the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಲೈಸೆನ್ಸ್‌ಗೆ ‘ಪಿಂಕ್‌’ ನೋಟ್‌ ಕೊಡಿ; ವಾಟ್ಸಾಪ್‌ ಸಂದೇಶ ಕಳಿಸಿ ಭ್ರಷ್ಟಾಚಾರ ಬೆಂಬಲಿಸಿದ ಅಧಿಕಾರಿ

thefilestack by thefilestack
January 27, 2021
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಹಳೆಯ 100 ರು. ಮುಖಬೆಲೆ ನೋಟುಗಳನ್ನು ಅಮಾನ್ಯ ಮಾಡಲಾಗುತ್ತದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಪತ್ರಿಕಾ ಪ್ರಕಟಣೆ ಹೊರಡಿಸಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಸರ್ಕಾರಿ ಇಲಾಖೆಗಳಲ್ಲಿರುವ ಲಂಚಕೋರ ಅಧಿಕಾರಿಗಳು 100ರ ಮುಖಬೆಲೆ ನೋಟುಗಳಿಗೆ ಬದಲಾಗಿ ಗುಲಾಬಿ ಬಣ್ಣ ಹೊಂದಿರುವ 2,000 ರು. ಮುಖಬೆಲೆ ನೋಟುಗಳನ್ನು ಕೊಡಿ ಎಂದು ಕೇಳಲಾರಂಭಿಸಿದ್ದಾರೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯೊಳಗೆ ಬರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಂಟಿ ಆಯುಕ್ತ ಡಾ ಹರ್ಷವರ್ಧನ್‌ ಎಂಬುವರು ಇಲಾಖೆಯ ಅಧಿಕಾರಿಗಳ ಗ್ರೂಪ್‌ಗೆ ಇಂತದ್ದೊಂದು ಸಂದೇಶವನ್ನು ಹರಿಬಿಟ್ಟಿದ್ದಾರೆ. ಸಂದೇಶವನ್ನು ಗ್ರೂಪ್‌ಗೆ ಹಾಕಿದ್ದರಿಂದ ಭ್ರಷ್ಟಾಚಾರವನ್ನು ಹರ್ಷವರ್ಧನ್‌ ಅವರು ಬೆಂಬಲಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಅವರನ್ನು ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರಾಗಿರುವ ಐಎಎಸ್‌ ಅಧಿಕಾರಿ ಮಂಜುಶ್ರೀ ಅವರು ಹರ್ಷವರ್ಧನ್‌ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮಾತೃ ಇಲಾಖೆಯಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಿದ್ದಾರೆ. ಈ ಸಂಬಂಧ 2021ರ ಜನವರಿ 21ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಹಳೆಯ 100 ರು.ಮುಖಬೆಲೆಯ ನೋಟುಗಳು ಅಮಾನ್ಯ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಇತ್ತೀಚೆಗಷ್ಟೇ ಪ್ರಕಟಣೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳ ವಾಟ್ಸಾಪ್‌ ಗ್ರೂಪ್‌ನಲ್ಲಿ ಹರ್ಷವರ್ಧನ್‌ ಅವರು ಸಂದೇಶವನ್ನು ಕಳಿಸಿದ್ದರು. ‘ನಾವು ಇನ್ನು ಮೇಲೆ ಎಫ್‌ಎಸ್‌ಎಸ್‌ಎಐ ಲೈಸೆನ್ಸ್‌ಗಾಗಿ ಪಿಂಕ್‌ ನೋಟ್‌ ಕೊಡಿ ಅಂತ ಪೇಪರ್‌ಗೆ ಹಾಕಿಸಬೇಕು,’ ಎಂದು ಸಂದೇಶ ಕಳಿಸಿದ್ದರು. ಈ ಸಂದೇಶದ ಸ್ಕ್ರೀನ್‌ ಶಾಟ್‌ ಸಹ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಇಲಾಖೆ ಅಧಿಕಾರಿಗಳ ವಾಟ್ಸಾಪ್‌ ಗ್ರೂಪ್‌ನಲ್ಲಿ ಇದು ಚರ್ಚೆಗೆ ಒಳಗಾಗುತ್ತಿದ್ದಂತೆ ಗ್ರೂಪ್‌ನಲ್ಲಿದ್ದ ಇಲಾಖೆಯ ಆಯುಕ್ತರಾದ ಮಂಜುಶ್ರೀ ಅವರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ‘ಸದರಿ ಅಧಿಕಾರಿಗಳು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸರ್ಕಾರದ ಅಧಿಕಾರಿಗಳಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುತ್ತಾರೆ. ಈ ನಡವಳಿಕೆಯು ಕರ್ನಾಟಕ ನಾಗರಿಕ ಸೇವಾ (ಸಿಸಿಎ) ನಿಯಮಗಳು 1957ಗೆ ವಿರುದ್ಧವಾಗಿರುತ್ತದೆ. ಇಂತಹ ಅಧಿಕಾರಿಗಳ ಸೇವೆಯು ಈ ಇಲಾಖೆಗೆ ಅವಶ್ಯಕವಿರುವುದಿಲ್ಲ. ಹೀಗಾಗಿ ಇವರನ್ನು ಮಾತೃ ಇಲಾಖೆಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಲಾಗಿದೆ,’ ಎಂದು ಜನವರಿ 21ರಂದು ಹೊರಡಿಸಿರುವ ಅಧಿಕೃತ ಜ್ಞಾಪನಾ ಪತ್ರದಲ್ಲಿ ವಿವರಿಸಿದ್ದಾರೆ.

ಡಾ ಹರ್ಷವಧನ್‌ ಅವರು ಮಂಡ್ಯ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 1995ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಆರಂಭಿಸಿದ್ದರು. ಇದಾದ ನಂತರ ತಾಲೂಕು ಆರೋಗ್ಯ ಅಧಿಕಾರಿ, ಉಪ ನಿರ್ದೇಶಕ, ಶಿಷ್ಟಾಚಾರ, ನೋಡಲ್‌ ಅಧಿಕಾರಿ ಆ ನಂತರ ಆಹಾರ ಸುರಕ್ಷತೆ ಇಲಾಖೆಯ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags: b l santhoshB S YediyurappaBJP KarnatakaChief SecretaryD K ShivakumarDMonetizationDR Harshavardhandr k sudhakarfood securityFSSAIh d kumarswamyHealth and FamilyINC KarnatakaJawaid AkhtarKPCCLicenceManjusri IASMinistry of Health and Family WelfareN RavikumarP RavikumarPankaj Kumar PandeyRBISiddaramaiahಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಆರ್‌ಬಿಐಆಹಾರ ಸುರಕ್ಷತೆಆಹಾರ ಸುರಕ್ಷತೆ ಗುಣಮಟ್ಟ ಪ್ರಾಧಿಕಾರಎಚ್‌ ಡಿ ಕುಮಾರಸ್ವಾಮಿಎನ್‌ ರವಿಕುಮಾರ್‌ಕೆಪಿಸಿಸಿಜಾವೇದ್‌ ಅಖ್ತರ್‌ಡಾ ಕೆ ಸುಧಾಕರ್‌ಡಾ ಹರ್ಷವರ್ಧನ್‌ಡಿ ಕೆ ಶಿವಕುಮಾರ್ನೋಟು ಅಮಾನ್ಯಪಂಕಜಕುಮಾರ್‌ ಪಾಂಡೆಪರವಾನಿಗಿಪಿ ರವಿಕುಮಾರ್‌ಬಿ ಎಲ್‌ ಸಂತೋಷ್‌ಬಿ ಎಸ್‌ ಯಡಿಯೂರಪ್ಪಬಿಜೆಪಿ ಕರ್ನಾಟಕಮಂಜುಶ್ರೀ ಐಎಎಸ್‌ಮುಖ್ಯ ಕಾರ್ಯದರ್ಶಿಸಿದ್ದರಾಮಯ್ಯ
Advertisement Banner
Previous Post

ಲಂಚ; ಆರೋಪಿತ ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌, ವಿಧಾನಸಭೆ ಸಚಿವಾಲಯದ ನೌಕರ

Next Post

ಬಿಎಸ್‌ವೈ, ನಿರಾಣಿ ವಿರುದ್ಧದ ಪ್ರಕರಣ ಮುಕ್ತಾಯ; ಕಡತ ನೀಡಲು ಎಸಿಬಿ ನಿರಾಕರಣೆ

thefilestack

thefilestack

Next Post

ಬಿಎಸ್‌ವೈ, ನಿರಾಣಿ ವಿರುದ್ಧದ ಪ್ರಕರಣ ಮುಕ್ತಾಯ; ಕಡತ ನೀಡಲು ಎಸಿಬಿ ನಿರಾಕರಣೆ

Discussion about this post

Recommended

ಗೃಹ ಲಕ್ಷ್ಮಿ ಯೋಜನೆ; ಹೋರ್ಡಿಂಗ್ಸ್‌, ಸಾರಿಗೆ ಬಸ್‌ ಬ್ರ್ಯಾಂಡಿಂಗ್‌, ಜಾಹೀರಾತಿಗೆ 8.90 ಕೋಟಿ ರು.ವೆಚ್ಚ

3 years ago

ಬಿಜೆಪಿ ಸರ್ಕಾರದ ಅವಧಿಯ ಬೊಕ್ಕಸದಲ್ಲಿ 24,714.77 ಕೋಟಿ ರು ನಗದು ಬಾಕಿ; ಕಾಂಗ್ರೆಸ್‌ ಸರ್ಕಾರದಲ್ಲಿ ಎಷ್ಟಿದೆ?

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd