the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

‘ದಿ ಫೈಲ್‌’ ವರದಿ ಪರಿಣಾಮ; ಸಚಿವ ನಾಗೇಶ್‌ರಿಂದ ರಾಜೀನಾಮೆ ಪಡೆದ ಮುಖ್ಯಮಂತ್ರಿ

thefilestack by thefilestack
January 13, 2021
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗುರುತರವಾದ ಆರೋಪವನ್ನು ಎದುರಿಸುತ್ತಿದ್ದ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲು ಸಚಿವ ನಾಗೇಶ್‌ ಅವರು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಅಧಿಕಾರಿ ಪುತ್ರಿ ಸ್ನೇಹಾ ಎಂಬುವರು ಪ್ರಧಾನಿ ಕಚೇರಿಗೆ ದೂರು ದಾಖಲಿಸಿದ್ದರು.

ಈ ಕುರಿತಾದ ಪ್ರಕರಣವನ್ನು ‘ದಿ ಫೈಲ್‌’ ಡಿಸೆಂಬರ್‌ 21ರಂದು ದಾಖಲೆ ಸಮೇತ ಹೊರಗೆಡವಿತ್ತು. ಇದರಿಂದ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿತ್ತು.

https://stack.thefile.in/2020/12/governance/6146/

ವರದಿ ಪ್ರಕಟವಾಗುತ್ತಿದ್ದಂತೆ ಖುದ್ದು ಸಚಿವ ನಾಗೇಶ್‌ ಅವರು ‘ದಿ ಫೈಲ್‌’ ವರದಿಯನ್ನು ಉಲ್ಲೇಖಿಸಿ ಸುದ್ದಿಗೋಷ್ಠಿ ನಡೆಸಿದ್ದರಲ್ಲದೆ ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದರು. ಅಲ್ಲದೆ ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದರು. ಆದರೆ ತನಿಖೆ ನಡೆಸಲು ಈವರೆವಿಗೂ ಯಾವುದೇ ಆದೇಶ ಹೊರಬಿದ್ದಿಲ್ಲ.

https://stack.thefile.in/2020/12/governance/6169/

ಹಾಗೆಯೇ ಪ್ರಕರಣದ ಕುರಿತು ನಾಗೇಶ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವರ ಒದಗಿಸಿದ್ದರು. ಆದರೆ ಬಿಜೆಪಿಯ ರಾಷ್ಟ್ರೀಯ ವರಿಷ್ಠರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಹೀಗಾಗಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ.

ಹಾಗೆಯೇ ಪ್ರಕರಣದ ಕುರಿತು ನಾಗೇಶ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವರ ಒದಗಿಸಿದ್ದರು. ಆದರೆ ಬಿಜೆಪಿಯ ರಾಷ್ಟ್ರೀಯ ವರಿಷ್ಠರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಹೀಗಾಗಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ.

ಇನ್ನು, 1 ಕೋಟಿಗೆ ಬೇಡಿಕೆ ಇಟ್ಟಿದ್ದ ಸಂಗತಿಯೂ ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರಿಗೆ ಗೊತ್ತಿದ್ದರೂ ಮೌನವಾಗಿದ್ದರು. ಅಧಿಕಾರಿ ಪುತ್ರಿ ಪ್ರಧಾನಿಗೆ ಸಲ್ಲಿಸಿರುವ ಮನವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವಥ್‌ನಾರಾಯಣ್‌ ಅವರ ಹೆಸರು ಪ್ರಸ್ತಾಪಿಸಿದ್ದನ್ನು ಸ್ಮರಿಸಬಹುದು.

https://stack.thefile.in/2020/12/governance/6181/

‘ವರ್ಗಾವಣೆ ಸಂಬಂಧಿಸಿದಂತೆ ತಮ್ಮ ತಂದೆ ಮೌಖಿಕವಾಗಿ ಹಲವು ಬಾರಿ ಮನವಿಗಳನ್ನು ಮಾಡಿದ್ದರು. ತಮ್ಮ ಮನವಿಗೆ ಸ್ಪಂದಿಸದ ಕಾರಣ ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರಿಗೂ ಈ ಸಂಗತಿಯನ್ನು ಹೇಳಿದ್ದೆವು. ಆದರೆ ಅವರನ್ನೂ ಸಚಿವ ನಾಗೇಶ್‌ ದಿಕ್ಕು ತಪ್ಪಿಸಿದ್ದರು,’ ಎಂದು ಪ್ರಧಾನಿಗೆ ಸಲ್ಲಿಸಿರುವ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ. ಅಲ್ಲದೆ ಬೆಂಗಳೂರಿನ ಸಂಸದರೊಬ್ಬರೊಂದಿಗೂ ಈ ಸಂಗತಿಯನ್ನು ಹಂಚಿಕೊಂಡಿದ್ದಾರಾದರೂ ಆ ಸಂಸದ ಯಾರು ಎಂದು ಹೆಸರಿಸಿರಲಿಲ್ಲ.

ಪ್ರಕರಣ ಹಿನ್ನೆಲೆ

ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟಾಚಾರದಿಂದ ಕೂಡಿದೆ. ವಿಶೇಷವಾಗಿ ಅಬಕಾರಿ ಇಲಾಖೆಯ ಸಚಿವ ಎಚ್‌ ನಾಗೇಶ್‌ ಅವರು ಅತ್ಯಂತ ಭ್ರಷ್ಟರು. ನನ್ನ ತಂದೆ ಇಲಾಖೆಯಲ್ಲಿ 30 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಭಾರತ ಸರ್ಕಾರದ ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು.

ಸದ್ಯ ಅಬಕಾರಿ ಇಲಾಖೆಯಲ್ಲಿ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಹೈಪರ್‌ ಟೆನ್ಷನ್‌, ಸಕ್ಕರೆ , ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ನಮ್ಮ ತಂದೆಗೆ ಇಬ್ಬರು ಪುತ್ರಿಯರಿದ್ದು, ಒಬ್ಬರು ಇಂಜಿನಿಯರಿಂಗ್‌ ಮತ್ತೊಬ್ಬರು ಪಿಯುಸಿ ವ್ಯಾಸಂಗ ಮಾಡುತ್ತಿದ್ದೇವೆ. 5 ಜಂಟಿ ಆಯುಕ್ತರ ಹುದ್ದೆ ಖಾಲಿ ಇವೆ. ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಲ್ಲ. ನಮ್ಮ ತಂದೆ ಸದ್ಯ ಹೊಸಪೇಟೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅನಾರೋಗ್ಯ ಮತ್ತು ನಿವೃತ್ತಿ ಅಂಚಿನಲ್ಲಿರುವ ಕಾರಣ ಖಾಲಿ ಇದ್ದ ಹುದ್ದೆಗೆ ವರ್ಗಾವಣೆ ಮಾಡಲು ಕೋರಿದ್ದೆವು. ಆದರೆ ಸಚಿವ ಎಚ್‌ ನಾಗೇಶ್‌ ಅವರು 1 ಕೋಟಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ, ‘ ಎಂದು ಆರೋಪಿಸಿದ್ದರು.

‘ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿದ್ದೇವಲ್ಲದೆ ಅವರ ಬೇಡಿಕೆಯನ್ನು ಈಡೇರಿಸಲು ಸಮರ್ಥರಾಗಿಲ್ಲ. ಬೇಡಿಕೆ ಈಡೇರಿಸದ ಹೊರತು ವರ್ಗಾವಣೆ ಮಾಡುವುದಿಲ್ಲ. ಲಂಚ ನೀಡದ ಕಾರಣ ರಜೆ ಮೇಲೆ ತೆರಳಲು ಸಚಿವ ನಾಗೇಶ್‌ ಅವರು ಬಲವಂತ ಮಾಡುತ್ತಿದ್ದಾರೆ. ಇದಕ್ಕೊಪ್ಪದ ಕಾರಣ ಹಿಂಸೆ ನೀಡಲಾಗುತ್ತಿದೆ. ಕಳೆದ 1 ತಿಂಗಳಲ್ಲಿ ಹಣ ಪಡೆದು 600ಕ್ಕೂ ಹೆಚ್ಚು ವರ್ಗಾವಣೆಗಳನ್ನು ಮಾಡಲಾಗಿದೆ.

ಸಚಿವರ ಮಧ್ಯವರ್ತಿ ಎಂದು ಹೇಳಲಾಗಿರುವ ಎಲ್‌ ಎ ಮಂಜುನಾಥ್‌ ಮತ್ತು ಹರ್ಷ ಅವರು ವರ್ಗಾವಣೆ ಬಯಸುವ ಅಧಿಕಾರಿ, ಸಿಬ್ಬಂದಿಯೊಂದಿಗೆ ಸಂಧಾನ ನಡೆಸುತ್ತಾರೆ. ಅಧಿಕಾರಿ ಸಿಬ್ಬಂದಿಯಿಂದ ಪಡೆದ ಹಣವನ್ನು ನೇರವಾಗಿ ಸಚಿವರಿಗೆ ತಲುಪಿಸುತ್ತಾರೆ, ‘ಎಂದು ಇಲಾಖೆಯೊಳಗೆ ನಡೆಯುತ್ತಿದೆ ಎನ್ನಲಾಗಿರುವ ಲಂಚಗುಳಿತನವನ್ನು ದೂರಿನಲ್ಲಿ ವಿವರಿಸಿದ್ದರು.

Tags: b l santhoshB S YediyurappaCabinetCommissionerD K ShivakumarDR C N Ashwath Narayandr k sudhakarExcise Departmenth d kumarswamyH NageshH VishwanathISN PrasadJoint CommissionerMunirathnaN RavikumarPrime Minister OfficeRamesh JarkiholiRavikrishnareddyRSSSiddaramaiahಅಬಕಾರಿ ಇಲಾಖೆಆಯುಕ್ತರುಆರ್‌ಎಸ್‌ಎಸ್‌ಎಚ್‌ ಡಿ ಕುಮಾರಸ್ವಾಮಿಎಚ್‌ ನಾಗೇಶ್‌ಎಚ್‌ ವಿಶ್ವನಾಥ್‌ಎನ್‌ ರವಿಕುಮಾರ್‌ಐಎಸ್‌ಎನ್‌ ಪ್ರಸಾದ್‌ಜಂಟಿ ಆಯುಕ್ತಡಾ ಕೆ ಸುಧಾಕರ್‌ಡಾ ಸಿ ಎನ್ ಅಶ್ವಥ್‌ನಾರಾಯಣ್ಡಿ ಕೆ ಶಿವಕುಮಾರ್ಪ್ರಧಾನಿ ಕಚೇರಿಬಿ ಎಲ್‌ ಸಂತೋಷ್‌ಬಿ ಎಸ್‌ ಯಡಿಯೂರಪ್ಪಮುನಿರತ್ನರಮೇಶ್‌ ಜಾರಕಿಹೊಳಿರವಿಕೃಷ್ಣಾರೆಡ್ಡಿಸಚಿವ ಸಂಪುಟಸಿದ್ದರಾಮಯ್ಯ
Advertisement Banner
Previous Post

ಕಾರಜೋಳರ ನಂಟು!; ಗೃಹೋಪಯೋಗಿ ಉಪಕರಣ ಕಂಪನಿಯಿಂದ ಯುವರಾಜ್‌ ಮುಂಗಡ?

Next Post

ಬಿಹಾರಕ್ಕೆ ಬಂಡವಾಳ; ಹೂಡಿಕೆದಾರರ ಆಕರ್ಷಣೆಗಿಳಿದ ಕರ್ನಾಟಕ ಐಪಿಎಸ್‌ ಅಧಿಕಾರಿ

thefilestack

thefilestack

Next Post

ಬಿಹಾರಕ್ಕೆ ಬಂಡವಾಳ; ಹೂಡಿಕೆದಾರರ ಆಕರ್ಷಣೆಗಿಳಿದ ಕರ್ನಾಟಕ ಐಪಿಎಸ್‌ ಅಧಿಕಾರಿ

Discussion about this post

Recommended

ಈಜುಕೊಳ; ರೋಹಿಣಿ ಸಿಂಧೂರಿ ವಿರುದ್ಧ ಶಿಸ್ತು ಕ್ರಮಕ್ಕೆ ಕಾಗದಪತ್ರ ಸಮಿತಿ ಶಿಫಾರಸ್ಸು?

5 years ago

ಮರಣ ಪ್ರಮಾಣ ದರ; ಕಳೆದ ವರ್ಷಕ್ಕಿಂತ 4 ಪಟ್ಟು ಹೆಚ್ಚು, ಕೆಟ್ಟ ಪರಿಸ್ಥಿತಿ!

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd