the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LOKAYUKTA

ಮೀನಮೇಷ; ಮಾಡಾಳು ಪ್ರಶಾಂತ್‌ ವಿರುದ್ಧ ದಾಖಲಾಗದ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮೊಕದ್ದಮೆ

thefilestack by thefilestack
May 12, 2023
in LOKAYUKTA
0
0
SHARES
0
VIEWS
Share on FacebookShare on Twitter

ಬೆಂಗಳೂರು; ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಕಾರ್ಯಾದೇಶ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಎಂ ವಿ ಪ್ರಶಾಂತ್ ಕುಮಾರ್ ವಿರುದ್ಧ ಇದುವರೆಗೂ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮೊಕದ್ದಮೆ ದಾಖಲು ಮಾಡಿಲ್ಲ.

 

ಕಾರ್ಯಾಚರಣೆ ವೇಳೆ ಎಂಟು ಕೋಟಿ ರು.ಗಿಂತ ಹೆಚ್ಚು ನಗದು ಪತ್ತೆಯಾದ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ತನಿಖೆ ಕೈಗೊಳ್ಳುವಂತೆ ಲೋಕಾಯುಕ್ತ ಪೊಲೀಸರು  ಪತ್ರ ಬರೆದಿದ್ದರೂ ಇದುವರೆಗೂ ಜಾರಿ ನಿರ್ದೇಶನಾಲಯ ಸುಳಿದಿಲ್ಲ.

 

ಮೆರ್ಸೆಸ್ ಡಿಲಿಸಿಯಾ ಕೆಮಿಕಲ್ಸ್ ಕಂಪೆನಿಯಿಂದ ಕೆಮಿಕಲ್ ಆಯಿಲ್ ಖರೀದಿಯ ಕುರಿತ ಕೆಎಸ್‌ಡಿಎಲ್ ಟೆಂಡರ್ ಕಾರ್ಯಾದೇಶ ನೀಡಲು ಪ್ರತಿಯಾಗಿ 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಪ್ರಶಾಂತ್‌ ಮಾಡಾಳು ಅವರ ಮನೆ ಮೇಲೂ ದಾಳಿ ನಡೆದಿತ್ತು. ಆ ವೇಳೆಯಲ್ಲಿ 6 ಕೋಟಿಗೂ ಹೆಚ್ಚಿನ ಮೊತ್ತ ಇದ್ದದ್ದನ್ನು ಕಂಡು ಲೋಕಾಯುಕ್ತ ಪೊಲೀಸರೇ ಹುಬ್ಬೇರಿಸಿದ್ದರು.

 

ಪ್ರಶಾಂತಕುಮಾರ್‌ ಮಾಡಾಳು ವಿರುದ್ದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆಯೇ ವಿನಃ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಮೊಕದ್ದಮೆ ದಾಖಲಾಗಿಲ್ಲ. ಸಾಮಾನ್ಯವಾಗಿ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ ನಂತರ ಲೋಕಾಯುಕ್ತ ಪೊಲೀಸರು ತಕ್ಷಣವೇ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮೊಕದ್ದಮೆ ದಾಖಲು ಮಾಡುತ್ತಿದ್ದರು. ಪ್ರಶಾಂತ್‌ ಮಾಡಾಳು ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮೊಕದ್ದಮೆ ದಾಖಲಿಸಲು ಮೀನಮೇಷ ಎಣಿಸುತ್ತಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಈಗಾಗಲೇ ಪ್ರಶಾಂತ್‌ ಮಾಡಾಳು ಅವರಿಗೆ ಕರ್ನಾಟಕ ಹೈಕೋರ್ಟ್‌ ಕೆಲ ದಿನಗಳ ಹಿಂದೆಯಷ್ಟೇ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಲಂಚ ಸ್ವೀಕಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮೊದಲ ಆರೋಪಿಯಾಗಿದ್ದರೆ, ಅವರ ಪುತ್ರ ಪ್ರಶಾಂತ್ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ಪ್ರಶಾಂತ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಏಪ್ರಿಲ್‌10ರಂದು ವಜಾಗೊಳಿಸಿತ್ತು.

 

ಇದರಿಂದ, ಪ್ರಶಾಂತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೇ ಪ್ರಕರಣದಲ್ಲಿ ಮಾರ್ಚ್‌ 27ರಂದು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ವಿಚಾರಣಾಧೀನ ನ್ಯಾಯಾಲಯ ಏ.15ರಂದು ಜಾಮೀನು ಮಂಜೂರು ಮಾಡಿತ್ತು.

 

ಕೆಎಸ್​ಡಿಎಲ್ ಅಧ್ಯಕ್ಷರೂ ಆಗಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್‌ ಅವರ ಖಾಸಗಿ ಒಟ್ಟು 2.02 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ 6 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿತ್ತು ಖುದ್ದು ಲೋಕಾಯುಕ್ತ ಪೊಲೀಸರೇ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದನ್ನು ಸ್ಮರಿಸಬಹುದು.

Tags: B S PatilBasavaraj BommaiChannagiriD K ShivakumarDA CaseDisproportionate AssetsH D KumaraswmaylokayuktaLokayukta ADGPLokayukta RaidMadalu VirupakshappaPrashanth MadaluSiddaramaiahaಅಕ್ರಮ ಆಸ್ತಿಆದಾಯಕ್ಕೂ ಮೀರಿದ ಆಸ್ತಿಎಸಿಬಿಕೆಎಸ್‌ಡಿಎಲ್‌ಜಾಮೀನುಟ್ರ್ಯಾಪ್‌ಡಿ ಕೆ ಶಿವಕುಮಾರ್ನಿರೀಕ್ಷಣಾ ಜಾಮೀನುಪ್ರಶಾಂತ ಮಾಡಾಳುಬಸವರಾಜ ಬೊಮ್ಮಾಯಿಬಿ ಎಸ್‌ ಪಾಟೀಲ್‌ಮಾಡಾಳುಮಾಡಾಳು ವಿರೂಪಾಕ್ಷಪ್ಪಮೈಸೂರು ಸ್ಯಾಂಡಲ್‌ ಸೋಪ್‌ಲೋಕಾಯುಕ್ತಲೋಕಾಯುಕ್ತ ದಾಳಿವಿರೂಪಾಕ್ಷಪ್ಪಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಆರೋಗ್ಯ ಕವಚ ಟೆಂಡರ್‌; ನ್ಯಾಯಾಲಯದ ವಿಚಾರಣೆಗಳ ಸಂಖ್ಯೆ ಮುಚ್ಚಿಟ್ಟು ಪಿಎಸಿಯನ್ನೇ ಕತ್ತಲೆಯಲ್ಲಿಟ್ಟಿದ್ದ ಸರ್ಕಾರ

Next Post

ಭ್ರಷ್ಟಾಚಾರ, ಅಧಿಕಾರ-ಹಣ ದುರುಪಯೋಗ, ಅಕ್ರಮಗಳ ಸುತ್ತ ‘ದಿ ಫೈಲ್‌’ನ ಪ್ರಮುಖ 130 ವರದಿಗಳು

thefilestack

thefilestack

Next Post

ಭ್ರಷ್ಟಾಚಾರ, ಅಧಿಕಾರ-ಹಣ ದುರುಪಯೋಗ, ಅಕ್ರಮಗಳ ಸುತ್ತ 'ದಿ ಫೈಲ್‌'ನ ಪ್ರಮುಖ 130 ವರದಿಗಳು

Recommended

ಸಿದ್ದರಾಮಯ್ಯ ವಿರುದ್ಧ ಆರೋಪ; ಆಯೋಗಕ್ಕೆ ದಾಖಲೆ ಸಲ್ಲಿಸದ ಬಿಜೆಪಿ ಒದಗಿಸಿದ್ದು ಪತ್ರಿಕಾ ತುಣುಕುಗಳಷ್ಟೆ

6 years ago

ರಿಯಲ್‌ ಎಸ್ಟೇಟ್‌ ಕಂಪನಿಗಳಿಗೆ ಸರ್ಕಾರಿ ಜಮೀನು ಪರಭಾರೆ; ಉದ್ಯೋಗ ಸೃಷ್ಟಿಯ ಉದ್ದೇಶವೇ ಮಣ್ಣುಪಾಲು

10 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd