the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಕ್ರೈಮ್‌ ಆಫೀಸರ್‌ ಹುದ್ದೆಗಳ ನೇಮಕ; ಒಂದೇ ಕಾಲೇಜಿನ 103 ಮಂದಿ ಆಯ್ಕೆಯ ಹಿಂದೆ ನಡೆದಿದೆಯೇ ಅಕ್ರಮ?

thefilestack by thefilestack
July 9, 2022
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಸೀನ್‌ ಅಫ್‌ ಕ್ರೈಮ್‌ ಆಫೀಸರ್‌ ಹುದ್ದೆಗಳಿಗೆ ಒಂದೇ ಕಾಲೇಜಿನ 103 ಮಂದಿ ಆಯ್ಕೆಯಾಗಿರುವುದು ಇದೀಗ ಬಹಿರಂಗವಾಗಿದೆ. ಪಿಎಸ್ಐ ನೇಮಕಾತಿ ಪಟ್ಟಿಯಲ್ಲಿ ನಿರ್ದಿಷ್ಟ ಕೋಚಿಂಗ್‌ ಸೆಂಟರ್‌ ಮತ್ತು ಪರೀಕ್ಷಾ ಕೇಂದ್ರದವರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಅಕ್ರಮಕ್ಕೆ ದಾರಿಮಾಡಿಕೊಟ್ಟಿರುವ ಬೆನ್ನಲ್ಲೇ ಸೀನ್‌ ಆಫ್‌ ಕ್ರೈಮ್‌ ಆಫೀಸರ್‌ ವಿಭಾಗದಲ್ಲಿ ಖಾಲಿ ಇದ್ದ ಒಟ್ಟು 209 ಹುದ್ದೆಗಳ ಪೈಕಿ 103 ಹುದ್ದೆಗಳಿಗೆ ಒಂದೇ ಕಾಲೇಜಿಗೆ ಸೇರಿದವರೇ ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಪೊಲೀಸ್‌ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಡಿಜಿಪಿ ಅಮೃತ್‌ ಪೌಲ್‌ ಅವರು ಈ ಹುದ್ದೆಯಿಂದ ವರ್ಗಾವಣೆ ಆಗುವ ಮುನ್ನ ನಡೆದಿದ್ದ ನೇಮಕಾತಿಯ ಆಯ್ಕೆಪಟ್ಟಿಯು ಬಿಡುಗಡೆಗೊಂಡ ಬೆನ್ನಲ್ಲೇ ಇದೀಗ ಒಂದೇ ಕಾಲೇಜಿನ 103 ಮಂದಿ ಆಯ್ಕೆಯಾಗಿರುವುದು ಮುನ್ನೆಲೆಗೆ ಬಂದಿದೆ.

 

ಆಯ್ಕೆಯಾಗಿರುವ 103 ಮಂದಿ ಕರ್ನಾಟಕ ವಿಶ್ವವಿದ್ಯಾಲಯದ ಕರ್ನಾಟಕ ವಿಜ್ಞಾನ ಕಾಲೇಜಿನ ಕ್ರಿಮಿನಾಲಜಿ ಮತ್ತು ಫೋರೆನ್ಸಿಕ್‌ ವಿಭಾಗದ ಬಿಎಸ್‌ಸಿ ಮತ್ತು ಬಿಎ ವಿದ್ಯಾರ್ಥಿಗಳಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಅಲ್ಲದೆ ಆಯ್ಕೆಪಟ್ಟಿ ಹೊರಬಿದ್ದ ಬೆನ್ನಲ್ಲೇ ಈ ಸಂಗತಿ ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್‌ ಗ್ರೂಪ್‌ನಲ್ಲಿ ಅಭಿನಂದನೆಗಳು ವ್ಯಕ್ತವಾಗಿವೆ.

 

‘ಇದೊಂದು ಹೆಮ್ಮೆ ಸಂಗತಿ. ಕೆಎಸ್‌ಸಿಡಿ ಮತ್ತು ಕೆಎಸಿಡಿಯ ಒಟ್ಟು 103 ವಿದ್ಯಾರ್ಥಿಗಳು ಸೀನ್‌ ಆಫ್‌ ಕ್ರೈಮ್‌ ಅಫೀಸರ್‌ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇದು ಕೆಸಿಡಿ ಇತಿಹಾಸಕ್ಕೆ ಸೇರ್ಪಡೆಯಾಗಿದೆ. ನಿವೃತ್ತ ಮತ್ತು ಹಾಲಿ ಬೋಧಕ ವೃಂದವು ಸಾಧಕರನ್ನು ಅಭಿನಂದಿಸಿದೆ,’ ಎಂಬ ಬರಹವು ವಾಟ್ಸಾಪ್‌ ಗ್ರೂಪ್‌ನಲ್ಲಿ ಹರಿದಾಡುತ್ತಿದೆ. ಇದರ ಸ್ಕ್ರೀನ್‌ ಶಾಟ್‌ವೊಂದು ‘ದಿ ಫೈಲ್‌’ಗೆ ಲಭ್ಯವಾಗಿದೆ. ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿರುವ ಸಂದೇಶವು ಕೆಎಸ್‌ಸಿಡಿ ಮತ್ತು ಕೆಎಸಿಡಿಯ ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್‌ ಗ್ರೂಪ್‌ನದ್ದು ಎಂಬುದನ್ನು ‘ದಿ ಫೈಲ್‌’ ಖಚಿತಪಡಿಸಿಕೊಂಡಿಲ್ಲ. ಆದರೆ ವಾಟ್ಸಾಪ್‌ನಲ್ಲಿ ಈ ಸಂದೇಶವು ಹರಿದಾಡುತ್ತಿರುವುದು ಅನುಮಾನಗಳಿಗೆ ಕಾರಣವಾಗಿದೆ.

 

ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿರುವ ಅಭಿನಂದನೆ ಸಂದೇಶ

 

2021ರಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿತ್ತಾದರೂ 2022ರ ಜುಲೈ 2ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಸಿಐಡಿ ಪೊಲೀಸರು ಅಮೃತ್‌ ಪೌಲ್‌ ಅವರನ್ನು ಬಂಧನಕ್ಕೊಳಪಡಿಸಿ ಅಮಾನತುಗೊಳಿಸಿರುವ ಬೆನ್ನಲ್ಲೇ 2022ರ ಜುಲೈ 2ರಂದು ಬಿಡುಗಡೆಗೊಂಡಿತ್ತು.

 

ಅಮೃತ್‌ ಪೌಲ್‌ ಅವರು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಇಡೀ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿತ್ತು. ಆದರೆ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಿರಲಿಲ್ಲ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ನಡೆಯುತ್ತಿದ್ದರಿಂದಾಗಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಿರಲಿಲ್ಲ ಎನ್ನಲಾಗಿದೆ. ನೇಮಕಾತಿ ಪ್ರಾಧಿಕಾರದ ಪ್ರಸ್ತುತ ಅಧ್ಯಕ್ಷರಾದ ಎಡಿಜಿಪಿ ಕಮಲ್‌ ಪಂತ್‌ ಅವರ ಸಹಿಯೊಂದಿಗೆ ತಾತ್ಕಾಲಿಕ ಆಯ್ಕೆಪಟ್ಟಿಯು ಬಿಡುಗಡೆಯಾಗಿತ್ತು.

Tags: AchieversadgpAmrit PaulBasavaraj BommaiBScCIDCriminlogyD K ShivakumarForensic Departmenth d kumarswamyHome MinisterKACDKamal PantKarnataka State PoliceKSCDPriyank KhargePSI Recruitment ScamRecruitment ScamScene Of Crime OfficersSiddaramaiahTeaching Facultyಅಪರಾಧ ಶಾಸ್ತ್ರಅಮ್ರಿತ್‌ ಪೌಲ್‌ಆರಗ ಜ್ಞಾನೇಂದ್ರಎಚ್‌ ಡಿ ಕುಮಾರಸ್ವಾಮಿಎಡಿಜಿಪಿಕರ್ನಾಟಕ ರಾಜ್ಯ ಪೊಲೀಸ್‌ಕರ್ನಾಟಕ ವಿಜ್ಞಾನ ಕಾಲೇಜುಕರ್ನಾಟಕ ವಿಶ್ವವಿದ್ಯಾಲಯಕ್ರಿಮಿನಲಾಜಿಗೃಹ ಸಚಿವಡಿ ಕೆ ಶಿವಕುಮಾರ್ನೇಮಕ ಅಕ್ರಮಪಿಎಸ್‌ಐ ನೇಮಕಾತಿ ಹಗರಣಪೊಲೀಸ್‌ ಮಹಾನಿರ್ದೇಶಕರುಪ್ರಿಯಾಂಕ್‌ ಖರ್ಗೆಫೋರೆನ್ಸಿಕ್‌ಬಸವರಾಜ ಬೊಮ್ಮಾಯಿಬಿಎಬಿಎಸ್‌ಸಿಸಿಐಡಿಸಿದ್ದರಾಮಯ್ಯಸೀನ್‌ ಆಫ್‌ ಕ್ರೈಮ್‌ ಆಫೀಸರ್‌ ಹುದ್ದೆಗಳು
Advertisement Banner
Previous Post

ವಿದ್ಯಾರ್ಥಿಗಳಿಗೆ ಕಳಪೆ, ತುಕ್ಕು, ಹಳೆಯ, ಗುಣಮಟ್ಟವಿಲ್ಲದ ಬೈಸಿಕಲ್‌; ಮೌಲ್ಯಮಾಪನ ವರದಿ ಬಹಿರಂಗ

Next Post

ಶಾಲಾ ಮಕ್ಕಳಿಗೆ ಶೂ ಖರೀದಿ; 5 ವರ್ಷದ ಹಿಂದಿನ ದರ ನಮೂದು, ದಾನಿಗಳ ಬಳಿ ಕೈಯೊಡ್ಡಬೇಕಿರುವ ಶಿಕ್ಷಕರು

thefilestack

thefilestack

Next Post

ಶಾಲಾ ಮಕ್ಕಳಿಗೆ ಶೂ ಖರೀದಿ; 5 ವರ್ಷದ ಹಿಂದಿನ ದರ ನಮೂದು, ದಾನಿಗಳ ಬಳಿ ಕೈಯೊಡ್ಡಬೇಕಿರುವ ಶಿಕ್ಷಕರು

Recommended

ದಲಿತ ಶಾಸಕರಿಗೆ ವಿಜಯೇಂದ್ರ ಬೆದರಿಕೆ ಆರೋಪ; ಮಧ್ಯ ಪ್ರವೇಶಿಸಿದ ಪರಿಶಿಷ್ಟ ಜಾತಿಗಳ ಆಯೋಗ, ಸರ್ಕಾರಕ್ಕೆ ಪತ್ರ

1 year ago

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd