the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ನೂಡಲ್ಸ್‌ ಖರೀದಿ; ಮೈಸೂರ್‌ ಸ್ಯಾಂಡಲ್‌ ಸೋಪ್‌ ಕಾರ್ಖಾನೆಯಲ್ಲಿ 20 ಕೋಟಿ ಅಕ್ರಮ

thefilestack by thefilestack
January 21, 2021
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಲಂಚಗುಳಿತನದಲ್ಲಿ ಮುಳುಗಿದೆ ಎಂಬ ಬಲವಾದ ಆರೋಪಗಳ ನಡುವೆಯೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಂಪನಿ (ಕೆಎಸ್‌ಡಿಎಲ್‌) ಕಚ್ಚಾ ಸಾಮಗ್ರಿಗಳ ಪೈಕಿ ಒಂದಾದ ನೂಡಲ್ಸ್‌ ಖರೀದಿಯಲ್ಲಿ 20.00 ಕೋಟಿಗೂ ಅಧಿಕ ಮೊತ್ತದಲ್ಲಿ ಅವ್ಯವಹಾರ ನಡೆದಿದೆ.

ನೂಡಲ್ಸ್‌ ಸರಬರಾಜು ಮಾಡಿದ ಅನುಭವವೇ ಇಲ್ಲದ ಕಂಪನಿಗೆ ಖರೀದಿ ಆದೇಶ ನೀಡಿರುವುದರ ಹಿಂದೆ ದೊಡ್ಡಮಟ್ಟದಲ್ಲಿ ಕಮಿಷನ್‌ ವ್ಯವಹಾರ ನಡೆದಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಪ್ರತಿಷ್ಠಿತ ಕಂಪನಿಗಳ ಬಿಡ್‌ಗಳನ್ನು ತಿರಸ್ಕರಿಸಿರುವ ಅಧಿಕಾರಿಗಳು ನೂಡಲ್ಸ್‌ ಸರಬರಾಜು ಮಾಡಿದ ಅನುಭವವೇ ಇಲ್ಲದ ಕರ್ನಾಟಕ ಕೆಮಿಕಲ್ಸ್‌ ಕಂಪನಿಯ ಬಿಡ್‌ನ್ನು ಅನುಮೋದಿಸಿರುವುದು ಅಕ್ರಮ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಈ ಪ್ರಕರಣದ ಕುರಿತು ಕಾರ್ಖಾನೆಯ ನೌಕರರ ಸಂಘ ದೂರು ನೀಡುವವರೆಗೂ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಮತ್ತು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಗಮನಕ್ಕೂ ಬಂದಿರಲಿಲ್ಲ.

ನೂಡಲ್ಸ್‌ ಖರೀದಿಯಲ್ಲಿನ ಅಕ್ರಮವೂ ಸೇರಿದಂತೆ ಹಲವು ಅಕ್ರಮ ಪ್ರಕರಣಗಳೂ ನಡೆದಿವೆ. ಈ ಎಲ್ಲಾ ಪ್ರಕರಣಗಳ ಸಂಬಂಧ ಕೆಎಸ್‌ಡಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಫ್‌ಎಸ್‌ ಅಧಿಕಾರಿ ಹರಿಕುಮಾರ್‌ ಝಾ ಸೇರಿದಂತೆ ಇನ್ನಿತರೆ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಸರ್ಕಾರವು ಹಿರಿಯ ಐಎಎಸ್‌ ಅಧಿಕಾರಿ ಗುಂಜನ್‌ ಕೃಷ್ಣ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.

ಅವ್ಯವಹಾರದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಅಧಿಕಾರಿಗಳ ವಿರುದ್ಧ ವಿಚಾರಣೆ ಮತ್ತು ತನಿಖೆ ನಡೆಸುವ ಸಲುವಾಗಿ ಸರ್ಕಾರ ತನಿಖಾ/ವಿಚಾರಣಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂಡಲ್ಸ್‌ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ 20 ಕೋಟಿ ಅಕ್ರಮದ ಬಗ್ಗೆ 10 ದಿನದ ಒಳಗೆ ವರದಿ ಸಲ್ಲಿಸಲು ಸೂಚಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ

ಸಾಬೂನು ತಯಾರಿಸಲು ಬಳಸುವ ಕಚ್ಛಾ ಸಾಮಗ್ರಿಯಾದ 17 ಸಾವಿರ ಮೆಟ್ರಿಕ್‌ ಟನ್‌ ಪ್ರಮಾಣದಲ್ಲಿ ಖರೀದಿಸಲು ನೂಡಲ್ಸ್‌ ಖರೀದಿಸಲು 2019ರಲ್ಲಿ ಟೆಂಡರ್‌ ಕರೆಯಲಾಗಿತ್ತು. ಆದರೆ ಕುಂಟು ನೆಪಗಳನ್ನೊಡ್ಡಿದ್ದ ಅಧಿಕಾರಿಗಳು ಟೆಂಡರ್‌ ಪ್ರಕ್ರಿಯೆಯನ್ನು 5 ಬಾರಿ ಮುಂದೂಡಿದ್ದರು. 6ನೇ ಬಾರಿಗೆ ಪುನಃ ಟೆಂಡರ್‌ ಕರೆದಿದ್ದ ಅಧಿಕಾರಿಗಳು ನೂಡಲ್ಸ್‌ ಪ್ರಮಾಣವನ್ನು 17 ಸಾವಿರ ಮೆಟ್ರಿಕ್‌ ಟನ್‌ನಿಂದ 12 ಸಾವಿರಕ್ಕಿಳಿಸಿದ್ದರು.

ಆದರೆ 6ನೇ ಬಾರಿ ಕರೆದಿದ್ದ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಲಿಲ್ಲ. 2020ರ ಜನವರಿವರೆಗೆ ಪುನಃ 12 ಸಾವಿರ ಮೆಟ್ರಿಕ್‌ ಟನ್‌ ಟನ್‌ ಪ್ರಮಾಣಕ್ಕೆ ಕರೆಯಲಾಗಿತ್ತಾದರೂ ಏಪ್ರಿಲ್‌, ಆಗಸ್ಟ್‌, ಸೆಪ್ಟಂಬರ್‌ವರೆಗೂ ಮುಂದುವರೆಯಿತು. ಇದಾದ ನಂತರ ಅದಾನಿ ವಿಲ್‌ಮರ್‌ ಸಂಸ್ಥೆಗೆ ಪ್ರತಿ ಟನ್‌ಗೆ 59 ಸಾವಿರ ರು.ನಂತೆ ಖರೀದಿ ಆದೇಶ ನೀಡಲಾಗಿತ್ತು ಎಂದು ತಿಳಿದು ಬಂದಿದೆ.

ಇದಾದ ನಂತರ ಮತ್ತೊಮ್ಮೆ ಟೆಂಡರ್‌ ಕರೆದಿದ್ದ ಅಧಿಕಾರಿಗಳು 6 ಸಾವಿರ ಮೆಟ್ರಿಕ್‌ ಟನ್‌ಗೆ 3 ಎಫ್‌ ಇಂಡಸ್ಟ್ರೀಸ್‌ಗೆ ಪ್ರತಿ ಮೆಟ್ರಿಕ್‌ ಟನ್‌ಗೆ 71,500 ರು.ಗೆ ಖರೀದಿ ಆದೇಶ ನೀಡಿದ್ದರು. ಪುನಃ ಅಕ್ಟೋಬರ್‌ 2020ಕ್ಕೆ ಟೆಂಡರ್‌ ಕರೆದಿದ್ದ ಅಧಿಕಾರಿಗಳು 2020ರ ನವೆಂಬರ್‌ 20ರಂದು ಪ್ರತಿ ಮೆಟ್ರಿಕ್‌ ಟನ್‌ 87,000 ರು.ಗಳಂತೆ, 104 ಕೋಟಿ 40 ಲಕ್ಷ ರು.ಗೆ ಕರ್ನಾಟಕ ಕೆಮಿಕಲ್‌ ಇಂಡಸ್ಟ್ರೀಸ್‌ಗೆ ಖರೀದಿ ಆದೇಶ ನೀಡಲಾಗಿತ್ತು. ಪದೇ ಪದೇ ಟೆಂಡರ್‌ ಕರೆದಿದ್ದ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಕರ್ನಾಟಕ ಕೆಮಿಕಲ್‌ ಮತ್ತು ಕರ್ನಾಟಕ ಅರೋಮಾ ಕಂಪನಿ ಸೋದರ ಸಂಸ್ಥೆಗಳಾಗಿವೆ. ಇವೆರಡೂ ಒಂದೇ ವಿಳಾಸದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಂತಹ ಸಂಸ್ಥೆಗಳಿಗೆ ಆರ್ಥಿಕ ಬಿಡ್‌ನಲ್ಲಿ ಅವಕಾಶ ನೀಡಿ ಕೆಟಿಪಿಪಿ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ. ಇನ್ನು ನೂಡಲ್ಸ್‌ ಹೊರತುಪಡಿಸಿ ಇನ್ನಿತರೆ ಸಾಮಗ್ರಿಗಳ ಖರೀದಿಗೆ ವಾರ್ಷಿಕ ಟೆಂಡರ್‌ ಕರೆಯುವ ಅಧಿಕಾರಿಗಳು ನೂಡಲ್ಸ್‌ ಖರೀದಿಗೆ ಮಾತ್ರ ಟೆಂಡರ್‌ನ್ನು ಪದೇ ಪದೇ ಮುಂದೂಡಿರುವುದು ಸಂಶಯಗಳಿಗೆ ಕಾರಣವಾಗಿದೆ.

ಅಲ್ಲದೆ ಜಾಗತಿಕ ಮಾರುಕಟ್ಟೆಯಲ್ಲಿ ಪಾನ್‌ ಸೆಂಚುರಿ, ಬಿರ್ಲಾ ಕಂಪನಿ, ಮಲೇಶಿಯಾ, ಕೆಎಲ್‌ಕೆ ಪಾಲ್ಮೋಸಾ, ಇಜೀಲ್‌ ಕೆಮಿಕಲ್ಸ್‌ ಪ್ರೈವೈಟ್‌ ಲಿಮಿಟೆಡ್‌ ಚೆನ್ನೈ, ಕರನೀತ್‌ ಎಂಟರ್‌ಪ್ರೈಸೆಸ್‌ ಇಂಡಿಯಾ ಪ್ರೈವೈಟ್‌ ಲಿಮಿಟೆಡ್‌, ಬೆಂಗಳೂರು ಬಿರ್ಲಾ ಲಿಮಿಟೆಡ್‌, ಮಲೇಷಿಯಾ ಕಂಪನಿ 3ಎಫ್‌ ಇಂಡಸ್ಟ್ರೀಸ್‌ ಇಂಡಿಯಾ ಸೇರಿದಂತೆ ಹಲವು ಕಂಪನಿಗಳು ನೂಡಲ್ಸ್‌ನ್ನು ಕೇವಲ 55ರಿಂದ 60 ಸಾವಿರ ರು.ಗೆ ಮಾರಾಟ ಮಾಡುತ್ತಿವೆ. ಆದರೆ ಕೆಎಸ್‌ಡಿಎಲ್‌ನ ಭ್ರಷ್ಟ ಅಧಿಕಾರಿಗಳು ಕರ್ನಾಟಕ ಕೆಮಿಕಲ್ಸ್‌ ಕಂಪನಿಯಿಂದ ಖರೀದಿಸಿ ಕಂಪನಿಯ ಬೊಕ್ಕಸಕ್ಕೆ ನಷ್ಟಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ.

ಕರ್ನಾಟಕ ಕೆಮಿಕಲ್‌ ಕಂಪನಿಯು ತನ್ನ ಸೇವಾವಧಿಯಲ್ಲಿ ಎಂದಿಗೂ ಯಾರಿಗೂ 1 ಟನ್‌ನಷ್ಟೂ ನೂಡಲ್ಸ್‌ ಕುಡ ಸರಬರಾಜು ಮಾಡಿಲ್ಲ. ಇಂತಹ ಕಂಪನಿಗೆ ಖರೀದಿ ಆದೇಶ ನೀಡಲಾಗಿದೆ. ಇದು ಅವ್ಯವಹಾರವಲ್ಲದೆ ಮತ್ತೇನು ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಪ್ರಶ್ನಿಸಿದ್ದಾರೆ.

Tags: AdaniB S YediyurappaChief Minister OfficeChief SecretaryCommerce and IndustriesD K ShivakumarGunjan Krishna IASh d kumarswamyHarikumar JhaJagadish ShettarKSDLMadalu VirupakshappaMysore Sandal SoapNoodlesP RavikumarSiddaramaiahಎಚ್‌ ಡಿ ಕುಮಾರಸ್ವಾಮಿಕೆಎಸ್‌ಡಿಎಲ್‌ಗುಂಜನ್‌ ಕೃಷ್ಣ ಐಎಎಸ್‌ಜಗದೀಶ್‌ ಶೆಟ್ಟರ್‌ಡಿ ಕೆ ಶಿವಕುಮಾರ್ನೂಡಲ್ಸ್‌ಬಿ ಎಸ್‌ ಯಡಿಯೂರಪ್ಪಮಾಡಾಳು ವಿರೂಪಾಕ್ಷಪ್ಪಮುಖ್ಯ ಕಾರ್ಯದರ್ಶಿಮೈಸೂರ್‌ ಸ್ಯಾಂಡಲ್‌ ಸೋಪ್‌ವಾಣಿಜ್ಯ ಕೈಗಾರಿಕೆ ಇಲಾಖೆಸಿದ್ದರಾಮಯ್ಯಹರಿಕುಮಾರ್‌ ಝಾ
Advertisement Banner
Previous Post

ಹಣ ವಸೂಲಿ; ಬಿ ಸಿ ಪಾಟೀಲ್‌ ವಿರುದ್ಧ ತನಿಖೆ ನಡೆಸಿ ಎಂದ ಮಹೇಶ್‌

Next Post

ಡಿನೋಟಿಫಿಕೇಷನ್‌; ಬಿಎಸ್‌ವೈ, ನಿರಾಣಿ, ಬಳಿಗಾರ್‌ಗೆ ಎಸಿಬಿಯಿಂದ ಕ್ಲೀನ್‌ ಚಿಟ್‌

thefilestack

thefilestack

Next Post

ಡಿನೋಟಿಫಿಕೇಷನ್‌; ಬಿಎಸ್‌ವೈ, ನಿರಾಣಿ, ಬಳಿಗಾರ್‌ಗೆ ಎಸಿಬಿಯಿಂದ ಕ್ಲೀನ್‌ ಚಿಟ್‌

Discussion about this post

Recommended

ನೇಕಾರರಿಗೆ 10 ಹೆಚ್‌ಪಿವರೆಗಿನ ಉಚಿತ ವಿದ್ಯುತ್‌; ಸರ್ಕಾರದ ಬೊಕ್ಕಸಕ್ಕೆ 145 ಕೋಟಿ ಹೊರೆ

2 years ago

ಜೀವ ಬೆದರಿಕೆ, ಗೂಂಡಾ ವರ್ತನೆ ಆರೋಪ; ತರಳಬಾಳು ಶ್ರೀ ವಿರುದ್ಧ ಠಾಣೆಯಲ್ಲಿ ದೂರು

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd