರಾಯ ನೀಡಿತ್ತು.

 

https://stack.thefile.in/2023/07/rti/17625/

ಪ್ರತಿ ಕುಟುಂಬದಲ್ಲಿರುವ ಮನೆ ಯಜಮಾನಿಗೆ ಗೃಹ ಲಕ್ಷ್ಮಿ ಯೋಜನೆಯಡಿ 2,000 ರು. ಸಹಾಯಧನ ನೀಡುವುದಾಗಿ ಚುನಾವಣೆಗೂ ಮುನ್ನ ಘೋಷಿಸಿದ್ದ ಕಾಂಗ್ರೆಸ್‌ ಪಕ್ಷವು ಯಾವುದೇ ಷರತ್ತುಗಳನ್ನು ವಿಧಿಸಿರಲಿಲ್ಲ. ಪಕ್ಷವು ಅತ್ಯಂತ ಬಹುಮತದಿಂದ ಅಧಿಕಾರಕ್ಕೆ ಬಂದ ಕೂಡಲೇ ಯೋಜನೆಯನ್ನು ಯಾವುದೇ ಷರತ್ತುಗಳಿಲ್ಲದೇ ಜಾರಿಗೊಳಿಸಲು ಹೊರಟಾಗ ಆರ್ಥಿಕ ಇಲಾಖೆಯು ವಾಸ್ತವಿಕ ನೆಲೆಗಟ್ಟಿನಲ್ಲಿ ನೀಡಿದ್ದ ಅಭಿಪ್ರಾಯಕ್ಕೆ ಮಣಿದು ಮಾನದಂಡಗಳನ್ನು ಮುಂದಿರಿಸಿ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆಗೊಳಿಸಿತ್ತು.

 

Tags: B S YediyurappaBasavaraj BommaibjpD K ShivakumarGruha LakshmiGruhalakshmiGuranteeh d kumarswamyhdkLakshmi HebbalkarM2M MediaPriyank KhargeSchemesSiddaramaiahaSurveyಅಖಾಡಅರೆಬರೆ ಗ್ಯಾರಂಟಿಆರ್ಥಿಕ ದಿವಾಳಿಆರ್ಥಿಕ ವಿಪತ್ತುಈದಿನಎಂ2ಎಂ ಮೀಡಿಯಾಎಚ್ಚರಿಕೆಕಮಿಷನ್‌ಕೋಟಿ ರು.ಸಮೀಕ್ಷೆಗೃಹ ಲಕ್ಷ್ಮಿಗ್ಯಾರಂಟಿಟ್ವೀಟ್‌ಪ್ರಿಯಾಂಕ್‌ ಖರ್ಗೆಬಸವರಾಜ ಬೊಮ್ಮಾಯಿಯೋಜನೆರಾಜ್ಯ ದಿವಾಳಿವಿತ್ತ ಸಚಿವವಿತ್ತೀಯ ಹೊಣೆಗಾರಿಕೆಸಮೀಕ್ಷೆಸಾಲದ ಶೂಲಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿಹೊಣೆಗಾರಿಕೆಹೊಸ ಗ್ಯಾರಂಟಿ
Advertisement Banner
Previous Post

ಕೀಟನಾಶಕ ಕಾಯ್ದೆ; ಸಮರ್ಪಕವಾಗಿ ಜಾರಿಯಾಗಿಲ್ಲ, ಉತ್ಪಾದನೆ, ಬಳಕೆಯ ಮಾಹಿತಿಯೂ ಸರ್ಕಾರಕ್ಕಿಲ್ಲ

Next Post

ಯುವನಿಧಿ; ಅಂತಿಮಗೊಳ್ಳದ ರೂಪುರೇಷೆ, 5.29 ಲಕ್ಷ ಪದವೀಧರರಿಗೆ ವಾರ್ಷಿಕ 444.49 ಕೋಟಿ ರು ಅಂದಾಜು

thefilestack

thefilestack

Next Post

ಯುವನಿಧಿ; ಅಂತಿಮಗೊಳ್ಳದ ರೂಪುರೇಷೆ, 5.29 ಲಕ್ಷ ಪದವೀಧರರಿಗೆ ವಾರ್ಷಿಕ 444.49 ಕೋಟಿ ರು ಅಂದಾಜು

Recommended

ಪ.ಜಾತಿ, ಪ.ಪಂಗಡ ಉಪಯೋಜನೆ; ಆರ್ಥಿಕ ವರ್ಷ ಮುಗಿದರೂ ಇಲಾಖೆಗಳಲ್ಲಿ 9,219.36 ಕೋಟಿ ಉಳಿಕೆ

11 months ago

ಪರವಾನಿಗೆಯಿಲ್ಲದೆಯೇ ಉಪ ಖನಿಜ ಸಾಗಾಣಿಕೆ; ಸಂದಾಯವಾಗದ ಶುಲ್ಕ, ಸರ್ಕಾರಕ್ಕೆ ಅಪಾರ ನಷ್ಟ

9 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd