the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

‘ದಿ ಫೈಲ್‌’ ವರದಿ ಪರಿಣಾಮ; 13.50 ಕೋಟಿ ಮೊತ್ತದ ಅವ್ಯವಹಾರ ತನಿಖೆಗೆ ಸಮಿತಿ ರಚನೆ

thefilestack by thefilestack
May 6, 2022
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಮಗಾರಿ ನಿರ್ವಹಣಾ ಪತ್ರದ ನೈಜತೆಯನ್ನು ಪರಿಶೀಲಿಸದೆಯೇ ನಿರ್ದಿಷ್ಟ ಗುತ್ತಿಗೆದಾರನಿಗೆ 13.50 ಕೋಟಿ ರು. ಮೊತ್ತದ ಕಾಮಗಾರಿ ವಹಿಸಿರುವ ಪ್ರಕರಣವನ್ನು 'ದಿ ಫೈಲ್‌' ಹೊರಗೆಡವುತ್ತಿದ್ದಂತೆ ಸಣ್ಣ ನೀರಾವರಿ , ಅಂತರ್ಜಲ ಅಭಿವೃದ್ಧಿ ಇಲಾಖೆಯ ವಿಜಯಪುರ ಉತ್ತರ ವಲಯದ ಮುಖ್ಯ ಇಂಜಿನಿಯರ್‌ ಅವರ ಕಚೇರಿಯು ಸಮಗ್ರ ವರದಿ ನೀಡಲು ಅಧೀಕ್ಷಕ ಇಂಜನಿಯರ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ.

 

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ 14 ಗ್ರಾಮಗಳಲ್ಲಿರುವ ಕೆರೆಗಳ ಅಭಿವೃದ್ಧಿ ಕಾಮಗಾರಿ ಟೆಂಡರ್‌ ಪಡೆದುಕೊಳ್ಳಲು ಕಾಮಗಾರಿ ನಿರ್ವಹಿಸಲಾಗಿದೆ ಎಂದು ನಕಲಿ ಪ್ರಮಾಣ ಪತ್ರವನ್ನು ಪುರಸ್ಕರಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್‌ನ ಮಾಜಿ ಅಧ್ಯಕ್ಷ ಮುಕುಂದರಾವ್‌ ಭವಾನಿಮಠ ಅವರು ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಅವರಿಗೆ ಸಲ್ಲಿಸಿದ್ದ ದೂರನ್ನಾಧರಿಸಿ 'ದಿ ಫೈಲ್‌' 2022ರ ಮೇ 4ರಂದು ವರದಿ ಪ್ರಕಟಿಸಿತ್ತು.

https://stack.thefile.in/2022/05/governance/11753/

 

'ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಳ್ಳಲಾದ ಕೆರೆ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಸುಮಾರು 13 ಕೋಟಿ ರು. ಮೊತ್ತದ ಅವ್ಯವಹಾರ ಎಸಗಿರುವುದಾಗಿ ಕೊಪ್ಪಳ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಭವಾನಿಮಠ ಅವರು ಸಣ್ಣ ನೀರಾವರಿ ಸಚಿವರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೂರಿನ ಬಗ್ಗೆ ಪರಿಶೀಲಿಸಿ ಸಮಗ್ರ ವರದಿ ನೀಡಲು ಬೆಳಗಾವಿ ವೃತ್ತದ ಅಧೀಕ್ಷಕ ಇಂಜಿನಿಯರ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ. ಈ ಸಮಿತಿಯು ಕಾಮಗಾರಿಗಳ ಸ್ಥಳ ಪರಿವೀಕ್ಷಿಸಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಸಮಗ್ರ ವರದಿಯನ್ನು ಕೂಡಲೇ ಸಲ್ಲಿಸಬೇಕು,' ಎಂದು ವಿಜಯಪುರ ಉತ್ತರ ವಲಯದ ಮುಖ್ಯ ಇಂಜಿನಿಯರ್‌ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರತಿ 'ದಿ ಫೈಲ್‌'ಗೆ ಲಭ್ಯವಾಗಿದೆ.

 

 

ಪ್ರಕರಣದ ಹಿನ್ನೆಲೆ

 

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಕೆರೆಗಳ ಅಭಿವೃದ್ಧಿಪಡಿಸಲು ಲೆಕ್ಕ ಶೀರ್ಷಿಕೆ 4702 ಪ್ರಧಾನ ಕಾಮಗಾರಿ (ಕೆರೆಗಳ ಆಧುನೀಕರಣ)ಳಡಿಯಲ್ಲಿ  ಇರಕಲ್‌ಗಡ, ಅಬ್ಬಿಗೇರಿ, ಕಲ್ಲುತಾವರೆಗೇರೆ, ಕಾಮನೂರು, ಚಳ್ಳಾರಿ, ಭಟ್ಟರನಸಾಪೂರ, ಹನುಮನಟ್ಟಿ, ಗಡ್ಡಿ, ಇಂದಿರಿಗಿ, ಮಲಕನಮರಡಿ, ಒಣಬಳ್ಳಾರಿ, ಹಾಲಹೊಸಳ್ಳಿ, ಹೊಸೂರು, ವಿಠಲಾಪೂರ ಗ್ರಾಮದ ಕೆರೆಗಳ ಅಭಿವೃದ್ಧಿಪಡಿಸಲು 2020ರ ಮಾರ್ಚ್‌ 6 ರಂದು ಟೆಂಡರ್ ಕರೆಯಲಾಗಿತ್ತು.

 

ಈ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಬಿಡ್‌ದಾರರ ಪೈಕಿ ಕೊಪ್ಪಳದ ಮಹಾದೇವಪ್ಪ ಇದರಮನಿ ಎಂಬ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಟ್ಟು ಕಾಮಗಾರಿ ವಹಿಸಿ ಆದೇಶ ಹೊರಡಿಸಲಾಗಿತ್ತು ಎಂಬ ಆರೋಪವಿದೆ. 9 ತಿಂಗಳ ಕಾಲಮಿತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಆದರೂ ಕಾಲಮಿತಿಯೊಳಗೆ ಯಾವುದೇ ಕಾಮಗಾರಿ ಮಾಡದೇ ಇದ್ದರೂ ಬೋಗಸ್‌ ಬಿಲ್‌ಗಳನ್ನು ಸೃಷ್ಟಿಸಿ ಹಣ ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

 

ಇದಷ್ಟೇ ಅಲ್ಲ, ಕಾಮಗಾರಿ ಆದೇಶ ಪಡೆದ ಗುತ್ತಿಗೆದಾರರು 3-4 ತಿಂಗಳಾದರೂ ಉದ್ಧೇಶಪೂರ್ವಕವಾಗಿ ಕಾಮಗಾರಿಗಳನ್ನು ಆರಂಭಿಸದೇ ವಿಳಂಬ ಮಾಡಿದ್ದಾರೆ. ‘ ಕೊಪ್ಪಳ ಜಿಲ್ಲೆಯಲ್ಲಿ ವಾಡಿಕೆಯಂತೆ ಮೇ ಅಂತ್ಯ ಮತ್ತು ಜೂನ್‌ ತಿಂಗಳ ಆರಂಭದಲ್ಲಿ ಮಳೆ ಪ್ರಾರಂಭವಾಗುತ್ತದೆ. ಆಗ ಈ ಗ್ರಾಮಗಳ ಕೆರೆಗಳು ನೈಸರ್ಗಿಕವಾಗಿ ನೀರಿನಿಂದ ತುಂಬಿಕೊಳ್ಳುತ್ತವೆ. ಮತ್ತು ಈಗಾಗಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯ್ತಿ ಪ್ರತಿ ಕೆರೆಗೆ ಹತ್ತಿರ ಒಂದು ನೂರು ಲಕ್ಷ ರು.ಗಳ ಅಂದಾಜು ವೆಚ್ಚದಲ್ಲಿ ಎಲ್ಲಾ ಕೆರೆಗಳ ಹೂಳನ್ನು ಕಾರ್ಮಿಕರನ್ನು ಬಳಸಿ ತೆಗೆದಿದ್ದಾರೆ. ಇದೇ ಕಾಮಗಾರಿಯನ್ನು ಸಣ್ಣ ನೀರಾವರಿ ಇಲಾಖೆಯ ವತಿಯಿಂದ ತೆಗೆಯಲಾಗಿದೆ ಎಂದು ಬೋಗಸ್‌ ದಾಖಲೆಗಳನ್ನು ಸೃಷ್ಟಿಸಿ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಸೇರಿ ಹಣ ಲೂಟಿ ಹೊಡೆಯುವ ಎಲ್ಲಾ ವ್ಯವಸ್ಥಿತವಾದ ಯೋಜನೆಯನ್ನು ತಯಾರಿಸಿ ಮುಗಿಸಿದ್ದಾರೆ,’ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷ ಮುಕುಂದರಾವ್‌ ಭವಾನಿಮಠ ಅವರು ಆರೋಪಿಸಿದ್ದರು.

 

ಹಾಗೆಯೇ ಈ ಗುತ್ತಿಗೆದಾರರು ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗವಹಿಸುವಾಗ ನಿಯಮಾವಳಿ ಪ್ರಕಾರ ಈ ಹಿಂದೆ ನಿರ್ವಹಿಸಿರುವ ಕಾಮಗಾರಿಯ ನಿರ್ವಹಣಾ ಪತ್ರ ಲಗತ್ತಿಸಬೇಕು. ಆದರೆ ಈ ಗುತ್ತಿಗೆದಾರರು ಟೆಂಡರ್‌ ಅರ್ಜಿಯ ಜತೆ ಲಗತ್ತಿಸಲಾದ ಕಾಮಗಾರಿ ನಿರ್ವಹಣಾ ಪತ್ರ ನಕಲಿಯಾಗಿದೆ. ಅಧಿಕಾರಿಗಳು ಅಕ್ರಮವಾಗಿ ಗುತ್ತಿಗೆದಾರನ ಜತೆಯಲ್ಲಿ ಶಾಮೀಲಾಗಿ ನಕಲಿ ನಿರ್ವಹಣಾ ಪತ್ರಮೇಲೆ ಟೆಂಡರ್‌ ಪ್ರಕ್ರಿಯೆಯಲ್ಲಿ ಮಹಾದೇವಪ್ಪ ಇದರಮನಿ ಎಂಬುವರಿಗೆ ದೊರಕುವ ಹಾಗೆ ಮಾಡಿದ್ದಾರೆ. ಇದರಲ್ಲಿ ಕೊಪ್ಪಳದ ಅಂದಿನ ಮುಖ್ಯ ಇಂಜಿನಿಯರ್‌ ಶಾಮೀಲಾಗಿದ್ದಾರೆ ಎಂದು ಭವಾನಿಮಠ ಅವರು ದೂರಿನಲ್ಲಿ ವಿವರಿಸಿದ್ದರು.

 

ವೀರಯ್ಯ ಹಿರೇಮಠ, ಮಹಾದೇವಪ್ಪ ಇದರಮನಿ, ಬಾಲಚಂದ್ರಸಾಲಬಾವಿ, ಮಲ್ಲನಗೌಡ ಮಾಲಿಪಾಟೀಲ್‌ ಹೊರತುಪಡಿಸಿದರೆ ಬೇರೆ ಯಾವುದೇ ಗುತ್ತಿಗೆದಾರರಿಗೆ ಕಾಮಗಾರಿ ನಿರ್ವಹಿಸುವ ಅವಕಾಶಗಳೇ ದೊರಕಿಲ್ಲ. ಇದಕ್ಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳ ಕಾರಣ ಎಂದೂ ಭವಾನಿ ಮಠ ಅವರು ದೂರಿದ್ದರು.

Tags: Basavaraj BommaiBhavaniMathcivil worksContractorsD K ShivakumarGangavatih d kumarswamyJ C MadhuswamykoppalaLakes DevelopmentLift IrrigationMinor LakesNAREGARdprscamSiddaramaiahSuperitendent EngineerVijayapuraZP CEOಅಧೀಕ್ಷಕ ಇಂಜಿನಿಯರ್‌ಅವ್ಯವಹಾರ ತನಿಖೆಎಚ್‌ ಡಿ ಕುಮಾರಸ್ವಾಮಿಏತ ನೀರಾವರಿಕೊಪ್ಪಳ ಜಿಲ್ಲಾ ಪಂಚಾಯ್ತಿಗಂಗಾವತಿ ವಿಧಾನಸಭೆ ಕ್ಷೇತ್ರಗುತ್ತಿಗೆದಾರರುಗೋಲ್ಮಾಲ್‌ಜಲ ಸಂಪನ್ಮೂಲ ಇಲಾಖೆಜಿಲ್ಲಾ ಪಂಚಾಯ್ತಿ ಸಿಇಒಡಿ ಕೆ ಶಿವಕುಮಾರ್ನಕಲಿ ಕಾಮಗಾರಿನಕಲಿ ಕಾರ್ಯನಿರ್ವಹಣೆ ಪತ್ರಬಸವರಾಜ ಬೊಮ್ಮಾಯಿಬೋಗಸ್‌ ಬಿಲ್‌ಮಾಜಿ ಅಧ್ಯಕ್ಷರುಮುಕುಂದರಾವ್‌ ಭವಾನಿಮಠವಿಜಯಪುರ ಉತ್ತರ ವಲಯಸಣ್ಣ ಕೆರೆಗಳ ಆಧುನೀಕರಣಸಮಿತಿ ರಚನೆಸಿದ್ದರಾಮಯ್ಯಸಿವಿಲ್‌ ಕಾಮಗಾರಿಗಳು
Advertisement Banner
Previous Post

ಕೆಪಿಎಸ್ಸಿ ಅಕ್ರಮ ಬಹಿರಂಗ; ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯಲ್ಲಿಯೇ ಭ್ರಷ್ಟಾಚಾರ ಒಪ್ಪಿಕೊಂಡ ಸರ್ಕಾರ

Next Post

‘ಅಕ್ರಮ ಫಲಾನುಭವಿ’ ಆರೋಪಿತ ಅಧಿಕಾರಿಯೇ ಕೆಪಿಎಸ್ಸಿಗೆ ಕಾರ್ಯದರ್ಶಿ: ವಿವಾದದ ವರ್ಗಾವಣೆ

thefilestack

thefilestack

Next Post

'ಅಕ್ರಮ ಫಲಾನುಭವಿ' ಆರೋಪಿತ ಅಧಿಕಾರಿಯೇ ಕೆಪಿಎಸ್ಸಿಗೆ ಕಾರ್ಯದರ್ಶಿ: ವಿವಾದದ ವರ್ಗಾವಣೆ

Recommended

ಬಿಡುಗಡೆಯಾಗದ 25 ಕೋಟಿ ರು ಬಡ್ಡಿ ಸಹಾಯಧನ, ಕುಗ್ಗಿತು ಆದ್ಯತಾ ವಲಯಕ್ಕೆ ಸಾಲದ ಪ್ರಮಾಣ; ತುಟಿಬಿಚ್ಚದ ಸಚಿವ

1 year ago

‘ಗುತ್ತಿಗೆ ಮೀಸಲಾತಿ ತೀರ್ಮಾನವಾಗಿಲ್ಲ, ಕಡತವೂ ಇಲ್ಲ’; ಸಿಎಂ, ಡಿಸಿಎಂ ಹೇಳಿಕೆಗಳಿಗಿಲ್ಲದ ತಾಳಮೇಳ?

1 year ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd