the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಆರ್ಥಿಕ ಹೊರೆ; ಇಲಾಖೆ ಎಚ್ಚರಿಕೆ ನಡುವೆಯೂ ವಿಶೇಷ ಹೂಡಿಕೆ ವಲಯ ರಚನೆ ಕುರಿತು ಬಜೆಟ್‌ನಲ್ಲಿ ಘೋಷಣೆ

thefilestack by thefilestack
March 22, 2022
in GOVERNANCE
0

photo credit; bangalore mirror

0
SHARES
1
VIEWS
Share on FacebookShare on Twitter

ಬೆಂಗಳೂರು; ರಾಜ್ಯದಲ್ಲಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಸ್ಥಾಪನೆ ಸಂಬಂಧ ಸಂಸದೀಯ ಮತ್ತು ಶಾಸನ ರಚನೆ ಇಲಾಖೆ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ವಾಣಿಜ್ಯ ಕೈಗಾರಿಕೆ ಇಲಾಖೆಗಳ ಮಧ್ಯೆ ಇನ್ನೂ ಪ್ರಾಥಮಿಕ ಚರ್ಚೆ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ ರಚಿಸಲಾಗುವುದು ಎಂದು ಘೋಷಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ದೊಡ್ಡ ಗಾತ್ರ ಹೂಡಿಕೆ ಪ್ರದೇಶ, ಕೈಗಾರಿಕೆ ವಸಾಹತುಗಳ ಸ್ಥಾಪನೆ, ಕಾರ್ಯಾಚರಣೆ, ನಿಯಂತ್ರಣ ಮತ್ತು ನಿರ್ವಹಣೆಗೆಗಾಗಿ ಗುಜರಾತ್‌ ಮಾದರಿಯಲ್ಲಿ ಶಿವಮೊಗ್ಗ, ಕಲ್ಬುರ್ಗಿ ಮತ್ತು ಧಾರವಾಡದಲ್ಲಿ ವಿಶೇಷ ಹೂಡಿಕೆ ವಲಯ ಸ್ಥಾಪಿಸಲು ಮುಂದಾಗಿದೆ.

 

ಆರಂಭಿಕ ಹಂತದಲ್ಲಿ ತುಮಕೂರು ಮತ್ತು ಧಾರವಾಡ ಜಿಲ್ಲೆಯಲ್ಲಿ ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲು ಘೋಷಿಸಲಾಗಿದೆಯಾದರೂ ವಿಶೇಷ ಹೂಡಿಕೆ ವಲಯ ಸ್ಥಾಪನೆ ಸಂಬಂಧ ಸಂಸದೀಯ ಮತ್ತು ಶಾಸನ ರಚನೆ ಇಲಾಖೆ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ. ಅಲ್ಲದೆ ವಿಶೇಷ ಹೂಡಿಕೆ ವಲಯ ರಚನೆಯಿಂದಾಗಿ ಆರ್ಥಿಕ ಹೊರೆಯಾಗಲಿದೆ ಎಂದೂ ಎಚ್ಚರಿಸಿದೆ. ಆದರೂ ಬಜೆಟ್‌ನಲ್ಲಿ ತರಾತುರಿಯಲ್ಲಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಕೈಗಾರಿಕೆ ವಲಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಈಗಾಗಲೇ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯನಿರ್ವಹಿಸುತ್ತಿರುವುದರಿಂದ ವಿಧೇಯಕದಲ್ಲಿ ಪ್ರಸ್ತಾಪಿಸಿರುವ ವಿಶೇಷ ಹೂಡಿಕೆ ವಲಯ ಮತ್ತು ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರದ ರಚನೆಯು ಕೆಐಎಡಿಬಿಯ ನಕಲು ಮಾಡಿದಂತಾಗುತ್ತದೆ ಎಂದೂ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

 

ಪ್ರಸ್ತುತ ಕೈಗಾರಿಕೆ ಪ್ರದೇಶಾಭಿವೃದ್ಧಿಗಾಗಿ ಭೂಮಿಯನ್ನು ನಿಯಮಾನುಸಾರ ಸರ್ಕಾರದಿಂದ ಪಡೆದು ಕೈಗಾರಿಕೆ ವಲಯಗಳನ್ನು ಸ್ಥಾಪಿಸುವ ಕಾರ್ಯವನ್ನು ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ನಿರ್ವಹಿಸುತ್ತಿದೆ. ಈಗ ಪ್ರಸ್ತಾಪಿಸಿರುವ ವಿಶೇಷ ಹೂಡಿಕೆ ವಲಯವನ್ನು (The Karnataka Special Investment Region Bill 2021) ಸಹ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯೇ ನಿರ್ವಹಿಸುವುದು ಸೂಕ್ತ. ಇಲ್ಲದಿದ್ದರೆ ಇದು Duplication of work and Authority ಆಗುತ್ತದೆ ಹಾಗೂ ಇದರಿಂದ ಆರ್ಥಿಕ ಹೊರೆಯಾಗುತ್ತದೆ ಎಂದು ಶಾಸನ ರಚನೆ ಇಲಾಖೆ ಹೇಳಿತ್ತು.

 

ಪ್ರಸ್ತಾಪಿಸಿರುವ ವಿಧೇಯಕದಲ್ಲಿ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರವು ನಿರ್ವಹಿಸುವ ಕಾರ್ಯವನ್ನು ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ನಿರ್ವಹಿಸುತ್ತಿರುವುದರಿಂದ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರದ ಅಗತ್ಯತೆ ಇದೆಯೇ ಎಂಬುದನ್ನು ಪರಿಶೀಲಿಸುವಂತೆ ಆಡಳಿತ ಇಲಾಖೆಯನ್ನು ಕೋರಿದೆ.
Special Investment Region ಯಾವ ಆಧಾರದ ಮೇಲೆ ಗುರುತಿಸಲಾಗುವುದು ಎಂಬುದರ ಬಗ್ಗೆ ಮರು ಪರಿಶೀಲಿಸುವಂತೆ ಕೋರಿತ್ತು.

 

ಸಂಸದೀಯ ಶಾಸನ ರಚನೆ ಇಲಾಖೆ ನೀಡಿರುವ ಅಭಿಪ್ರಾಯದ ಪ್ರತಿ

 

ವಿಧೇಯಕದಲ್ಲಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯನ್ನೇ Apex Authorityಯನ್ನಾಗಿ ಮಾಡುವುದರಿಂದ ಪ್ರಸ್ತಾವಿತ ವಿಧೇಯಕದ ಅಗತ್ಯತೆ ಕಂಡು ಬರುವುದಿಲ್ಲ ಎಂದು ಹೇಳಿತ್ತು.

 

Special Investment Region to be Industrial Township ಇದು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕಾರ್ಯ ಸ್ವರೂಪಕ್ಕೆ ವ್ಯತಿರಿಕ್ತವಾಗುತ್ತದೆ. Industrial Townships ನ್ನು muncipalities Act ಅಡಿಯಲ್ಲಿ ರಚಿಸಬೇಕು ಎಂದಿತ್ತು.

 

ಪ್ರಸ್ತಾಪಿಸಿರುವ ವಿಧೇಯಕದಲ್ಲಿನ Special Investment Region and Regional Development Authorityಯ ಉಪ ಬಂಧಗಳನ್ನು ಅಗತ್ಯವಾದಲ್ಲಿ the karnataka industrial area developement act 1966ಗೆ ಸೂಕ್ತ ತಿದ್ದುಪಡಿಯನ್ನು ತರುವುದರ ಮೂಲಕ ಅಳವಡಿಸುವ ಬಗ್ಗೆ ಪರಿಶೀಲಿಸುವಂತೆ ಕೋರಿರುವುದು ತಿಳಿದು ಬಂದಿದೆ.

 

ರಾಜ್ಯದ ಜನರಿಗೆ ವಿಶೇಷವಾಗಿ ಕೈಗಾರಿಕಾ ಅಭಿವೃದ್ಧಿಯಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಹಾಗೂ ಟಯರ್-2 & ಟಯರ್-3 ನಗರಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸುವುದು ಹಾಗೂ ಬಂಡವಾಳ ಹೂಡಿಕೆಯ ಅಭಿವೃದ್ಧಿಯನ್ನು ರಾಜ್ಯದಲ್ಲಿ ಖಾತರಿಪಡಿಸಲಾಗುವುದು ಎಂದು ಹಿಂದಿನ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಅವರು ಹೇಳಿದ್ದನ್ನು ಸ್ಮರಿಸಬಹುದು.

 

100 ಕ್ಕಿಂತಲೂ ಹೆಚ್ಚು ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿರುವ ವಿಶೇಷ ಹೂಡಿಕೆ ವಲಯ ಸ್ಥಾಪನೆ, ಅಭಿವೃದ್ಧಿಪಡಿಸಿ ಅದನ್ನು ನಿರ್ವಹಿಸಲು ರಾಜ್ಯದಲ್ಲಿ ವಿಶೇಷ ಹೂಡಿಕೆ ವಲಯ ಕಾಯ್ದೆ ಜಾರಿಗೆ ತರಲು ಪ್ರಸ್ತಾಪಿಸಲಾಗಿತ್ತು. ಈ ಪ್ರದೇಶವನ್ನು ಕೈಗಾರಿಕೆ ಟೌನ್‌ ಶಿಪ್‌ ಎಂದು ಪರಿಗಣಿಸಲಾಗುತ್ತದೆ.

 

ಧಾರವಾಡ, ಗದಗ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳನ್ನೊಳಗೊಂಡ ಧಾರವಾಡ ವಿಶೇಷ ಹೂಡಿಕೆಯ ಮೊದಲನೇ ವಲಯ ಎಂದು ಅಧಿಸೂಚಿಸಲು ಪ್ರಸ್ತಾಪಿಸಿತ್ತು. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಶಿವಮೊಗ್ಗ ವಿಶೇಷ ಹೂಡಿಕೆ ವಲಯ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನೊಳಗೊಂಡ ಕಲಬುರಗಿ ವಿಶೇಷ ಹೂಡಿಕೆ ವಲಯವನ್ನು ಅಧಿಸೂಚಿತಗೊಳಿಸಲು ಪ್ರಸ್ತಾಪಿಸಲಾಗಿತ್ತು.

 

ರಾಜ್ಯದಲ್ಲಿ 5 ಲಕ್ಷ ಕೋಟಿ ರೂಪಾಯಿಗಳ ಬಂಡವಾಳ ಆಕರ್ಷಣೆ, 20 ಲಕ್ಷ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಹಾಗೂ ಕೈಗಾರಿಕಾಭಿವೃದ್ದಿಯಲ್ಲಿ ಹಿಂದುಳಿದ ಜಿಲ್ಲೆಗಳ ಅಭಿವೃದ್ದಿಗೆ ಅನುವು ಮಾಡಿಕೊಡುವಂತಹ ನೂತನ ಕೈಗಾರಿಕಾ ನೀತಿ 2020-25 ರಾಜ್ಯವನ್ನು ಇನ್ನಷ್ಟು ಕೈಗಾರಿಕಾ ಸ್ನೇಹಿ ಮಾಡುವತ್ತ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಲಾಗಿತ್ತು.

 

ವಿಶೇಷ ಹೂಡಿಕೆ ವಲಯ ಸ್ಥಾಪಿಸುವ ಸಂಬಂಧ ಹಿಂದಿನ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಗುಜರಾತ್‌ನಲ್ಲಿ ಪ್ರವಾಸ ಕೈಗೊಂಡಿತ್ತಲ್ಲದೆ ಅಲ್ಲಿನ ಕೈಗಾರಿಕೋದ್ಯಮಿಗಳನ್ನೂ ಭೇಟಿ ಮಾಡಿ ಪರಿಶೀಲನೆ ನಡೆಸಿತ್ತು.

 

ಗುಜರಾತ್‌ನಿಂದ ಹಿಂದಿರುಗಿದ ಬಳಿಕ ಜಗದೀಶ್‌ ಶೆಟ್ಟರ್‌ ಅವರು ಮಂಡಿಸಿದ್ದ ನೂತನ ಕೈಗಾರಿಕಾ ನೀತಿ 2020-25ಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಇದೇ ನೀತಿಯಲ್ಲಿ ವಿಶೇಷ ಹೂಡಿಕೆ ವಲಯ ಮತ್ತು ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನೂ ಪ್ರಸ್ತಾಪಿಸಿತ್ತು. ಈ ಬಗ್ಗೆ ಹಾಲಿ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಅವರೂ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Tags: Basavaraj BommaiBudgetD K Shivakumardharwadh d kumarswamyIndustrial TownshipKIADBMuncipalities ActMurugesh R NiraniParlimentary AffairsSiddaramaiahSpecial Investment Zonetumkuruಅಧಿನಿಯಮಆರ್ಥಿಕ ಹೊರೆಎಚ್‌ ಡಿ ಕುಮಾರಸ್ವಾಮಿಕಲ್ಬುರ್ಗಿಕೆಐಎಡಿಬಿಕೈಗಾರಿಕೆ ಟೌನ್‌ ಶಿಪ್‌ಡಿ ಕೆ ಶಿವಕುಮಾರ್ತುಮಕೂರುಧಾರವಾಡಪ್ರಾದೇಶಿಕ ಅಭಿವೃದ್ದಿ ಪ್ರಾಧಿಕಾರಬಸವರಾಜ ಬೊಮ್ಮಾಯಿಮುರುಗೇಶ್‌ ಆರ್‌ ನಿರಾಣಿವಿಶೇಷ ಹೂಡಿಕೆ ಪ್ರದೇಶವಿಶೇಷ ಹೂಡಿಕೆ ವಲಯಶಾಸನ ರಚನೆ ಇಲಾಖೆಸಂಸದೀಯ ವ್ಯವಹಾರಗಳುಸಿದ್ದರಾಮಯ್ಯ
Advertisement Banner
Previous Post

ಅಧೀನ ಕಾರ್ಯದರ್ಶಿ ವೃಂದದ ಜೇಷ್ಠತಾ ಪಟ್ಟಿಯಲ್ಲಿ ಗೋಲ್ಮಾಲ್‌; ಸರ್ಕಾರದಿಂದಲೇ ಸಮಾನತೆ ಹಕ್ಕಿಗೆ ಚ್ಯುತಿ?

Next Post

ಭೂ ಕಬಳಿಕೆ ಪ್ರಕರಣಗಳಿಗೆ ಸಿಗದ ತಾರ್ಕಿಕ ಅಂತ್ಯ; ಸರ್ಕಾರ ನೀಡಿದ್ದ ಭರವಸೆಗಳನ್ನೇ ಮುಕ್ತಾಯಗೊಳಿಸಿದ ಸಮಿತಿ

thefilestack

thefilestack

Next Post

ಭೂ ಕಬಳಿಕೆ ಪ್ರಕರಣಗಳಿಗೆ ಸಿಗದ ತಾರ್ಕಿಕ ಅಂತ್ಯ; ಸರ್ಕಾರ ನೀಡಿದ್ದ ಭರವಸೆಗಳನ್ನೇ ಮುಕ್ತಾಯಗೊಳಿಸಿದ ಸಮಿತಿ

Recommended

ವಿವಾದಿತ ವಿಡಿಯೋ; ಅಂಬೇಡ್ಕರ್‌ ಪ್ರಚಾರ ಸಮಿತಿಯ ಸದಸ್ಯನ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಗೆ ಅನುಮತಿ

2 years ago

ಹಿಜಾಬ್‌ನಲ್ಲಿ ಮುಳುಗಿರುವ ಸರ್ಕಾರ, ಸಾರಿಗೆ ಸಿಬ್ಬಂದಿಗೆ 2 ವರ್ಷದಿಂದ ಸಮವಸ್ತ್ರವನ್ನೇ ನೀಡಿಲ್ಲ

4 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd