the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home RTI

6 ತಿಂಗಳಾದರೂ ಪ್ರಗತಿಯ ಹಳಿ ಹತ್ತದ ಬಿಜೆಪಿ ಸರ್ಕಾರ; ಬಯಲಾಯಿತು ಅಧಿಕಾರಿಗಳ ಮೈಗಳ್ಳತನ

ಮಲ್ಲಿಕಾರ್ಜುನಯ್ಯ by ಮಲ್ಲಿಕಾರ್ಜುನಯ್ಯ
March 9, 2020
in RTI
0
0
SHARES
0
VIEWS
Share on FacebookShare on Twitter

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು, ಪೂರ್ಣ ಪ್ರಮಾಣದಲ್ಲಿ ಸರ್ಕಾರ ರಚಿಸಿ 6 ತಿಂಗಳ ಅವಧಿ ಪೂರ್ಣಗೊಳಿಸಿದ್ದರೂ ರಾಜ್ಯ ಸರ್ಕಾರದ  ಮಹತ್ವಾಕಾಂಕ್ಷೆಯ ಅಭಿವೃದ್ಧಿ ಯೋಜನೆಗಳು ನಿರೀಕ್ಷೆಯಂತೆ ವೇಗವನ್ನು ಪಡೆದುಕೊಳ್ಳದೇ ತೆವಳುತ್ತಿವೆ. 

ಹೆಚ್ಚು ಅನುದಾನವಿರುವ ಇಲಾಖೆಗಳೂ ಪ್ರಗತಿಯಲ್ಲಿ ಹಿಂದೆ ಬಿದ್ದಿವೆ ಎಂಬುದನ್ನು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಹೊರಗೆಡವಿದೆ. ಬಿಜೆಪಿ ಸರ್ಕಾರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಷಣ ಮಾಡಿದ ಕೆಲ ದಿನಗಳಲ್ಲೇ ಬಿಜೆಪಿ ಸರ್ಕಾರದ ಪ್ರಗತಿಯ ಬಂಡವಾಳವೂ ಹೊರಬಿದ್ದಿದೆ. 

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಅಡಿಯಲ್ಲಿ ಸಾಧಿಸಿರುವ ಪ್ರಗತಿಯ ಪರಿಶೀಲನಾ ಸಭೆಯ ನಡವಳಿಗಳು ‘ದಿ ಫೈಲ್‌’ ಗೆ ಆರ್‌ಟಿಐ ಅಡಿಯಲ್ಲಿ ಲಭ್ಯವಾಗಿವೆ. ಮಹತ್ವಾಕಾಂಕ್ಷೆಯ ಅಭಿವೃದ್ಧಿ ಯೋಜನೆಗಳು ತೆವಳುತ್ತಿರುವುದು ದಾಖಲೆಯಿಂದ ತಿಳಿದು ಬಂದಿದೆ. 

 

ಶಾಸಕರ ಸಂಖ್ಯಾಬಲವನ್ನು ವೃದ್ಧಿಸಿಕೊಂಡಿರುವ ಬಿಜೆಪಿ ಸರ್ಕಾರ, ಅಭಿವೃದ್ಧಿ ಯೋಜನೆಗಳ ಪ್ರಗತಿಯತ್ತ ಕಣ್ಣಾಯಿಸಿಲ್ಲ. 6 ತಿಂಗಳಿನಿಂದಲೂ ಪ್ರಗತಿ ಎಂಬುದು ಮರೀಚಿಕೆಯಾಗಿದೆ. ಅನುದಾನ ಹಂಚಿಕೆಯಾಗಿದೆ ಎಂದು ಬಿಜೆಪಿ ಶಾಸಕರು ಪ್ರಚಾರ  ಪಡೆದುಕೊಳ್ಳುತ್ತಿದ್ದಾರಾದರೂ  ಹಲವು ಇಲಾಖೆಗಳಿಗೆ ಹಣವೇ ಬಿಡುಗಡೆಯಾಗಿಲ್ಲ. 

ಈ ಅವಧಿಯಲ್ಲಿ ಕುಂಠಿತಗೊಂಡಿರುವ ಪ್ರಗತಿ, ಅಧಿಕಾರಿಗಳಲ್ಲಿರುವ ಮೈಗಳ್ಳತನವನ್ನು ಹೊರಗೆಡವಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರು ಪ್ರತಿ ತಿಂಗಳು ಅಭಿವೃದ್ಧಿ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡುತ್ತಿದ್ದರೂ ಅಭಿವೃದ್ಧಿ ಯೋಜನೆಗಳು  ತೆವಳುತ್ತಲೇ ಇದೆ. 

ಡಿಸೆಂಬರ್‌ 2019ರ ಅಂತ್ಯದವರೆಗಿನ ಪ್ರಗತಿಯನ್ನು ಪರಿಶೀಲಿಸಿರುವ ಮುಖ್ಯ ಕಾರ್ಯದರ್ಶಿ, ಸಂಚಿತ ಗುರಿಗೆ ಶೇ.75ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿರುವ ಇಲಾಖೆಗಳ ಮುಖ್ಯಸ್ಥರ ಕಾರ್ಯವೈಖರಿಯನ್ನು ಒರೆಗೆ ಹಚ್ಚಿರುವುದು ಪ್ರಗತಿ ಪರಿಶೀಲನೆ ಸಭೆಯ ನಡವಳಿಯಿಂದ ತಿಳಿದು ಬಂದಿದೆ. 

ಅದರಲ್ಲೂ ತುಂಬಾ ಮುಖ್ಯವಾಗಿ 2019-20ನೇ ಸಾಲಿನ ಶೈಕ್ಷಣಿಕ ವರ್ಷ ಬಹುತೇಕ ಪೂರ್ಣಗೊಳ್ಳುತ್ತಿದ್ದರೂ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ವಿತರಣೆಯಲ್ಲಿ ಅತ್ಯಂತ ಕಡಿಮೆ ಸಾಧನೆ ಆಗಿದೆ. 

ಹಾಗೆಯೇ ಔದ್ಯಮಿಕ ಸಮೂಹಗಳ ಸ್ಥಾಪನೆ, ಸುಧಾರಣೆ, ತೆಂಗು ಭಾಗ್ಯ, ಸಣ್ಣ,  ಮಧ್ಯಮ ಉದ್ಯಮಗಳಿಗೆ ಕೈಗಾರಿಕೆ ಮೂಲಭೂತ ಸೌಕರ್ಯಗಳ ಯೋಜನೆಯಲ್ಲಿ ಪ್ರಗತಿ ಕುಂಠಿತಗೊಂಡಿದೆ. ಕಿದ್ವಾಯಿ ಆಸ್ಪತ್ರೆ ಅಭಿವೃದ್ಧಿ, ವಿವಿಧ ಜಿಲ್ಲೆಗಳಲ್ಲಿ  ಸೂಪರ್‌ ಸ್ಪೆಷಾಲಿಟಿ  ಆಸ್ಪತ್ರೆ ನಿರ್ಮಾಣ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಯೋಜನೆಗಳಿನ್ನೂ ಚುರುಕುಗೊಳ್ಳದಿರುವುದು ಗೊತ್ತಾಗಿದೆ.

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಪ್ರಗತಿ,  ಶೇ.40ರ ಗಡಿಯನ್ನೂ ದಾಟಿಲ್ಲ.  ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಲಭ್ಯವಿದ್ದ 300 ಕೋಟಿ  ರು.ಬಳಕೆಯಾಗದ ಕಾರಣ ಸರ್ಕಾರಕ್ಕೆ ಹಿಂದಿರುಗಲಿದೆ.  2019-20ನೇ ಸಾಲಿನಲ್ಲಿ ಮಂಜೂರಾಗಿದ್ದ ತಲಾ 2 ಕೋಟಿ ರು.ಗಳ ಅನುದಾನಕ್ಕೆ ಕಾಮಗಾರಿಗಳಿಗೆ ಬಹುತೇಕ ಜಿಲ್ಲಾಧಿಕಾರಿಗಳು ಅನುಮೋದಿಸಿಲ್ಲದಿರುವುದು ನಡವಳಿಯಿಂದ ತಿಳಿದು ಬಂದಿದೆ. 

ವಿಶೇಷ ಅಭಿವೃದ್ಧಿ ಯೋಜನೆಯಡಿ ನಿಗದಿಪಡಿಸಿದ್ದ ಅನುದಾನದ ಪೈಕಿ ಒಟ್ಟು 3,538 ಕೋಟಿ  ರು.ಗಳಲ್ಲಿ ಶೇ.50ರಷ್ಟು ಮಾತ್ರ ಖರ್ಚಾಗಿದೆ. ವಸತಿ ಇಲಾಖೆಯ ಆಶ್ರಯ, ಬಸವ ವಸತಿ ಯೋಜನೆ, ಲೋಕೋಪಯೋಗಿ ಇಲಾಖೆಯ ಜಿಲ್ಲಾ ಮತ್ತು ಇತರೆ ರಸ್ತೆಗಳ ಅಭಿವೃದ್ಧಿ,  ಪ್ರಾಥಮಿಕ ಪ್ರೌಢಶಿಕ್ಷಣ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಮೂಲಸೌಕರ್ಯ ಒದಗಿಸುವ ಯೋಜನೆ, ಗ್ರಾಮೀಣಾಭಿವೃದ್ಧಿ,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿಯೂ ಕಡಿಮೆ ಖರ್ಚಾಗಿದೆ. 

ಅದೇ ರೀತಿ ಸಮಾಜ ಕಲ್ಯಾಣ,  ಅಲ್ಪಸಂಖ್ಯಾತರ ಕಲ್ಯಾಣ, ಕನ್ನಡ, ಸಂಸ್ಕೃತಿ,  ವಾಣಿಜ್ಯ ಮತ್ತು ಕೈಗಾರಿಕೆ, ಪ್ರವಾಸೋದ್ಯಮ ಇಲಾಖೆಯಲ್ಲಿ ಕಳೆದ ಸಾಲಿಗಿಂತಲೂ ಕಡಿಮೆ ಪ್ರಗತಿ ಆಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಮತ್ತು  ಗಿರಿಜನ  ಉಪಯೋಜನೆಗಳ ಪ್ರಗತಿಯದ್ದೂ ಇದೇ ಕಥೆ.

ಇನ್ನು ಜಲಸಂಪನ್ಮೂಲ, ಲೋಕೋಪಯೋಗಿ, ಪಶು ಸಂಗೋಪನೆ, ತೋಟಗಾರಿಕೆ ಸೇರಿದಂತೆ ಇನ್ನಿತರೆ ಇಲಾಖೆಗಳು ಕಡಿಮೆ ಪ್ರಗತಿ ಸಾಧಿಸಿದೆ. ಬಾಹ್ಯ ಸಂಸ್ಥೆಗಳ ಅನುದಾನದಡಿಯಲ್ಲಿ ನಗರಾಭಿವೃದ್ಧಿ ಇಲಾಖೆ ಕೈಗೆತ್ತಿಕೊಂಡಿರುವ ಕಾವೇರಿ ನೀರು ಸರಬರಾಜು ಹಂತ 4 ಮತ್ತು ಲೋಕೋಪಯೋಗಿ ಇಲಾಖೆ ಜೈಕಾ 2ನೇ ಹಂತದಡಿ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳು ತೆವಳುತ್ತಿರುವುದು ತಿಳಿದು ಬಂದಿದೆ. 

ಮಹಿಳಾ ಉದ್ದೇಶಿತ ಆಯವ್ಯಯದ ಯೋಜನೆಗಳಿಗೆ ಸಂಬಂಧಿಸಿದಂತೆ ಮುಜರಾಯಿ,  ಮಾಹಿತಿ ತಂತ್ರಜ್ಞಾನ, ಕಾನೂನು, ಒಳಾಡಳಿತ, ಸಣ್ಣ ಕೈಗಾರಿಕೆ, ಅರಣ್ಯ, ಉನ್ನತ ಶಿಕ್ಷಣ ಮತ್ತು ಸಹಕಾರ ಇಲಾಖೆಯಲ್ಲಿ ಪ್ರಗತಿಯ ಕುರುಹು ಕಂಡಿಲ್ಲ. 

 

Tags: BasavarajBommaiChief SecretarycongressDevelopmentGovernorh d kumaraswamyhddevegowdaJagadishShettarjdskarnatakamkrishnar ashokSiddaramaiahT M Vijay Bhaskarv somannaVajubhai Rudabhai ValaYediyurappa
Advertisement Banner
Previous Post

ಮೈತ್ರಿ ಸರ್ಕಾರದ ಕಾಮಗಾರಿಗಳಿಗೆ ತಡೆ; ಸದನದಲ್ಲಿ ಒಪ್ಪಿಕೊಂಡ ಬಿಜೆಪಿ ಸರ್ಕಾರ

Next Post

900 ಎಕರೆಯಲ್ಲಿ ನೆಲೆಗೊಳ್ಳಲಿಲ್ಲ ಒಂದೇ ಒಂದು ಕೈಗಾರಿಕೆ; ಎಂಎಸ್‌ಪಿಎಲ್‌ ರಕ್ಷಣೆಗೆ ನಿಂತ ಬಿಜೆಪಿ ಸರ್ಕಾರ?

ಮಲ್ಲಿಕಾರ್ಜುನಯ್ಯ

ಮಲ್ಲಿಕಾರ್ಜುನಯ್ಯ

Next Post

900 ಎಕರೆಯಲ್ಲಿ ನೆಲೆಗೊಳ್ಳಲಿಲ್ಲ ಒಂದೇ ಒಂದು ಕೈಗಾರಿಕೆ; ಎಂಎಸ್‌ಪಿಎಲ್‌ ರಕ್ಷಣೆಗೆ ನಿಂತ ಬಿಜೆಪಿ ಸರ್ಕಾರ?

Discussion about this post

Recommended

ಸಿಎಂ ಇಲಾಖೆಯಲ್ಲೇ ವಿಲೇವಾರಿಗೆ 3,351 ಕಡತ ಬಾಕಿ; ನೂರು ದಿನ ಪೂರೈಸಿದ್ದರೂ ಚುರುಕಿಲ್ಲ

4 years ago

ಕೇಂದ್ರದಿಂದ ಬಾರದ ಅನುದಾನ; ಕಿಸಾನ್‌ ಸಮ್ಮಾನ್‌, ಕೃಷಿ ವಿಕಾಸ, ಬಿಸಿಯೂಟ, ಮಾತೃ ವಂದನಾ ಯೋಜನೆ ಕುಂಠಿತ

4 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd