the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ವಿಶೇಷ ಲೆಕ್ಕಪರಿಶೋಧನೆಗೆ ನಕಾರ; ಪಿಎಸಿಯೊಂದಿಗೆ ಸಂಘರ್ಷಕ್ಕಿಳಿದ ಆರೋಗ್ಯ ಇಲಾಖೆ

ಜಿ ಮಹಂತೇಶ್ by ಜಿ ಮಹಂತೇಶ್
September 8, 2020
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಜತೆ ಸಂಘರ್ಷಕ್ಕಿಳಿದಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಉತ್ತರಿಸಬೇಕಿದ್ದ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರು ನೇರವಾಗಿ ಪ್ರಧಾನ ಮಹಾಲೇಖಪಾಲರಿಗೆ 2020ರ ಆಗಸ್ಟ್‌ 27ರಂದು ಪತ್ರ ಬರೆದಿರುವುದು ಸಮಿತಿಯ ಕೆಂಗಣ್ಣಿಗೆ ಗುರಿಯಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಅವರು 2020ರ ಆಗಸ್ಟ್‌ 12ರಂದು ಬರೆದಿದ್ದ ಪತ್ರವನ್ನು ಉಲ್ಲೇಖಿಸಿ ನೇರವಾಗಿ ಸಿಎಜಿಗೆ ಉತ್ತರ ಬರೆದಿರುವ ಜಾವೇದ್‌ ಅಖ್ತರ್‌ ಅವರು ಸಂಘರ್ಷದ ಕಿಡಿ ಹೊತ್ತಿಸಿದ್ದಾರೆ.

ವೈದ್ಯಕೀಯ ಸಲಕರಣೆಗಳನ್ನು ಮಾರುಕಟ್ಟೆ ದರಕ್ಕಿಂತಲೂ ದುಪ್ಪಟ್ಟು ದರದಲ್ಲಿ ಖರೀದಿಸಿದೆ ಎಂಬ ಸಾಲುಸಾಲು ಆರೋಪಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸಲು ಭಾರತದ ಪ್ರಧಾನ ಮಹಾಲೇಖಪಾಲರು (ಸಿಎಜಿ) ತಗಾದೆ ಎತ್ತಿರುವ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೂ ಇದೀಗ ವಿಶೇಷ ಲೆಕ್ಕಪರಿಶೋಧನೆಗೆ ನಕಾರ ವ್ಯಕ್ತಪಡಿಸಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ವಿಶೇಷ ಲೆಕ್ಕಪರಿಶೋಧನೆ ನಡೆಸುವ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿದ್ದ ಸೂಚನೆಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಾಲಿಸದ ಕಾರಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರಿಗೆ ಈ ಸಂಬಂಧ ಪತ್ರ ಬರೆದಿತ್ತು.

ಸಿಎಜಿಗೆ ಬರೆದಿರುವ ಪತ್ರದಲ್ಲೇನಿದೆ?

‘ಕೋವಿಡ್‌-19ರ ನಿರ್ವಹಣೆಗಾಗಿ ವಿವಿಧ ಸಂಸ್ಥೆಗಳ ಮೂಲಕ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯು ಪಾರದರ್ಶಕವಾಗಿದೆ. ಹೀಗಾಗಿ ವಿಶೇಷ ಲೆಕ್ಕಪರಿಶೋಧನೆ ನಡೆಸಲು ಇಲಾಖೆ ಬಳಿ ಯಾವ ಸಮರ್ಥನೆಗಳೂ ಇಲ್ಲ ಮತ್ತು ಅದರ ಅಗತ್ಯವೂ ಇಲ್ಲ. ಇಲಾಖೆ ನೇರವಾಗಿ ಪ್ರಧಾನ ಮಹಾಲೇಖಪಾಲರಿಗೆ ದಾಖಲಾತಿ ಮತ್ತು ಮಾಹಿತಿಗಳನ್ನು ಒದಗಿಸಲಾಗುವುದು. ಹೀಗಾಗಿ ವಿಶೇಷ ಲೆಕ್ಕ ಪರಿಶೋಧನೆ ನಡೆಸಲು ಯಾವ ಸಮರ್ಥನೆ ಮತ್ತು ಕಾರಣಗಳೂ ಇಲ್ಲ,’ ಎಂದು ಜಾವೇದ್‌ ಅಖ್ತರ್‌ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ವಿಶೇಷ ಲೆಕ್ಕಪರಿಶೋಧನೆ ನಡೆಸಲು ತಕರಾರು ಎತ್ತಿದ್ದ ಸಿಎಜಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬರೆದಿರುವ ಪತ್ರವನ್ನು ನೆಪ ಮಾಡಿಕೊಂಡು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸೂಚನೆಯನ್ನು ಪಾಲಿಸದಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಗಳನ್ನೂ ವಾರ್ಷಿಕ ಕಾರ್ಯನಿರ್ವಹಣೆ ಲೆಕ್ಕ ಪರಿಶೋಧನೆಯೊಳಗೆ ತರಲು ನಿರ್ಧರಿಸಿರುವ ಸಿಎಜಿಯು ವಿಶೇಷ ಲೆಕ್ಕ ಪರಿಶೋಧನೆ ನಡೆಸುವುದಿಲ್ಲ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ರವಾನಿಸಿದ್ದ ಪರೋಕ್ಷ ಸಂದೇಶ ತೀವ್ರ ಆಕ್ಷೇಪಕ್ಕೊಳಗಾಗಿತ್ತು.

ವಿಶೇ‍ಷ ಲೆಕ್ಕ ಪರಿಶೋಧನೆ ನಡೆಸುವ ಸಂಬಂಧ ನಡೆದಿದ್ದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಭಾಗವಹಿಸಿದ್ದರು. ಅದೇ ಸಂದರ್ಭದಲ್ಲೇ ವಿಶೇಷ ಲೆಕ್ಕ ಪರಿಶೋಧನೆ ನಡೆಸಲು ಸಿಎಜಿಗೆ ಸೂಚಿಸಿ ಪತ್ರ ಬರೆಯಲು ಸಮಿತಿ ಸೂಚಿಸಿತ್ತು. ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪತ್ರವನ್ನು ಬರೆಯಲಿಲ್ಲ. ಸಾರ್ವಜನಿಕ ಲೆಕ್ಕಪತ್ರ ಸಮಿತಿಯೇ ನೇರವಾಗಿ ಸಿಎಜಿಗೆ 2020ರ ಆಗಸ್ಟ್‌ 5ರಂದು ಪತ್ರ ಬರೆದಿತ್ತು.

ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಕ್ರಮಗಳು ನಡೆದಿಲ್ಲ ಎನ್ನುವುದಾದರೆ ವಿಶೇಷ ಲೆಕ್ಕಪರಿಶೋಧನೆ ನಡೆಸಲು ಹಿಂದೇಟು ಹಾಕುತ್ತಿರುವುದೇಕೆ, ಒಂದು ವೇಳೆ ವಿಶೇಷ ಲೆಕ್ಕ ಪರಿಶೋಧನೆ ನಡೆದೇ ಬಿಡಬಹುದು ಎಂಬ ಭಯದಿಂದ ಇಡೀ ಪ್ರಕ್ರಿಯೆಯನ್ನು ಅಧಿಕಾರಶಾಹಿಯು ಕೆಂಪು ಪಟ್ಟಿಯ ಅಡಿಯಲ್ಲಿ ಮುಚ್ಚಿ ಹಾಕಲು ಇಂತಹ ನಿಯಮಬಾಹಿರ ಪತ್ರ ವ್ಯವಹಾರ ನಡೆಸುತ್ತಿದೆ. ಪಿಎಸಿಯು ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಬದ್ಧತೆ ಮತ್ತು ಪ್ರಾಮಾಣಿಕತೆ ತೋರಿಸುತ್ತದೆ ಎಂಬ ವಿಶ್ವಾಸವಿದೆ.
ರವಿಕೃಷ್ಣಾರೆಡ್ಡಿ, ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ

ಈ ಪತ್ರಕ್ಕೆ 2020ರ ಆಗಸ್ಟ್‌ 18ರಂದು ಉತ್ತರಿಸಿರುವ ಪ್ರಧಾನ ಲೇಖಪಾಲರಾದ ಇ ಪಿ ನಿವೇದಿತ ಅವರು ‘ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಔಷಧ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿ ಕುರಿತು 2020-21ನೇ ಸಾಲಿನ ವಾರ್ಷಿಕ ಲೆಕ್ಕ ಪರಿಶೋಧನೆ ನಡೆಸಲಿದೆ. 2019-20ನೇ ಸಾಲಿಗೆ ಸಂಬಂಧಿಸಿದಂತೆ ನಡೆಸುವ ವಾರ್ಷಿಕ ಕಾರ್ಯನಿರ್ವಹಣಾ ಲೆಕ್ಕ ಪರಿಶೋಧನೆಯೊಳಗೆ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಗಳ ಲೆಕ್ಕ ಪರಿಶೋಧನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಒಂದು ತಿಂಗಳ ಕಾಲಮಿತಿಯೊಳಗೆ ಲೆಕ್ಕ ಪರಿಶೋಧನೆ ನಡೆಸುವುದು ಸಾಧ್ಯವಿಲ್ಲ,’ ಎಂದೂ ಹೇಳಿದ್ದರು.

ವೈದ್ಯಕೀಯ ಪರಿಕರಗಳ ಖರೀದಿ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿದ್ದ ಒಟ್ಟು 30 ಪ್ರಶ್ನಾವಳಿಗಳಿಗೆ ಉತ್ತರಿಸದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಶೇಷ ಲೆಕ್ಕಪರಿಶೋಧನೆ ನಡೆಸಲು ಅಸಮ್ಮತಿ ವ್ಯಕ್ತಪಡಿಸಿರುವುದು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಕಳೆದ 5 ವರ್ಷದ ಹಿಂದೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಕೋರಿಕೆ ಮೇರೆಗೆ ಬಿಡಿಎನಲ್ಲಿ ನಡೆದಿದ್ದ ಮ್ಯೂಚುವಲ್‌ ಫಂಡ್‌ ಹಗರಣದ ಕುರಿತು ವಿಶೇಷ ಲೆಕ್ಕ ಪರಿಶೋಧನೆ ನಡೆಸಿದ್ದ ಸಿಎಜಿ, ಈಗ ಕೋವಿಡ್‌-19 ಭ್ರಷ್ಟಾಚಾರದ ಕುರಿತು ವಿಶೇಷ ಲೆಕ್ಕ ಪರಿಶೋಧನೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ನಿರ್ದೇಶನವನ್ನು ಪಾಲಿಸಲು ಮುಂದಾಗಿರಲಿಲ್ಲ. ಇದು ವಿರೋಧಾಭಾಸಕ್ಕೆ ಕಾರಣವಾಗಿತ್ತು.

ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಯಾವುದೇ ರೀತಿಯಲ್ಲೂ ಅಕ್ರಮಗಳಾಗಿಲ್ಲ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಸಮರ್ಥಿಸಿಕೊಂಡಿದ್ದನ್ನು ಸ್ಮರಿಸಬಹುದು.

Tags: additional chief secretaryB S YediyurappaB SriramulucagChief SecretaryCovid-19dr k sudhakarE P Niveditah d kumarswamyH K PatilHealth and FamilyJawaid AkhtarK R RameshkumarMedical EquipmentsMurugesh NiraniPACPublic Accounts CommitteesiddaramaihaSpecial AuditT M Vijay Bhaskarಅಕ್ರಮಇ ಪಿ ನಿವೇದಿತಎಚ್‌ ಕೆ ಪಾಟೀಲ್‌ಎಚ್‌ ಡಿ ಕುಮಾರಸ್ವಾಮಿಕೆ ಆರ್‌ ರಮೇಶ್‌ಕುಮಾರ್‌ಕೋವಿಡ್‌-19ಜಾವೇದ್‌ ಅಖ್ತರ್‌ಟಿ ಎಂ ವಿಜಯಭಾಸ್ಕರ್‌ಡಾ ಕೆ ಸುಧಾಕರ್‌ಪಿಎಸಿಬಿ ಎಸ್‌ ಯಡಿಯೂರಪ್ಪಬಿ ಶ್ರೀರಾಮುಲುಮುಖ್ಯ ಕಾರ್ಯದರ್ಶಿಮುರುಗೇಶ್‌ ನಿರಾಣಿವೈದ್ಯಕೀಯ ಸಲಕರಣೆಗಳ ಖರೀದಿಸಾರ್ವಜನಿಕ ಲೆಕ್ಕಪತ್ರ ಸಮಿತಿಸಿಎಜಿಸಿದ್ದರಾಮಯ್ಯಹೆಚ್ಚುವರಿ ಮುಖ್ಯ ಕಾರ್ಯದರ್ಶಿ
Advertisement Banner
Previous Post

ಲಾಕ್‌ಡೌನ್‌ನಲ್ಲೇ ನಡೆದಿತ್ತು ಡ್ರಗ್‌ ಪಾರ್ಟಿ; ಎಫ್‌ಐಆರ್‌ನಿಂದ ಪೊಲೀಸರ ವೈಫಲ್ಯ ಬಹಿರಂಗ

Next Post

ಕನ್ನಡಿಗರಿಗೇ ಉದ್ಯೋಗ; ವರ್ಷ ಉರುಳಿದರೂ ಸದನಕ್ಕೆ ಮಂಡನೆಯಾಗದ ಮಸೂದೆ

ಜಿ ಮಹಂತೇಶ್

ಜಿ ಮಹಂತೇಶ್

Next Post

ಕನ್ನಡಿಗರಿಗೇ ಉದ್ಯೋಗ; ವರ್ಷ ಉರುಳಿದರೂ ಸದನಕ್ಕೆ ಮಂಡನೆಯಾಗದ ಮಸೂದೆ

Discussion about this post

Recommended

ಕನ್ನಡ ಭಾಷೆ ಸಮಗ್ರ ಅಭಿವೃದ್ಧಿಗೆ ವಿಧೇಯಕ; ಕಾನೂನಿನ ಮಾನ್ಯತೆಗೆ ಮುಂದಡಿಯಿಟ್ಟ ಪ್ರಾಧಿಕಾರ

4 years ago

‘ಹಣ ಕೊಟ್ಟರಷ್ಟೇ ಕೆಲಸ, ಇಲ್ಲದಿದ್ದರೇ ಕೆಲಸವೂ ಇಲ್ಲ, ಕಡತ ಕೈಗೆತ್ತಿಕೊಳ್ಳುವುದಿಲ್ಲ”; ಕಾಂಗ್ರೆಸ್‌ ಸಮಿತಿಯಿಂದಲೇ ದೂರು

7 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd