the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಪಿಯು ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ; ಕೇಳಿದ್ದು 6 ಸಾವಿರ, ಸರ್ಕಾರ ಹೆಚ್ಚಿಸಿದ್ದು 3 ಸಾವಿರ

thefilestack by thefilestack
July 6, 2022
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ನೀಡುತ್ತಿದ್ದ 9,000 ರು. ಗೌರವ ಸಂಭಾವನೆಯನ್ನು 15 ಸಾವಿರ ರು.ಗಳಿಗೆ ಹೆಚ್ಚಿಸಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರೆ ಸರ್ಕಾರವು ಕೇವಲ ಮೂರು ಸಾವಿರ ಮಾತ್ರ ಹೆಚ್ಚಳ ಮಾಡಿ 12,000 ರು.ಗೇರಿಸಿದೆ.

 

6 ಸಾವಿರ ರುಪಾಯಿ ಗೌರವ ಸಂಭಾವನೆ ಹೆಚ್ಚಳವಾಗಲಿದೆ ಎಂದು ಅತಿಥಿ ಉಪನ್ಯಾಸಕರ ನಿರೀಕ್ಷೆಯನ್ನು ಹುಸಿಗೊಳಿಸಿರುವ ರಾಜ್ಯ ಸರ್ಕಾರವು ಮೂರು ಸಾವಿರ ರುಪಾಯಿ ಹೆಚ್ಚಳ ಮಾಡಿ 2022ರ ಜುಲೈ 5ರಂದು ಆದೇಶ ಹೊರಡಿಸಿದೆ. 9 ಸಾವಿರ ರು.ಗಳನ್ನು ಮೂರು ಸಾವಿರ ರುಪಾಯಿಗೇರಿಸಿ ಒಟ್ಟು 12,000 ರು. ಗೌರವ ಸಂಭಾವನೆ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದನ್ನು ಸಚಿವ ಬಿ ಸಿ ನಾಗೇಶ್‌ ಅವರು ಅನುಮೋದಿಸಿದ್ದಾರೆ.  ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

2022-23ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಒಟ್ಟು 3,271 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ 100 ಉಪನ್ಯಾಸಕರು, ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ 337 ಅತಿಥಿ ಉಪನ್ಯಾಸಕರ ಸಂಖ್ಯೆ ಸೇರಿದಂತೆ ಒಟ್ಟಾರೆ 3,708 ಹುದ್ದೆಗಳು ಖಾಲಿ ಇರುವುದು ಆದೇಶದಿಂದ ತಿಳಿದು ಬಂದಿದೆ.

 

ಗೌರವ ಸಂಭಾವನೆ ಹೆಚ್ಚಳ ಮಾಡಿ ಹೊರಡಿಸಿರುವ ಆದೇಶದ ಪ್ರತಿ

 

‘2022-23ನೇ ಶೈಕ್ಷಣಿಕ ಸಾಲಿನಲ್ಲಿ 3,708 ಅತಿಥಿ ಉಪನ್ಯಾಸಕರುಗಳಿಗೆ ಇಲ್ಲಿಯವರೆಗೆ ಹಲವು ವರ್ಷಗಳಿಂದ 9,000 ರು.ಗಳ ಗೌರವ ಸಂಭಾವನೆ ನೀಡಲಾಗುತ್ತಿತ್ತು. ಆದರೆ ಅದನ್ನು ಹೆಚ್ಚಿಸುವಂತೆ ಸಾಕಷ್ಟು ಬೇಡಿಕೆ ಬರುತ್ತಿದೆ. ಹಾಗೂ ಇತ್ತೀಚೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವ ಸಂಭಾವನೆ ಹೆಚ್ಚಿಸಿ ಆದೇಶಿಸಲಾಗಿದೆ. ಅದರಂತೆ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಗೌರವ ಸಂಭಾವನೆಯನ್ನು 9,000 ರು.ಗಳಿಂದ 15,000 ರು.ಗಳಿಗೆ ಹೆಚ್ಚಿಸಬೇಕು,’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಸ್ತಾವನೆಯಲ್ಲಿ ಕೋರಿದ್ದರು.

 

 

ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇದ್ದ ಅತಿಥಿ ಉಪನ್ಯಾಸಕರನ್ನು ಭರ್ತಿ ಮಾಡಲು 2016ರ ಜುಲೈ 4ರಂದೇ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆ ನಂತರ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರಲಿಲ್ಲ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಒಟ್ಟು 3,552 ಅತಿಥಿ ಉಪನ್ಯಾಸಕರನ್ನು 08 ತಿಂಗಳುವರೆಗೆ ಮಾಸಿಕ 9,000 ರು.ಗಳ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಪದವಿಪೂರ್ವ ಶಿಕ್ಷಣ ಇಲಾಖೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು.

 

2021-22ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಗಳು ಏಪ್ರಿಲ್‌ 13ವರೆಗೆ ನಡೆದಿತ್ತು. ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 18ರರೆಗೆ ನಡೆಸಲಾಗುತ್ತಿದೆ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ನೇಮಕ ಮಾಡಿಕೊಂಡ ಅತಿಥಿ ಉಪನ್ಯಾಸಕರುಗಳನ್ನು ಪ್ರಥಮ ಪಿಯುಸಿ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಕಾರ್ಯಗಳಿಗೆ ಉಪಯೋಗಿಸಿಕೊಂಡಿರುವುದರಿಂದ ಈ ಅತಿಥಿ ಉಪನ್ಯಾಸಕರುಗಳಿಗೆ ಮಾರ್ಚ್ ಮತ್ತು ಏಪ್ರಿಲ್‌ 2022ರವರೆಗೆ ಗೌರವ ಧನ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಪ ನಿರ್ದೇಶಕರುಗಳು ಕೋರಿದ್ದರು.

Tags: B C NageshBasavaraj BommaiD K ShivakumarDemandGovernment PU CollegesGuest Lectruersh d kumarswamyH VishwanathN RavikumarPU BoardPU Board DirectorPU CollegesRemunerationSiddaramaiahVacancyಅತಿಥಿ ಉಪನಕ್ಯಾಸಕರ ನೇಮಕಅತಿಥಿ ಉಪನ್ಯಾಸಕರ ಗೌರವ ಸಂಭಾವನೆಉಪನ್ಯಾಸಕರ ಹುದ್ದೆಗಳುಎಚ್‌ ಡಿ ಕುಮಾರಸ್ವಾಮಿಎಚ್‌ ವಿಶ್ವನಾಥ್‌ಎನ್‌ ರವಿಕುಮಾರ್‌ಗೌರವ ಸಂಭಾವನೆ ಹೆಚ್ಚಳಡಿ ಕೆ ಶಿವಕುಮಾರ್ದ್ವಿತೀಯ ಪಿಯುಸಿನಿರ್ದೇಶಕರುನೇಮಕಾತಿಪದವಿಪೂರ್ವ ಶಿಕ್ಷಣ ಮಂಡಳಿಪಿಯು ಕಾಲೇಜುಗಳುಪ್ರಥಮ ಪಿಯುಸಿಪ್ರಸ್ತಾವನೆಬಸವರಾಜ ಬೊಮ್ಮಾಯಿಬಿ ಸಿ ನಾಗೇಶ್‌ಮೌಲ್ಯಮಾಪನವಿಧಾನಪರಿಷತ್‌ ಸದಸ್ಯಶಿಕ್ಷಣ ಸಚಿವಸರ್ಕಾರಿ ಪದವಿಪೂರ್ವ ಕಾಲೇಜುಸರ್ಕಾರಿ ಪಿಯು ಕಾಲೇಜುಗಳುಸಿದ್ದರಾಮಯ್ಯ
Advertisement Banner
Previous Post

ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ; ಆಯ್ಕೆಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ವಾಮಮಾರ್ಗದಲ್ಲಿ ಆದೇಶ?

Next Post

ಕ್ರೈಮ್‌ ಆಫೀಸರ್‌ ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ!; ಪೌಲ್‌ ಬಂಧನದ ಬೆನ್ನಲ್ಲೇ ಆಯ್ಕೆಪಟ್ಟಿ ಬಹಿರಂಗ

thefilestack

thefilestack

Next Post

ಕ್ರೈಮ್‌ ಆಫೀಸರ್‌ ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ!; ಪೌಲ್‌ ಬಂಧನದ ಬೆನ್ನಲ್ಲೇ ಆಯ್ಕೆಪಟ್ಟಿ ಬಹಿರಂಗ

Recommended

ತಿದ್ದುಪಡಿ ವಿಧೇಯಕ; ಸಂವಿಧಾನದ 320ನೇ ವಿಧಿಗೆ ವಿರುದ್ಧ, ಕೆಪಿಎಸ್ಸಿ ಸ್ವಾಯತ್ತೆ ಮೊಟಕು, ರಾಜ್ಯಪಾಲರ ಆತಂಕ

10 months ago

‘ದಿ ಫೈಲ್‌’ ತನಿಖೆ; ಆ್ಯಂಟಿಜನ್ ಟೆಸ್ಟ್ ಕಿಟ್‌ ಖರೀದಿಯಲ್ಲಿ 10 ಕೋಟಿ ನಷ್ಟ?

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd