the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

‘ಸಿದ್ರಾಮುಲ್ಲಾಖಾನ್‌’ ಎಂದು ನಿಂದಿಸಿದ್ದ ಪ್ರಕರಣ; ಅಶೋಕ್‌ ಸೇರಿ 43 ಮಂದಿ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ನಿರ್ಧಾರ

thefilestack by thefilestack
February 15, 2025
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು;   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಕೂಗಿ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್‌ ಮತ್ತಿತರರ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಮತ್ತು ಪುನರ್‍‌ ಪರಿಶೀಲನಾ ಅರ್ಜಿ ಸಲ್ಲಿಸದೇ ಇರಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ನಿರ್ಧರಿಸಿದೆ.

 

ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧದ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲು ನಿರ್ಧಾರ ಕೈಗೊಂಡಿರುವ ಬೆನ್ನಲ್ಲೇ ಆರ್‍‌ ಅಶೋಕ್‌ ಮತ್ತಿತರರ ವಿರುದ್ಧದ ಪ್ರಕರಣದಲ್ಲಿ ಮೇಲ್ಮನವಿ ಮತ್ತು ಪುನರ್‍‌ ಪರಿಶೀಲನಾ ಅರ್ಜಿ ಸಲ್ಲಿಸದೇ ಇರಲು ಕೈಗೊಂಡಿರುವ ನಿರ್ಧಾರವು ಮುನ್ನೆಲೆಗೆ ಬಂದಿದೆ.

 

1992ರ ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ 2024ರ ಜನವರಿ 3ರಂದು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ಎದುರು ಪ್ರತಿಪಕ್ಷ ನಾಯಕ ಆರ್ ಅಶೋಕ್‌ ಸೇರಿದಂತೆ ಹಲವು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಲ್ತಾಫ್‌ ಹುಸೇನ್‌ ಹಳ್ಳೂರ ಅವರು ಹುಬ್ಬಳ್ಳಿ ಟೌನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

 

 

‘2024ರ ಜನವರಿ 3ರಂದು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ಶಹರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿ, ಪ್ರಚೋದನಾಕಾರಿ ಭಾಷಣವನ್ನು ಮಾಡಿ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಅಡ್ಡಿಪಡಿಸಿ 6 ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿಗಳಿಗೆ ಸಿದ್ರಾಮುಲ್ಲಾಖಾನ ಮತ್ತು ಸಿದ್ದರಾಮಯ್ಯ ಲುಚ್ಚಾ, ಹೇಡಿ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿ ಅವರಿಗೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅವಮಾನ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ನಾಗರಿಕ ವಿರೋಧಿ  ಚಟುವಟಿಕೆ ನಡೆಸಿದ್ದಾರೆ. ಆರ್ ಅಶೋಕ್‌ ಸೇರಿ ಆರೋಪಿತರ ಮೆಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿದ್ದರು.

 

 

 

ಈ ಪ್ರಕರಣ ಸಂಬಂಧ ಆರ್ ಅಶೋಕ್‌ ಸೇರಿ ಒಟ್ಟು 43 ಮಂದಿ ವಿರುದ್ಧ ಪ್ರಕರಣವೂ ದಾಖಲಾಗಿತ್ತು. ಶಾಸಕರ ಅರವಿಂದ ಬೆಲ್ಲದ್, ಮಹೇಶ್‌ ಟೆಂಗಿನ ಕಾಯಿ ಅವರು ಸಹ ಎ 2, ಎ 3 ಆರೋಪಿಯನ್ನಾಗಿಸಲಾಗಿತ್ತು.

 

 

ಈ ಕ್ರಿಮಿನಲ್ ಅರ್ಜಿಯನ್ನು CR.P. ನ U/SE. 482 ರಲ್ಲಿ ಸಲ್ಲಿಸಲಾಗಿತ್ತು. ಮೊದಲ ಆರೋಪಿ ಆರ್‍‌ ಅಶೋಕ್‌ ಸೇರಿದಂತೆ 43 ಆರೋಪಿಗಳು ತಮ್ಮ ವಿರುದ್ಧದ ಕ್ರಿಮಿನಲ್‌ ಅರ್ಜಿಯನ್ನು ರದ್ದುಗೊಳಿಸಲು ಕೋರಿದ್ದರು.

 

ಆದರೆ ಅರ್ಜಿದಾರರ ಪರವಾಗಿ ನ್ಯಾಯಾಯದಲ್ಲಿ ಯಾರೊಬ್ಬರೂ ಹಾಜರಾಗದ ಕಾರಣ ಈ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ವಜಾಗೊಳಿಸಿತ್ತು.

 

 

ಆದರೀಗ ಈ ಪ್ರಕರಣವು ಮೇಲ್ಮನವಿ ಮತ್ತು ಪುನರ್‍‌ ಪರಿಶೀಲನಾ ಅರ್ಜಿ ಸಲ್ಲಿಸಲು ಅರ್ಹವಾಗಿಲ್ಲ ಎಂದು ಒಳಾಡಳಿತ ಇಲಾಖೆಯು ಅಭಿಪ್ರಾಯಪಟ್ಟಿದೆ.

 

ಈ ಸಂಬಂಧ ಅಭಿಯೋಗ ಇಲಾಖೆಯ ನಿರ್ದೇಶಕರಿಗೆ 2025ರ ಫೆ.12ರಂದು ಒಳಾಡಳಿತ ಇಲಾಖೆಯು (HD/919/HCP-1/2025-COMPUTER NUMBER 1676761-LETTER NUMBER 556/CRL/2025- CRLP 7110/2024) ಪತ್ರ ಬರೆದಿದೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

 

ಇನ್ನುಳಿದಂತೆ ಎಂ.ಆರ್‌. ಪಾಟೀಲ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್‌, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ, ಉಮೇಶಗೌಡ ಕೌಜಲಗಿ, ತಿಪ್ಪಣ್ಣ ಮಜ್ಜಗಿ ಸೇರಿದಂತೆ ಬಿಜೆಪಿಯ ಇತರ ಮುಖಂಡರ ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿತ್ತು.

 

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು ಜನವರಿ 5ರಂದು ದೂರು ನೀಡಿದ್ದರು. ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಕೂಗಿದ್ದಲ್ಲದೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

 

ಬಿಜೆಪಿ ವಿರುದ್ದ ದೂರು ಕೊಟ್ಟ ಬಳಿಕ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಪ್ ಹಳ್ಳೂರ ಪ್ರತಿಕ್ರಿಯೆ ನೀಡಿದ್ದರು. ಹುಬ್ಬಳ್ಳಿಯಲ್ಲಿ ಬಿಜೆಪಿಯವರು ಭಯದ ವಾತಾವರಣ ಉಂಟು‌ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಆರ್. ಅಶೋಕ ಅವರು ಹಿರಿಯ ನಾಯಕರಾಗಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕದಿರೋದಕ್ಕೆ ನಮ್ಮ ವಿರೋಧ ಇದೆ. ಅವರು ವ್ಯಾಪರಸ್ಥರಿಗೆ ತೊಂದರೆ ಕೊಟ್ಟಿದ್ದಾರೆ. ಹೀಗಾಗಿ ಅವರ ವಿರುದ್ದ ದೂರು ಕೊಟ್ಟಿದ್ದೇವೆ ಎಂದು ಹೇಳಿದ್ದರು.

 

31 ವರ್ಷದ ಹಿಂದಿನ ಗಲಭೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಶಹರ​ ಪೊಲೀಸ್ ಠಾಣೆ ಎದುರು ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಕಾರ್ಯಕರ್ತರು ಶಹರ​ ಠಾಣೆ ಮುತ್ತಿಗೆ ಹಾಕಲು ಯತ್ನಿಸಿದ್ದರು.

 

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಆರ್‍‌ ಅಶೋಕ್‌ ಅವರು ಹಿಂದೂ ಕಾರ್ಯಕರ್ತನನ್ನು ಬಿಡುಗಡೆ ಮಾಡಬೇಕು. ಇನ್​ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಮ‌ಭಕ್ತರನ್ನು ಬಂಧಿಸಿದ್ದನ್ನು ಖಂಡಿಸುತ್ತೇನೆ. ರಾಮ ಭಕ್ತರನ್ನು ಬಂಧನ ಮಾಡುವ ಹುನ್ನಾರವನ್ನು ಕಾಂಗ್ರೆಸ್ ಮಾಡುತ್ತಿದೆ. ಸುಮಾರು 56,000 ಪೆಂಡಿಂಗ್ ಎಲ್‌ಪಿ‌ಸಿ ಕೇಸ್​ಗಳು ಇವೆ. ಆದರೆ ಅವೆಲ್ಲವನ್ನು ಬಿಟ್ಟು ಹುಬ್ಬಳ್ಳಿ ಕಡೆ ಬಂದಿರೋದು ಯಾಕೆ. ಶ್ರೀಕಾಂತ್​ ಪೂಜಾರಿಯನ್ನು ಬಂಧನ ಮಾಡಿದ್ದು, ನ್ಯಾಯಾನಾ” ಎಂದು ಪ್ರಶ್ನಿಸಿದ್ದರು.

 

ಅಲ್ಲದೇ ”ತಾಕತ್ತಿದ್ದರೆ ಎಲ್ಲರನ್ನು ಬಂಧಿಸಿ ನೋಡೋಣ. ನನ್ನ ಮೇಲೂ ಕೇಸ್ ಇದೆ ಬಂಧಿಸಿ ನೋಡೋಣ. ಕಾಂಗ್ರೆಸ್ ಪಕ್ಷ ಸೋಲಿನ ಭಯದಿಂದ ಹೀಗೆ ಮಾಡುತ್ತಿದೆ. ಬೇರೊಂದು ಸಮುದಾಯದ ಓಲೈಕೆಗಾಗಿ ಈ ರೀತಿ ಮಾಡುತ್ತಿದ್ದಾರೆ” ಎಂದು‌ ಆರೋಪಿಸಿದ್ದರು.

 

ಶ್ರೀಕಾಂತ್‌ ಪೂಜಾರಿ ಪ್ರಕರಣವೇನು?

 

ಹಜರೇಸಾಬ್‌ ಮಲಿಕ್‌ಸಾಬ್‌ ಅಂಗಡಿ ಅವರು ಸಲ್ಲಿಸಿದ ದೂರಿನ ಅನ್ವಯ ಮೂರನೇ ಆರೋಪಿಯಾಗಿರುವ ಶ್ರೀಕಾಂತ್‌ ವಿರುದ್ಧ ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 143, 147, 436, 427 ಜೊತೆಗೆ 149 ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ಸಂಬಂಧ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.

 

ಮುಂದೆ ಪ್ರಕರಣವನ್ನು ವಿಭಜಿಸಿ ಶ್ರೀಕಾಂತ್‌ ಮತ್ತಿತರರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು ಎಂದು ಅರ್ಜಿದಾರರು ಸಲ್ಲಿಸಿರುವ ಮನವಿಯಲ್ಲಿ ಹೇಳಲಾಗಿತ್ತು. ಇತರೆ ಆರೋಪಿಗಳ ವಿರುದ್ಧದ ಮೂಲ ಪ್ರಕರಣವನ್ನು ಸತ್ರ ನ್ಯಾಯಾಲಯ ಇತ್ಯರ್ಥಪಡಿಸಿತ್ತು. ಅಲ್ಲದೇ ಆರೋಪಿಗಳನ್ನು ಖುಲಾಸೆಗಳಿಸಿತ್ತು. ಈ ಪ್ರಕರಣದ ದೂರು ಮತ್ತು ಎಫ್‌ಐಆರ್‌ ಅನ್ನು ನಾಶಪಡಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದನ್ನು ಸ್ಮರಿಸಬಹುದು.

Tags: b l santhoshB Y ViyendraBasanagoudaBNSDR G ParmeshwarFIRh d kumarswamyHubballiHubballi TownIPCPatilr ashokRam MandirRiotSiddaramaiahaSidramulla KhanSrikanth PujariYatnalಅರವಿಂದ ಬೆಲ್ಲದ್‌ಅರ್ಜಿಆರ್‌ ಅಶೋಕ್‌ಎಫ್‌ಐಆರ್‌ಒಳಾಡಳಿತಕ್ರೈಮ್‌ಜನ್ಮಭೂಮಿಟೌನ್ಡಿ ಕೆ ಶಿವಕುಮಾರ್ದಾಖಲುನಾಗಪ್ರಸನ್ನನಾಯಕನ್ಯಾಯಮೂರ್ತಿಪುನರ್‌ ಪರಿಶೀಲನೆಪೊಲೀಸ್‌ಪ್ರತಿಪಕ್ಷಮಹೇಶ್‌ ಟೆಂಗಿನಕಾಯಿಮುಖ್ಯಮಂತ್ರಿಮೇಲ್ಮನವಿರಾಮಭಕ್ತರಾಮಮಂದಿರಲುಚ್ಚವಿಪಕ್ಷಶಹರಶ್ರೀಕಾಂತ ಪೂಜಾರಿಸಿದ್ದರಾಮಯ್ಯಸಿದ್ರಾಮುಲ್ಲಾಖಾನ್ಹುಬ್ಬಳ್ಳಿಹೆಚ್‌ ಡಿ ಕುಮಾರಸ್ವಾಮಿಹೇಡಿಹೈಕೋರ್ಟ್‌
Advertisement Banner
Previous Post

ಕೇಂದ್ರ ಪುರಸ್ಕೃತ ಯೋಜನೆ; 22,472.25 ಕೋಟಿ ರು ಬಾಕಿ ಉಳಿಸಿಕೊಂಡ ಕೇಂದ್ರ, ರಾಜ್ಯ ಸರ್ಕಾರ

Next Post

ಕೋಟಿ ರು ವೆಚ್ಚದ ಸಾಕ್ಷ್ಯಚಿತ್ರಕ್ಕೆ ತಡೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ 48 ಗಂಟೆಯೊಳಗೆ ವರದಿ ಕೇಳಿದ ಇಲಾಖೆ

thefilestack

thefilestack

Next Post

ಕೋಟಿ ರು ವೆಚ್ಚದ ಸಾಕ್ಷ್ಯಚಿತ್ರಕ್ಕೆ ತಡೆ; 'ದಿ ಫೈಲ್‌' ವರದಿ ಬೆನ್ನಲ್ಲೇ 48 ಗಂಟೆಯೊಳಗೆ ವರದಿ ಕೇಳಿದ ಇಲಾಖೆ

Recommended

ಆರ್‍‌ಸಿಬಿ ಸಂಭ್ರಮಾಚರಣೆ ಅನುಮತಿಗೆ ನಿರಾಕರಿಸಿ ದೂರು ನೀಡಿದ್ದ ಇನ್ಸ್‌ಪೆಕ್ಟರ್‍‌ ಅಮಾನತು; ಕರ್ತವ್ಯ ಪಾಲನೆಗೆ ಶಿಕ್ಷೆ?

9 months ago

ಕಾಂಗ್ರೆಸ್‌ ಸರ್ಕಾರಕ್ಕೂ ಸುತ್ತಿಕೊಂಡ ಕಾಕಂಬಿ ಹಗರಣ; ತನಿಖೆಯಲ್ಲಿರುವಾಗಲೇ ರಫ್ತು ಪರವಾನಿಗೆ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd