the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಪಿಯು ಇತಿಹಾಸ ಪಠ್ಯಪುಸ್ತಕ ಪರಿಷ್ಕರಣೆ; ರೋಹಿತ್‌ ಚಕ್ರತೀರ್ಥ ಸಮಿತಿಗೆ ವಹಿಸಲು ಸೂಚನೆ

thefilestack by thefilestack
May 23, 2022
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಆರರಿಂದ ಹತ್ತನೇ ತರಗತಿ ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿರುವ ಸರ್ಕಾರವು ಇದೀಗ ದ್ವಿತೀಯ ಪಿಯುಸಿ ಇತಿಹಾಸ ವಿಭಾಗಕ್ಕೆ ನಿಗದಿಪಡಿಸಿದ ಕರ್ನಾಟಕದ ವಿಶೇಷ ಉಲ್ಲೇಖ ಹೊಂದಿರುವ ಭಾರತದ ಇತಿಹಾಸ ಪಠ್ಯಪುಸ್ತಕವನ್ನು ಪರಿಷ್ಕರಿಸಲು ಸದ್ದಿಲ್ಲದೇ ಚಾಲನೆ ನೀಡಿರುವುದು ಇದೀಗ ಬಹಿರಂಗವಾಗಿದೆ.

 

ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕದ ಅಧ್ಯಾಯ 4.2ರಲ್ಲಿ ಹೊಸ ಧರ್ಮಗಳ ಉದಯ ಪಠ್ಯಭಾಗವನ್ನು ಪರಿಶೀಲಿಸಿ ಸೂಕ್ತವಾಗಿ ಪರಿಷ್ಕರಿಸುವ ಹೊಣೆಗಾರಿಕೆಯನ್ನೂ ರೋಹಿತ್‌ ಚಕ್ರತೀರ್ಥ ಸಮಿತಿಗೆ ವಹಿಸಬೇಕು ಎಂದು ಸಚಿವ ಬಿ ಸಿ ನಾಗೇಶ್‌ ಅವರು 2022ರ ಫೆ.17ರಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿದ್ದಾರೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಟಿಪ್ಪಣಿಯಲ್ಲೇನಿದೆ?

 

ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಇತಿಹಾಸ ವಿಭಾಗಕ್ಕೆ ನಿಗದಿಪಡಿಸಿದ ಭಾರತದ ಇತಿಹಾಸ (ಕರ್ನಾಟಕ ವಿಶೇಷ ಉಲ್ಲೇಖದೊಂದಿಗೆ) ಪಠ್ಯಪುಸ್ತಕದ 4.2ನೇ ಅಧ್ಯಾಯ ಹೊಸ ಧರ್ಮಗಳ ಉದಯ ಪಠ್ಯಭಾಗದಲ್ಲಿ ನಿರ್ದಿಷ್ಟ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗುವಂತಹ ವಿಷಯವಿರುವ ಬಗ್ಗೆ ದೂರು ಬಂದಿರುತ್ತದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಮಾಜ ಅಧ್ಯಯನ ಪಠ್ಯಪುಸ್ತಕದ ಪರಿಶೀಲನೆಗಾಗಿ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರಚನೆಯಾಗಿರುತ್ತದೆ. ದ್ವಿತೀಯ ಪಿಯುನ ಇತಿಹಾಸ ಪಠ್ಯಪುಸ್ತಕದ 4.2 ಅಧ್ಯಾಯವನ್ನು ಪರಿಶೀಲಿಸಿ ಸೂಕ್ತವಾಗಿ ಪರಿಷ್ಕರಿಸಲು ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಗೆ ವಿಸಲು ಹಾಗೂಈ ಪರಿಷ್ಕೃತ ಪಠ್ಯಪುಸ್ತಕವನ್ನು 2022-23ನೇ ಸಾಲಿನಲ್ಲಿ ಮುದ್ರಣ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು,’ ಎಂದು ಸಚಿವ ಬಿ ಸಿ ನಾಗೇಶ್‌ ಅವರು ಟಿಪ್ಪಣಿಯಲ್ಲಿ ಸೂಚಿಸಿದ್ದಾರೆ.

 

ಸಚಿವ ಬಿ ಸಿ ನಾಗೇಶ್‌ ಹೊರಡಿಸಿರುವ ಟಿಪ್ಪಣಿ ಪ್ರತಿ

 

ಸಚಿವರ ಸೂಚನೆಯಂತೆ ಪಿಯು ಮಂಡಳಿಯ ನಿರ್ದೇಶಕರು ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕದ ರಚನಾ ಸಮಿತಿಗೆ ಮಾಹಿತಿ ಸಲ್ಲಿಸಿ ಅಭಿಪ್ರಾಯವನ್ನು ಕೋರಿದ್ದರು. ಸೂಚಿತ ಅಂಶಗಳಲ್ಲಿ ಯಾವುದೇ ವಿವಾದಿತ ಅಂಶಗಳಿರುವುದಿಲ್ಲ ಹಾಗೂ ಇಲಾಖೆ ಈ ಅಂಶಗಳ ಬಗ್ಗೆ ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೆ ಸಮಿತಿಯ ಅಭ್ಯಂತರವಿರುವುದಿಲ್ಲ ಎಂದು ದ್ವಿತೀಯ ಪಿಯು ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಅಭಿಪ್ರಾಯಿಸಿದ್ದರು ಎಂಬುದು ಪಿಯು ಮಂಡಳಿ ನಿರ್ದೇಶಕರು ಸಚಿವರ ಆಪ್ತ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ವಿವರಿಸಿದ್ದರು. ಪಿಯು ಮಂಡಳಿಯ ನಿರ್ದೇಶಕರು ಬರೆದಿರುವ ಪತ್ರದ ಪ್ರತಿಯೂ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪಿಯು ಮಂಡಳಿ ನಿರ್ದೇಶಕರು ಬರೆದಿರುವ ಪತ್ರದ ಪ್ರತಿ

 

ಹಾಗೆಯೇ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ರಾಷ್ಟ್ರೀಯ ಪಠ್ಯಕ್ರಮ ಚರ್ಚೆ ನಡೆಯುತ್ತಿದೆ. ಆ ಸಂದರ್ಭದಲ್ಲಿ ನೂತನ ಪಠ್ಯಪುಸ್ತಕಗಳನ್ನು ಸಿದ್ಧಪಡಿಸುವ ಸಂದರ್ಭದಲ್ಲಿ ಯಾವುದೇ ವಿವಾದಿತ ಅಂಶಗಳಿಲ್ಲದಂತೆ ಕ್ರಮವಹಿಸಬಹುದಾಗಿದೆ ಎಂದೂ ನಿರ್ದೇಶಕರು ಅಭಿಪ್ರಾಯಿಸಿದ್ದಾರೆ.

 

ಎನ್‌ಸಿಇಆರ್‌ಟಿ ಹಾಗೂ ನೆರೆರಾಜ್ಯಗಳ ಪಠ್ಯಕ್ರಮಗಳನ್ನು ಪರಿಗಣಿಸಿ ಡಾ ಎ ಎಚ್‌ ಗಾಯತ್ರಿದೇವಿ ಅವರ ಅಧ್ಯಕ್ಷತೆಯ ಪಠ್ಯಪುಸ್ತಕ ಅಭಿವೃದ್ದಿ ಸಮಿತಿಯು ದ್ವಿತೀಯ ಪಿಯು ಇತಿಹಾಸ ಪಠ್ಯಪುಸ್ತಕವನ್ನು ರಚಿಸಿತ್ತು. ಇದನ್ನು ಹೊನ್ನಾವರ ತಾಲೂಕಿನ ಕವಲಕ್ಕಿಯ ಸುಬ್ರಹ್ಮಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್‌ ಜಿ ಭಟ್‌ ನೇತೃತ್ವದ ಸಮಿತಿಯು ಪರಿಶೀಲಿಸಿತ್ತು.

 

4.2 ಅಧ್ಯಾಯದಲ್ಲೇನಿದೆ?

 

ಪಠ್ಯಪುಸ್ತಕದ 4.2 ಅಧ್ಯಾಯದಲ್ಲಿ ಹೊಸ ಧರ್ಮಗಳ ಉದಯ-ಜೈನ ಧರ್ಮ ಮತ್ತು ಬೌದ್ಧ ಧರ್ಮ ಎಂಬ ಅಧ್ಯಾಯವಿದೆ. ವೈದಿಕ ಧರ್ಮದಲ್ಲಿನ ಗೊಂದಲಗಳು, ಪುರೋಹಿತ ವರ್ಗದ ಪರಮಾಧಿಕಾರ, ಪ್ರಾಣಿಬಲಿ, ಮಂತ್ರಗಳ ಪಠಣ, ಜಾತಿಪದ್ಧತಿ, ಮಹಾನ್‌ ವ್ಯಕ್ತಿಗಳ ಜನನವು ಹೊಸ ಧರ್ಮಗಳ ಉದಯಕ್ಕೆ ಕಾರಣವಾದವು ಎಂಬ ಅಂಶವಿದೆ.

 

‘ಆರಂಭದಲ್ಲಿ ವೈದಿಕ ಧರ್ಮ ಯಾವುದೇ ಜಟಿಲತೆಗಳಿಲ್ಲದೆ ಸರಳವಾಗಿತ್ತು. ನಂತರ ಪುರೋಹಿತರ ಪ್ರಭಾವದಿಂದಾಗಿ ಬಹಳಷ್ಟು ಕಠೋರತೆಗಳು ಧರ್ಮದೊಳಗೆ ನುಸುಳಿದವು. ಜನರು ಅಸಂತುಷ್ಟರಾದರು ಮತ್ತು ಬದಲಾವಣೆಯನ್ನು ಬಯಸಿದ್ದ ಅವರು ಅದನ್ನು ಹೊಸಧರ್ಮಗಳಲ್ಲಿ ಕಂಡುಕೊಂಡರು. ಬ್ರಾಹ್ಮಣರು ಇತರ ಜಾತಿಗಳ ಮೇಲೆ ಪರಮಾಧಿಕಾರ ಸ್ಥಾಪಿಸಿದರು. ಜನರಿಗೆ ಪುರೋಹಿತರಿಲ್ಲದೆ ಯಜ್ಞಗಳನ್ನು ಮಾಡುವುದು ಅಸಾಧ್ಯವಾಗಿತ್ತು. ಬ್ರಾಹ್ಮಣರು ಅನೇಕ ವಿಶೇಷ ಸೌಲಭ್ಯಗಳನ್ನುಅನುಭವಿಸುತ್ತಿದ್ದರು ಮತ್ತು ತಮ್ಮನ್ನು ಎಲ್ಲರಿಗಿಂತ ಶ್ರೇಷ್ಠರೆಂದು ತಿಳಿದಿದ್ದರು.

 

ಪ್ರಾಣಿ ಬಲಿ, ಶಾಸ್ತ್ರ ವಿಧಿಗಳೊಂದು ಭಾಗವಾಗಿತ್ತು ಮತ್ತು ಇವುಗಳ ಆಚರಣೆ ದುಬಾರಿಯಾಯಿತು.ಹೀಗಾಗಿ ಜನರು ಅಸ್ತಿತ್ವದಲ್ಲಿದ್ದ ಧರ್ಮದಲ್ಲಿನ ನಂಬಿಕೆ ಕಳೆದುಕೊಂಡರು. ಋಗ್ವೇದದ ಕಾಲದ ಧಾರ್ಮಿಕ ವಿಧಿ ಮತ್ತು ಧರ್ಮಾಚರಣೆ ಉತ್ತರ ವೇದ ಕಾಲದಲ್ಲಿ ಸಂಕೀರ್ಣವಾದವು. ಸಂಸ್ಕೃತದಲ್ಲಿದ್ದ ವೈದಿಕ ಸಾಹಿತ್ಯದ ಮೇಲೆ ಪುರೋಹಿತರ ಪ್ರಭುತ್ವವಿತ್ತು. ಜನಸಾಮಾನ್ಯರಿಗೆ ಅವುಗಳನ್ನು ಅರ್ಥಮಾಡಿಕೊಳ್ಳುವುದು ಸಾಧ್ಯವಿರಲಿಲ್ಲ.

 

ಸ್ಪಷ್ಟ ತಿಳಿವಳಿಕೆಯ ಕೊರತೆಯಿಂದ ಜನರು ಮಂತ್ರ ಪಠಣೆಯಲ್ಲಿ ನಂಬಿಕೆ ಕಳೆದುಕೊಂಡರು. ಜಾತಿ ಪದ್ಧತಿಯು ಸಾಮಾಜಿಕ ವ್ಯವಸ್ಥೆಯ ಜಟಿಲವಾಗಿತ್ತು. ಬೇರೆ ಬೇರೆ ಜಾತಿಗಳ ಮಧ್ಯೆ ಬೇಧಭಾವವಿತ್ತು. ಬ್ರಾಹ್ಮಣರು ಉನ್ನತ ಸ್ಥಾನವನ್ನು ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯಿಂದಾಗಿ ಜನರು ಅತೃಪ್ತರಾಗಿದ್ದರು. ಶೂದ್ರರು ಹೇಳಿಕೊಳ್ಳಲಾಗದ ಸಂಕಷ್ಟಗಳಿಗೆ ಗುರಿಯಾದರು.

 

ಜನರು ಅಸಂತುಷ್ಟರು ಮತ್ತು ಅತೃಪ್ತರಾಗಿದ್ದಾಗ ಮಹಾವೀರ ಮತ್ತು ಗೌತಮ ಬುದ್ಧನಂತಹ ಇಬ್ಬರು ಮಹಾನ್‌ ವ್ಯಕ್ತಿಗಳು ಜನಿಸಿದರು. ಅವರು ಸರಳವಾದ ತತ್ವಗಳನ್ನು ಜನರಾಡುವ ಭಾಷೆಯಲ್ಲಿ ಬೋಧಿಸಿದರು. ಹೊಸ ಧರ್ಮಗಳು ಬೋಧಿಸಿದ ಸರಳ ಮುಕ್ತಿ ಮಾರ್ಗದಿಂದಾಗಿ ಸಾಮಾನ್ಯರು ಹೊಸ ಧರ್ಮಗಳತ್ತ ಆಕರ್ಷಿಸಲ್ಪಟ್ಟರು.

 

ಹೊಸಧರ್ಮಗಳ ಉದಯಕ್ಕೆ ಕಾರಣಗಳು ಮತ್ತು ಟಿಪ್ಪು ಸುಲ್ತಾನ್‌ ಸಾಧನೆ ಮತ್ತು ಕೊಡುಗೆಗಳನ್ನು ವಿವರಿಸುವ ಪಾಠಾಂಶಗಳನ್ನು ಪಠ್ಯದಿಂದ ತೆಗೆದುಹಾಕುವ ಮುನ್ನವೇ 2021-22ನೇ ಸಾಲಿಗೆ ಒಟ್ಟು 83 ಶೀರ್ಷಿಕೆಗಳ ಒಟ್ಟು 6,76,997 ಪಠ್ಯಪುಸ್ತಕಗಳನ್ನು ಮುದ್ರಿಸಲಾಗಿತ್ತು. ಇಷ್ಟೊಂದು ಸಂಖ್ಯೆಯಲ್ಲಿರುವ ಪಠ್ಯಪುಸ್ತಕಗಳು 2022-23ನೇ ಸಾಲಿಗೆ ಅನುಪಯುಕ್ತವಾಗಿವೆ. ಆರರಿಂದ ಹತ್ತನೇ ತರಗತಿ ಸಮಾಜ ವಿಜ್ಞಾನದ ವಿಷಯದ ಪಠ್ಯಪುಸ್ತಕಗಳನ್ನು ಹಠಕ್ಕೆ ಬಿದ್ದು ಪರಿಷ್ಕರಿಸಿರುವುದರ ಪರಿಣಾಮ 2.5 ಕೋಟಿ ರು. ನಷ್ಟವಾಗಿರುವುದನ್ನು ಸ್ಮರಿಸಬಹುದು.

Tags: B C NageshBasavaraj BommaiBoudha DharmaD K ShivakumarDevanuru Mahaddevah d kumarswamyH VishwanathHistory Text BookII PUCIndian HistoryJaina DharmaKarnataka HistoryKuvempuNew Religions EmergingPrimary Secondary Education DepartmentReject BrahmanisimRevisedRohit ChakratirthaSiddaramaiahಇತಿಹಾಸ ಪಠ್ಯ ಪರಿಷ್ಕರಣೆಎಚ್‌ ಡಿ ಕುಮಾರಸ್ವಾಮಿಎಚ್‌ ವಿಶ್ವನಾಥ್‌ಕರ್ನಾಟಕ ಇತಿಹಾಸಕುವೆಂಪುಜೈನ ಧರ್ಮಡಿ ಕೆ ಶಿವಕುಮಾರ್ದೇವನೂರು ಮಹಾದೇಔದೇವನೂರು ಮಹಾದೇವದ್ವಿತೀಯ ಪಿಯುಸಿಪ್ರಾಥಮಿಕಪ್ರೌಢಶಿಕ್ಷಣ ಇಲಾಖೆಬಸವರಾಜ ಬೊಮ್ಮಾಯಿಬಿ ಸಿ ನಾಗೇಶ್‌ಬೌದ್ಧ ಧರ್ಮಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿಭಾರತದ ಇತಿಹಾಸರೋಹಿತ್‌ ಚಕ್ರತೀರ್ಥಸಿದ್ದರಾಮಯ್ಯಹೊಸ ಧರ್ಮಗಳ ಉದಯ
Advertisement Banner
Previous Post

ಕೆಂಗೇರಿ ವಿಭಾಗವೊಂದರಲ್ಲೇ ಗುತ್ತಿಗೆದಾರರಿಗೆ 445 ಕೋಟಿ ರು. ಬಾಕಿ; ಬಿಬಿಎಂಪಿಯಲ್ಲೇ ಉಳಿದ ಬಿಲ್‌ಗಳು

Next Post

ವಿದ್ಯಾರ್ಥಿಗಳಿಗೆ ಬೈಸಿಕಲ್‌; ಶಿಕ್ಷಣ ಇಲಾಖೆಯ ಪ್ರಸ್ತಾವನೆ ತಿರಸ್ಕರಿಸಿ, ಹುಸಿ ಭರವಸೆ ನೀಡಿದ ಮುಖ್ಯಮಂತ್ರಿ

thefilestack

thefilestack

Next Post

ವಿದ್ಯಾರ್ಥಿಗಳಿಗೆ ಬೈಸಿಕಲ್‌; ಶಿಕ್ಷಣ ಇಲಾಖೆಯ ಪ್ರಸ್ತಾವನೆ ತಿರಸ್ಕರಿಸಿ, ಹುಸಿ ಭರವಸೆ ನೀಡಿದ ಮುಖ್ಯಮಂತ್ರಿ

Recommended

ಹೊರರಾಜ್ಯದ ಗಡಿ ಕನ್ನಡಿಗರಿಗಿಲ್ಲ ಸೌಲಭ್ಯಗಳು; ಅನುದಾನದ ಕೊರತೆಯೇ ಕಾರಣವೆಂದ ಪ್ರಾಧಿಕಾರ

11 months ago

ಒಂದು ಡೋಸ್‌ಗೆ ಪ್ರತಿಶತ 2000ರಷ್ಟು ಲಾಭ; ಸಾಂಕ್ರಾಮಿಕದಲ್ಲೂ ಲಾಭದ ರಾಜಕುಮಾರ

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd