the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಬಯೋ ಮೆಡಿಕಲ್‌ ಉಪಕರಣ ಖರೀದಿಯಲ್ಲಿನ 47 ಕೋಟಿ ಅವ್ಯವಹಾರದ ಸುತ್ತ ‘ದಿ ಫೈಲ್‌’ನ 5 ವರದಿಗಳು

thefilestack by thefilestack
August 11, 2022
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸೇರಿದಂತೆ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ನಿಯಮಾವಳಿಗಳನ್ನು ಅಧಿಕಾರಿಗಳು ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ಕುರಿತು 'ದಿ ಫೈಲ್‌' ಕಳೆದ 2 ವರ್ಷಗಳ ಹಿಂದೆಯೇ ಹೊರಗೆಡವಿದ್ದ ಪ್ರಕರಣದ ಕುರಿತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವರದಿ ಸಲ್ಲಿಸಿದ್ದಾರೆ.

 

ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆ ಮಾಡಲು ಗುತ್ತಿಗೆ ನೀಡಿರುವ ಕಂಪನಿ ಜತೆ ಅಧಿಕಾರಿಗಳು ಶಾಮೀಲಾಗಿರುವ ಕಾರಣ ಸರ್ಕಾರಕ್ಕೆ ಅಂದಾಜು 47.07 ಕೋಟಿ ನಷ್ಟ ಸಂಭವಿಸಿರುವುದೂ ಸೇರಿದಂತೆ ಇಡೀ ಪ್ರಕರಣದ ಸುತ್ತ 'ದಿ ಫೈಲ್‌' ದಾಖಲೆ ಸಮೇತ 5 ವರದಿಗಳನ್ನು ಪ್ರಕಟಿಸಿತ್ತು.

 

ಸರ್ಕಾರಕ್ಕೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವರದಿ ಸಲ್ಲಿಸಿ ತನಿಖಾ ಸಂಸ್ಥೆಗೆ ಪ್ರಕರಣವನ್ನು ವಹಿಸುವುದು ಸೂಕ್ತವೆಂದು ಹೇಳಿರುವುದು 'ದಿ ಫೈಲ್‌' ವರದಿಯನ್ನು ಮತ್ತೊಮ್ಮೆ ಬಲಪಡಿಸಿದಂತಾಗಿದೆ. ಈ ಪ್ರಕರಣದ ಸುತ್ತ ಪ್ರಕಟಿಸಿದ್ದ ವರದಿಗಳನ್ನು ಕ್ರೋಢೀಕರಿಸಿ ಇಲ್ಲಿ ಕೊಡಲಾಗಿದೆ.

 

 

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರ ಆಪ್ತ ಕಾರ್ಯದರ್ಶಿಯಾಗಿರುವ ಸಿ ನಾಗರಾಜ್‌ ಅವರು (ಕೆಡಿಎಲ್‌ಡಬ್ಲ್ಯೂಎಸ್‌ನ ಹೆಚ್ಚುವರಿ ನಿರ್ದೇಶಕರಗಾಗಿದ್ದ ಅವಧಿ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ್‌ ಪಾಂಡೆ ಮತ್ತು ಕಾರ್ಯಾಕ್ರಮಾಧಿಕಾರಿಯೂ ಆಗಿದ್ದ ಉಪ ನಿರ್ದೇಶಕ ಸ್ವತಂತ್ರಕುಮಾರ್‌ ಬಣಕರ್‌ ಅವರು 47.07 ಕೋಟಿ ನಷ್ಟಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಬಗ್ಗೆ 'ದಿ ಫೈಲ್‌' ಡಿಸೆಂಬರ್‌ 14, 2020 ರಂದು ವರದಿ ಪ್ರಕಟಿಸಿತ್ತು.

https://stack.thefile.in/2020/12/governance/6062/

ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸಂಬಂಧ ನಡೆದಿದ್ದ ಟೆಂಡರ್‌ ಪರಿಶೀಲನಾ ಸಭೆ, ಮೌಲ್ಯಮಾಪನ ಪ್ರಕ್ರಿಯೆ ಮತ್ತು ಅಂಕ ನೀಡಿಕೆಯಲ್ಲೇ ಸಂಚು ಹೂಡಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಆಯುಕ್ತ ಪಂಕಜಕುಮಾರ್‌ ಪಾಂಡೆ ಮತ್ತು ಉಪ ನಿರ್ದೇಶಕ ಡಾ ಸ್ವತಂತ್ರಕುಮಾರ್‌ ಬಣಕರ್‌ ಅವರು ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಕಂಪನಿಗೆ ಲಾಭ ಮಾಡಿಕೊಟ್ಟಿದ್ದರು. ಈ ಕುರಿತು ಡಿಸೆಂಬರ್‌ 15, 2020ರಂದು ವರದಿ ಪ್ರಕಟಿಸಿತ್ತು.

https://stack.thefile.in/2020/12/governance/6074/

ಬಯೋಮೆಡಿಕಲ್‌ ಉಪಕರಣ ನಿರ್ವಹಣೆ ಸಂಬಂಧ ಆರೋಗ್ಯ ಇಲಾಖೆ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಲಂಚಕೋರ ಅಧಿಕಾರಿಗಳಿಂದ ಸರ್ಕಾರಕ್ಕೆ ಆಗಿರುವ ನಷ್ಟದ ವಿವರಗಳು ಬಹಿರಂಗವಾಗುತ್ತಿರುವ ಬೆನ್ನಲ್ಲೇ ಹಲವು ಅಧಿಕಾರಿಗಳ ಚಾಣಾಕ್ಷತೆಯಿಂದ ಕೂಡಿದ್ದ ಲೋಪಗಳು ಬಯಲಾಗಿವೆ. ಟೆಂಡರ್‌ ಪರಿಶೀಲನಾ ಸಮಿತಿಯ ಸದಸ್ಯರು ಸಭೆ ನಡವಳಿಗಳ ಕೊನೆಯ 5 ಮತ್ತು 6ನೇ ಪುಟಗಳಿಗಷ್ಟೇ ಸಹಿ ಮಾಡಿದ್ದಾರೆಯೇ ವಿನಃ, ಉಳಿದ ನಿರ್ಣಯಗಳಿಗೆ ಯಾರೂ ಸಹಿ ಮಾಡದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ಈ ಕುರಿತು ಡಿಸೆಂಬರ್‌ 16, 2020ರಂದು ವರದಿ ಪ್ರಕಟಿಸಿತ್ತು.

https://stack.thefile.in/2020/12/governance/6090/

 

ಉಪಕರಣಗಳ ನಿರ್ವಹಣೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದ ಮೊತ್ತ ಮತ್ತು ಕರಾರಿಗೆ ಸಹಿ ಹಾಕುವಾಗ 47.7 ಕೋಟಿ ಹೆಚ್ಚಳ ಮಾಡಿದ್ದ ಅಧಿಕಾರಿಗಳು ಉಪಕರಣಗಳ ಆಸ್ತಿ ಮೌಲ್ಯದಲ್ಲಿಯೂ ಹೆಚ್ಚಳ ಮಾಡಿ ಕಂಪನಿಗೆ ಮತ್ತಷ್ಟು ಲಾಭ ಮಾಡಿಕೊಟ್ಟಿರುವುದು ಇದೀಗ ಮುನ್ನೆಲೆಗೆ ಬಂದಿತ್ತು. ಈ ಕುರಿತು ಡಿಸೆಂಬರ್‌ 17,2020ರಂದು ವರದಿ ಪ್ರಕಟಿಸಿತ್ತು.

https://stack.thefile.in/2020/12/governance/6105/

 

 

ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆ ಸಂಬಂಧ ಕೆಡಿಎಲ್‌ಡಬ್ಲ್ಯೂಎಸ್‌ನ ಅಧಿಕಾರಿಗಳು ಹೆಜ್ಜೆ ಹೆಜ್ಜೆಯಲ್ಲೂ ಅಕ್ರಮ ನಡೆಸಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಸಲ್ಲಿಸಿದ್ದ ಪ್ರೊಫ್ರಾಮಾ ಇನ್‌ವಾಯ್ಸ್‌ನಲ್ಲಿ ಒದಗಿಸಿದ್ದ ಜಿಎಸ್‌ಟಿ ನಂಬರ್‌ ನಕಲಿಯಾಗಿದ್ದರೂ ಪರಿಶೀಲಿಸದ ಅಧಿಕಾರಿಗಳಿಂದ ಸರ್ಕಾರಕ್ಕೆ ನಷ್ಟ ಉಂಟಾಗಿದೆ.

 

ಉಪಕರಣಗಳ ನಿರ್ವಹಣೆ ಗುತ್ತಿಗೆ ಪಡೆದಿರುವ ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ಗೆ ನೀಡಿರುವ ಮುಂಗಡದಲ್ಲೂ ಅವ್ಯವಹಾರದ ವಾಸನೆ ಹಬ್ಬಿದೆ. ನೋಟಿಫಿಕೇಷನ್‌ ಅವಾರ್ಡ್‌ನ ಆಧಾರದ ಮೇಲೆ 5.41 ಕೋಟಿ ರು. ಮುಂಗಡ ನೀಡಿರುವ ಇಲಾಖೆ, ಕಂಪನಿ ನೀಡಿದ್ದ ಜಿಎಸ್‌ಟಿ ನಂಬರ್‌ನ್ನು ಪರಿಶೀಲಿಸದೆಯೇ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಇದರಿಂದ ಸರ್ಕಾರಕ್ಕೆ ಜಿಎಸ್‌ಟಿಯೂ ವಂಚನೆಯಾಗಿದೆ ಎಂದು ತಿಳಿದು ಬಂದಿತ್ತು. ಈ ಕುರಿತು ಡಿಸೆಂಬರ್‌ 18,2020ರಂದು ವರದಿ ಪ್ರಕಟಿಸಿತ್ತು.

https://stack.thefile.in/2020/12/governance/6116/

ಒಟ್ಟಾರೆ ಈ ಪ್ರಕರಣದಲ್ಲಿ 47 ಕೋಟಿ ರೂ.ಗೂ ಅಧಿಕ ಮೊತ್ತದಲ್ಲಿ ನಷ್ಟವಾಗಿತ್ತು. ಆದರೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ನೀಡಿರುವ ವರದಿ ಪ್ರಕಾರ ಕೇವಲ 12.51 ಕೋಟಿ ಮಾತ್ರ ಎಂದು ಹೇಳಲಾಗಿದೆ. ಈ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಇದು ಹಿಂದಿ ಸರ್ಕಾರದ ಅವಧಿಯಲ್ಲಿ ನೀಡಿದ್ದ ಗುತ್ತಿಗೆ ಪ್ರಕರಣ. ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸದ ಕಾರಣಕ್ಕೆ ಕಂಪನಿಗೆ ನೀಡಬೇಕಾದ ಹಣವನ್ನು ತಡೆಹಿಡಿಯಲಾಗಿದೆ ಎಂದು ಪ್ರಜಾವಾಣಿಗೆ ಅಭಿಪ್ರಾಯ ನೀಡಿದ್ದಾರೆ.

Tags: B S YediyiurappaB SriramuluBasavaraj BommaiBio Medical EquipmentD K Shivakumardr k sudhakarDR Swatantra Bankarh d kumarswamyKDLWSSiddaramaiahTVS Logistics Servicesಆರೋಗ್ಯ ಅಭಿಯಾನಉಪಕರಣಗಳ ನಿರ್ವಹಣೆಎಚ್‌ ಡಿ ಕುಮಾರಸ್ವಾಮಿಕೆಡಿಎಲ್‌ಡಬ್ಲ್ಯೂಎಸ್‌ಗುತ್ತಿಗೆಜಿಎಸ್‌ಟಿ ವಂಚನೆಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ಡಾ ಕೆ ಸುಧಾಕರ್‌ಡಾ ಸ್ವತಂತ್ರಕುಮಾರ್‌ ಬಣಕರ್‌ಡಿ ಕೆ ಶಿವಕುಮಾರ್ಪಂಕಜಕುಮಾರ್‌ ಪಾಂಡೆಬಯೋ ಮೆಡಿಕಲ್‌ ಉಪಕರಣಬಸವರಾಜ ಬೊಮ್ಮಾಯಿಬಿ ಶ್ರೀರಾಮುಲುರಾಷ್ಟ್ರೀಯ ಆರೋಗ್ಯ ಅಭಿಯಾನಸರ್ಕಾರಕ್ಕೆ ನಷ್ಟಸಿದ್ದರಾಮಯ್ಯ
Advertisement Banner
Previous Post

ಭೂಮಂಜೂರಾತಿ ನಿಯಮ ಉಲ್ಲಂಘನೆ;11 ಕೋಟಿ ರು. ಮೌಲ್ಯದ ಸರ್ಕಾರಿ ಜಮೀನು ಖಾಸಗಿ ಕಂಪನಿಗೆ ಪರಭಾರೆ?

Next Post

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ; ಹೆಚ್ಚಿನ ಭೂಪರಿಹಾರ ಆದೇಶಗಳಿಂದ ಆರ್ಥಿಕ ಹೊರೆ?

thefilestack

thefilestack

Next Post

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ; ಹೆಚ್ಚಿನ ಭೂಪರಿಹಾರ ಆದೇಶಗಳಿಂದ ಆರ್ಥಿಕ ಹೊರೆ?

Recommended

ಐದು ಗ್ಯಾರಂಟಿಗಳ ಅನುಷ್ಠಾನ; ಬೊಕ್ಕಸ ಬರಿದಾಗಿಸದೆಯೇ 1.43 ಲಕ್ಷ ಕೋಟಿ ಸಂಗ್ರಹಕ್ಕೆ ಇಲ್ಲಿದೆ ಮಾರ್ಗ

3 years ago

108 ಆರೋಗ್ಯ ಕವಚ; ಹಲವು ಸಮಿತಿಗಳು 14 ಸಭೆ ನಡೆಸಿದ್ದರೂ ಟೆಂಡರ್‌ ಅಂತಿಮಗೊಳಿಸುವಲ್ಲಿ ವಿಫಲ

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd