the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home RTI

ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ; 671 ಕೋಟಿ ರು.ಮೊತ್ತದ ಕಾರ್ಯಯೋಜನೆ ಕಡತಗಳು ನಾಶ!

thefilestack by thefilestack
April 27, 2022
in RTI
0
0
SHARES
0
VIEWS
Share on FacebookShare on Twitter

ಬೆಂಗಳೂರು; ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ಅಂತರ್ಜಲ ಅಭಿವೃದ್ಧಿಗಾಗಿ ಮತ್ತು ಕುಡಿಯುವ ನೀರಿನ ಸಲುವಾಗಿ ಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 670 ಕೋಟಿ ರು. ಮೊತ್ತದ ಯೋಜನೆಗೆ ಸಂಬಂಧಿಸಿದ ಡಿಪಿಆರ್ ಮೂಲ ಕಡತಗಳನ್ನು ಮಾಹಿತಿ ಹಕ್ಕಿನಲ್ಲಿ ನೀಡಲು ಮಾಹಿತಿ ಹಕ್ಕು ಹೋರಾಟಗಾರರನ್ನು ಜಲ ಸಂಪನ್ಮೂಲ ಇಲಾಖೆಯು ಅಲೆದಾಡಿಸುತ್ತಿದೆ.

 

ಸಾಮಾಜಿಕ ಕಾರ್ಯಕರ್ತ ಎಚ್‌ ಎಂ ವೆಂಕಟೇಶ್‌ ಅವರು ಯೋಜನೆಗೆ ಸಂಬಂಧಿಸಿದ ಡಿಪಿಆರ್‌ ಕಡತಗಳನ್ನು ಮಾಹಿತಿ ಹಕ್ಕಿನಲ್ಲಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೂ ಕಡತಗಳನ್ನು ಒದಗಿಸುತ್ತಿಲ್ಲ. ಇಲಾಖೆಯ ಅಧಿಕಾರಿಗಳು ಕಡತಗಳನ್ನು ನಾಶಪಡಿಸಿರುವ ಸಾಧ್ಯತೆ ಇದೆ. ಇದರ ಹಿಂದೆ ಭಾರೀ ಭ್ರಷ್ಟಾಚಾರ ಮತ್ತು ಅವ್ಯವಹಾರಗಳು ನಡೆದಿದೆ ಎಂದು ಎಚ್‌ ಎಂ ವೆಂಕಟೇಶ್‌ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

 

ಕೂಡ್ಲಿಗಿ ತಾಲೂಕಿನ 74ಕೆರೆಗಳಿಗೆ ಅಂತರ್ಜಲ ಅಭಿವೃದ್ಧಿಗಾಗಿ ಮತ್ತು ಕುಡಿಯುವ ನೀರಿನ ಸಲುವಾಗಿ ತುಂಗಭದ್ರಾ ನದಿಯಿಂದ ಕೆರೆಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ಮೂಲ ಕಡತಗಳನ್ನು ಪಡೆಯಲು 2021ರ ಡಿಸೆಂಬರ್‌ 6ರಂದು ಮಾಹಿತಿ ಹಕ್ಕು ಅಧಿನಿಯಮದಲ್ಲಿ ಕಡತಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದ್ದರು.

 

ಆದರೆ ಹೂವಿನಹಡಗಲಿ ವ್ಯಾಪ್ತಿಯ ಕಾರ್ಯಪಾಲಕ ಅಭಿಯಂತರರು ಕಡತಗಳನ್ನು ಹಸ್ತಾಂತರಿಸಬೇಕು ಎಂದು ಮುಂಡರಗಿಯ ಏತನೀರಾವರಿ ಯೋಜನೆ ನಿರ್ವಹಿಸುತ್ತಿರುವ ವಿಭಾಗಕ್ಕೆ 2021ರ ಡಿಸೆಂಬರ್‌ 27ರಂದು ಪತ್ರ ಬರೆದು ಕೈತೊಳೆದುಕೊಂಡಿದ್ದಾರೆ. ಮುಂಡರಗಿಯ ಏತನೀರಾವರಿ ಯೋಜನೆಯ ವಿಭಾಗವು ಮೂಲ ಕಡತಗಳನ್ನು ಇದುವರೆಗೂ ಹಸ್ತಾಂತರಿಸಿಲ್ಲ ಎಂಬುದು ಇಲಾಖೆಯ ಆಂತರಿಕ ವ್ಯವಹಾರ ಪತ್ರಗಳಿಂದ ತಿಳಿದು ಬಂದಿದೆ.

 

 

ಇದಾದ ನಂತರ 2022ರ ಫೆ.23ರಂದು ಹೂವಿನಹಡಗಲಿಯ ಕಾರ್ಯಪಾಲಕ ಅಭಿಯಂತರರು ಮೂಲ ಕಡತಗಳನ್ನು ಹಸ್ತಾಂತರಿಸಬೇಕು ಎಂದು ಬರೆದಿದ್ದ ನೆನಪೋಲೆಗಳಿಗೂ ಯಾವುದೇ ಉತ್ತರ ಬಂದಿಲ್ಲ.
‘ಡಿಪಿಆರ್ ಮೂಲ ಕಡತಗಳನ್ನು ಹಸ್ತಾಂತರಿಸಬೇಕು ಎಂದು ಹೂವಿನಹಡಗಲಿ ಪತ್ರ ಬರೆದಿದ್ದರು ಸಹ ಕಡತಗಳನ್ನು ನೀಡಿಲ್ಲ. ಇದರಿಂದ ಅಧಿಕಾರಿಗಳು ವಿಫಲರಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

 

ಸಾರ್ವಜನಿಕರ ತೆರಿಗೆ ಹಣದಿಂದ ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು ಸರ್ಕಾರ ರೂಪಿಸಿದ್ದು ಇದಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಯೋಜನೆಯ ಮೂಲ ಕಡತಗಳು ನಾಶ ಮಾಡಿದ್ದಾರೆ,’ ಎಂದು ಸಾಮಾಜಿಕ ಕಾರ್ಯಕರ್ತ ಎಚ್‌ ಎಂ ವೆಂಕಟೇಶ್‌ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

 

ಸಾರ್ವಜನಿಕರ ತೆರಿಗೆ ಹಣದಿಂದ ಈ ಯೋಜನೆ ರೂಪುಗೊಂಡಿದೆ. ಯೋಜನೆಗೆ ಸಂಬಂಧಿಸಿದ ಮೂಲ ಕಡತಗಳನ್ನು ನಾಶಪಡಿಸಿರುವ ಮುಂಡರಗಿ ಮತ್ತು ಹೂವಿನಹಡಗಲಿ ಕಾರ್ಯಪಾಲಕ ಅಭಿಯಂತರರು ಹಾಗೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು ಎಂದು ನೀಡಿದ್ದ ದೂರನ್ನೂ ಕಸದಬುಟ್ಟಿಗೆ ಎಸೆದಿದ್ದಾರೆ.

 

‘ತಕ್ಷಣ ತಪ್ಪಿತಸ್ಥರ ಮೇಲೆ ಕಾನೂನು ಕ್ರಮಗಳನ್ನು ಕೈಗೊಂಡು ಸಾರ್ವಜನಿಕ ಕಡತಗಳು ಸರ್ಕಾರದ ಕೋಟ್ಯಾಂತರ ರೂಪಾಯಿಗಳ ಖರ್ಚುವೆಚ್ಚಗಳ ದಾಖಲೆಗಳನ್ನು ಕಣ್ಮರೆ ಮಾಡಿರುವ ಹಿಂದೆ ಭಾರೀ ಭ್ರಷ್ಟಾಚಾರ ಮತ್ತು ಅವ್ಯವಹಾರಗಳು ನಡೆದಿರುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿಯೇ ದಾಖಲೆಗಳು ನಾಶ ಮಾಡಿರುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಅಧಿಕಾರಿಗಳನ್ನು ತಕ್ಷಣ ಅಮಾನತಿನಲ್ಲಿಟ್ಟು ತನಿಖೆ ಮಾಡಬೇಕು,’ ಎಂದು ವೆಂಕಟೇಶ್‌ ಅವರು ದೂರು ಸಲ್ಲಿಸಿದ್ದಾರೆ. ಈ ಕುರಿತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೂ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ. ಇದುವರೆಗೂ ಯಾವುದೇ ಕ್ರಮ ವಹಿಸಿಲ್ಲ ಎಂದು ಗೊತ್ತಾಗಿದೆ.

 

ಕೂಡ್ಲಿಗಿಯಲ್ಲಿ 27 ದೊಡ್ಡ ಮತ್ತು 28 ಸಣ್ಣ ಕೆರೆಗಳಿವೆ. ದೊಡ್ಡ ಕೆರೆಗಳ ಒಟ್ಟು ನೀರಿನ ಸಾಮರ್ಥ್ಯ 1455.89 ಎಂಸಿಎಫ್‌ ಇದ್ದರೆ ಸಣ್ಣ ಕೆರೆಗಳ ಸಾಮರ್ಥ್ಯ 278.24 ಎಂಸಿಎಫ್‌ಟಿ ಇದೆ. ಉಳಿದಂತೆ 19 ಸಣ್ಣಪುಟ್ಟ ಕೆರೆಗಳಿವೆ.

Tags: Assistant Executive EngineerBasavarajBommaiChief SecretaryD K ShivakumarGovind Karjolh d kumarswamyH K PatilHagaribommanahalliHoovinahadagaliIrrigation ProjectsKudgligiKudligi Tank Filing SchemesLift IrrigationMunirabadRakesh SinghSiddaramaiahSingatalurVijayanagar DistrictWater Resourceಅಂದಾಜು ಪಟ್ಟಿಎಚ್‌ ಡಿ ಕುಮಾರಸ್ವಾಮಿಕಡತಗಳು ನಾಪತ್ತೆಕಡತಗಳು ನಾಶಕಾಮಗಾರಿಕಾರ್ಯಯೋಜನೆಕೂಡ್ಲಿಗಿಕೂಡ್ಲಿಗಿ ಏತ ನೀರಾವರಿಗೋವಿಂದ ಕಾರಜೋಳಜಲಸಂಪನ್ಮೂಲಟೆಂಡರ್ ಪ್ರಕ್ರಿಯೆಡಿ ಕೆ ಶಿವಕುಮಾರ್ಡಿಪಿಆರ್‌ನೀರಾವರಿ ಕೇಂದ್ರ ವಲಯನೀರಾವರಿ ಯೋಜನೆಗಳುಬಸವರಾಜ ಬೊಮ್ಮಾಯಿಮುಖ್ಯ ಇಂಜಿನಿಯರ್‌ಮುನಿರಾಬಾದ್‌ಮೂಲ ದಾಖಲೆಗಳುಸಿಂಗಟಾಲೂರು ಏತ ನೀರಾವರಿಸಿದ್ದರಾಮಯ್ಯಹಗರಿಬೊಮ್ಮನಹಳ್ಳಿಹೂವಿನಹಡಗಲಿ
Advertisement Banner
Previous Post

ಪಠ್ಯ ಪರಿಷ್ಕರಣೆ ಪರಿಣಾಮ ; 2.5 ಕೋಟಿ ನಷ್ಟ, ಮುದ್ರಿತ 6.76 ಲಕ್ಷ ಪುಸ್ತಕಗಳು ಅನುಪಯುಕ್ತ, ಹರಾಜಿಗೂ ನಕಾರ

Next Post

ಉಗ್ರಾಣವನ್ನೇ ಮುಕ್ಕಿದ ಐಎಎಸ್‌ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳದೇ 1,479 ಕೋಟಿ ನೆರವಿಗೆ ಪ್ರಸ್ತಾವನೆ ಸಲ್ಲಿಕೆ

thefilestack

thefilestack

Next Post

ಉಗ್ರಾಣವನ್ನೇ ಮುಕ್ಕಿದ ಐಎಎಸ್‌ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳದೇ 1,479 ಕೋಟಿ ನೆರವಿಗೆ ಪ್ರಸ್ತಾವನೆ ಸಲ್ಲಿಕೆ

Recommended

ಕಂಪ್ಯೂಟರ್‌, ಟ್ಯಾಬ್‌ ಖರೀದಿಯಲ್ಲಿ ಅವ್ಯವಹಾರ; ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮೀನಮೇಷ

3 years ago

ಡ್ರಗ್ಸ್‌ ದಂಧೆ; 3 ವರ್ಷದಲ್ಲಿ 30 ಕೋಟಿ ಮೌಲ್ಯದ 15,778 ಕೆ ಜಿ ಮಾದಕ ಪದಾರ್ಥ ವಶ

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd