the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಬೀಳಗಿ ಸಕ್ಕರೆ ಕಾರ್ಖಾನೆಗೆ ದೊರೆಯದ ಎನ್‌ಒಸಿ; ಅಪೆಕ್ಸ್‌ ಹೆಗಲಿಗೆ ಬಿದ್ದಿದೆ ಸಾಲದ ಹೊಣೆಗಾರಿಕೆ

thefilestack by thefilestack
August 17, 2021
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಎಸ್‌ ಆರ್‌ ಪಾಟೀಲ್‌ ಅವರು ನಿರ್ದೇಶಕರಾಗಿರುವ ಬೀಳಗಿ ಸಕ್ಕರೆ ಕಾರ್ಖಾನೆಯು ಸಮೂಹ ಬ್ಯಾಂಕ್‌ಗಳಿಂದ ಎನ್‌ಒಸಿ ಪಡೆಯದ ಕಾರಣ ದುಡಿಯುವ ಬಂಡವಾಳದ ಸಾಲದ ಹೊಣೆಗಾರಿಕೆಯನ್ನು ಅಪೆಕ್ಸ್‌ ಬ್ಯಾಂಕ್‌ ಹೆಗಲಿಗೆ ಹೊರಿಸಿದೆ.

2018-19ನೇ ಸಾಲಿನ ಶಾಸನಬದ್ಧ ಲೆಕ್ಕ ಪರಿಶೋಧಕರು ಸಲ್ಲಿಸಿರುವ ವರದಿಯಲ್ಲಿ ಬೀಳಗಿ ಸಕ್ಕರೆ ಕಾರ್ಖಾನೆಯ ಸಾಲದ ವೃತ್ತಾಂತವನ್ನು ತೆರೆದಿಟ್ಟಿದ್ದಾರೆ. ಈ ವರದಿಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬಜ್ಪೆಯಲ್ಲಿರುವ ವಿಎಸ್‌ಎನ್‌ ನೀಡಿರುವ 13.61 ಕೋಟಿ ರು. ಅವಧಿ ಸಾಲ ಸೇರಿದಂತೆ ಒಟ್ಟು 18 ಸಮೂಹ ಬ್ಯಾಂಕ್‌ಗಳು ನೀಡಿದ್ದ ಸಾಲದ ಪೈಕಿ 313 ಕೋಟಿಯಷ್ಟು ಹೊರಬಾಕಿ ಉಳಿಸಿಕೊಂಡಿರುವುದು ವರದಿಯಿಂದ ತಿಳಿದು ಬಂದಿದೆ.

ಸಮೂಹ ಬ್ಯಾಂಕ್‌ಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ 43 ಕೋಟಿ ಮತ್ತು ಎಸ್‌ಬಿಐ ಹುಬ್ಬಳ್ಳಿಯು 45 ಕೋಟಿ ಸಾಲವನ್ನು ದುಡಿಯುವ ಬಂಡವಾಳ ರೂಪದಲ್ಲಿ ಬೀಳಗಿ ಸಕ್ಕರೆ ಕಾರ್ಖಾನೆಗೆ ನೀಡಿರುವುದು ವರದಿಯಿಂದ ಗೊತ್ತಾಗಿದೆ.

2018ರ ಫೆ.27ರಂದು ಮಂಜೂರಾತಿ ಪತ್ರದ ನಿಬಂಧನೆ 22ರ ಪ್ರಕಾರ ಸಾಲಗಾರ ಕಂಪನಿಯು ಇತರ ಸಮೂಹ ಬ್ಯಾಂಕ್‌ಗಳಿಂದ ನಿರಾಪೇಕ್ಷಣಾ ಪತ್ರ ಒದಗಿಸಬೇಕು. ಆದರೆ ಬಸವೇಶ್ವರ ಸಹಕಾರ ಬ್ಯಾಂಕ್‌, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ, ವಿಜಯಪುರ ಡಿಸಿಸಿ ಮತ್ತು ಕೆನರಾ ಡಿಸಿಸಿ ಬ್ಯಾಂಕ್‌ಗಳಿಂದ ಎನ್‌ಒಸಿಗಳನ್ನು ಅಪೆಕ್ಸ್‌ ಬ್ಯಾಂಕ್‌ ಗೆ ನೀಡಿಲ್ಲ. ಹೀಗಾಗಿ ಮಂಜೂರಾಗಿರುವ ದುಡಿಯುವ ಬಂಡವಾಳದ ಸಾಲ ಹೊಣೆಗಾರಿಕೆಯನ್ನೂ ಅಪೆಕ್ಸ್‌ ಬ್ಯಾಂಕ್‌ ಹೊತ್ತಿಕೊಳ್ಳಬೇಕಾಗಿದೆ. ಇದು ಕಂಪನಿಯು ಒದಗಿಸಿರುವ ಭದ್ರತೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದೂ ಲೆಕ್ಕ ಪರಿಶೋಧಕರು ಅಭಿಪ್ರಾಯಿಸಿದ್ದಾರೆ.

ಇನ್ನು ಬ್ಯಾಂಕ್‌ನಿಂದ ಮಂಜೂರಾದ ಸಾಲದ ಮಿತಿ 75 ಕೋಟಿ ದುಡಿಯುವ ಬಂಡವಾಳ ಸಾಲದಲ್ಲಿ 1/3ನ್ನು ಪೂರ್ವಭಾವಿ ವೆಚ್ಚದ ಸಾಲವೆಂದು ಬಿಡುಗಡೆಗೊಳಿಸಬಹುದು. ಅಲ್ಲದೆ 2/3ರ ಮಿತಿಯಷ್ಟು ಸಕ್ಕರೆ ದಾಸ್ತಾನಿನ ಮೇಲೆ ಬಿಡುಗಡೆ ಮಾಡಬಹುದು. ಆದರೆ ಬ್ಯಾಂಕ್‌ 2018ರ ಆಗಸ್ಟ್‌ 4 ಮ್ತು 13ರಂದು ಪರಿಷ್ಕೃತ ಮಂಜೂರಾತಿ ಪತ್ರ ನೀಡಿ ಪೂರ್ಣ ಮಂಜೂರಾದ ಮೊತ್ತವನ್ನು ಪೂರ್ವಭಾವಿ ವೆಚ್ಚದ ಸೌಲಭ್ಯದಡಿ ಡ್ರಾ ಮಾಡಲು ಅವಕಾಶ ಮಾಡಿಕೊಟ್ಟಿದೆ. ಇದರಿಂದ ಬ್ಯಾಂಕ್‌ನ ಮಾರ್ಗಸೂಚಿಗಳನ್ನುಪಾಲಿಸಿದಂತಾಗುವುದಿಲ್ಲ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ವಿವರಿಸಲಾಗಿದೆ.

ಬೃಹತ್‌ ಮತ್ತು ಕೈಗಾರಿಕೆ ಸಚಿವ ಮುರುಗೇಶ್‌ ಆರ್‌ ನಿರಾಣಿ ಅವರ ಒಡೆತನದ ನಿರಾಣಿ ಷುಗರ್ಸ್‌ ಲಿಮಿಟೆಡ್‌, ಸಹ-ಕಂಪನಿಗೆ ಸೇರಿರುವ ಸ್ಥಿರಾಸ್ತಿಯನ್ನು ಅಡಮಾನವಾಗಿರಿಸಿ 85.00 ಕೋಟಿ ರು. ಸಾಲವನ್ನು ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿದ್ದನ್ನು ಸ್ಮರಿಸಬಹುದು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ನಿರ್ದೇಶಕರಾಗಿರುವ ಹರ್ಷ ಷುಗರ್ಸ್‌ ಲಿಮಿಟೆಡ್‌ ಅಪೆಕ್ಸ್‌ ಬ್ಯಾಂಕ್‌ನಿಂದ ಮಂಜೂರು ಮಾಡಿಸಿಕೊಂಡ ಹೊಸ ಸಾಲದ ಮೊತ್ತದಲ್ಲಿ ಬಹುತೇಕ ಮೊತ್ತವನ್ನು ಹಳೇ ಸಾಲದ ಬಾಕಿಗೆ ಹೊಂದಾಣಿಕೆ ಮಾಡಿರುವುದನ್ನು ಲೆಕ್ಕ ಪರಿಶೋಧನೆ ವರದಿ ಹೊರಗೆಡವಿತ್ತು.

ಅಪೆಕ್ಸ್‌ ಬ್ಯಾಂಕ್‌ ಸಾಲ ಮಂಜೂರಾತಿ ಮಾಡಿದ್ದ 50.00 ಕೋಟಿ ರು. ಪೈಕಿ 30.81 ಕೋಟಿ ರು. ಗಳನ್ನು ಹಳೇ ಬಾಕಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಅಲ್ಲದೆ ಹೆಚ್ಚುವರಿ ಸಾಲ ಮಂಜೂರಾತಿಗೆ ಸಮೂಹ ಬ್ಯಾಂಕ್‌ಗಳಿಂದ ನಿರಾಪೇಕ್ಷಣಾ ಪತ್ರ ಪಡೆಯದ ಕಾರಣ, ಹೆಚ್ಚುವರಿ ಸಾಲದ ಹೊಣೆಯು ಅಪೆಕ್ಸ್‌ ಬ್ಯಾಂಕ್‌ ಮೇಲೆ ಬಿದ್ದಿದೆ ಎಂದು ಶಾಸನಬದ್ಧ ಲೆಕ್ಕಪರಿಶೋಧಕರು ಬಹಿರಂಗಗೊಳಿಸಿದ್ದನ್ನು ಸ್ಮರಿಸಬಹುದು.

ಮಾಜಿ ಶಾಸಕ ಪ್ರಕಾಶ್‌ ಖಂಡ್ರೆ ನಿರ್ದೇಶಕರಾಗಿರುವ ಬಾಲ್ಕೇಶ್ವರ ಷುಗರ್ಸ್‌ ಲಿಮಿಟೆಡ್‌ಗೆ ಸಮೂಹ ಬ್ಯಾಂಕ್‌ಗಳಿಂದ ನಿರಪೇಕ್ಷಣಾ ಪತ್ರ ಬರುವ ಮೊದಲೇ ಅಪೆಕ್ಸ್‌ ಬ್ಯಾಂಕ್‌ 60.00 ಕೋಟಿ ರು. ಸಾಲ ಮಂಜೂರು ಮಾಡಿತ್ತು.

ಬಾಲ್ಕೇಶ್ವರ ಷುಗರ್ಸ್‌ ಲಿಮಿಟೆಡ್‌ಗೆ ಅಪೆಕ್ಸ್‌ ಬ್ಯಾಂಕ್‌, ಪಿಎನ್‌ಬಿ, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ, ಕಾರ್ಪ್‌ ಬ್ಯಾಂಕ್‌, ಐಒಬಿ ಸೇರಿದಂತೆ ಇನ್ನಿತರೆ ಬ್ಯಾಂಕ್‌ಗಳು ನೀಡಿದ್ದ ಒಟ್ಟು ಸಾಲದ ಪೈಕಿ 1,51,07,62,364.00 ರಷ್ಟು ಹೊರಬಾಕಿ ಇದ್ದರೂ ಆ ಎಲ್ಲಾ ಬ್ಯಾಂಕ್‌ಗಳು ನಿರಪೇಕ್ಷಣಾ ಪತ್ರ ನೀಡುವ ಮುನ್ನವೇ ಅಪೆಕ್ಸ್‌ ಬ್ಯಾಂಕ್‌ 60.00 ಕೋಟಿ ರು. ಸಾಲ ಮಂಜೂರು ಮಾಡಿದ್ದನ್ನು ಲೆಕ್ಕ ಪರಿಶೋಧನೆ ವರದಿ ಹೊರಗೆಡವಿತ್ತು.

ಕಣ್ವ ಫ್ಯಾಷನ್ಸ್‌ ಕಂಪನಿಗೆ ಸಂಬಂಧದಪಟ್ಟ ಖಾತೆಯಲ್ಲಿ ಯಾವುದೇ ವ್ಯಾಪಾರ ವ್ಯವಹಾರಗಳು ಕಂಡು ಬಂದಿಲ್ಲ. 5.60 ಕೋಟಿ ಸಾಲದಲ್ಲಿ ಕಣ್ವ ಫ್ಯಾಷನ್ಸ್‌ಗೆ 4.97ಕೋಟಿ (ಶೇ.89) ಪಾವತಿಯಾಗಿದ್ದರೆ ಉಳಿದ 0.63 ಕೋಟಿ ಕಣ್ವ ಸ್ಟಾರ್‌ ಮತ್ತು ಹೋಟೆಲ್‌ ಪ್ರೈ ಲಿಮಿಟೆಡ್‌ಗೆ ಪಾವತಿಯಾಗಿತ್ತು. ಅಲ್ಲದೆ 2018ರ ಜೂನ್‌ 27ರಂದು 20.00 ಲಕ್ಷ ರು.ಗಳು ನಗದು ರೂಪದಲ್ಲಿ ಡ್ರಾ ಆಗಿದೆ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ವಿವರಿಸಲಾಗಿದೆ.

ಮಂಜೂರು ಮಾಡಿದ ಸಾಲವನ್ನು ಮೂಲ ಉದ್ದೇಶಕ್ಕೆ ಬಳಸಬೇಕು. ಆದರೆ ಕಣ್ವ ಗಾರ್ಮೆಂಟ್ಸ್‌ ಪ್ರೈ ಲಿಮಿಟೆಡ್‌ ಪ್ರಕರಣವನ್ನು ಪರಿಶೀಲಿಸಿದಾಗ ಹೆಚ್ಚಿನ ಮೊತ್ತವನ್ನು ಬೇರೆ ಸಂಸ್ಥೆಗಳಿಗೆ ವರ್ಗಾವಣೆ ಮಾಡಲಾಗಿದೆ. ಮಂಜೂರಾತಿ ಉದ್ದೇಶವನ್ನು ಸಾಲಗಾರರದಿಂದ ಬ್ಯಾಂಕ್‌ ದೃಢಪಡಿಸಿಕೊಳ್ಳದಿರುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು.

ವಿಧಾನಪರಿಷತ್‌ ಸದಸ್ಯ ಕೆ ಪಿ ನಂಜುಂಡಿ ಅವರು ನಿರ್ದೇಶಕರಾಗಿರುವ ಲಕ್ಷ್ಮಿ ಗೋಲ್ಡ್‌ ಖಜಾನ ಪ್ರೈ ಲಿಮಿಟೆಡ್‌ ಕಂಪನಿಯು ಅಪೆಕ್ಸ್‌ ಬ್ಯಾಂಕ್‌ನಿಂದ ಸಾಲ ಪಡೆಯುವ ಸಂದರ್ಭದಲ್ಲಿ ಸ್ವತ್ತಿನ ಮೌಲ್ಯಮಾಪನವನ್ನು ಹೆಚ್ಚುವರಿಯಾಗಿ ಮೌಲ್ಯಮಾಪನ ಮಾಡಿಸಿತ್ತು. ಅಲ್ಲದೆ ಆದಾಯ ಇಲಾಖೆಯ ಜಫ್ತಿಗೊಳಪಟ್ಟಿದ್ದ ಸ್ವತ್ತನ್ನು ಸಾಲಕ್ಕೆ ಹೆಚ್ಚುವರಿ ಭದ್ರತೆಯನ್ನಾಗಿರಿಸಿತ್ತು ಎಂಬ ಸಂಗತಿಯನ್ನು ಲೆಕ್ಕ ಪರಿಶೋಧನೆ ವರದಿಯು ಬಹಿರಂಗಗೊಳಿಸಿತ್ತು.

ಬೆಳಗಾವಿ ತಾಲ್ಲೂಕಿನ ಕಾಕತಿಯಲ್ಲಿರುವ ಮಾರ್ಕಂಡೇಯ ಸಹಹಾರಿ ಸಕ್ಕರೆ ಕಾರ್ಖಾನೆಯು ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿದ್ದ ಸಾಲದ ಹೊರಬಾಕಿ ಇರಿಸಿಕೊಂಡಿದ್ದ 419.05 ಲಕ್ಷ ರು.ಗಳನ್ನು ಬಡ್ಡಿ ರಿಯಾಯಿತಿ ಯೋಜನೆಯಡಿ ಮನ್ನಾ ಮಾಡಿರುವುದನ್ನು ಬ್ಯಾಂಕ್‌ನ ಶಾಸನಬದ್ಧ ಲೆಕ್ಕ ಪರಿಶೋಧಕರು ಹೊರಗೆಡವಿದ್ದನ್ನು ಸ್ಮರಿಸಬಹುದು.

ಕರ್ನಾಟಕ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ತನ್ನ ಕಾರ್ಯವ್ಯಾಪ್ತಿಯಿಂದ ಹೊರಗಿರುವ ಹೊರ ರಾಜ್ಯದಲ್ಲಿ ನೋಂದಾಯಿತವಾಗಿರುವ ಶಿವಶಕ್ತಿ ಷುಗರ್‌ ಮಿಲ್ಸ್‌ ಇಂಡಿಯಾ ಪ್ರೈವೈಟ್‌ ಲಿಮಿಟೆಡ್‌ ಕಂಪನಿಗೆ 19.50 ಕೋಟಿ ರು. ಸಾಲ ನೀಡಿರುವುದನ್ನು ಲೆಕ್ಕ ಪರಿಶೋಧಕರು ಪತ್ತೆ ಹಚ್ಚಿದ್ದರು.

Tags: Apex BankApex Bank ScamB S YediyurappaBasaveshwara Co Operative BankBiligi Sugars LimitedD K ShivakumarDCC Banksh d kumarswamyHarsha SugarsK N RajannaK. P. NanjundiLakshmi Gold KhazanaMarkandeya Suagar FactoryNirani SugarsR M Manjunath GowdaRBIs r patilSiddaramaiahVijayapura DCC Bankಅಪೆಕ್ಸ್‌ ಬ್ಯಾಂಕ್‌ಅಪೆಕ್ಸ್‌ ಬ್ಯಾಂಕ್‌ ಲೆಕ್ಕ ಪರಿಶೋಧನೆಆರ್‌ ಎಂ ಮಂಜುನಾಥಗೌಡಆರ್‌ಬಿಐಎಚ್‌ ಡಿ ಕುಮಾರಸ್ವಾಮಿಎಸ್‌ ಆರ್‌ ಪಾಟೀಲ್‌ಕೆ ಎನ್‌ ರಾಜಣ್ಣಕೆ ಪಿ ನಂಜುಂಡಿಡಿ ಕೆ ಶಿವಕುಮಾರ್ಡಿಸಿಸಿ ಬ್ಯಾಂಕ್‌ಗಳುನಿರಾಣಿ ಶುಗರ್ಸ್‌ಬಸವೇಶ್ವರ ಸಹಕಾರಿ ಬ್ಯಾಂಕ್‌ಬಿ ಎಸ್‌ ಯಡಿಯೂರಪ್ಪಬೀಳಗಿ ಸಕ್ಕರೆ ಕಾರ್ಖಾನೆಮಾರ್ಕಂಡೇಯ ಸಕ್ಕರೆ ಕಾರ್ಖಾನೆಲಕ್ಷ್ಮಿ ಗೋಲ್ಡ್‌ ಖಜಾನಸಿದ್ದರಾಮಯ್ಯಹರ್ಷ ಶುಗರ್ಸ್‌
Advertisement Banner
Previous Post

ಉಲ್ಲಂಘನೆ; ಹೊರರಾಜ್ಯದಲ್ಲಿ ನೋಂದಾಯಿತ ಸಕ್ಕರೆ ಕಂಪನಿಗೂ 19.50 ಕೋಟಿ ಸಾಲ

Next Post

ಬೀಳಗಿ ಸಕ್ಕರೆ ಕಾರ್ಖಾನೆಗೆ ದೊರೆಯದ ಎನ್‌ಒಸಿ; ಅಪೆಕ್ಸ್‌ ಹೆಗಲಿಗೆ ಬಿದ್ದಿದೆ ಸಾಲದ ಹೊಣೆಗಾರಿಕೆ

thefilestack

thefilestack

Next Post

ಡೆತ್‌ ಆಡಿಟ್‌ ಸಲ್ಲಿಕೆ; 2.34 ಲಕ್ಷ ಮಂದಿಯಲ್ಲಿ 14,371 ಮಾತ್ರ ಕೋವಿಡ್‌ ಸಾವು

Discussion about this post

Recommended

ಬಡ ರೋಗಿಗಳಿಗೆ ಕಳಪೆ ಔಷಧ; ಅಪರಾಧವೆಸಗಿದ ಅಧಿಕಾರಿಗಳ ವಿರುದ್ಧ 4 ವರ್ಷಗಳಾದರೂ ಕ್ರಮವಿಲ್ಲ

4 years ago

ಕೋವಿಡ್‌ ಸಂಕಷ್ಟ; ವಿದ್ಯುತ್‌ ವಾಹನಗಳಿಗಿಲ್ಲ ಪ್ರೋತ್ಸಾಹ ಧನ?

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd