the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಶಕ್ತಿ ಸಮೀಕ್ಷೆಗೆ 25 ಲಕ್ಷ; ಎಂ2ಎಂನಿಂದ ಜಿಪಿಎಸ್‌ ದಾಖಲೆ ಪಡೆಯದ ಸಾರಿಗೆ ನಿಗಮ, ಸರ್ಕಾರದಿಂದ ಮೂರನೇ ಪತ್ರ

thefilestack by thefilestack
June 7, 2025
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು;  ಶಕ್ತಿ ಯೋಜನೆಯ ಕುರಿತು 25 ಲಕ್ಷ ರು ವೆಚ್ಚದಲ್ಲಿ ಸಮೀಕ್ಷೆ ನಡೆಸಿರುವ ಎಂ 2 ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯಿಂದ ಜಿಪಿಎಸ್‌ ದಾಖಲೆಗಳನ್ನು ಪಡೆಯುವಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮುಂದಾಗಿಲ್ಲ.

 

ಸಮೀಕ್ಷೆ ನಡೆಸಿರುವ ಭೌಗೋಳಿಕ ಸ್ಥಳಗಳ ವಿವರಗಳು, ದಾಖಲೆಗಳ ಸುರಕ್ಷತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳುವಿಕೆಗೆ ಸಂಬಂಧಿಸಿದಂತೆ  ಪ್ರತ್ಯೇಕ ಪತ್ರ  ಬರೆಯಬೇಕು ಎಂದು ಖಾಸಗಿ ಸಂಸ್ಥೆಯಾಗಿರುವ ಎಂ 2 ಎಂ ಮೀಡಿಯಾ ನೆಟ್‌ವರ್ಕ್‌ ಎಲ್‌ಎಲ್‌ಪಿಯು ಪತ್ರ ಬರೆದಿತ್ತು.

 

ಆದರೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವರ್ಷವಾದರೂ ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ.

 

ಹೀಗಾಗಿ ಸಾರಿಗೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು   2025ರ ಜೂನ್‌ 3ರಂದು ಎರಡನೇ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ದಾಖಲೆಗಳ ಸುರಕ್ಷತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳುವಿಕೆಗೆ ಸಂಬಂಧಿಸಿದಂತೆ ಸರ್ಕಾರವೇ  ಪ್ರತ್ಯೇಕ ಪತ್ರ  ಬರೆಯಬೇಕು ಎಂದು ಎಂ 2 ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯು ಬರೆದಿದ್ದ ಪತ್ರ ಅನುಸಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜಿಪಿಎಸ್‌ ದಾಖಲೆಗಳನ್ನು ಪಡೆದುಕೊಳ್ಳಬೇಕು ಎಂದು ಸಾರಿಗೆ ಇಲಾಖೆಯು 2025ರ ಮಾರ್ಚ್‌ 25ರಂದು ಪತ್ರ ಬರೆದಿತ್ತು.

 

ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸರ್ಕಾರಕ್ಕೆ ಯಾವುದೇ ಮಾಹಿತಿಯನ್ನು ಒದಗಿಸಿಲ್ಲ.  ಹೀಗಾಗಿ ಸರ್ಕಾರವು ಕೋರಿರುವ ಎಲ್ಲಾ ಮಾಹಿತಿಯನ್ನು ಎಂ2ಎಂ ಮೀಡಿಯಾ ನೆಟ್‌ವರ್ಕ್‌ನಿಂದ ಪಡೆದು ಸಲ್ಲಿಸಬೇಕು ಎಂದು ಸಾರಿಗೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕೆಎಸ್‌ಆರ್‍‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶಿಸಿರುವುದು ಪತ್ರದಿಂದ ಗೊತ್ತಾಗಿದೆ.

 

 

ಸಮೀಕ್ಷೆಯೊಂದಿಗೆ ಸಂಗ್ರಹಿಸಿದ್ದ ಜಿಪಿಎಸ್‌ ಸೇರಿದಂತೆ ಮತ್ತಿತರೆ ಗೌಪ್ಯ   ದಾಖಲೆಗಳು, ಮಾಹಿತಿಗಳು, ಕಳೆದ ಒಂದು ವರ್ಷದಿಂದಲೂ ಖಾಸಗಿ ಕಂಪನಿ ವಶದಲ್ಲೇ ಇವೆ. ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಸಮೀಕ್ಷೆ ನಡೆಸಲು ಸಾರಿಗೆ ಇಲಾಖೆಯು ಎಂ 2 ಎಂ ಮೀಡಿಯಾ ನೆಟ್‌ವರ್ಕ್ ಎಲ್‌ಎಲ್‌ಪಿಗೆ 25.00 ಲಕ್ಷ ರು.ಗಳನ್ನು ಬಿಡುಗಡೆ ಮಾಡುವುದರಲ್ಲಿ ಆಸಕ್ತಿ ವಹಿಸಿತ್ತು.   ಸಮೀಕ್ಷೆ ವರದಿಯೊಂದಿಗೆ ಸಲ್ಲಿಸದೇ ಇರುವ  ದಾಖಲೆಗಳನ್ನು ಎಂ 2 ಎಂ ನಿಂದ   ಪಡೆಯಲು ನಿರಾಸಕ್ತಿ ವಹಿಸಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಈ ಕುರಿತು 'ದಿ ಫೈಲ್‌' ಆರ್‍‌ಟಿಐ ಅಡಿಯಲ್ಲಿ ಕೋರಿದ್ದ ಮಾಹಿತಿಗೆ ಸಾರಿಗೆ ಇಲಾಖೆಯು 84 ಪುಟಗಳ ಮಾಹಿತಿ ಒಳಗೊಂಡ  ಕಡತ ಒದಗಿಸಿತ್ತು.  ಎಂ 2 ಎಂ ಮೀಡಿಯಾ ನೆಟ್‌ವರ್ಕ್‌ ಪ್ರೈವೈಟ್‌ ಲಿಮಿಟೆಡ್‌  ಬರೆದಿದ್ದ ಪತ್ರಕ್ಕೆ ಪೂರಕವಾಗಿ ಸಾರಿಗೆ ಇಲಾಖೆಯು ಪತ್ರ ಬರೆದಿರುವ ಕುರಿತು ಯಾವುದೇ ದಾಖಲೆಗಳು ಕಡತದಲ್ಲಿ ಕಂಡು ಬಂದಿರಲಿಲ್ಲ.

 

https://stack.thefile.in/2025/03/rti/30602/

 

ಶಕ್ತಿ ಯೋಜನೆ ಕುರಿತು ಸಮೀಕ್ಷೆ ನಡೆಸಲು ಎಂ 2 ಎಂ ಮೀಡಿಯಾ ಪ್ರೈವೈಟ್‌ ಲಿಮಿಟೆಡ್‌ಗೆ ಸಾರಿಗೆ ಇಲಾಖೆಯು 2023ರ ಸೆ.20ರಂದು ಆದೇಶ ಹೊರಡಿಸಿತ್ತು. ಅಲ್ಲದೇ 25.00 ಲಕ್ಷ ರು.ಗಳ ಅನುದಾನವನ್ನು ಬಿಡುಗಡೆ ಮಾಡಲು ಇದೇ ಆದೇಶದಲ್ಲಿಯೇ ಕೆಎಸ್‌ಆರ್‍‌ಟಿಸಿಗೆ ಸೂಚಿಸಿತ್ತು.

 

 

ಇದಾದ ನಂತರ 2024ರ ಜನವರಿ 22ರಂದು ಅಂತಿಮ ಸಮೀಕ್ಷಾ ವರದಿಯನ್ನು ಕೆಎಸ್‌ಆರ್‍‌ಟಿಸಿಗೆ ನೀಡಿತ್ತು. ಈ ವರದಿಯನ್ನು ಪರಿಶೀಲಿಸಿದ್ದ ಸರ್ಕಾರವು ಎಂ 2 ಎಂ ಮೀಡಿಯಾ ಪ್ರೈವೈಟ್‌ ಲಿಮಿಟೆಡ್‌  2023ರ ಆಗಸ್ಟ್‌ 31ರಂದು ನೀಡಿದ್ದ ಪತ್ರದಂತೆ ಎಲ್ಲಾ ಅಂಶಗಳನ್ನು ಒಳಗೊಂಡ ಸಮೀಕ್ಷೆ ನಡೆಸಿ ವರದಿ ನೀಡಿದೆಯೇ, ಇಲ್ಲದಿದ್ದಲ್ಲಿ ಈ ಕುರಿತು ಪರಿಶೀಲಿಸಿ ಎಲ್ಲಾ ಅಂಶಗಳನ್ನು ಒಳಗೊಂಡ ವರದಿಯನ್ನು ಪಡೆದು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಾರಿಗೆ ಇಲಾಖೆಯು ಸರ್ಕಾರದ ಕಾರ್ಯದರ್ಶಿಯು ಕೆಎಸ್‌ಆರ್‍‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ 2024ರ ಮೇ 13ರಂದು ಪತ್ರ ಬರೆದಿದ್ದರು.

 

ಈ ಪತ್ರದಂತೆ ಕೆಎಸ್‌ಆರ್‍‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಎಂ 2 ಎಂ ಮೀಡಿಯಾ ಪ್ರೈವೈಟ್‌ ಲಿಮಿಟೆಡ್‌ಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಉತ್ತರಿಸಿದ್ದ ಕಂಪನಿಯು 2024ರ ಜೂನ್‌ 24ರಂದು ಪತ್ರ ಬರೆದಿತ್ತು. ಸಮೀಕ್ಷೆ ನಡೆಸಿರುವ ಭೌಗೋಳಿಕ ಸ್ಥಳಗಳು, ದಾಖಲೆಗಳ ಸುರಕ್ಷತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳುವಿಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪತ್ರ  ಬರೆಯಬೇಕು ಎಂದೂ ಈ ಕಂಪನಿಯು ಸರ್ಕಾರದಿಂದಲೇ ಬಯಸಿತ್ತು.

 

ಈ ಕುರಿತು ಸಾರಿಗೆ ಇಲಾಖೆಯಲ್ಲಿ 2025ರ ಜನವರಿ 23ರವರೆಗೂ ಚರ್ಚೆಯಾಗಿದೆ. ಜಿಪಿಎಸ್‌ ಸೇರಿದಂತೆ ಮತ್ತಿತರೆ ದತ್ತಾಂಶ ಹಾಗೂ ದಾಖಲೆಗಳ ಗೌಪ್ಯತೆ ಕಾಯ್ದುಕೊಳ್ಳುವ ಕುರಿತು ಪ್ರತ್ಯೇಕವಾಗಿ ಪತ್ರ ಬರೆಯುವ ಕುರಿತು ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎನ್‌ ವಿ ಪ್ರಸಾದ್‌ ಅವರೊಂದಿಗೆ ಅಧಿಕಾರಿಗಳ ಮಧ್ಯೆ  ಚರ್ಚೆಯಾಗಿತ್ತು.  ಆದರೆ ಈ ಸಂಬಂಧ  ಸರ್ಕಾರವು ಪ್ರತ್ಯೇಕ ಪತ್ರ ಬರೆದಿರುವುದು  ಕಡತದಲ್ಲಿ ಕಂಡು ಬಂದಿಲ್ಲ.

 

 

2025ರ ಜನವರಿ 23ರಂದು ಈ ಕಡತವನ್ನು ಮುಕ್ತಾಯಗೊಳಿಸಿರುವುದು ತಿಳಿದು ಬಂದಿದೆ.

 

 

 

'ಸಮೀಕ್ಷೆ ನಡೆಸಲು ಸರ್ಕಾರವೇ 25.00  ಲಕ್ಷ ರು. ಹಣ ಬಿಡುಗಡೆ ಮಾಡಿದೆ. ಇದೇ ಹಣದಿಂದಲೇ ಎಂ 2 ಎಂ ಮೀಡಿಯಾ ಪ್ರೈವೈಟ್ ಲಿಮಿಟೆಡ್‌ ಸಮೀಕ್ಷೆಯನ್ನೂ ನಡೆಸಿದೆ. ಈ ಸಂಸ್ಥೆ ತನ್ನ ಪತ್ರದಲ್ಲಿ ಮೊದಲೇ ಹೇಳಿದಂತೆ ಜಿಪಿಎಸ್‌ ಸೇರಿದಂತೆ ಮತ್ತಿತರೆ ದಾಖಲೆಗಳೊಂದಿಗೆ ವರದಿಯನ್ನು ಸಲ್ಲಿಸಬೇಕಿತ್ತು.  ಈ ಯಾವ ದಾಖಲೆಗಳಿಲ್ಲದೆಯೇ ಅಂತಿಮ ವರದಿಯನ್ನೂ ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯನ್ನು ಸ್ವೀಕರಿಸಿದ್ದ ಸಕ್ಷಮ ಪ್ರಾಧಿಕಾರವೂ ಸಹ ಈ ಬಗ್ಗೆ ಗಂಭೀರವಾಗಿ ಪರಿಶೀಲಿಸಿರಲಿಲ್ಲ.

 

ಶಕ್ತಿ ಯೋಜನೆ ಸೇರಿದಂತೆ ನಾಲ್ಕು ಗ್ಯಾರಂಟಿಗಳನ್ನು 1 ಕೋಟಿ ರು ವೆಚ್ಚದಲ್ಲಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಈ ಸಂಬಂಧ ಜಿಪಿಎಸ್‌ ದಾಖಲೆ ಮತ್ತು ವಿಧಾನಸಭೆ ಕ್ಷೇತ್ರವಾರು ಫೋಟೋ ಪ್ರತಿಗಳನ್ನು ಒದಗಿಸಲಾಗುವುದು ಎಂದು ಎಂ 2 ಎಂ ಕಂಪನಿಯು  ತನ್ನ ಪತ್ರದಲ್ಲಿ ಹೇಳಿತ್ತು.  ಆದರೆ ಈ ದಾಖಲೆಗಳ  ಸಲ್ಲಿಕೆಗೆ ಸಂಬಂಧಿಸಿದಂತೆ 'ಗೌಪ್ಯತೆ' ವಿಷಯ ಕುರಿತು ಆರಂಭಿಕ ಪ್ರಸ್ತಾವದಲ್ಲಿ ಉಲ್ಲೇಖಿಸಿರಲಿಲ್ಲ ಮತ್ತು  ಪ್ರಸ್ತಾಪವನ್ನೂ ಮಾಡಿರಲಿಲ್ಲ.

 

https://stack.thefile.in/2025/03/governance/29029/

 

ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿಗೊಳಿಸಿರುವ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಸಂಸ್ಥೆಯು ಈ ಸಂಬಂಧ ಜಿಪಿಎಸ್‌ ದಾಖಲೆ, ವಿಧಾನಸಭಾ ಕ್ಷೇತ್ರವಾರು ಫೋಟೋಗಳ ಪ್ರತಿಗಳನ್ನು  ಸಲ್ಲಿಸಿಲ್ಲ ಎಂಬುದು ಆರ್‍‌ಟಿಐ ದಾಖಲೆಗಳಿಂದ ಬಹಿರಂಗವಾಗಿತ್ತು.

 

 

 

 

 

 

ಶಕ್ತಿ ಯೋಜನೆಯೂ ಸೇರಿದಂತೆ ಇನ್ನಿತರೆ ಗ್ಯಾರಂಟಿ ಯೋಜನೆಗಳನ್ನು ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಸಂಸ್ಥೆಯು 2023ರ ಆಗಸ್ಟ್‌ 31ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಸಮೀಕ್ಷೆಯನ್ನು ವೈಜ್ಞಾನಿಕ ಮಾದರಿಗಳಡಿಯಲ್ಲಿ ನಡೆಸಲಾಗುವುದು ಎಂದು ಸಂಸ್ಥೆಯ ಡಾ ಎಚ್‌ ವಿ ವಾಸು ಅವರು  ತಮ್ಮ  ಪ್ರಸ್ತಾವನೆಯಲ್ಲಿ ಹೇಳಿದ್ದರು.

 

ಎಂ2ಎಂ ಕಂಪನಿಯು ಸರ್ಕಾರಕ್ಕೆ ಸಲ್ಲಿಸಿರುವ ಸಮೀಕ್ಷಾ ಯೋಜನೆಯ ಪ್ರಸ್ತಾವನೆಯ 1ರಿಂದ 5ವರೆಗಿನ ಕ್ರಮಾಂಕದಲ್ಲಿ ವಿವರಿಸಿರುವಂತೆ ದತ್ತಾಂಶ ಸಂಗ್ರಹಣೆಗಾಗಿ ಆಧುನಿಕ ತಂತ್ರಜ್ಞಾನ ವಿಧಾನಗಳನ್ನು ಬಳಸುವುದಾಗಿ ಹೇಳಲಾಗಿತ್ತು. ಸಮೀಕ್ಷಾ ವರದಿಯನ್ನು ನೀಡುವಾಗ ಕರ್ನಾಟಕದ ಯಾವ ಯಾವ ಭಾಗಗಳಲ್ಲಿ ಜನಾಭಿಪ್ರಾಯ ಸಂಗ್ರಹಿಸಲಾಗಿದೆಯೋ ಅವುಗಳ ಜಿಪಿಎಸ್ ಲೊಕೇಷನ್‌ ಡಾಟಾ ಹಾಗೂ ಛಾಯಾಚಿತ್ರಗಳ ದಾಖಲೆ ಸಹಿತದ ವರದಿ ನೀಡುವುದಾಗಿ ಹೇಳಿತ್ತು.

 

https://stack.thefile.in/2024/03/rti/23373/

 

ತನ್ನ ಸಮೀಕ್ಷಾ ವರದಿಯ ಅಧಿಕೃತತೆ ಹಾಗೂ ಪ್ರಾಮಾಣಿಕತೆಯನ್ನು ನಿರೂಪಿಸಲು ತಾನು ಈ ಪೂರಕ ದಾಖಲೆಗಳನ್ನು ಒದಗಿಸುವುದಾಗಿ ಈ ಎಂ2ಎಂ ಕಂಪನಿಯು ತಿಳಿಸಿತ್ತು. ಆದರೀಗ ಸಾರಿಗೆ ಇಲಾಖೆಯು ನೀಡಿರುವ ಮಾಹಿತಿ ಪ್ರಕಾರ ಈ ಸಮೀಕ್ಷೆಗೆ ಅಧಿಕೃತತೆ, ಪ್ರಾಮಾಣಿಕತೆ ಮತ್ತು ವಿಶ್ವಾಸಾರ್ಹತೆ ಬಗೆಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದವು.

 

ಇಲಾಖೆಯ ಸರ್ಕಾರದ ಕಾರ್ಯದರ್ಶಿಯು  ಯಾರ ಅಭಿಪ್ರಾಯವನ್ನೂ ಪಡೆಯದೇ  ನೇರವಾಗಿ 4(ಜಿ) ವಿನಾಯಿತಿಗೆ ಕಡತ ಸಿದ್ಧಪಡಿಸಿ ಎಂದು ನಿರ್ದೇಶಿಸಿ  ಒಕ್ಕಣೆ ಹಾಕಿದ್ದು   ಆರ್‌ಟಿಐ ದಾಖಲೆಗಳಿಂದ ಬಹಿರಂಗಗೊಂಡಿತ್ತು.

 

https://stack.thefile.in/2024/01/rti/20663/

 

ಸಮೀಕ್ಷೆಗೆ 4(ಜಿ) ವಿನಾಯಿತಿ ನೀಡುವ ಮುನ್ನ ಆಡಳಿತ ಇಲಾಖೆಗಳ ಅಭಿಪ್ರಾಯವನ್ನೂ   ಕೋರಿರುವ ಬಗ್ಗೆ ಯಾವ ದಾಖಲೆಗಳೂ ಆರ್ಥಿಕ ಇಲಾಖೆಯ  ಕಡತದಲ್ಲಿ ಕಂಡುಬಂದಿಲ್ಲ. ಪ್ರಸ್ತಾವನೆಯನ್ನು ಆಡಳಿತ ಇಲಾಖೆಗಳಿಂದ ತರಿಸಿಕೊಳ್ಳದೇ ನೇರವಾಗಿ  ತಮ್ಮ ಹಂತದಲ್ಲೇ 4(ಜಿ) ವಿನಾಯಿತಿ ನೀಡಿರುವುದು ಅಧಿಕಾರಿಗಳು ಕರ್ತವ್ಯಲೋಪವೆಸಗಿರುವುದು ಮೇಲ್ನೋಟಕ್ಕೆ  ಕಂಡು ಬಂದಿತ್ತು.

 

 2023ರ ವಿಧಾನಸಭೆ ಚುನಾವಣೆಯಲ್ಲಿ  ಕಾಂಗ್ರೆಸ್‌ಗೆ ಪೂರ್ಣ ಬಹುಮತ ಬರಲಿದೆ ಎಂದು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯ ಈದಿನ.ಕಾಮ್‌ ವೆಬ್‌ಸೈಟ್‌ ಚುನಾವಣೆ ಪೂರ್ವ ಸಮೀಕ್ಷೆ ಹೇಳಿತ್ತು. ಕಾಂಗ್ರೆಸ್‌ ಪಕ್ಷವು ಸರ್ಕಾರ ರಚಿಸಿದ ಎರಡೇ ಎರಡು ತಿಂಗಳಲ್ಲಿ ಇದೇ ಕಂಪನಿಗೇ 58 ಸಾವಿರ ಕೋಟಿ ರು. ವೆಚ್ಚದ ಗ್ಯಾರಂಟಿಗಳ ಸಮೀಕ್ಷೆ ನಡೆಸಲು 1 ಕೋಟಿ ರು. ನೀಡಿದ್ದು  ಚರ್ಚೆಗೆ ಗ್ರಾಸವಾಗಿತ್ತು.

https://stack.thefile.in/2023/11/governance/19902/

 

ಗ್ಯಾರಂಟಿಗಳ ಕುರಿತಾಗಿ ಐಸೆಕ್‌, ಮೌಲ್ಯಮಾಪನ ಪ್ರಾಧಿಕಾರಗಳಿಂದ ಸಮೀಕ್ಷೆ ನಡೆಸಬೇಕಿತ್ತು ಎಂದು ಪ್ರತಿಪಾದಿಸಿರುವ ಹಲವು ಅಧಿಕಾರಿಗಳು, ಕೇವಲ ಪ್ರಕಾಶನ, ಮುದ್ರಣದಂತಹ ಸೇವೆಗಳನ್ನು ಒದಗಿಸುತ್ತಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ವಹಿಸಿರುವುದಕ್ಕೆ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದರು.

 

https://stack.thefile.in/2023/11/rti/20034/

 

ಗ್ಯಾರಂಟಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಪ್ರಕ್ರಿಯೆಗಳು ಜೂನ್‌, ಜುಲೈವರೆಗೂ ಚಾಲ್ತಿಯಲ್ಲಿದ್ದವು. ಇದಾದ ನಂತರವೂ ಯೋಜನೆ ಅನುಷ್ಠಾನದಲ್ಲಿ ಗೊಂದಲ ಮುಂದುವರೆದಿತ್ತು. ಬಹುತೇಕ ಫಲಾನುಭವಿಗಳಿಗೆ ಹಣವೂ ಇದುದವರೆಗೂ ಪಾವತಿಯಾಗಿಲ್ಲ.  ಮಾರ್ಗಸೂಚಿಗಳ ಸಂಬಂಧ ಆಗಸ್ಟ್‌ವರೆಗೂ ತಿದ್ದುಪಡಿಗಳು ಮುಂದುವರೆದಿದ್ದವು.

 

ಅಲ್ಲದೇ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಗೆ ಸಮೀಕ್ಷೆ ನಡೆಸಲು 25 ಲಕ್ಷ ರು ಪಾವತಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಈ ಸಂಬಂಧ ಮಾಡಿಕೊಂಡಿರುವ ಒಪ್ಪಂದ, ಷರತ್ತುಗಳ ಕುರಿತು ದಾಖಲೆಗಳನ್ನು ಬಹಿರಂಗಪಡಿಸಿರಲಿಲ್ಲ.

https://stack.thefile.in/2024/01/rti/21094/

 

ಹೀಗಿದ್ದರೂ ಸಹ ಗ್ಯಾರಂಟಿಗಳು ಯಶಸ್ಸು ಕಂಡಿವೆ ಎಂದು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯು ಜುಲೈನಲ್ಲಿಯೇ ಬಿಡುಗಡೆಗೊಳಿಸಿರುವ ಸಮೀಕ್ಷೆ ವರದಿಯು ಸಂಶಯಗಳಿಗೆ ದಾರಿಮಾಡಿಕೊಟ್ಟಿರುವುದನ್ನು ಸ್ಮರಿಸಬಹುದು.

Tags: AnbukumarB Y VijayendrabjpCommissionerD K ShivakumarDigitaldirectorDR H V VasuEedinah d kumarswamyKSRTCLimitedM 2 MManagingMDMediaN V PrasadNetworkOverPrivater ashokRamlinga ReddyRandamSchemeShaktiSiddaramaiahaSurveyTransportVasuViewಅಂತಿಮಅನ್ಬುಕುಮಾರ್‍‌ಆರ್‌ ಅಶೋಕ್‌ಈ ದಿನಈದಿನಎಂ2ಎಂಎಚ್‌ ವಿ ವಾಸುಎನ್‌ ವಿ ಪ್ರಸಾದ್‌ಕರ್ನಾಟಕಕಾಂಗ್ರೆಸ್‌ಗ್ಯಾರಂಟಿಛಲವಾದಿಡಾ ಹೆಚ್‌ ವಿ ವಾಸುಡಿ ಉಮಾಪತಿಡಿ ಕೆ ಶಿವಕುಮಾರ್ನಾರಾಯಣನಾರಾಯಣಸ್ವಾಮಿನಿಗಮನಿರ್ದೇಶಕಪತ್ರಬಸವರಾಜುಬಸುಬಿ ವೈ ವಿಜಯೇಂದ್ರಬಿಜೆಪಿಮೀಡಿಯಾಯೋಜನೆರಸ್ತೆರಾಜ್ಯವರದಿವ್ಯವಸ್ಥಾಪಕಶಕ್ತಿಸಮೀಕ್ಷೆಸಾರಿಗೆಸಿದ್ದರಾಮಯ್ಯಸ್ವಾಮಿಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಆರ್‍‌ಸಿಬಿ ಸಂಭ್ರಮಾಚರಣೆ ಅನುಮತಿಗೆ ನಿರಾಕರಿಸಿ ದೂರು ನೀಡಿದ್ದ ಇನ್ಸ್‌ಪೆಕ್ಟರ್‍‌ ಅಮಾನತು; ಕರ್ತವ್ಯ ಪಾಲನೆಗೆ ಶಿಕ್ಷೆ?

Next Post

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

thefilestack

thefilestack

Next Post

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

Recommended

ನಿರ್ಬಂಧದಲ್ಲೂ ಗಡಿ ಮೀರಿದ ಪ್ರಕರಣ; ಮುಂಬೈನಿಂದ ರಾಜ್ಯಕ್ಕೆ ಬಂದವರೆಷ್ಟು?

6 years ago

ಲಂಚ ಪ್ರಕರಣಕ್ಕೆ ನೈತಿಕ ಅಧಃಪತನದ ಮುಖವಾಡ; ಕಡ್ಡಾಯ ನಿವೃತ್ತಿಯ ಶಿಫಾರಸ್ಸು ತಿರಸ್ಕರಿಸಿದ ಸರ್ಕಾರ

4 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd