the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಮತಾಂತರ ನಿಷೇಧ ವಿಧೇಯಕ ಜಾರಿಗೊಳಿಸಲು ಸುಗ್ರೀವಾಜ್ಞೆಗೆ ಅಂತಿಮ ಸ್ವರೂಪ ನೀಡಿದ ಸರ್ಕಾರ

thefilestack by thefilestack
January 25, 2022
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಮತಾಂತರವನ್ನು ನಿಗ್ರಹಿಸುವ ಉದ್ದೇಶಿತ ಕರ್ನಾಟಕ ಧಾರ್ಮಿಕ ಹಕ್ಕುಗಳ ಸಂರಕ್ಷಣಾ ಮಸೂದೆಯನ್ನು ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದು ಮೇಲ್ಮನೆಯಲ್ಲಿ ಮುಖಭಂಗಕ್ಕೊಳಗಾಗಿರುವ ಸರ್ಕಾರವು, ಮಸೂದೆಯನ್ನು ಕಾಯ್ದೆಯಾಗಿ ಜಾರಿಗೊಳಿಸಲು ಹೊರಡಿಸಲಿರುವ ಸುಗ್ರೀವಾಜ್ಞೆಗೆ ಅಂತಿಮ ಸ್ವರೂಪ ನೀಡಿದೆ.

ಮಸೂದೆಯನ್ನು ವಿಧಾನಪರಿಷತ್ತಿನಲ್ಲಿ ಮಂಡಿಸದ ಕಾರಣ ಮಸೂದೆ ಅನುಷ್ಠಾನದಲ್ಲಿ ವಿಳಂಬವಾಗಬಾರದು ಎಂಬ ಉದ್ದೇಶದಿಂದ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ. ಈಗಾಗಲೇ ಸುಗ್ರೀವಾಜ್ಞೆಯ ಕರಡು ಪ್ರತಿಯನ್ನು ಇಲಾಖೆಯು ಸಿದ್ಧಪಡಿಸಿದೆ. ಸಚಿವ ಸಂಪುಟದ ಅನುಮೋದನೆ ಪಡೆದು ಅಂಗೀಕಾರಕ್ಕೆ ಶೀಘ್ರದಲ್ಲಿಯೇ ರಾಜ್ಯಪಾಲರಿಗೆ ಕಳಿಸಲಿದೆ ಎಂದು ಗೊತ್ತಾಗಿದೆ. ಸುಗ್ರೀವಾಜ್ಞೆಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ (2021) ವು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ಸುಗ್ರೀವಾಜ್ಞೆ 2022 ಹೆಸರಿನಲ್ಲಿ ಜಾರಿಗೊಳ್ಳಲಿದೆ. ಒಳಾಡಳಿತ ಇಲಾಖೆಯು ಮಂಡಿಸಿದ್ದ ಕರಡು ವಿಧೇಯಕವನ್ನು 2021ರ ಡಿಸೆಂಬರ್‌ 16ರಂದು ಪರಿಶೀಲನಾ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿತ್ತು. ಇದನ್ನು 2021ರ ಡಿಸೆಂಬರ್‌ 21ರಂದು ನಡೆದ ಸಚಿವ ಸಂಪುಟವು ಅನುಮೋದಿಸಿತ್ತು.

ಸಚಿವ ಸಂಪುಟದ ಪ್ರಸ್ತಾವನೆಯಲ್ಲೇನಿತ್ತು?

ರಾಜ್ಯದ ವಿವಿಧ ಭಾಗಗಳಲ್ಲಿ ಆಮಿಷಗಳು, ಬಲ ಪ್ರಯೋಗ, ದುಮಾರ್ಗಗಳ ಮೂಲಕ ಮತಾಂತರ ಮತ್ತು ಸಾಮೂಹಿಕ ಮತಾಂತರ ಕೃತ್ಯಗಳು ನಡೆದಿರುವ ಬಗ್ಗೆ ಅನೇಕ ಪ್ರಕರಣಗಳು ಬೆಳಕಿಗೆ ಬಂದಿರುತ್ತವೆ. ಇಂತಹ ಕೃತ್ಯಗಳು ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿ ಸಾಮಾಜಿಕ ಕ್ಷೋಭೆಗಳಿಗೆ ಕಾರಣವಾಗಲಿದೆ. ಇದು ಸಾರ್ವಜನಿಕ ರಕ್ಷಣೆ ಹೊತ್ತಿರುವ ಸಿಬ್ಬಂದಿಗಳಿಗೆ ಸವಾಲಿನ ಕೆಲಸವೂ ಆಗಿರುತ್ತದೆ. ಪ್ರಸ್ತುತ ಇಂತಹ ದುಷ್ಕೃತ್ಯಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ದಂಡಿಸಲು ರಾಜ್ಯದಲ್ಲಿ ಯಾವುದೇ ಕಾನೂನು ಅಸ್ತಿತ್ವದಲ್ಲಿ ಇರುವುದಿಲ್ಲ. ಸಮಾಜವನ್ನು ಒಡೆಯುತ್ತಿರುವ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಯಾವುದೇ ವಿಳಂಬಕ್ಕೆ ಅವಕಾಶವಾಗದಂತೆ ತಕ್ಷಣ ಕಾನೂನುಕ್ರಮ ವಹಿಸಿ ನಿಯಂತ್ರಣಕ್ಕೆ ತರಬೇಕೆಂಬ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ಕಾಯ್ದೆ ತರುವ ಅಗತ್ಯವಿದೆ ಎಂದು ಪ್ರಸ್ತಾವನೆಯಲ್ಲಿ ವಿವರಿಸಲಾಗಿತ್ತು.

ಅದೇ ರೀತಿ ವಿಧೇಯಕಕ್ಕೆ ರೆ.ಸ್ಟಾನಿಸುಲ್ಯಸ್‌/ ಮಧ್ಯಪ್ರದೇಶ ಮತ್ತು ಒರಿಸ್ಸಾ ಪ್ರಕರಣ (Rev.Stanislaus V/S State of Madhya Pradesh and Orissa) (1977) 1 ಎಸ್‌ಎಸ್‌ಸಿ 677ರಲ್ಲಿ ಸರ್ವೋಚ್ಛ ನ್ಯಾಯಾಲಯವು ಅನುಚ್ಛೇಧ 25ರಡಿಯಲ್ಲಿ ಧರ್ಮ ಪ್ರಚಾರದ ಹಕ್ಕು ಒಬ್ಬ ವ್ಯಕ್ತಿಯನ್ನ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವ ಹಕ್ಕನ್ನು ಹೊಂದಿಲ್ಲ,’ ಎಂದು ನೀಡಿದ್ದ ತೀರ್ಪನ್ನು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿರುವುದು ಮಾಹಿತಿ ಹಕ್ಕಿನಿಂದ ಪಡೆದಿರುವ ದಾಖಲೆಯಿಂದ ತಿಳಿದು ಬಂದಿದೆ.
ಹಾಗೆಯೇ ಉತ್ತರ ಪ್ರದೇಶವು (2020), ಉತ್ತರಾಖಂಡ್‌ (2018), ಹಿಮಾಚಲ ಪ್ರದೇಶವು (2019), ಮಧ್ಯಪ್ರದೇಶವು (2020)ರಲ್ಲಿ ಜಾರಿಗೊಳಿಸಿದ್ದ ಮತಾಂತರ ನಿಷೇಧ ಮಸೂದೆಯನ್ನು ಉಲ್ಲೇಖಿಸಿದ್ದ ಕಾನೂನು ಇಲಾಖೆಯು ವಿಧೇಯಕವನ್ನು ಅನುಮೋದಿಸಿತ್ತು.

ಬೆಳಗಾವಿಯಲ್ಲಿ ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಕೊನೆಯ ದಿನವಾದ ಶುಕ್ರವಾರದಂದು ವಿರೋಧ ಪಕ್ಷಗಳ ಸದಸ್ಯರು ತಮ್ಮ ತಮ್ಮ ಊರುಗಳತ್ತ ತೆರಳಿದ್ದ ಸಮಯವನ್ನೇ ಬಳಸಿಕೊಡಿದ್ದ ಸರ್ಕಾರವು ವಿಧಾನ ಪರಿಷತ್‌ನಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಗೆ ಅಂಗೀಕಾರ ಪಡೆಯಲು ಯತ್ನಿಸಿತ್ತು. ಆದರೆ ಪ್ರತಿಪಕ್ಷಗಳ ಬಿಗಿ ಪಟ್ಟಿನಿಂದಾಗಿ ತೀವ್ರ ಮುಖಭಂಗಕ್ಕೊಳಗಾಗಿದ್ದನ್ನು ಸ್ಮರಿಸಬಹುದು.

ವಾಸ್ತವದಲ್ಲಿ ರಾಜ್ಯದಲ್ಲಿ 2018, 2019, 2020, 2021ರ ಫೆಬ್ರುವರಿ ಅಂತ್ಯಕ್ಕೆ 16 ಪ್ರಕರಣಗಳಷ್ಟೇ ದಾಖಲಾಗಿದೆ. ವಿಶೇಷವೆಂದರೆ ಕರ್ನಾಟಕ ಧಾರ್ಮಿಕ ಹಕ್ಕುಗಳ ಸಂರಕ್ಷಣಾ ವಿಧೇಯಕ ತರಲು ವಿಧಾನಸಭೆ ಅಧಿವೇಶನದಲ್ಲಿ ಕೂಗೆಬ್ಬಿಸಿದ್ದ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಅವರು 2021ರ ಫೆಬ್ರುವರಿ 2ರಂದು ಕೇಳಿದ್ದ ಪ್ರಶ್ನೆಗೆ ಅಂದಿನ ಗೃಹ ಸಚಿವ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಈ ಅಂಕಿ ಅಂಶಗಳನ್ನು ಸದನಕ್ಕೆ ಉತ್ತರಿಸಿದ್ದರು.

ಮತ್ತೊಂದು ವಿಶೇಷ ಸಂಗತಿ ಎಂದರೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಕಳೆದ 10, 15 ವರ್ಷಗಳಿಂದ ಬಲವಂತವಾಗಿ ಜನರನ್ನು ಮತಾಂತರಗೊಳಿಸಲಾಗುತ್ತಿದೆ ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ಸದನಲ್ಲಿ ಎತ್ತರಿಸಿದ ದನಿಯಲ್ಲಿ ಮಾತನಾಡಿದ್ದರು. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಬಲವಂತವಾಗಿ ಮತಾಂತರ ಮಾಡಿರುವ ಬಗ್ಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಇನ್ನು ಗೂಳಿಹಟ್ಟಿ ಶೇಖರ್‌ ಅವರ ಸ್ವಕೇತ್ರ ಹೊಸದುರ್ಗ ತಾಲೂಕಿನಲ್ಲಿ ಯಾವುದೇ ಬಲವಂತವಾಗಿ ಅಥವಾ ಆಮಿಷವೊಡ್ಡಿ ಮತಾಂತರವನ್ನು ಮಾಡಿದ ಬಗ್ಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಬಸವರಾಜ ಬೊಮ್ಮಾಯಿ ಅವರು ಲಿಖಿತ ಉತ್ತರ ನೀಡಿದ್ದರು.

ಕೋಮು ಉದ್ವಿಗ್ನ ಮತ್ತು ಹಿಂಸಾಚಾರಕ್ಕೆ ಕಾರಣವಾಗುವ ಸಂಘಟಿತ ಸಾಮೂಹಿಕ ಮತಾಂತರ ಪ್ರಕರಣಗಳನ್ನು ತಡೆಗಟ್ಟಲು ಹಾಲಿ ಜಾರಿಯಲ್ಲಿರುವ ಕಾನೂನು ಕ್ರಮದ ಜತೆ ಕೇಂದ್ರ ಸರ್ಕಾರವೇ ಒಂದು ಕಾಯ್ದೆ ರೂಪಿಸಬೇಕು ಎಂದು ಜಸ್ಟೀಸ್‌ ಎಂ ಎಂ ಪುಂಚಿ ಆಯೋಗವು ಮಾಡಿದ್ದ ಶಿಫಾರಸ್ಸುಗಳಿಗೆ ದೇಶದ 9 ರಾಜ್ಯಗಳು ಅಸಮ್ಮತಿ ವ್ಯಕ್ತಪಡಿಸಿದ್ದವು.

ಜಸ್ಟೀಸ್‌ ಎಂ ಎಂ ಪುಂಚಿ ಆಯೋಗದ ಶಿಫಾರಸ್ಸುಗಳನ್ನು ಅಂತರ ರಾಜ್ಯ ಪರಿಷತ್‌ ಸಭೆಯಲ್ಲಿಯೂ ಚರ್ಚಿಸಲಾಗಿತ್ತು. ಆಯೋಗವು ಮಾಡಿದ್ದ ಶಿಫಾರಸ್ಸುಗಳ ಕುರಿತು ಚರ್ಚಿಸಬಹುದಾದ ವಿಷಯಗಳ ಬಗ್ಗೆ ಕರ್ನಾಟಕ ಸರ್ಕಾರದ ಒಳಾಡಳಿತ ಇಲಾಖೆಯು ಕಂಡಿಕೆವಾರು ಅಭಿಪ್ರಾಯವನ್ನು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ಆಡಳಿತ ಸುಧಾರಣೆ-ತರಬೇತಿ)ಗೆ ಅಭಿಪ್ರಾಯವನ್ನು 2020ರ ಸೆಪ್ಟಂಬರ್‌ 8ರಂದು ಕಳಿಸಿತ್ತು. ಹಾಗೆಯೇ ಕಾನೂನು ಇಲಾಖೆಯು ಈ ಸಂಬಂಧ ಒಪ್ಪಿಗೆ ಸೂಚಿಸಿ 2020ರ ಸೆ.15ರಂದು ಡಿಪಿಎಆರ್‌ಗೆ ಪತ್ರ ಬರೆದಿತ್ತು.

Tags: AllurementAnti Conversion BillAraga JnanendraB S YediyurappaBasavaraja BommaiCabinetChief SecretaryCoercionConstitution ArticlesD K ShivakumarGovernor of Karnatakah d kumarswamyIndiakarnatakaLegislature AssemblyOrdinanceReligionRight to FreedomSiddaramaiahThavarChand Geholetಎಚ್‌ ಡಿ ಕುಮಾರಸ್ವಾಮಿಒಳಾಡಳಿತ ಇಲಾಖೆಕರಡು ವಿಧೇಯಕಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ರಕ್ಷಣೆ ವಿಧೇಯಕಡಿ ಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಬಿ ಎಸ್‌ ಯಡಿಯೂರಪ್ಪಮತಾಂತರ ನಿಷೇಧಮುಖ್ಯ ಕಾರ್ಯದರ್ಶಿರಾಜ್ಯಪಾಲರುಸಚಿವ ಸಂಪುಟಸಿದ್ದರಾಮಯ್ಯಸುಗ್ರಿವಾಜ್ಞೆ
Advertisement Banner
Previous Post

ಮತಾಂತರ ನಿಷೇಧ; ಅಂತರರಾಜ್ಯ ಪರಿಷತ್‌ ಸ್ಥಾಯಿ ಸಮಿತಿ ಅಭಿಪ್ರಾಯ ಬದಿಗಿರಿಸಿದ ಸರ್ಕಾರ

Next Post

ಮೈಸೂರಿನಲ್ಲಿ 2.30 ಎಕರೆ ಜಮೀನು; ಆಸ್ತಿದಾಯಿತ್ವಪಟ್ಟಿಯಲ್ಲಿ ಘೋಷಿಸದ ರವಿಚನ್ನಣ್ಣವರ್

thefilestack

thefilestack

Next Post

ಮೈಸೂರಿನಲ್ಲಿ 2.30 ಎಕರೆ ಜಮೀನು; ಆಸ್ತಿದಾಯಿತ್ವಪಟ್ಟಿಯಲ್ಲಿ ಘೋಷಿಸದ ರವಿಚನ್ನಣ್ಣವರ್

Recommended

ಬಿಜೆಪಿ ಅವಧಿಯಲ್ಲಿ ತಡೆಹಿಡಿದಿದ್ದ ಆದೇಶಕ್ಕೆ ಮರುಜೀವ; ಅಬಕಾರಿಯಲ್ಲಿ 1,000 ಕೋಟಿ ಅಕ್ರಮ ಆರೋಪ

3 years ago

Get The Boot A Birds Eye Look Into Mcse Boot Camps

7 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd