the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LEGISLATURE

ಬೆಡ್‌, ಉಪಕರಣಗಳ ಖರೀದಿ; ಲೆಕ್ಕಪತ್ರ ಪರಿಶೀಲನೆಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ

thefilestack by thefilestack
May 8, 2021
in LEGISLATURE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ ಮತ್ತು ಆಸ್ಪತ್ರೆ ಬೆಡ್‌ಗಳ ಮತ್ತಿತರೆ ಉಪಕರಣಗಳ ಖರೀದಿ ಕುರಿತಂತೆ ಲೆಕ್ಕಪತ್ರ ಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮುಂದಾಗಿದೆ.

ಈಗಾಗಲೇ ಎಲ್ಲಾ ಸಮಿತಿಗಳ ಸಭೆಗಳನ್ನು ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಿ ಹೊರಡಿಸಿರುವ ಆದೇಶ ಮತ್ತು ಹೊರಡಿಸಿರುವ ಲಘು ಪ್ರಕಟಣೆಯನ್ನು ಹಿಂಪಡೆಯಬೇಕು ಎಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷ ರಾಮಲಿಂಗಾರೆಡ್ಡಿ ಅವರು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ 2021ರ ಮೇ 6 ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ಗಳು, ಆಸ್ಪತ್ರೆ ಬೆಡ್‌ಗಳು ಮತ್ತಿತರೆ ಉಪಕರಣಗಳ ಖರೀದಿಗಳ ಕುರಿತಂತೆ ಚರ್ಚೆ, ಲೆಕ್ಕಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಅನಿವಾರ್ಯತೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗಿದೆ,’ ಎಂದು ಪತ್ರದಲ್ಲಿ ರಾಮಲಿಂಗಾರೆಡ್ಡಿ ಅವರು ಪ್ರಸ್ತಾಪಿಸಿದ್ದಾರೆ.

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳು ನಿಯಮ 264ರ ಅನ್ವಯ ಸಮಿತಿಯು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅಡ್ಡಿಯಾಗಿದೆ. ಹೀಗಾಗಿ ಈಗಾಗಲೇ ಹೊರಡಿಸಿರುವ ಲಘು ಪ್ರಕಟಣೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದೂ ಪತ್ರದಲ್ಲಿ ಸ್ಪೀಕರ್‌ಗೆ ಮನವಿ ಮಾಡಿದ್ದಾರೆ.

ಲೆಕ್ಕಪತ್ರಗಳ ಪರಿಶೀಲನೆ ಮತ್ತು ಸ್ಥಳಪರಿಶೀಲನೆ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ಸಮಿತಿಯ ಅಧ್ಯಕ್ಷ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಕೋವಿಡ್‌ ಮೊದಲ ಅಲೆಯ ಸಂದರ್ಭದಲ್ಲೂ ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್‌, ಪಲ್ಸ್‌ ಆಕ್ಸಿಮೀಟರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಕ್ರಮ ನಡೆದಿತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು.

ಈ ಕುರಿತು ಪಿಎಸಿ ಹಿಂದಿನ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು ಸ್ಥಳ ಪರಿಶೀಲನೆ ಮತ್ತು ಲೆಕ್ಕಪತ್ರ ಪರಿಶೀಲನೆ ಮತ್ತು ತನಿಖೆಗೆ ಮುಂದಾಗಿದ್ದರು. ಆದರೆ ವಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇದಕ್ಕೆ ಸಹಕರಿಸಿರಲಿಲ್ಲ. ಸ್ಥಳಪರಿಶೀಲನೆ ನಡೆಸಲು ಅನುಮತಿಯನ್ನೂ ನೀಡಿರಲಿಲ್ಲ.

ಕೋವಿಡ್‌ ಮೊದಲ ಅಲೆಯ ಸಂದರ್ಭದಲ್ಲಿಯೂ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿತ್ತು ಎಂದು ಕರ್ನಾಟಕ ರಾಷ್ಟ್ರಸಮಿತಿ ನೀಡಿದ್ದ ದಾಖಲೆಗಳ ಸಮೇತ ದೂರಿನಲ್ಲಿ ಬಲವಾಗಿ ಆರೋಪಿಸಿತ್ತು. ಕೋವಿಡ್‌ ಭ್ರಷ್ಟಾಚಾರ ಕುರಿತಂತೆ ಸಮಿತಿಯು ಹಲವು ಸಭೆಗಳನ್ನು ನಡೆಸಿತ್ತು.

ಈ ಸಂಬಂಧ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಹಿಂದಿನ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು ಕೆಲವೆಡೆ ಸ್ಥಳ ಪರಿಶೀಲನೆ ನಡೆಸಿದ್ದರು. ಅಲ್ಲದೆ ದಾಖಲೆಗಳನ್ನಾಧರಿಸಿ ಮಧ್ಯಂತರ ವರದಿಯನ್ನೂ ಸಿದ್ಧಪಡಿಸಿದ್ದರು. ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಲು ಸ್ಪೀಕರ್‌ ಕಾಗೇರಿ ಅವರು ಅನುಮತಿ ನೀಡಿರಲಿಲ್ಲ. ಈ ವಿಚಾರವಾಗಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಕಾಗೇರಿ ಅವರ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದ್ದನ್ನು ಸ್ಮರಿಸಬಹುದು.

ಇದರ ಮಧ್ಯೆ ಸಿಎಜಿಗೆ ಪತ್ರ ಬರೆದಿದ್ದ ಎಚ್‌ ಕೆ ಪಾಟೀಲ್‌ ಅವರು ಕೋವಿಡ್‌ ನಿಯಂತ್ರಣ ಸಂಬಂಧ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸಲು ಸೂಚಿಸಿದ್ದರು. ಆದರೆ ಈ ಸೂಚನೆಯನ್ನು ಸಿಎಜಿ ಪಾಲಿಸಿರಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಹಿಂದಿನ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಸಿಎಜಿಯಿಂದ ಲೆಕ್ಕ ಪರಿಶೀಲನೆ ನಡೆಸಲು ಅನುಮತಿ ನೀಡಿರಲಿಲ್ಲ.

Tags: auditB S YediyurappaB SriramulucagChief SecretaryCovid 19Covid ManagementD K Shivakumardr k sudhakarh d kumarswamyH K Patilhealth departmentJawaid AktharLegislature AssemblyMedical OxygenPublic Accounts CommitteeR Ramlinga ReddySiddaramaiahSpeakerTrilok Chandra IASVishweshwar Hegde Kageriಆರೋಗ್ಯ ಇಲಾಖೆಆರ್‌ ರಾಮಲಿಂಗಾರೆಡ್ಡಿಎಚ್‌ ಕೆ ಪಾಟೀಲ್‌ಎಚ್‌ ಡಿ ಕುಮಾರಸ್ವಾಮಿಕೋವಿಡ್‌ 19ಕೋವಿಡ್‌ ನಿರ್ವಹಣೆಡಾ ಕೆ ಸುಧಾಕರ್‌ಡಿ ಕೆ ಶಿವಕುಮಾರ್ಬಿ ಎಸ್‌ ಯಡಿಯೂರಪ್ಪಬಿ ಶ್ರೀರಾಮುಲುಲೆಕ್ಕಪತ್ರ ಪರಿಶೀಲನೆವಿಧಾನಸಭೆ ಸಭಾಧ್ಯಕ್ಷವಿಶ್ವೇಶ್ವರ ಹೆಗಡೆ ಕಾಗೇರಿಶಾಸನಸಭೆಸಭಾಧ್ಯಕ್ಷಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಸಿಎಜಿಸಿದ್ದರಾಮಯ್ಯಸ್ಪೀಕರ್‌
Advertisement Banner
Previous Post

ತೇಜಸ್ವಿ ಸೂರ್ಯ ಹೇಳಿಕೆ ಪರಿಣಾಮ; ಇತರೆ ಕಂಪನಿ ಮುಸ್ಲಿಂ ಉದ್ಯೋಗಿಯತ್ತ ಪೊಲೀಸರ ಕೆಂಗಣ್ಣು

Next Post

ನಿಯಂತ್ರಣಕ್ಕೆ ಸಿಗದ ಕೋವಿಡ್‌; ಶೇ. 32.71ರಷ್ಟು ಏರಿಕೆಯಾಗಿರುವ ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿತೇ?

thefilestack

thefilestack

Next Post

ನಿಯಂತ್ರಣಕ್ಕೆ ಸಿಗದ ಕೋವಿಡ್‌; ಶೇ. 32.71ರಷ್ಟು ಏರಿಕೆಯಾಗಿರುವ ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿತೇ?

Discussion about this post

Recommended

ಮಾನವ ಅಂಗಗಳ ಕಸಿ ; 12 ವರ್ಷಗಳಾದರೂ ರಾಜ್ಯದಲ್ಲಿ ಅಳವಡಿಕೆಯಾಗದ ಕೇಂದ್ರದ ಕಾಯ್ದೆ

2 years ago

ವೇತನ ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳೂ ಭಾಗಿ; ಸಭಾಪತಿಯಿಂದಲೇ ಸಂಶಯ

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd