the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಪರಿಹಾರಾತ್ಮಕ ಅರಣ್ಯೀಕರಣ; ಕಾಂಗ್ರೆಸ್‌ ಸರ್ಕಾರದ ನಿರ್ಣಯ ಉಲ್ಲಂಘಿಸಿದ ಸಚಿವ ಕತ್ತಿ

thefilestack by thefilestack
October 30, 2021
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಡೀಮ್ಡ್‌ ಅರಣ್ಯ ವ್ಯಾಪ್ತಿಗೆ 1,73,023.19 ಹೆಕ್ಟೇರ್‌ ಪ್ರದೇಶವು ಒಳಪಡುವುದಿಲ್ಲ ಎಂದು ಈ ಹಿಂದೆಯೇ ನಮೂದಿಸಿದ್ದ ಅಂಶವನ್ನು ಬದಿಗೆ ಸರಿಸಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರವು 1,73,023.19 ಹೆಕ್ಟೇರ್‌ ವಿಸ್ತೀರ್ಣದ ಅರಣ್ಯ ಪ್ರದೇಶವನ್ನು ಪರಿಹಾರಾತ್ಮಕ ಅರಣ್ಯೀಕರಣ ಉದ್ಧೇಶಕ್ಕೆ ಮೀಸಲಿಡಲು ಪ್ರಸ್ತಾಪಿಸಿದೆ. ಈ ಮೂಲಕ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ (2015) ಸಚಿವ ಸಂಪುಟ ಕೈಗೊಂಡಿದ್ದ ನಿರ್ಣಯದ ಆಶಯವನ್ನು ಉಲ್ಲಂಘಿಸಲು ಹೊರಟಿರುವುದು ಇದೀಗ ಬಹಿರಂಗವಾಗಿದೆ.

ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಮುನ್ನೆಲೆಗೆ ಬರುವ ಅರಣ್ಯ ಸಚಿವ ಉಮೇಶ್‌ ಕತ್ತಿ ಅವರು ಇದೀಗ ಡೀಮ್ಡ್‌ ಅರಣ್ಯ ವ್ಯಾಪ್ತಿಗೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳು ಹಿಂದಿನ ಕಾಂಗ್ರೆಸ್‌ ಸರ್ಕಾರ ಕೈಗೊಂಡಿದ್ದ ನಿರ್ಣಯದ ಆಶಯಕ್ಕೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಪರಿಷ್ಕೃತ ಪ್ರಮಾಣ ಪತ್ರ ಸಲ್ಲಿಸಲು ಅನುಮೋದನೆ ನೀಡಿರುವುದು ಮಹತ್ವಪಡೆದುಕೊಂಡಿದೆ.

ಅಲ್ಲದೆ ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರು ರಾಜ್ಯದ ಡೀಮ್ಡ್‌ ಫಾರೆಸ್ಟ್‌ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಪರಿಷ್ಕೃತ ಪ್ರಮಾಣಪತ್ರದಲ್ಲಿ ಅನಾವಶ್ಯಕ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ ಎಂಬ ಮಾಹಿತಿಯೂ ಗೊತ್ತಾಗಿದೆ. ಈ ಕುರಿತಂತೆ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಗಳು ಲಭ್ಯವಾಗಿವೆ.

ಡೀಮ್ಡ್‌ ಅರಣ್ಯಗಳಿಗಷ್ಟೇ ಸೀಮಿತಗೊಳಿಸಿ ಪ್ರಮಾಣಪತ್ರ ಸಲ್ಲಿಸುವುದು ಸೂಕ್ತ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಅವರು ಈಗಾಗಲೇ ಅಭಿಪ್ರಾಯಿಸಿದ್ದಾರೆ. ಈಗಾಗಲೇ ಸಲ್ಲಿಸಿರುವ ಪ್ರಮಾಣಪತ್ರವನ್ನು ಪರಿಶೀಲಿಸಬೇಕು ಮತ್ತು ಈ ಹಂತದಲ್ಲಿ ಯಾವುದೇ ಅಂಶಗಳು ಕೈಬಿಟ್ಟು ಹೋಗದಂತೆ ಗಮನದಲ್ಲಿರಿಸಿಕೊಳ್ಳಬೇಕು ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

‘ಡೀಮ್ಡ್‌ ಫಾರೆಸ್ಟ್‌ ಕುರಿತಂತೆ ತಯಾರಿಸಲಾದ ಪರಿಷ್ಕೃತ ಅಫಿಡವಿಟ್‌ನಲ್ಲಿ ಅನಾವಶ್ಯಕ ವಿಷಯಗಳನ್ನು ಪ್ರಸ್ತಾಪಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಇದರಿಂದಾಗಿ 2015ರ ಸಚಿವ ಸಂಪುಟದ ನಿರ್ಣಯದ ಆಶಯವನ್ನು ಉಲ್ಲಂಘಿಸಿದಂತಾಗುತ್ತದೆ. ಅಫಿಡವಿಟ್‌ನ ಕಂಡಿಕೆ 19ರಲ್ಲಿ 1,73,023.19 ಹೆಕ್ಟೇರ್‌ ಪ್ರದೇಶವನ್ನು ಡೀಮ್ಡ್‌ ಫಾರೆಸ್ಟ್‌ ವ್ಯಾಪ್ತಿಗೆ ಬರುವುದಿಲ್ಲವೆಂದು ನಮೂದಿಸಿದ ಹೊರತಾಗಿಯೂ ವಿಸ್ತೀರ್ಣವನ್ನು ಪರಿಹಾರತ್ಮಕ ಅರಣ್ಯೀಕರಣ ಉದ್ದೇಶಕ್ಕೆ ಮೀಸಲಿಡಲು ಉದ್ದೇಶಿಸಿರುವುದಾಗಿ ಪ್ರಸ್ತಾಪಿಸಲಾಗಿದೆ. ಈ ವಿಷಯವು ಸೇರಿದಂತೆ ಇನ್ನೂ ಕೆಲವು ವಿಷಯಗಳು ಅನಾವಶ್ಯಕವಾಗಿ ಅಫಿಡವಿಟ್‌ನಲ್ಲಿ ಸೇರಿರುವುದು ಕಂಡು ಬರುತ್ತದೆ,’ ಎಂದು ಸಚಿವ ಜೆ ಸಿ ಮಾಧುಸ್ವಾಮಿ ಅವರು ಪ್ರಸ್ತಾಪಿಸಿರುವುದು ಟಿಪ್ಪಣಿಯಿಂದ ತಿಳಿದು ಬಂದಿದೆ.

ಪುನರ್ಘಟಿತ ತಜ್ಞರ ಸಮಿತಿಯು 994881.11 ಹೆಕ್ಟೇರ್‌ ಪರಿಭಾವಿತ ಅರಣ್ಯ ವಿಸ್ತೀರ್ಣವನ್ನು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಈ ಹಿಂದೆಯೇ ಸಮಾಲೋಚಿಸಲಾಗಿತ್ತು. ಅಲ್ಲದೆ ಜಿಲ್ಲಾ ಸಮಿತಿಗಳು ಅಂತಿಮಗೊಳಿಸಿದ್ದ 394941.31 ಹೆಕ್ಟೇರ್‌ಗಳಿಗೆ ಇಳಿಸಲಾಗಿತ್ತು. ಪರಿಭಾವಿತ ಅರಣ್ಯ ವಿಸ್ತೀರ್ಣವನ್ನು ಪುನರ್ಘಟಿತ ತಜ್ಞರ ಸಮಿತಿ ಗುರುತಿಸಿದ್ದ 994881.11 ಹೆಕ್ಟೇರ್‌ ಎಂದು ನಿರ್ದಿಷ್ಟಪಡಿಸಿ ಸರ್ವೋಚ್ಛ ನ್ಯಾಯಾಲಯವು ಹಾಗೂ ಕೇಂದ್ರೀಯ ಅಧಿಕಾರಸ್ಥ ಸಮಿತಿಯ ಮುಂದೆ ಪ್ರಮಾಣಪತ್ರ ಸಲ್ಲಿಸಲಾಗಿತ್ತು.

ಜಿಲ್ಲಾ ಮಟ್ಟದ ಸಮಿತಿಗಳು ಪರಿಭಾವಿತ ಅರಣ್ಯದ ವ್ಯಾಪ್ತಿಯಿಂದ ಕೈಬಿಟ್ಟಿರುವ ಒಟ್ಟಾರೆ 173022.00 ಹೆಕ್ಟೇರ್‌ ಪ್ರದೇಶವನ್ನು ಭವಿಷ್ಯದಲ್ಲಿ ಸರ್ಕಾರದ ಯೋಜನೆಗಳ ಅವಶ್ಯಕತೆಯನ್ನು ಗಮನದಲ್ಲಿರಿಸಿಕೊಂಡು ಅವುಗಳನ್ನು ಖಾಸಗಿ ವ್ಯಕ್ತಿ, ಸಂಸ್ಥೆಗಳಿಗೆ ಮಂಜೂರು ಮಾಡದೇ ಕೇವಲ ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ, ನೀರಾವರಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಇತ್ಯಾದಿ ಇಲಾಖೆಗಳ ಸಾರ್ವಜನಿಕ ಯೋಜನೆಗಳಿಗಾಗಿ ಉಪಯೋಗಿಸಬೇಕು. ಅಥವಾ ಅಂತಹ ಸಾರ್ವಜನಿಕ ಉದ್ದೇಶಗಳಿಗಾಗಿ ಬಿಡುಗಡೆ ಮಾಡಲಾಗಿರುವ ಅರಣ್ಯ ಭೂಮಿಯ ಬದಲಿಗೆ ಪರಿಹಾರಾತ್ಮಕ ಅರಣ್ಯೀಕರಣ ಉದ್ದೇಶಕ್ಕಾಗಿ ಬಿಡುಗಡೆ ಮಾಡಲು 2017ರ ಜೂನ್‌ 22ರಂದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟವು ಅನುಮೋದನೆ ನೀಡಿತ್ತು ಎಂಬುದು ಗೊತ್ತಾಗಿದೆ.

ಅಲ್ಲದೆ ‘ ಡೀಮ್ಡ್‌ ಫಾರೆಸ್ಟ್‌ ಒಟ್ಟು ವಿಸ್ತೀರ್ಣವನ್ನು 326177.27 ಹೆಕ್ಟೇರ್‌ನಲ್ಲಿ ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೋರಿಕೆಯಂತೆ 617.887 ಹೆಕ್ಟೇರ್‌ ವಿಸ್ತೀರ್ಣವನ್ನು ಕಡಿತಗೊಳಿಸಲು ಹಾಗೂ ಬೆಳಗಾವಿ ಜಿಲ್ಲೆಯ ಕೋರಿಕೆಯಂತೆ 4627.555 ಹೆಕ್ಟೇರ್‌ಗಳನ್ನು ಹೆಚ್ಚಿಸಲು ಹಾಗೂ ಅಂತಿಮವಾಗಿ ಡೀಮ್ಡ್‌ ಫಾರೆಸ್ಟ್‌ ವಿಸ್ತೀರ್ಣವು 330186.938 ಹೆಕ್ಟೇರ್‌ ಎಂದು ಘೋಷಿಸುವ ಮಾರ್ಪಾಡಿನೊಂದಿಗೆ,’ ಸಚಿವ ಸಂಪುಟವು ಅನುಮೋದಿಸಿರುವುದು ತಿಳಿದು ಬಂದಿದೆ.

Tags: Advocate GeneralAffadavitBelagaviBJP governmentc t raviCabinetChikkamagaluruCongress GovernmentDeemed ForestHigh CourtJ C MadhuswamiK R Ramesh Kumarlaw and parlimentarySiddaramaiahSupreme CourtUmesh KattiUttara KannadaVishweshwar Hegde Kageriಅರಣ್ಯೀಕರಣಅರಣ್ಯೀಕರಣ ಉದ್ದೇಶಕ್ಕೆ ಮೀಸಲುಉಮೇಶ್‌ ಕತ್ತಿಕೆ ಆರ್‌ ರಮೇಶ್‌ಕುಮಾರ್‌ಚಿಕ್ಕಮಗಳೂರುಜೆ ಸಿ ಮಾಧುಸ್ವಾಮಿಡೀಮ್ಡ್‌ ಫಾರೆಸ್ಟ್‌ಪರಿಭಾವಿತ ಅರಣ್ಯ ಪ್ರದೇಶಪರಿಹಾರಾತ್ಮಕ ಅರಣ್ಯೀಕರಣಪ್ರಮಾಣಪತ್ರಬೆಳಗಾವಿಮಲೆನಾಡುವಿಶ್ವೇಶ್ವರ ಹೆಗಡೆ ಕಾಗೇರಿಶಿವಮೊಗ್ಗಸಚಿವ ಸಂಪುಟ ನಿರ್ಣಯಸರ್ವೋಚ್ಛ ನ್ಯಾಯಾಲಯಸಿದ್ದರಾಮಯ್ಯ
Advertisement Banner
Previous Post

ದೇವರಾಜ ಅರಸು ಸಂಶೋಧನಾ ಸಂಸ್ಥೆ ಮುಚ್ಚಲು ನಿರ್ಣಯ; ನೂರು ದಿನದ ಕೊಡುಗೆಯೇ?

Next Post

ಸಿಎಂ ಅನಿಲ ಭಾಗ್ಯ ಯೋಜನೆ ಕೈ ಬಿಡಲು ನಿರ್ಣಯ; ಉಜ್ವಲದಿಂದ ಹೊರಗುಳಿದವರ ಪಾಡೇನು?

thefilestack

thefilestack

Next Post

ಸಿಎಂ ಅನಿಲ ಭಾಗ್ಯ ಯೋಜನೆ ಕೈ ಬಿಡಲು ನಿರ್ಣಯ; ಉಜ್ವಲದಿಂದ ಹೊರಗುಳಿದವರ ಪಾಡೇನು?

Recommended

ಕೋವ್ಯಾಕ್ಸಿನ್‌ ಅಡ್ಡ ಪರಿಣಾಮ; ಬನಾರಸ್‌ ವಿವಿ ಅಧ್ಯಯನ ವರದಿ ಬೆನ್ನಲ್ಲೇ ಮುನ್ನೆಲೆಗೆ ಬಂದ ರಾಜ್ಯದ ಪ್ರಕರಣ

2 years ago

ಪರಿಶಿಷ್ಟ ಜಾತಿಯ ಉಪ ಜಾತಿಗಳ ವಿವರ ಒದಗಿಸಲು ನಿರ್ಲಕ್ಷ್ಯ; ಅಧಿಕಾರಿವರ್ಗದ ವಿಳಂಬ ದ್ರೋಹ

7 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd