the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LEGISLATURE

ಅಂದಾಜು ಸಮಿತಿ ಸದಸ್ಯರ ಮೇಲೆ ಗೂಂಡಾಗಿರಿ ಪ್ರಕರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ದನಿ ಎತ್ತಿದ ಸಿದ್ದರಾಮಯ್ಯ

thefilestack by thefilestack
May 18, 2022
in LEGISLATURE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮದ ನಾರಾಯಣಪುರ ಬಲದಂಡೆ ಕಾಲುವೆ ಅಧುನೀಕರಣ, ನವೀಕರಣ ಮತ್ತು ವಿಸ್ತರಣೆ ಕಾಮಗಾರಿಗಳ ಗುಣಮಟ್ಟ ಮತ್ತು ಭೌತಿಕ ಪರಿಶೀಲನೆಗೆ ತೆರಳಿದ್ದ ಬಿಜೆಪಿ ಶಾಸಕ ಅಭಯ್‌ ಪಾಟೀಲ್‌ ಅಧ್ಯಕ್ಷತೆಯ ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ ಶಾಸಕ ಸದಸ್ಯರ ಮೇಲೆ ಗುತ್ತಿಗೆದಾರರ ಬೆಂಬಲಿಗರ ಗುಂಪೊಂದು ಮುಗಿಬಿದ್ದು ಹಲ್ಲೆಗೂ ಮುಂದಾಗಿದ್ದ ಘಟನೆ ಕುರಿತು ‘ದಿ ಫೈಲ್‌’ ಸರಣಿ ವರದಿ ಪ್ರಕಟಿಸುತ್ತಿದ್ದಂತೆ ಇದೀಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಹ ದನಿ ಎತ್ತಿದ್ದಾರೆ.

 

ಉತ್ತರಪ್ರದೇಶ, ಬಿಹಾರದಂತಹ ವಾತಾವರಣ ಸೃಷ್ಟಿಯಾಗಿದ್ದರೂ ಸಮಿತಿಯ ಯಾವೊಬ್ಬ ಶಾಸಕ ಸದಸ್ಯರೂ ಇದುವರೆಗೂ ತುಟಿ ಬಿಚ್ಚದಿದ್ದರೂ ಸಮಿತಿ ಸದಸ್ಯರ ಮೇಲೆ ಮುಗಿಬಿದ್ದಿದ್ದ ಗುಂಪಿನ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

 

‘ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಸ್ಥಳ ಪರಿಶೀಲನೆಗೆ ತೆರಳಿದ್ದ ಅಂದಾಜು ಸಮಿತಿಯ ಸದಸ್ಯರನ್ನು ಕಾಮಗಾರಿ ಸ್ಥಳಕ್ಕೆ ತೆರಳಲು ಅವಕಾಶ ನೀಡದೇ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ ಗುತ್ತಿಗೆದಾರ ಹಾಗೂ ಆತನ ಬೆಂಬಲಿಗರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು,’ ಎಂದು ಟ್ವೀಟ್‌ ಮಾಡಿದ್ದಾರೆ.

 

ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್‌

 

ಅಲ್ಲದೆ ಈ ಕುರಿತು ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರೂ ಸಹ ವಿಡಿಯೋ ತುಣಕನ್ನು ಟ್ವೀಟ್‌ನಲ್ಲಿ ಹಂಚಿಕೊಳ್ಳುವ ಮೂಲಕ ಗಮನಸೆಳೆದಿದ್ದರು.

 

ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಮಾಡಿರುವ ಟ್ವೀಟ್‌

ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಯು ನಡೆಯುತ್ತಿದ್ದ ವೇಳೆಯಲ್ಲಿ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ ಡಿ ಹಿರೇಮಠ್‌ ಎಂಬುವರು ಏಕಾಏಕಿ ನುಗ್ಗಿ ದಾಂಧಲೆ ನಡೆಸಿದರು ಎಂಬ ಕಾರಣಕ್ಕೆ ಅವರ ವಿರುದ್ಧ ಠಾಣೆಯಲ್ಲಿ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ದೂರು ನೀಡಿರುವ ಬೆನ್ನಲ್ಲೇ ಕಾಮಗಾರಿಗಳ ಭೌತಿಕ ಪರಿಶೀಲನೆ ವೇಳೆಯಲ್ಲಿ ಗುತ್ತಿಗೆದಾರರ ಗುಂಪು ಮುಗಿಬಿದ್ದು ಗೂಂಡಾ ವಾತಾವರಣ ಸೃಷ್ಟಿಯಾಗಿದ್ದರೂ ಅಂದಾಜು ಸಮಿತಿ ಸದಸ್ಯರ್ಯಾರು ತುಟಿ ಬಿಚ್ಚಿರಲಿಲ್ಲ. ಈ ಕುರಿತು 'ದಿ ಫೈಲ್‌' 2022ರ ಮೇ 9ರಂದೇ ವರದಿ ಪ್ರಕಟಿಸಿತ್ತು.

https://stack.thefile.in/2022/05/legislature/11824/

 

ಕಾಮಗಾರಿಗಳ ಭೌತಿಕ ಪರಿಶೀಲನೆಗೆ ಗುತ್ತಿಗೆದಾರರ ಗುಂಪೊಂದು ಅಡ್ಡಿ ವ್ಯಕ್ತಪಡಿಸಿ, ಪರಿಶೀಲನೆ ನಡೆಸಲು ನೀವು ಯಾರು ಎಂದು ಗುಂಪು ಗುಂಪಾಗಿ ಮುಗಿಬಿದ್ದಿರುವುದು ಇದೇನು ಬಿಹಾರವೋ ಅಥವಾ ಉತ್ತರ ಪ್ರದೇಶವೋ ಎಂಬಂತಹ ವಾತಾವರಣ ಸೃಷ್ಟಿಯಾಗಿರುವ ಘಟನೆಗೆ ಸಾಕ್ಷ್ಯವನ್ನಾಗಿ ವಿಡಿಯೋ ತುಣುಕನ್ನು 'ದಿ ಫೈಲ್‌ ಮತ್ತು ವಾರ್ತಾಭಾರತಿ' ಮುನ್ನೆಲೆಗೆ ತಂದಿತ್ತು. ಅಲ್ಲದೆ ಗೃಹ ಸಚಿವರು ಈ ಬಗ್ಗೆ ಗಮನಹರಿಸಿಲ್ಲ ಎಂದು 'ದಿ ಫೈಲ್‌' 2022ರ ಮೇ 14ರಂದು ಮತ್ತೊಂದು ವರದಿ ಪ್ರಕಟಿಸಿತ್ತು.

https://stack.thefile.in/2022/05/legislature/11901/

 

ಸಮಿತಿ ಸದಸ್ಯರ ಪ್ರವಾಸದ ವೇಳೆಯಲ್ಲಿ ಶಿಷ್ಟಾಚಾರ ಮತ್ತು ಭದ್ರತೆ ಒದಗಿಸಬೇಕಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯವೂ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಒಂದೊಮ್ಮೆ ಪರಿಸ್ಥಿತಿ ಕೈ ಮೀರಿದ್ದರೇ ಶಾಸಕ ಸದಸ್ಯರ ಪ್ರಾಣಕ್ಕೂ ಆಪತ್ತು ಒದಗಲಿತ್ತು ಎಂಬ ದೃಶ್ಯಗಳು ವಿಡಿಯೋ ತುಣುಕಿನಲ್ಲಿವೆ.
ಕಾಮಗಾರಿಗಳ ಭೌತಿಕ ಪರಿಶೀಲನೆ ವೇಳೆಯಲ್ಲಿ ಇಷ್ಟೆಲ್ಲಾ ಬೆಳವಣಿಗೆಗಳು ನಡೆದಿದ್ದರೂ ಸಮಿತಿ ಸದಸ್ಯರು ಠಾಣೆಗೆ ದೂರು ನೀಡಿಲ್ಲ. ಅಲ್ಲದೆ ಈ ಪ್ರಕರಣದ ಬಗ್ಗೆ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೂ ಸಹ ಈಗಲೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ನ ಕರ್ನಾಟಕ ಘಟಕವೂ ಸಹ ಶಾಸಕರು ದೂರು ನೀಡಿಲ್ಲವೇಕೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹಮಂತ್ರಿ ಮೌನ ವಹಿಸಿರುವುದೇಕೆ ಎಂದು ಪ್ರ್ರಶ್ನಿಸಿದೆ.

 

ಪ್ರಕರಣದ ಹಿನ್ನೆಲೆ

 

ಈ ಸಮಿತಿಯಲ್ಲಿ ಅಧ್ಯಕ್ಷ ಅಭಯ್‌ ಪಾಟೀಲ್‌ ಸೇರಿ ಒಟ್ಟು 15 ಮಂದಿ ಶಾಸಕರಿದ್ದರು. ಕಾಲುವೆಗಳ ಕಾಮಗಾರಿ ಭೌತಿಕ ಪರಿಶೀಲನೆಗೆ ಮುಂದಾಗುತ್ತಿದ್ದಂತೆ ಇದ್ದಕ್ಕಿದ್ದಂತೆ ಗುತ್ತಿಗೆದಾರರ ಗುಂಪೊಂದು ಸಮಿತಿಯ ಸುತ್ತಲೂ ಘೇರಾಯಿಸಿ ಬೆದರಿಕೆಯನ್ನೂ ಒಡ್ಡಿತು. ಮತ್ತು ಪರಿಶೀಲನೆಗೆ ಅಡ್ಡಿಯುಂಟು ಮಾಡಿತು. ಆದರೆ ಈ ವೇಳೆಯಲ್ಲಿ ಬೆರಳಣಿಕೆಯಷ್ಟು ಪೊಲೀಸರು ಇದ್ದುದ್ದರಿಂದಾಗಿ ಸಮಿತಿಯ ಸದಸ್ಯರ ಜೀವಕ್ಕೂ ಆಪತ್ತು ಬಂದೊದಗಿತ್ತು ಎಂದು ತಿಳಿದು ಬಂದಿದೆ.

 

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆ, ಸೀಳು ಕಾಲುವೆ ಸೇರಿದಂತೆ ಇನ್ನಿತರೆ ಕಾಮಗಾರಿಗಳನ್ನು ಡಿ ವೈ ಉಪ್ಪಾರ್‌ ಮತ್ತು ಎನ್‌ ಡಿ ವಡ್ಡರ್‌ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಎನ್‌ ಡಿ ವಡ್ಡರ್‌ ಅವರು ಬಿಜೆಪಿಯ ಮಾಜಿ ಶಾಸಕ ಮಾನಪ್ಪ ವಜ್ಜಲ್‌ ಅವರ ಸಂಬಂಧಿ ಎಂದು ಹೇಳಲಾಗುತ್ತಿದೆ.

 

ವಿಶೇಷವೆಂದರೆ ಸಮಿತಿ ಸದಸ್ಯರಿಗೆ ಬಂದೋಬಸ್ತ್‌ ಮತ್ತು ಭದ್ರತೆ ನೀಡಲು ನಿಯೋಜಿತವಾಗಿದ್ದ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಎಂಬುವರು ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯ ಹಗರಣದಲ್ಲಿ ಭಾಗಿ ಆಗಿದ್ದಾರೆ ಎಂಬ ಆರೋಪದಡಿ ಸಮಿತಿ ಭೇಟಿ ನೀಡಿದ ದಿನದಂದೇ ಬಂಧನಕ್ಕೊಳಗಾಗಿದ್ದರು.

 

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆ, ಉಪ ಕಾಲುವೆ ಮತ್ತು ಸೀಳು ಕಾಲುವೆ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ. ಕಾಮಗಾರಿಗಳಲ್ಲಿ ಬೋಗಸ್‌ ಬಿಲ್‌ ಸೃಷ್ಟಿಸಿ ಅವ್ಯವಹಾರ ಎಸಗಲಾಗಿದೆ ಎಂದು ಸ್ಥಳೀಯ ಶಾಸಕರೂ ಸೇರಿದಂತೆ ಇನ್ನಿತರರು ಅಂದಾಜುಗಳ ಸಮಿತಿಗೆ ದೂರು ಸಲ್ಲಿಸಿತ್ತು. ಇದನ್ನಾಧರಿಸಿ ಸಮಿತಿಯು ಪ್ರವಾಸ ನಡೆಸಿ ಭೌತಿಕ ಪರಿಶೀಲನೆಗೆ ಮುಂದಾಗಿತ್ತು ಎಂದು ತಿಳಿದು ಬಂದಿದೆ.

 

ಶಾಸಕ ಐಹೊಳೆ ದುರ್ಯೋಧನ, ವೀರಣ್ಣ ಚರಂತಿಮಠ್‌, ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ, ಡಾ ಶಿವರಾಜ್‌ ಪಾಟೀಲ್‌, ದೊಡ್ಡಗೌಡರ ಮಹಾಂತೇಶ ಬಸವಂತರಾಯ್‌, ಸಂಜೀವ್‌ ಮಠಂದೂರು, ಎಚ್‌ ನಾಗೇಶ್‌, ಸುನೀಲ್‌ ಬಿಳಿಯಾನಾಯ್ಕ, ಅಮರೇಗೌಡ ಬಯ್ಯಾಪುರ, ಶರಣಬಸಪ್ಪಗೌಡ ದರ್ಶನಾಪುರ, ಕೌಜಲಿಗೆ ಮಹಾಂತೇಶ್‌ ಶಿವಾನಂದ, ಸತೀಶ್‌ ಎಲ್‌ ಜಾರಕಿಹೊಳಿ, ಯಶವಂತರಾಯಗೌಡ ವಿಠಲಗೌಡ ಪಾಟೀಲ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ.

Tags: Abhaya Patil MLAAttack On MLA'SEstimate CommitteeEstimate Committiee TourLingasuguarNRBC CanalRaichurSiddaramaiahSpeakerVishweshar Hegde Kageriಅಂದಾಜು ಸಮಿತಿಅಂದಾಜು ಸಮಿತಿ ಸದಸ್ಯರ ಪ್ರವಾಸಉತ್ತರ ಪ್ರದೇಶಎಚ್‌ ಡಿ ಕುಮಾರಸ್ವಾಮಿಗುತ್ತಿಗೆದಾರರುಗೂಂಡಾಗಿರಿಡಿ ಕೆ ಶಿವಕುಮಾರ್ಬಿಹಾರಮಾನಪ್ಪ ಡಿ ವಜ್ಜಲ್‌ರಡ್ಡೇರ್‌ವಿಡಿಯೋ ತುಣುಕುಸಮಿತಿ ಸದಸ್ಯರ ಮೇಲೆ ಮುಗಿಬಿದ್ದ ಗುಂಪುಸಿದ್ದರಾಮಯ್ಯ
Advertisement Banner
Previous Post

ಶಾಲೆ ಆರಂಭವಾದ ಬೆನ್ನಲ್ಲೇ ಕೋವಿಡ್‌ ಸೋಂಕು ಹೆಚ್ಚಳ ಭೀತಿ; ಆನ್‌ಲೈನ್‌ ಬೋಧನೆಗೆ ಸಜ್ಜಾಗಲು ಕೋರ್‌ಕಮಿಟಿ

Next Post

ಶಾಲಾ ಮಕ್ಕಳಿಗೆ ಸಮವಸ್ತ್ರ; ಕಾಲಹರಣದಿಂದ ಹೊರಬಂದ ಸರ್ಕಾರ, ಬಿಡ್‌ದಾರರಿಗೆ ಕಾರ್ಯಾದೇಶ ನೀಡಲು ಸೂಚನೆ

thefilestack

thefilestack

Next Post

ಶಾಲಾ ಮಕ್ಕಳಿಗೆ ಸಮವಸ್ತ್ರ; ಕಾಲಹರಣದಿಂದ ಹೊರಬಂದ ಸರ್ಕಾರ, ಬಿಡ್‌ದಾರರಿಗೆ ಕಾರ್ಯಾದೇಶ ನೀಡಲು ಸೂಚನೆ

Recommended

ಕೋವಿಡ್‌ ರೋಗಿಗಳಿಂದ ಅಧಿಕ ಶುಲ್ಕ ವಸೂಲಿ; ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಪಟ್ಟಿ ಬಹಿರಂಗ

ಕೋವಿಡ್‌ ರೋಗಿಗಳಿಂದ ಅಧಿಕ ಶುಲ್ಕ ವಸೂಲಿ; ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಪಟ್ಟಿ ಬಹಿರಂಗ

4 years ago

2,732 ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ; ಸರ್ಕಾರಿ ಶಾಲೆಗಳ ದುಸ್ಥಿತಿ ಅನಾವರಣ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd