the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home RTI

ಮಧುಗಿರಿ ಮೋದಿ ಸೇರಿ 495 ಆರೋಪಿಗಳ ವಿರುದ್ಧ 260 ಪ್ರಕರಣ ಹಿಂತೆಗೆತ;ಬಿಜೆಪಿ ಕಾರ್ಯಕರ್ತರದ್ದೇ ಸಿಂಹಪಾಲು

thefilestack by thefilestack
May 30, 2023
in RTI
0
0
SHARES
0
VIEWS
Share on FacebookShare on Twitter

ಬೆಂಗಳೂರು; ಬಿಜೆಪಿ, ಎಬಿವಿಪಿ ಮತ್ತು ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಸೇರಿದಂತೆ ಮತ್ತಿತರೆ 495ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ದಾಖಲಾಗಿದ್ದ ಒಟ್ಟು ಕ್ರಿಮಿನಲ್‌ ಪ್ರಕರಣಗಳ ಪೈಕಿ 260 ಪ್ರಕರಣಗಳನ್ನು 2023ರ ಜನವರಿಯಿಂದ 2023ರ ಮಾರ್ಚ್‌ ಅಂತ್ಯದವರೆಗಿನ ಕೇವಲ ಮೂರೇ ಮೂರು ತಿಂಗಳಲ್ಲಿ ಹಿಂದಿನ ರಾಜ್ಯ ಬಿಜೆಪಿ ಸರ್ಕಾರವು ವಿಚಾರಣೆಯಿಂದಲೇ ಹಿಂಪಡೆದುಕೊಂಡಿರುವುದನ್ನು ‘ದಿ ಫೈಲ್‌’ ಇದೀಗ ದಾಖಲೆ ಸಹಿತ ಹೊರಗೆಡವುತ್ತಿದೆ.

 

ಕೋಮು ಪ್ರಚೋದನೆ, ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದಿದ್ದ ಕೋಮು ಗಲಭೆ, ಸಾರ್ವಜನಿಕರ ನೆಮ್ಮದಿಗೆ ಭಂಗ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಸಾಮಾಜಿಕ ಆಂತರ ಕಾಯ್ದುಕೊಳ್ಳದಿರುವುದು, ಲಾಕ್‌ಡೌನ್‌ ಸಂದರ್ಭದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಉಲ್ಲಂಘನೆ ಸೇರಿದಂತೆ ಮತ್ತಿತರೆ ಗಂಭೀರ ಆರೋಪಗಳಡಿ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಐಪಿಸಿ, ಸಿಆರ್‌ಪಿಸಿ ಸೇರಿ ಮತ್ತಿತರೆ ದಂಡನಾ ಕಾಯ್ದೆಯಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದರೂ ಹಿಂಪಡೆದುಕೊಂಡಿದೆ.

 

ಈ ಎಲ್ಲ ಮೊಕದ್ದಮೆಗಳನ್ನು ವಿಚಾರಣೆಯಿಂದ ಹಿಂಪಡೆದುಕೊಳ್ಳಲು ಸಚಿವ ಸಂಪುಟ ಉಪ ಸಮಿತಿಯು ಶಿಫಾರಸ್ಸು ಮಾಡಿತ್ತು. ಪ್ರಕರಣ, ಮೊಕದ್ದಮೆಗಳನ್ನು ವಿಚಾರಣೆಯಿಂದ ಹಿಂಪಡೆದುಕೊಂಡಿರುವುದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಸರ್ಕಾರದ ಆದೇಶಗಳು ಮತ್ತು ಸಮಗ್ರ ನಡವಳಿಗಳನ್ನು ಪಡೆದುಕೊಂಡಿದೆ.

 

ವಿಶೇಷವೆಂದರೆ ವಿಧಾನಸಭೆ ಚುನಾವಣೆ ಅಧಿಸೂಚನೆ ಪ್ರಕಟವಾಗುವ ಒಂದೆರಡು ದಿನ ಮುನ್ನವೇ 212 ಕ್ರಿಮಿನಲ್‌ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆದುಕೊಂಡಿರುವುದು ಆರ್‌ಟಿಐ ದಾಖಲೆಗಳಿಂದ ಗೊತ್ತಾಗಿದೆ.

 

 

ಟಿಪ್ಪು ಜಯಂತಿ, ಗಣೇಶ ವಿಸರ್ಜನೆ, ಅನ್ಯ ಕೋಮಿನ ಜನರ ಭಾವನೆಗಳಿಗೆ ಧಕ್ಕೆ ತರುವ, ಕೋಮು ಸೌಹಾರ್ದ ಕದಡುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿ ಅಪರಾಧ ಎಸಗಿರುವುದು, ಕಾನೂನುಬಾಹಿರವಾಗಿ ಅಕ್ರಮ ಕೂಟ ಕಟ್ಟಿಕೊಂಡು ಕಾನೂನು ಸುವ್ಯವಸ್ಥೆಗೆ ಭಂಗ ತಂದ ಅಪರಾಧ, ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿರುವುದು, ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯದವರು ಬಿಜೆಪಿ ವಿಜಯೋತ್ಸವ ಆಚರಣೆ ವೇಳೆ ಕಲ್ಲು ತೂರಾಟ ನಡೆಸಿರುವುದು ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯುಂಟು ಮಾಡಿ ಕೋಮು ಸೌಹಾರ್ದ ಕದಡಿದ ಆರೋಪದ ಮೇಲೆ ಹಲವು ಪ್ರಕರಣಗಳು 2015, 2106, 2017, 2018, 2019, 2020, 2021ರಲ್ಲಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಮೊಕದ್ದಮೆಗಳು ದಾಖಲಾಗಿದ್ದವು.

 

ಬೀದರ್‌, ಮಂಗಳೂರು ನಗರ, ಶಿವಮೊಗ್ಗ, ಧಾರವಾಡ, ಭಟ್ಕಳ, ಮಂಡ್ಯ, ಶಿರಸಿ, ದಾವಣಗೆರೆ, ತುಮಕೂರು, ಚಿತ್ತಾಪುರ, ಕಲ್ಬುರ್ಗಿ, ಹೊನ್ನಾಳಿ, ಹೊನ್ನಾವರ, ಜೇವರ್ಗಿ, ಯಾದಗಿರಿ, ಹಾವೇರಿ, ಕೊಪ್ಪಳ, ಮಂಗಳೂರಿನ ಕಂಕನಾಡಿ, ಕೊಪ್ಪಳ ನಗರ, ಗ್ರಾಮೀಣ, ಚಿತ್ರದುರ್ಗ, ಮೈಸೂರು, ಸಾಗರ, ಉಡುಪಿ, ಉತ್ತರ ಕನ್ನಡ, ಯಮಕನಮರಡಿ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದವು ಎಂಬುದು ಎಫ್‌ಐಆರ್‌ಗಳಿಂದ ತಿಳಿದು ಬಂದಿದೆ.

https://stack.thefile.in/2022/06/rti/12251/

ತುಮಕೂರಿನಲ್ಲಿ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಸಮುದಾಯಕ್ಕೆ ಸೇರಿದವರ ಮೇಲೆ ಮಧುಗಿರಿ ಮೋದಿ ಎಂಬಾತ ಮತ್ತಿತರರು ಸೇರಿಕೊಂಡು ಅಡ್ಡಗಟ್ಟಿ ಕೆಟ್ಟ ಮಾತುಗಳಿಂದ ಬೈಯ್ದು ಹೊಡೆದಿದ್ದರು. ಮಧುಗಿರಿ ಮೋದಿ ಮತ್ತಿತರರ ಮೇಲೆ 2021ರ ಅಕ್ಟೊಬರ್‌ 20ರಂದು ಎಫ್‌ಐಆರ್‌ (0142/2021) ದಾಖಲಾಗಿತ್ತು. ಸಚಿವ ಸಂಪುಟದ ಉಪ ಸಮಿತಿ ಶಿಫಾರಸ್ಸಿನ್ವಯ ಪ್ರಕರಣವನ್ನೂ ಅಭಿಯೋಜನೆಯಿಂದ ಹಿಂಪಡೆದಿರುವುದು ಆರ್‌ಟಿಐ ದಾಖಲೆಯಿಂದ ಗೊತ್ತಾಗಿದೆ.

 

 

ಅದೇ ರೀತಿ ಟಿಪ್ಪು ಸುಲ್ತಾನರ ಭಾವಚಿತ್ರವನ್ನು ನಾಯಿ ಮುಖದ ರೀತಿಯಲ್ಲಿ ವಿರೂಪಗೊಳಿಸಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿ ಕೋಮು ಸೌಹಾರ್ದ ಕದಡಿದ್ದರಿಂದಾಗಿ ಮಂಡ್ಯದ ಬೆಳ್ಳೂರು ಗ್ರಾಮದಲ್ಲಿ ಯಾವ ಸಮಯದಲ್ಲಿಇಯಾದರೂ ಕೋಮು ಗಲಭೆ ನಡೆಯುವಂತಹ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಮಾಡಿದ್ದ ಎಂದು ಆರೋಪಿತರಾಗಿದ್ದ ಲೋಕೇಶ್‌ ಬಿ ವಿ ಸೇರಿದಂತೆ 5 ಮಂದಿ ಮೇಲೆ ಐ ಟಿ ಕಾಯ್ದೆಯಡಿ 2017ರ ನವೆಂಬರ್‌ 7ರಂದು ದಾಖಲಾಗಿದ್ದ ಮೊಕದ್ದಮೆಯನ್ನೂ ಹಿಂಪಡೆದುಕೊಳ್ಳಲಾಗಿದೆ.

 

ಶೃಂಗೇರಿಯಲ್ಲಿ ಎಬಿವಿಪಿ ಕಾರ್ಯಕರ್ತ ಎಂದು ಹೇಳಲಾದ ಅಭಿಷೇಕ್‌ ಎಂಬಾತನ ಆತ್ಮಹತ್ಯೆ ಪ್ರಕರಣವನ್ನು ಮುಂದಿರಿಸಿಕೊಂಡು ಮಂಗಳೂರು ನಗರದ ಜಯೇಶ್‌, ಮಂಡ್ಯದ ತೇಜಸ್ವಿ, ಉಡುಪಿಯ ವಿಜೇತ, ಅನುಷ ಸೇರಿ ಒಟ್ಟು 14 ಮಂದಿ ವಿರುದ್ಧ ಮಂಗಳೂರಿನ ಬರ್ಕೆ ಪೊಲೀಸ್‌ ಠಾಣೆಯಲ್ಲಿ (0005/2017) ಐಪಿಸಿ 1860 ಸೇರಿದಂತೆ ಇನ್ನಿತರೆ ಕಲಂಗಳಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ವಿಚಾರಣೆಯಿಂದ ವಾಪಸ್‌ ಪಡೆದುಕೊಂಡಿರುವುದು ದಾಖಲೆಯಿಂದ ತಿಳಿದು ಬಂದಿದೆ.

 

ಎಬಿವಿಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌

 

ಮಂಡ್ಯದ ಕಾವೇರಿ ಟಿ ವಿ ವಾಹಿನಿಯ ಮೇಲೆ ಕೆಲವರು ಹಿಂದೂಗಳಾದ ನಾವು ಹೆಳಿದಂತೆ ನೀವು ಕೇಳಬೇಕು, ಹಿಂದೂ ಸಂಘಟಕರು ಆಳ್ವಿಕೆ ಮಾಡುತ್ತಿದ್ದಾರೆ, ನಿಮ್ಮ ವಾಹಿನಿಯನ್ನು ಚಿಟಿಕೆ ಹೊಡೆಯುವುದರೊಳಗೆ ನಾವು ನಾಶಗೊಳಿಸುತ್ತೇವೆ, ಬುದ್ದಿಜೀವಿಗಳಿ ಬುದ್ಧಿ ಕಲಿಸಿದಂತೆ ನಿಮಗೂ ಬುದ್ದಿ ಕಲಿಸುತ್ತೇವೆ. ಭಾರತದಲ್ಲಿ ಹಿಂದುಗಳ ಮಾತ್ರು ಇರಬೇಕು, ಇದು ಹಿಂದು ರಾಷ್ಟ್ರ, ಇವತ್ತು ಮುಸ್ಲಿಂ ನ್ಯೂಸ್‌ ಓದುತ್ತೀರಿ, ನಾಳೆ ಕ್ರಿಶ್ಚಿಯನ್‌ ನ್ಯೂಸ್‌ ಓದುತ್ತಿರಿ, ನಾವು ಮಂಡ್ಯದ ಜನ ಏನ್‌ ಮಾಡಕ್ಕೂ ಹೆದರೋದಿಲ್ಲ ಎಂದೆಲ್ಲಾ ಬೆದರಿಕೆ ಒಡ್ಡಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ಮುರುಗೇಶ್‌ ಎಂಬುವರು ಸೇರಿದಂತೆ ಇನ್ನಿತರರ ವಿರುದ್ಧ ದಾಖಲಿಸಿಕೊಂಡಿದ್ದ ಪ್ರಕರಣವನ್ನೂ ವಿಚಾರಣೆಯಿಂದ ಹಿಂಪಡೆದುಕೊಂಡಿರುವುದು ಗೊತ್ತಾಗಿದೆ.

 

ಮಂಡ್ಯದ ಕಾವೇರಿ ವಾಹಿನಿ ಮೇಲಿನ ದಾಳಿ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌

 

ಟಿಪ್ಪು ಜಯಂತಿ ಆಚರಣೆ ವಿರುದ್ಧ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಾದ ಕೆ ಆರ್‌ ಪ್ರದೀಪ್‌, ಮುರುಳೀಧರನ್‌, ಗಿರೀಶ್‌, ಮಹದೇವಸ್ವಾಮಿ (ಬಿಜೆಪಿಯ ಯುವ ಮೋರ್ಚಾ ಗ್ರಾಮಾಂತರ) ಸೇರಿದಂತೆ ಮತ್ತಿತರರು ಸುಮಾರು 40-50 ಮಂದಿ ಅಕ್ರಮ ಕೂಟ ಕಟ್ಟಿಕೊಂಡು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ 2016ರ ನವೆಂಬರ್‌ 7ರಂದು ಲಕ್ಷ್ಮೀಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನ್ವಯ ಈ ಪ್ರಕರಣವನ್ನೂ ವಿಚಾರಣೆಯಿಂದ ಹಿಂಪಡೆದುಕೊಂಡಿರುವುದು ಆರ್‌ಟಿಐ ದಾಖಲೆಯಿಂದ ತಿಳಿದು ಬಂದಿದೆ.

 

ಸಾರ್ವಜನಿಕ ಸಭೆ, ಸಮಾರಂಭ, ರ್ಯಾಲಿ, ಪ್ರತಿಭಟನೆ, ಮೆರವಣಿಗೆ ನಿಷೇದಿಸಿದ್ದರೂ ಮೈಸೂರು ಜಿಲ್ಲೆಯಿಂದ ಮಂಗಳೂರು ಚಲೋ ಬೈಕ್‌ ರ್ಯಾಲಿಯನ್ನು ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಟಿನರಸೀಪುರ ಠಾಣೆಯಲ್ಲಿ 2017ರ ಸೆಪ್ಟಂಬರ್‌ 6ರಂದು ಎಫ್‌ ಐ ಆರ್‌ ದಾಖಲಾಗಿತ್ತು. ಸಚಿವ ಸಂಪುಟ ಉಪ ಸಮಿತಿ ಶಿಫಾರಸ್ಸಿನ ಅನ್ವಯ ಈ ಪ್ರಕರಣವನ್ನು ಅಭಿಯೋಜನೆಯಿಂದ ಹಿಂಪಡೆದುಕೊಂಡಿದೆ.

 

‘ರಾಣೆಬೆನ್ನೂರನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಅಲ್ಲದೇ ತುಘಲಕ್‌ ಆಡಳಿತ ರಾಜ್ಯದಲ್ಲಿ ನಡೆಯುತ್ತಿದೆ. ಹಿಂದೂಗಳೆಲ್ಲ ಒಂದಾಗಬೇಕು, ಡಿಸೆಂಬರ್‌ 6ರಂದು ಮತಾಂಧ ನೊಂದ ಸಮುದಾಯ ಈ ವರ್ಷ ಕರಾಳ ಆಚರಣೆ ಮಾಡುತ್ತಿದ್ದು ನಾವು ಶೌರ್ಯ ದಿನವನ್ನು ಆಚರಣೆ ಮಾಡಬಾರದು. ಹೊನ್ನಾವರದಲ್ಲಿ ಪರೇಶ್‌ ಮೇಸ್ತಾನನ್ನು ಹತ್ಯೆ ಮಾಡಲಾಗಿದೆ. ನಮ್ಮಲ್ಲಿ ಅಂತಹ ಘಟನೆ ಆಗಬಹುದು,’ ಎಂದು ಕೋಮು ಭಾವನೆಗಳನ್ನು ಉದ್ರೇಕಿಸಿ, ಜಾತ್ಯತೀತತೆಗೆ ಧಕ್ಕೆ ತರುವ ರೀತಿಯಲ್ಲಿ, ಧರ್ಮ ಧರ್ಮದ ಮಧ್ಯೆ ಕೋಮು ಭಾವನೆಗಳನ್ನು ಉದ್ರೇಕಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತೆ ಮಾತಾಡಿದ ಅಪರಾಧದ ಮೇಲೆ ಅಜಯ ಗದಿಗೆಯ್ಯ ಸೇರಿದಂತೆ ಇತರರ ವಿರುದ್ಧ 2017ರ ಡಿಸೆಂಬರ್‌ 15ರಂದು ದಾಖಲಾಗಿದ್ದ ಪ್ರಕರಣವನ್ನೂ ಹಿಂಪಡೆದುಕೊಳ್ಳಲಾಗಿದೆ.

 

‘ಪರವಾನಿಗೆ ಪಡೆದು ದನ ಮತ್ತು ಹೋರಿಗಳನ್ನು ಸಾಗಿಸುತ್ತಿದ್ದರೂ ದನಗಳನ್ನು ಮಾರಾಟಕ್ಕೆ ಒಯ್ಯುತ್ತೀಯಾ, ನಿನ್ನ ಬಳಿ ಇರುವ ಹಣವನ್ನು ಕೊಡದಿದ್ದರೇ ವಾಹನಕ್ಕೆ ಬೆಂಕಿ ಹಚ್ಚುತ್ತೇವೆ ಎಂದು ಹೆದರಿಸಿದ್ದ,’ ಎಂಬ ಆರೋಪದ ಮೇರೆಗೆ ಸಾಗರ ತಾಲೂಕಿನ ಪೊಲೀಸ್‌ ಠಾಣೆಯಲ್ಲಿ ಲಕ್ಷ್ಮಿನಾರಾಯಣ ಗಣಪತಿ ಎಂಬುವರು ಸೇರಿದಂತೆ ಒಟ್ಟು 7 ಮಂದಿ ವಿರುದ್ಧ 2018ರ ನವೆಂಬರ್‌ 25ರಂದು ದಾಖಲಾಗಿದ್ದ ಮೊಕದ್ದಮೆಯನ್ನು ವಾಪಸ್‌ ಪಡೆದುಕೊಂಡಿದೆ.

 

ಹೊನ್ನಾವರ ಪಟ್ಟಣದಲ್ಲಿ ನಡೆದ ಕೋಮು ಗಲಭೆಯಲ್ಲಿ ಮೃತಪಟ್ಟ ಪರೇಶ ಮೇಸ್ತ ಮತ್ತು ಆತನ ಸಾವಿನ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಬಂದ್‌ಗೆಕರೆನೀಡಿ ವಾಟ್ಸಾffನಲ್ಲಿ ಪ್ರಚೋದನಾಕಾರಿ ಸಂದೇಶ ಹರಿಬಿಟ್ಟು ಶಿರಸಿಯಲ್ಲಿ ನಡೆದಿದ್ದ ಗಲಭೆಗೆ ಪ್ರಕರಣ ಸಂಬಂಧ 11 ಮಂದಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂದಿನ ಸರ್ಕಾರವು ಹಿಂಪೊಡೆದುಕಂಡಿದೆ.

 

2017ರ ಡಿಸೆಂಬರ್‌ 12ರಂದು ಶಿರಸಿ ಬಂದ್‌ ಮಾಡಿದ್ದ ಸಂದರ್ಭದಲ್ಲಿ ಅಹಲ್ಯೆ ಹದೀಸ್‌ ಜಮಾತಗೆ ಸೇರಿದ ಜಾಮೀಯಾ ಮಸೀದಿಯ ಹತ್ತಿರ ಹೋಗಿ ಅವಾಚ್ಯವಾಗಿ ಬೈದು, ಮಸೀದಿ ಸುಡುತ್ತೇವೆ, ಮುಸಲ್ಮಾನರನ್ನು ಜೀವಂತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದ ಸುಮಾರು 100ರಿಂದ 150 ರಷ್ಟಿದ್ದ ಉದ್ರಿಕ್ತ ಗುಂಪು ಮಸೀದಿ ಬಾಗಿಲು, ಕಿಟಕಿಗಳಿಗೆ ಸಿಸಿ ಕ್ಯಾಮರಾಕ್ಕೆ ಕಲ್ಲು ಹೊಡೆದು ಧ್ವಂಸ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಪ್ರಕರಣವನ್ನು ವಾಪಸ್‌ ಪಡೆದಿರುವುದು ಆರ್‌ಟಿಐ ದಾಖಲೆಯಿಂದ ಗೊತ್ತಾಗಿದೆ.

Tags: ABVPAraga JnanendrabjpCriminalD K ShivakumarDR G Parameshwarh d kumarswamyhome departmentHome MinisterMadhugirimodiRTISiddaramaiahaಅಭಿಯೋಜನೆಆರಗ ಜ್ಞಾನೇಂದ್ರಎಬಿವಿಪಿಒಳಾಡಳಿತಕೋಮು ಗಲಭೆಕ್ರಿಮಿನಲ್‌ಗೃಹ ಇಲಾಖೆಡಾ ಜಿ ಪರಮೇಶ್ವರ್‌ಡಿ ಕೆ ಶಿವಕುಮಾರ್ಡಿಜಿಐಜಿಪಿತನಿಖೆನ್ಯಾಯಾಲಯಪೊಲೀಸ್‌ ಠಾಣೆಪ್ರಕರಣಪ್ರಚೋದನೆಬಸವರಾಜ ಬೊಮ್ಮಾಯಿಬಿಜೆಪಿ ಕಾರ್ಯಕರ್ತರುಮಂಗಳೂರುಮಧುಗಿರಿ ಮೋದಿಮೊಕದ್ದಮೆರಜನೀಶ್‌ ಗೋಯಲ್ವಿಚಾರಣೆವಿಧಾನಸಭೆಸಚಿವ ಸಂಪುಟಸಿಆರ್‌ಪಿಸಿಸಿದ್ದರಾಮಯ್ಯಹಿಂತೆಗೆತಹಿಂದೂ ಸಂಘಟನೆಗಳುಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಉಚಿತ ವಿದ್ಯುತ್‌ ಕೇವಲ 2.14 ಕೋಟಿ ಕುಟುಂಬಗಳಿಗಷ್ಟೇ ಪ್ರಯೋಜನ; ಅಂಕಿಅಂಶಗಳು ದೋಷಪೂರಿತವೇ?

Next Post

ಉಚಿತ ಪ್ರಯಾಣದ ‘ಶಕ್ತಿ’; ಆದಾಯ ಖೋತಾ, ಸಿಬ್ಬಂದಿ ವೇತನಕ್ಕೆ ಅಡಚಣೆ, ಪ್ರಯಾಣ ದರ ಪರಿಷ್ಕರಣೆ?

thefilestack

thefilestack

Next Post

ಉಚಿತ ಪ್ರಯಾಣದ 'ಶಕ್ತಿ'; ಆದಾಯ ಖೋತಾ, ಸಿಬ್ಬಂದಿ ವೇತನಕ್ಕೆ ಅಡಚಣೆ, ಪ್ರಯಾಣ ದರ ಪರಿಷ್ಕರಣೆ?

Recommended

ಪಾಂಡವಪುರ ಸಕ್ಕರೆ ಕಾರ್ಖಾನೆ; 3 ವರ್ಷವಾದರೂ ಗುತ್ತಿಗೆ ಒಪ್ಪಂದ ನೋಂದಣಿ ಮಾಡಿಸದ ನಿರಾಣಿ ಶುಗರ್ಸ್‌

3 years ago

ಪ್ರಶಾಂತ್‌ನೊಂದಿಗೇ ಬಂಧನಕ್ಕೊಳಗಾದ ನಿಕೋಲಸ್‌; 20 ಕೋಟಿ ಅವ್ಯವಹಾರ ಪ್ರಕರಣಕ್ಕೆ ಮರುಜೀವ?

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd