the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಸಿಎಂ ಗಮನಕ್ಕೆ ತಂದೇ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿರ್ಬಂಧ ಆದೇಶ; ಆಡಿಯೋ ಬಹಿರಂಗ

thefilestack by thefilestack
July 16, 2022
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಸಾರ್ವಜನಿಕರು ಅನುಮತಿ ಇಲ್ಲದೆ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಫೋಟೊ ತೆಗೆಯುವುದು ಮತ್ತು ವಿಡಿಯೊ ಚಿತ್ರೀಕರಿಸುವುದನ್ನು ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಶುಕ್ರವಾರ ಹೊರಡಿಸಿದ್ದ ಆದೇಶವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನದಲ್ಲಿತ್ತು!

 

ಅಲ್ಲದೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ಮನವಿ ಮೇರೆಗೇ ಆದೇಶ ಹೊರಡಿಸಿದ್ದರು. ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರು ಜಿಲ್ಲಾ, ತಾಲೂಕು ಕಚೇರಿ, ಪೊಲೀಸ್‌ ಠಾಣೆ, ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಿಡಿಯೋ ಲೈವ್ ಮಾಡುತ್ತಿರುವುದನ್ನೂ ಆಲಮಟ್ಟಿಯ ಕಾರ್ಯಕ್ರಮವೊಂದರಲ್ಲಿ ಮಾಡಿರುವ ಭಾಷಣದಲ್ಲಿ ಪ್ರಸ್ತಾಪಿಸಿರುವ ಷಡಕ್ಷರಿ ಅವರು ಮುಖ್ಯಮಂತ್ರಿಯವರೊಂದಿಗೆ ಇದನ್ನು ಪ್ರಸ್ತಾಪಿಸಿದ್ದರು. ಹಾಗೆಯೇ ಅವರ ಗಮನಕ್ಕೆ ತಂದೇ ಆದೇಶ ಹೊರಡಿಸಲಾಗಿದೆ ಎಂಬುದು ಇದೀಗ ಬಹಿರಂಗವಾಗಿದೆ.

 

ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯದಂತೆ ನಿರ್ಬಂಧಿಸಿ ಹೊರಡಿಸಿದ್ದ ಆದೇಶವು ತಮ್ಮ ಗಮನಕ್ಕೇ ಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ ಕೆಲವೇ ಕೆಲವೇ ಗಂಟೆಗಳಲ್ಲಿ ಷಡಕ್ಷರಿ ಅವರು ಭಾಷಣದಲ್ಲಿ ಹೇಳಿರುವ ಮಾತಿನ ತುಣುಕುಗಳೂ ಮುನ್ನೆಲೆಗೆ ಬಂದಿವೆ.

 

ಆಲಮಟ್ಟಿಯಲ್ಲಿ ನಡೆದಿದ್ದ ಸ್ವಚ್ಛತಾ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಮುಖ್ಯಮಂತ್ರಿಯೊಂದಿಗೆ ಕಾರಿನಲ್ಲಿ ಹೋಗುವಾಗ ಈ ವಿಚಾರವನ್ನು ಅವರ ಗಮನಕ್ಕೆ ತಂದು ಆದೇಶ ಮಾಡಿಸಲಾಗಿದೆ ಎಂದು ನೌಕರರ ಕಾರ್ಯಕ್ರಮ ಭಾಷಣದಲ್ಲಿ ಹೆಮ್ಮೆಯಿಂದಲೇ ಬಹಿರಂಗಪಡಿಸಿದ್ದಾರೆ. ಈ ಆಡಿಯೋ ತುಣುಕು ‘ದಿ ಫೈಲ್‌’ -ವಾರ್ತಾಭಾರತಿಗೆ ಲಭ್ಯವಾಗಿದೆ.

 

ಆಡಿಯೋದಲ್ಲೇನಿದೆ?

 

ಈಗೊಂದು ಆರ್ಡರ್‌ ಮಾಡಿಸ್ದೆ. ಜಸ್ಟ್‌ ವಾಟ್ಸಾಪ್‌ನಲ್ಲಿ ಕೂಡ ಬಂತು. ಕಳೆದ ಒಂದು ತಿಂಗಳಿಂದಲೂ ನಿರಂತರ ಪ್ರಯತ್ನ ಮಾಡಿದ್ದೇನೆ. ಇನ್ಮುಂದೆ ನಮ್ಮ ರಾಜ್ಯದ ಯಾವುದೇ ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಯಾವುದೇ ಖಾಸಗಿ ವ್ಯಕ್ತಿ ಬಂದು ಫೋಟೋ ತೆಗಿಯಂಗಿಲ್ಲ. ವಿಡಿಯೋ ಶೂಟ್‌ ಮಾಡಂಗಿಲ್ಲ. ಮೇಲಾಧಿಕಾರಿಗಳ ಅನುಮತಿ ಇಲ್ಲದೆಯೇ ಯಾವ್ದೇ ಕಚೇರಿಗಳಿಗೆ ಹೋಗಿ ಆ ರೀತಿಯ ಪ್ರಕ್ರಿಯೆಗಳನ್ನು ಮಾಡಬಾರದು ಎಂದು ಸರ್ಕಾರ ನಿರ್ಬಂಧಿಸಿ ಆದೇಶ ಮಾಡ್ತು. ಈಗ ಜಸ್ಟ್‌ ಆರ್ಡರ್ ಆಯ್ತು.

 

ಬಹುಶಃ ಯೋಚ್ನೆ ಮಾಡಿ, ಬಹಳಷ್ಟು ಹೆಣ್ಮಕ್ಳು ಹೆಡ್ಡಾಪೀಸ್‌ಗಳಲ್ಲಿ , ತಾಲೂಕು ಆಫೀಸ್‌ಗಳಲ್ಲಿ ಜಿಲ್ಲಾ ಪಂಚಾಯ್ತಗಳಲ್ಲಿ ರೆವಿನ್ಯೂ ಅಫೀಸ್‌ಗಳಲ್ಲಿ, ಜಿಲ್ಲಾ ಕಚೇರಿಗಳಲ್ಲಿ ಕೆಎಸ್‌ಆರ್‌ ಪಾರ್ಟಿ, ಸಂಘ ಸಂಸ್ಥೆಗಳು, ವ್ಯಕ್ತಿ ಆಧರಿತ ಸಂಘಟನೆಗಳು ಬರ್ತಾವೆ. ಪೋಟೋ ತೆಗಿತಾರೆ, ವಿಡಿಯೋ ಮಾಡ್ತಾರೆ. ಸ್ವಾಭಿಮಾನದ ಹಕ್ಕುಗಳನ್ನು ಕಿತ್‌ಕೊಳ್ಳುವಂತ ಕೆಲ್ಸಗಳು ಆ ಸಂದರ್ಭದಲ್ಲಿ ಆಗ್ತಾವೆ. ಲಾಸ್ಟ್‌ ವೀಕ್‌ನಲ್ಲಿ ನಾನು ಮುಖ್ಯಮಂತ್ರಿ ಜತೆ ಕಾರಿನಲ್ಲಿ ಹೋಗುವಾಗ ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಮಾಡ್ದೆ. ಸಾರ್‌ ಈ ಆದೇಶ ಮಾಡ್ಬೇಕು. ಮುಜುಗರ ಆಗ್ತಾ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗ್ತಾ ಇದೆ ಎಂದಾಗ ಮಾನ್ಯ ಮುಖ್ಯಮಂತ್ರಿಗಳು  ಆದೇಶ  ಮಾಡಿದ್ರು ಎಂದು ಭಾಷಣ ಮಾಡಿದ್ದಾರೆ.

 

ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್‌ ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವು ಸಾರ್ವಜನಿಕರ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ ಮಧ್ಯ ರಾತ್ರಿಯಲ್ಲಿ ಆದೇಶವನ್ನು ಹಿಂಪಡೆಯಲಾಗಿತ್ತು. ಅದೇ ರೀತಿ ಹೊರಡಿಸಿದ್ದ ಆದೇಶದಲ್ಲಿ ಕಾಗುಣಿತ,ವ್ಯಾಕರಣ ದೋಷಗಳಿದ್ದವು. ಆ ನಂತರ ಅವೆನ್ನಲ್ಲ ಸರಿಪಡಿಸಿ ಮತ್ತೊಂದು ಆದೇಶವೂ ಹೊರಡಿಸಲಾಗಿತ್ತು. ಇದು ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿಯೂ ಟ್ರೋಲ್ ಮಾಡಲಾಗಿತ್ತು.

 

‘ರಾಜ್ಯದ ಜನರಿಗೆ ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜ್ಯದ ಜನರ ಕ್ಷಮೆ ಕೇಳಬೇಕು. ರಾಜ್ಯದ ಮುಖ್ಯಮಂತ್ರಿಯೇ ಸುಳ್ಳುಗಾರ ಎನ್ನುವುದು ರಾಜ್ಯ ರಾಜ್ಯಕಾರಣದ ಅಧೋಗತಿಯನ್ನು ತೋರಿಸುತ್ತದೆ,’ ಎಂದು ಕರ್ನಾಟಕ ರಾಷ್ಟ್ರಸಮಿತಿಯ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಿಸಿದ್ದಾರೆ.

Advertisement Banner
Previous Post

ಪಿಡಬ್ಲ್ಯೂಡಿ ಹೊರತುಪಡಿಸಿ ಸಚಿವಾಲಯದ ಕಚೇರಿಗಳಲ್ಲಿ ಅಳವಡಿಕೆಯಾಗದ ಸಿಸಿಟಿವಿ!

Next Post

ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಕಡೆಗೂ ಆದೇಶ ಪ್ರಕಟ; ಆದರೆ ದಿನಕ್ಕೊಮ್ಮೆ ಅಲ್ಲ, ವಾರಕ್ಕೊಮ್ಮೆ

thefilestack

thefilestack

Next Post

ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಕಡೆಗೂ ಆದೇಶ ಪ್ರಕಟ; ಆದರೆ ದಿನಕ್ಕೊಮ್ಮೆ ಅಲ್ಲ, ವಾರಕ್ಕೊಮ್ಮೆ

Recommended

ಅಂಗವಿಕಲ ಸರ್ಕಾರಿ ಅಧಿಕಾರಿಗಳಿಗೆ ಮುಂಬಡ್ತಿ; ಸಂಘ ಪರಿವಾರ ಶಿಫಾರಸ್ಸಿಗೆ ಮನ್ನಣೆ?

6 years ago

ನೇಕಾರರಿಗೆ 10 ಹೆಚ್‌ಪಿವರೆಗಿನ ಉಚಿತ ವಿದ್ಯುತ್‌; ಸರ್ಕಾರದ ಬೊಕ್ಕಸಕ್ಕೆ 145 ಕೋಟಿ ಹೊರೆ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd