the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಪಠ್ಯಪುಸ್ತಕ ಪರಿಷ್ಕರಣೆ ವರದಿ; ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠಾಂಶ ಅಳವಡಿಕೆಗೆ ಆದೇಶ

thefilestack by thefilestack
March 24, 2022
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪುಟ ಸಂಖ್ಯೆ 82ರಲ್ಲಿರುವ ಹೊಸ ಧರ್ಮಗಳು ಏಕೆ ಉದಯಿಸಿದವು ಎಂಬುದರ ಪರಿಷ್ಕರಣೆಯೂ ಸೇರಿದಂತೆ 10ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯಗಳಲ್ಲಿ ಇರಬಹುದಾದ ಸೂಕ್ಷ್ಮ, ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು ಕರ್ನಾಟಕ ಪಠ್ಯಪುಸ್ತಕ ಸಂಘದ ಮೂಲಕ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.

 

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಸಚಿವ ಬಿ ಸಿ ನಾಗೇಶ್‌ ಅವರು ನೀಡಿರುವ ಹೇಳಿಕೆ ಬೆನ್ನಲ್ಲೇ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯು ನೀಡಿರುವ ವರದಿಯು ಮುನ್ನೆಲೆಗೆ ಬಂದಿದೆ.

 

2022ರ ಮಾರ್ಚ್‌ 8ರಂದು ನೀಡಿರುವ ವರದಿಯನ್ನು ಸರ್ಕಾರವು ಇದುವರೆಗೂ ಬಹಿರಂಗಗೊಳಿಸಿಲ್ಲ. ಆದರೆ ಸಮಿತಿಯು ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು 2022-23ನೇ ಸಾಲಿಗೆ ಅಳವಡಿಸಿಕೊಳ್ಳಲು ಸೂಚಿಸಿದೆಯಲ್ಲದೆ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕಗಳನ್ನು ಮುದ್ರಿಸಿ ವಿತರಿಸಲು 2022ರ ಮಾರ್ಚ್‌ 19ರಂದು ಆದೇಶವನ್ನೂ ಹೊರಡಿಸಿದೆ. ಈ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳು, 2 ಮತ್ತು 4ನೇ ತರಗತಿಗಳ ಪರಿಸರ ಅಧ್ಯಯನದ ಪಠ್ಯಪುಸ್ತಕಗಳನ್ನು ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯು ಪರಿಷ್ಕೃತಗೊಳಿಸಿರುವುದನ್ನು ಸರ್ಕಾರವು ಘಟನೋತ್ತರವಾಗಿ ಅನುಮತಿ ನೀಡಿರುವುದು ಆದೇಶದಿಂದ ತಿಳಿದು ಬಂದಿದೆ.

 

ಪ್ರಾಥಮಿಕ ಪ್ರೌಢಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದ ಪ್ರತಿ

 

6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಕನ್ನಡ ಹಾಗೂ ಆಂಗ್ಲ ಮಾಧ್ಯಮ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಪರಿಷ್ಕರಿಸಿರುವ ಇತರೆ 5 ಮಾಧ್ಯಮಗಳಲ್ಲಿ (ಉರ್ದು, ತಮಿಳು, ತೆಲುಗು, ಮರಾಠಿ ಹಾಗೂ ಹಿಂದೆ) ಅನುವಾದಿಸಿ, ಅನುವಾದ ಕಾರ್ಯ ಮುಗಿದ ನಂತರ 2022-23ನೇ ಸಾಲಿನಿಂದಲೇ ಮುದ್ರಿಸಿ ವಿತರಿಸಬೇಕು ಎಂದು ಆದೇಶ ಹೊರಡಿಸಿದೆ.

 

‘ಕನ್ನಡ ಭಾಷೆ, ಪರಿಸರ ಅಧ್ಯಯನ ಮತ್ತು ಸಮಾಜ ವಿಜ್ಞಾನ ವಿಷಯದ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿರುವ ಎಲ್ಲಾ ವಿಷಯಗಳು, ಲೇಖಕರು, ಕವಿಗಳು, ಚಿತ್ರಗಳು, ಭೂಪಟಗಳು, ನಕ್ಷೆಗಳು ಹಾಗೂ ಆಧಾರಗಳಿಗೆ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಜವಾಬ್ದಾರರಾಗಿದ್ದಾರೆ. ಪಠ್ಯಪುಸ್ತಕಗಳಲ್ಲಿರುವ ವಿಷಯಗಳಿಗೆ ಮುಂದಿನ ದಿನಗಳಲ್ಲಿ ಆಕ್ಷೇಪಣೆ ಬಂದಲ್ಲಿ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು ಉತ್ತರಿಸುವ ಜವಾಬ್ದಾರಿ ಹೊಂದಿರುತ್ತಾರೆ. ಪುನರ್‌ ಪರಿಷ್ಕರಣೆ ಕುರಿತು ನೀಡಿರುವ ಅಂಶವನ್ನು ಮತ್ತು ಸಮಿತಿಯ ಅಧ್ಯಕ್ಷರ ನುಡಿಯನ್ನು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಅಳವಡಿಸಬೇಕು,’ ಎಂದು ಆದೇಶದಲ್ಲಿ ಹೇಳಲಾಗಿದೆ.

 

ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಪುನರ್‌ ಪರಿಷ್ಕರಣೆಗೊಳಿಸಿದ ನಂತರ ಬಹಿರಂಗೊಳಿಸಬೇಕಿತ್ತು. ಯಾವ ಕಾರಣಗಳಿಗಾಗಿ ಪಾಠಾಂಶವನ್ನು ಕೈ ಬಿಡಲಾಗಿದೆ ಎಂದು ಸಮರ್ಥನೀಯ ಅಂಶಗಳನ್ನು ಸಾರ್ವಜನಿಕಗೊಳಿಸಬೇಕಿತ್ತು. ಅಲ್ಲದೆ ಮುದ್ರಣಕ್ಕೂ ಮುನ್ನ ತಜ್ಞರು, ಸಾಹಿತಿ, ಲೇಖಕರ ಆಕ್ಷೇಪಣೆಗಳಿಗೆ ಅವಕಾಶ ನೀಡಬೇಕಿತ್ತು. ಆದರಿಲ್ಲಿ ಆಕ್ಷೇಪಣೆಗಳಿಗೆ ಮೊದಲು ಅವಕಾಶ ನೀಡದೆಯೇ ಪುನರ್‌ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕಗಳ ಮುದ್ರಣಕ್ಕೆ ಆದೇಶ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ವೈದಿಕ ಧರ್ಮದ ದೋಷಗಳಿಂದಾಗಿಯೇ ಹೊಸ ಧರ್ಮಗಳ ಉದಯವಾದವು ಎಂಬ ಸಾರಾಂಶವಿದ್ದ ಆರನೇ ತರಗತಿ ಸಮಾಜ ವಿಜ್ಞಾನ ವಿಷಯದ ಭಾಗ 1 ರ ಪಠ್ಯ ಪುಸ್ತಕದ ನಿರ್ದಿಷ್ಟ ಪಾಠಾಂಶವನ್ನು ಕೈ ಬಿಡುವ ಕುರಿತಂತೆ ರಚನೆಯಾಗಿದ್ದ ಪರಿಶೀಲನಾ ಸಮಿತಿಯು ಗಡುವು ಮೀರಿದರೂ ವರದಿ ಸಲ್ಲಿಸಿರಲಿಲ್ಲ.
ಸಮಿತಿ ರಚನೆಯಾದ ದಿನದಿಂದ ಎಷ್ಟು ಬಾರಿ ಸಭೆ ನಡೆಸಲಾಗಿದೆ ಎಂಬ ಮಾಹಿತಿಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಬಳಿ ಯಾವ ಮಾಹಿತಿಯೂ ಇರಲಿಲ್ಲ. ಅಲ್ಲದೆ ಗಡುವು ಮೀರಿದರೂ ವರದಿ ನೀಡುವ ಸಂಬಂಧ ಇಲಾಖೆಯು ಸಮಿತಿಯೊಂದಿಗೆ ಯಾವುದೇ ಪತ್ರ ವ್ಯವಹಾರವನ್ನೂ ನಡೆಸಿರಲಿಲ್ಲ. ಹಾಗೆಯೇ ವರದಿ ಸಲ್ಲಿಕೆಗೆ ಅವಧಿ ವಿಸ್ತರಿಸುವ ಸಂಬಂಧವೂ ಸಮಿತಿಯು ಸರ್ಕಾರಕ್ಕೆ ಯಾವುದೇ ಪತ್ರವನ್ನೂ ಬರೆದಿರಲಿಲ್ಲ .

 

ಪಠ್ಯ ಪುಸ್ತಕದಲ್ಲಿ ಇದ್ದಿದ್ದೇನು?

 

ಉತ್ತರ ವೇದಗಳ ಕಾಲದಲ್ಲಿ ವೈದಿಕ ಆಚರಣೆಗಳಾದ ಯಾಗ, ಯಜ್ಞಗಳ ಹೆಸರಿನಲ್ಲಿ ಕೃಷಿಗೆ ನೆರವಾಗುತ್ತಿದ್ದ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು. ಇದರಿಂದ ಆಹಾರದ ಉತ್ಪಾದನೆಯು ಕುಂಠಿತವಾಯಿತು. ಅಷ್ಟು ಮಾತ್ರವಲ್ಲ ಯಾಗ, ಯಜ್ಞಗಳಲ್ಲಿ ಆಹಾರಧಾನ್ಯ, ಹಾಲು, ತುಪ್ಪಗಳನ್ನು ಹವಿಸ್ಸು ಎಂದು ದಹಿಸಲಾಗುತ್ತಿತ್ತು. ಪರಿಣಾಮವಾಗಿ ಆಹಾರದ ಅಭಾವ ಕೂಡ ಸೃಷ್ಟಿಯಾಯಿತು.

 

ಇನ್ನೊಂದು ಕಡೆ ವೈದಿಕ ಆಚರಣೆಗಳಾದ ಯಾಗ, ಯಜ್ಞ, ಮೊದಲಾದ ಆಚರಣೆಗಳಿಂದ ಮಾತ್ರ ಮುಕ್ತಿ ಸಾಧ್ಯ ಎಂಬ ನಂಬಿಕೆ ಜನರಲ್ಲಿ ಮನೆ ಮಾಡಿತ್ತು. ಈ ದುಬಾರಿ ಆಚರಣೆಗಳು ಜನ ಸಾಮಾನ್ಯರಿಗೆ ಸಾಧ್ಯವಿರಲಿಲ್ಲ. ಈ ಆಚರಣೆಗಳನ್ನು ಸಂಸ್ಕೃತ ಮಂತ್ರಗಳ ಮೂಲಕ ನಡೆಸಲಾಗುತ್ತಿತ್ತು. ಸಂಸ್ಕೃತ ಪುರೋಹಿತ ಭಾಷೆಯಾದ್ದರಿಂದ ಅದು ಜನ ಸಾಮಾನ್ಯರಿಗೆ ಅರ್ಥವಾಗುತ್ತಿರಲಿಲ್ಲ.

 

ಜನ ಸಾಮಾನ್ಯರ ಭಾಷೆಯಲ್ಲಿಯೇ ಸರಳಮಾರ್ಗಗಳ ಮೂಲಕ ಮುಕ್ತಿ ತೋರುವ ಹೊಸ ಧರ್ಮಗಳನ್ನು ಜನರು ಅಪೇಕ್ಷಿಸುತ್ತಿದ್ದರು. ಮತ್ತೊಂದು ಕಡೆ ಉತ್ತರ ವೇದಗಳ ಕಾಲದಲ್ಲಿ ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆ ಆರಂಭವಾಯಿತು. ಇದು ಸಮಾಜದಲ್ಲಿ ತಾರತಮ್ಯಕ್ಕೂ ಎಡೆಮಾಡಿತು.
ಸಮಾಜದಲ್ಲಿ ಬ್ರಾಹ್ಮಣರೆಂದು ಕರೆಯಲ್ಪಡುತ್ತಿದ್ದ ಪುರೋಹಿತ ವರ್ಗವು ಹಲವು ಸವಲತ್ತುಗಳನ್ನು ಹೊಂದಿತ್ತು. ಇದೇ ಕಾಲದಲ್ಲಿ ಕ್ಷತ್ರಿಯರು ಕೂಡ ಪ್ರಾಬಲ್ಯಕ್ಕೆ ಬರಲಾರಂಭಿಸಿದರು. ಪರಿಣಾಮವಾಗಿ ನಂತರದ ಕಾಲದಲ್ಲಿ ಹಲವು ಗಣರಾಜ್ಯಗಳು ಉದಯಿಸಿದವು. ಈ ಗಣರಾಜ್ಯಗಳ ಕ್ಷತ್ರಿಯರು ಬಹು ಸವಲತ್ತನ್ನು ಹೊಂದಿದ್ದ ಬ್ರಾಹ್ಮಣರಿಗೆ ಪ್ರತಿಯಾಗಿ ಹೊಸ ಧರ್ಮಗಳ ಉದಯಕ್ಕೆ ಕಾರಣರಾದರು ಎಂಬ ವಿವರಣೆ ಇತ್ತು.

 

ಇವೆಲ್ಲವುಗಳ ಪರಿಣಾಮವಾಗಿ 2600 ವರ್ಷಗಳ ಹಿಂದೆ ಗಂಗಾ ಬಯಲಿನಲ್ಲಿ ಸುಮಾರು 62 ಹೊಸ ಧರ್ಮಗಳು ಉದಯಿಸಿದವು. ಅವುಗಳಲ್ಲಿ ಜೈನಧರ್ಮ ಮತ್ತು ಬೌದ್ಧ ಧರ್ಮಗಳು ಪ್ರಮುಖವಾದವು. ಬೌದ್ಧ ಧರ್ಮ ಸ್ಥಾಪಕ ಗೌತಮ ಬುದ್ಧ ಹಾಗೂ ಜೈನ ಧರ್ಮದ ಪ್ರಮುಖ ತೀರ್ಥಂಕರ ವರ್ಧಮಾನ ಮಹಾವೀರ. ಈ ಇಬ್ಬರೂ ಕೂಡ ಗಣರಾಜ್ಯಗಳ ಕುಲಗಳಿಗೆ ಸೇರಿದ ಕ್ಷತ್ರಿಯರು ಎಂದು ಹೇಳಲಾಗಿತ್ತು.

 

ಇದು ವಿವಾದಕ್ಕೀಡಾಗುತ್ತಿದ್ದಂತೆ ಶಿಕ್ಷಣ ಇಲಾಖೆಯ ಹಿಂದಿನ ಸಚಿವ ಎಸ್‌ ಸುರೇಶ್‌ಕುಮಾರ್‌ ಅವರು ಆರನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದ ಭಾಗವಾಗಿರುವ ವೇದ ಕಾಲದ ಸಂಸ್ಕೃತಿ ಕುರಿತು ಪಾಠ ಮಾಡದಂತೆ ಶಿಕ್ಷಕರಿಗೆ ಆದೇಶ ಹೊರಡಿಸಿದ್ದರು. ಆದರೆ ಈ ಆದೇಶಕ್ಕೆ ಸ್ಪಷ್ಟ ಕಾರಣವನ್ನು ನೀಡಿರಲಿಲ್ಲ.

Tags: 6th Standard6ನೇ ತರಗತಿB C NageshBaraguru RamchandrappaBasavaraj BommaiBuddhistD K Shivakumareducation ministerh d kumarswamyHigh SchoolsHindu ReligionJainsPrimary Secondary SchoolsRajaram HegdeRohit ChakratirthaS G Siddaramaiahs sureshkumarSiddaramaiahSocial ScienceText BookVardhamana Mahaveerಎಚ್‌ ಡಿ ಕುಮಾರಸ್ವಾಮಿಎಸ್‌ ಜಿ ಸಿದ್ದರಾಮಯ್ಯಎಸ್‌ ಸುರೇಶ್‌ಕುಮಾರ್‌ಕರ್ನಾಟಕ ಪಠ್ಯಪುಸ್ತಕ ಸಂಘಗೌತಮ ಬುದ್ಧಜೈನ ಧರ್ಮಡಿ ಕೆ ಶಿವಕುಮಾರ್ಪಠ್ಯ ಕಡಿತಪಠ್ಯ ಪುಸ್ತಕಪರಿಷ್ಕರಣೆಪಾಠಾಂಶ ಕೈ ಬಿಡುವುದುಪ್ರಾಥಮಿಕ ಪ್ರೌಢಶಾಲೆಪ್ರಾಥಮಿಕ ಶಾಲೆಗಳುಪ್ರೌಢಶಾಲೆಗಳುಬರಗೂರು ರಾಮಚಂದ್ರಪ್ಪಬಸವರಾಜ ಬೊಮ್ಮಾಯಿಬಿ ಸಿ ನಾಗೇಶ್‌ಬೌದ್ಧ ಧರ್ಮಮರು ಪರಿಷ್ಕರಿಸುವುದುರೋಹಿತ್‌ ಚಕ್ರತೀರ್ಥವರ್ಧಮಾನ ಮಹಾವೀರಸಮಾಜ ವಿಜ್ಞಾನಸಿದ್ದರಾಮಯ್ಯಹಿಂದೂ ಧರ್ಮ
Advertisement Banner
Previous Post

ನಕಲಿ ಜಾತಿ ಪ್ರಮಾಣ ಪತ್ರ ಆರೋಪ; ಉಪ ಕಾರ್ಯದರ್ಶಿ ವಿರುದ್ಧ ಕ್ರಮಕೈಗೊಳ್ಳದ ಹೊರಟ್ಟಿ

Next Post

ಶಾಸಕರ ವೇತನ ಹೆಚ್ಚಳಕ್ಕಿಲ್ಲದ ಆರ್ಥಿಕ ನಿರ್ಬಂಧ, ಗ್ರಂಥಾಲಯ ಮೇಲ್ವಿಚಾರಕರ ಗೌರವಧನ ಪಾವತಿಗೇಕೆ?

thefilestack

thefilestack

Next Post

ಶಾಸಕರ ವೇತನ ಹೆಚ್ಚಳಕ್ಕಿಲ್ಲದ ಆರ್ಥಿಕ ನಿರ್ಬಂಧ, ಗ್ರಂಥಾಲಯ ಮೇಲ್ವಿಚಾರಕರ ಗೌರವಧನ ಪಾವತಿಗೇಕೆ?

Recommended

ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಲೋಪ; ಗುತ್ತಿಗೆದಾರರಿಂದಲೇ ಸಾಕ್ಷ್ಯ, ಕ್ರಮವಹಿಸದೇ ಕೈಕಟ್ಟಿ ಕುಳಿತ ಸರ್ಕಾರ

8 months ago

465 ಕೋಟಿ ಕಾಮಗಾರಿ ಗುತ್ತಿಗೆ; ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ಪಟ್ಟಿ ಒದಗಿಸದ ನಿಗಮ

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd