the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಜನಸೇವಾಟ್ರಸ್ಟ್‌ಗೆ 25 ಎಕರೆ ಗೋಮಾಳ ಮಂಜೂರಾಗಿದ್ದರೂ ಹೆಚ್ಚುವರಿ 15 ಎಕರೆ ಕೋರಿಕೆ ಮನ್ನಣೆಗೆ ನಿರ್ದೇಶನ

thefilestack by thefilestack
February 3, 2023
in GOVERNANCE
0

photo credit;rashokofficialtwitter account

0
SHARES
0
VIEWS
Share on FacebookShare on Twitter

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ ಈಗಾಗಲೇ ರಾಜ್ಯ ಸರ್ಕಾರದಿಂದ 25 ಎಕರೆ ವಿಸ್ತೀರ್ಣ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿದ್ದರೂ ಪುನಃ 15 ಎಕರೆ ಹೆಚ್ಚುವರಿ ಜಮೀನಿಗೆ ಬೇಡಿಕೆ ಇಟ್ಟಿರುವುದು ಇದೀಗ ಬಹಿರಂಗವಾಗಿದೆ.

 

ಜನಸೇವಾ ಟ್ರಸ್ಟ್‌ ಈಗಾಗಲೇ ಚನ್ನೇನಹಳ್ಳಿಯಲ್ಲಿ ಅಂದಾಜು 80 ಕೋಟಿ ರು. ಬೆಲೆ ಬಾಳುವ 40.07 ಎಕರೆ ಜಮೀನು ಹೊಂದಿದ್ದರೂ ಚನ್ನೇನಹಳ್ಳಿಗೆ ಹೊಂದಿಕೊಂಡಿರುವ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿಯೂ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿರುವ ಬೆನ್ನಲ್ಲೇ ಹೆಚ್ಚುವರಿಯಾಗಿ 15 ಎಕರೆ ಜಮೀನು ಮಂಜೂರಾತಿಗಾಗಿ ನಿರ್ದೇಶನ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಸರ್ವೆ ನಂಬರ್‌ 89ರಲ್ಲಿದ್ದ ಒಟ್ಟು 40.20 ಎಕರೆ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಜನಸೇವಾ ಟ್ರಸ್ಟ್‌ಗೆ 2022ರ ಸೆ. 13ರಂದು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.

 

ಇದಾಗಿ 9 ದಿನಗಳ ಅಂತರದಲ್ಲೇ ಟ್ರಸ್ಟ್‌ನ ಅ ಸಾ ನಿರ್ಮಲ್‌ ಕುಮಾರ್‌ ಎಂಬುವರು 2022ರ ಸೆ.28ರಂದು ಪುನಃ 15 ಎಕರೆ ಜಮೀನು ಮಂಜೂರಾತಿಗಾಗಿ ಸರ್ಕಾರಕ್ಕೆ  ಕೋರಿಕೆ   ಸಲ್ಲಿಸಿತ್ತು.

 

ಇದನ್ನಾಧರಿಸಿ  ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಯು 2023ರ ಜನವರಿ 25ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

 

‘ಜನಸೇವಾ ಟ್ರಸ್ಟ್‌ಗೆ 15 ಎಕರೆ ಜಮೀನನ್ನು ಮಾರ್ಗಸೂಚಿ ಮೌಲ್ಯದ ಶೇ. 5ರಷ್ಟು ನಿಗದಿಪಡಿಸಿ ಮಂಜೂರು ಮಾಡಬೇಕು ಎಂದು ಕೋರಿರುತ್ತಾರೆ. ಈ ಪತ್ರದಲ್ಲಿ ತಿಳಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು,’ ಎಂದು ಸರ್ಕಾರದ ಕಾರ್ಯದರ್ಶಿಯು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶಿಸಿದ್ದಾರೆ. ಕಂದಾಯ ಸಚಿವ ಆರ್‌ ಅಶೋಕ್‌ ಅವರ ಸೂಚನೆ ಮೇರೆಗೆ ಪತ್ರ ಬರೆಯಲಾಗಿದೆ ಎಂದು ತಿಳಿದು ಬಂದಿದೆ.

 

ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಸರ್ವೆ ನಂಬರ್‌ 89ರಲ್ಲಿದ್ದ ಒಟ್ಟು 40.20 ಎಕರೆ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನಲ್ಲಿ ಸುಮಾರು 40 ಕ್ಕೂ ಹೆಚ್ಚಿನ ಭೂ ಭಾಗದಲ್ಲಿ ಕಲ್ಲು ಬಂಡೆಗಳಿವೆ. ಎತ್ತರ ಮತ್ತು ತಗ್ಗು ಪ್ರದೇಶದಿಂದ ಕೂಡಿದೆ. ಉದ್ದೇಶಿತ ಕಟ್ಟಡಗಳನ್ನು ನಿರ್ಮಾಣ ಮಾಢುವ ಸಂದರ್ಭದಲ್ಲಿ ಅಪಾರ ಪ್ರಮಾಣದ ಹಣವನ್ನು ಭರಿಸಬೇಕಾಗುತ್ತದೆ. ಮತ್ತು ಉದ್ದೇಶಿತ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ತರಲು ಈಗ ಮಂಜೂರಾದ 25 ಎಕರೆ ಭೂಮಿಯ ಜತೆಗೆ ಇದೇ ಸರ್ವೇ ನಂಬರ್‌ನಲ್ಲಿರುವ ಇನ್ನೂ 15 ಎಕರೆ ಭೂಮಿಯ ಅವಶ್ಯಕತೆ ಇದೆ ಎಂದು ಜನಸೇವಾ ಟ್ರಸ್ಟ್‌ನ ಅ ಸ ನಿರ್ಮಲಕುಮಾರ್‌ ಅವರು ಸರ್ಕಾರಕ್ಕೆ ಸಲ್ಲಿಸಿರುವ ಕೋರಿಕೆಯಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಕುರುಬರಹಳ್ಳಿಯಲ್ಲಿ ಪ್ರತಿ ಎಕರೆಗೆ ಮಾರುಕಟ್ಟೆ ಬೆಲೆಯು 2 ಕೋಟಿ ರು. ಇದೆ. ಇದರ ಪ್ರಕಾರ 25 ಎಕರೆಗೆ 50 ಕೋಟಿ ರು. ಬೆಲೆ ಇದೆ. ಸರ್ಕಾರವು ಆದೇಶದಲ್ಲಿ ನಮೂದಿಸಿರುವ ಮಾರ್ಗಸೂಚಿ ದರದ ಪ್ರಕಾರ ಪ್ರತಿ ಎಕರೆಗೆ 1.20 ಕೋಟಿ ರು. ಇದೆ. ಆದರೆ ಜನಸೇವಾ ಟ್ರಸ್ಟ್‌ಗೆ ಮಾರ್ಗಸೂಚಿ ಮೌಲ್ಯದ ಶೇ.25ರಷ್ಟು ದರದಲ್ಲಿ 25 ಎಕರೆಯನ್ನು ಈಗಾಗಲೇ ಮಂಜೂರು ಮಾಡಿರುವ ಸರ್ಕಾರವು ಬೊಕ್ಕಸಕ್ಕೆ 20 ಕೋಟಿ ನಷ್ಟವನ್ನು ಹೊತ್ತುಕೊಂಡಿದೆ.

 

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೆ ನಂ 89ರಲ್ಲಿ ಲಭ್ಯವಿರುವ ಜಮೀನನ್ನು ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ ಬಲರಾಮ್‌ ಅವರು ‘ ಈ ಭೂಮಿಯು ಅತಿ ಅಮೂಲ್ಯವಾದ ಭೂಮಿಯಾಗಿರುವುದರಿಂದ ಈ ಸಂಸ್ಥೆಗೆ ನೀಡುವುದು ಸರಿಯಲ್ಲ. ಆದ್ದರಿಂದ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ತಿಳಿಸಲು ನಿರ್ದೇಶಿತನಾಗಿದ್ದೇನೆ,’ ಎಂದು 2022ರ ಮೇ 4ರಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗೆ ಪತ್ರವನ್ನೂ ಬರೆದಿದ್ದರು,

 

ಈ ಸರ್ವೆ ನಂಬರ್‌ನಲ್ಲಿರುವ ಜಮೀನನ್ನು ಆಶ್ರಯ ಯೋಜನೆ ಮತ್ತು ಶಾಶ್ವತ ಪುನರ್‌ ವಸತಿ ಉದ್ದೇಶವೂ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿದೆ. ಆದರೂ ಸರ್ಕಾರವು 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿರುವುದನ್ನು ಸ್ಮರಿಸಬಹುದು.

Tags: Basavaraj BommaibengaluruD K Shivakumarh d kumaraswamyJanaseva TrustKurubarahallir ashokRastrothana ParishadrevenueRSSSiddaramaiahaTavarekereಆರ್‌ ಅಶೋಕ್‌ಕಂದಾಯ ಇಲಾಖೆಕುರುಬರಹಳ್ಳಿಗೋಮಾಳಗೋಮಾಳ ಜಮೀನುಜನಸೇವಾ ಟ್ರಸ್ಟ್‌ಡಿ ಕೆ ಶಿವಕುಮಾರ್ತಾವರಕೆರೆಬಸವರಾಜ ಬೊಮ್ಮಾಯಿಬೆಂಗಳೂರು ನಗರ ಜಿಲ್ಲೆಮಂಜೂರುಮಾರುಕಟ್ಟೆ ಬೆಲೆರಾಷ್ಟ್ರೋತ್ಥಾನ ಪರಿಷದ್‌ಸಂಘ ಪರಿವಾರಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿಹೆಚ್ಚುವರಿ ಜಮೀನು
Advertisement Banner
Previous Post

ಕಲ್ಬುರ್ಗಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದ ಕೆಲಗಂಟೆಗಳ ಕಾರ್ಯಕ್ರಮಕ್ಕೆ 11.18 ಕೋಟಿ ರು. ವೆಚ್ಚ

Next Post

ಮೈಗಳ್ಳತನ, ಇಚ್ಛಾಶಕ್ತಿ ಕೊರತೆ, ನಿಷ್ಕ್ರೀಯತೆ; ವಿಶೇ‍ಷ ಅಭಿವೃದ್ಧಿ ಯೋಜನೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ

thefilestack

thefilestack

Next Post
ಶೇ.50ರ ಗಡಿಯನ್ನೂ  ದಾಟದ 30 ಇಲಾಖೆ, ತೆವಳಿವೆ ಜನಕಲ್ಯಾಣ ಯೋಜನೆಗಳು; ಪ್ರಚಾರಕ್ಕಷ್ಟೇ ಸೀಮಿತ

ಮೈಗಳ್ಳತನ, ಇಚ್ಛಾಶಕ್ತಿ ಕೊರತೆ, ನಿಷ್ಕ್ರೀಯತೆ; ವಿಶೇ‍ಷ ಅಭಿವೃದ್ಧಿ ಯೋಜನೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ

Recommended

ಸರ್ಕಾರಕ್ಕೆ 751 ಕೋಟಿ ವಾಪಾಸ್‌; ದುರ್ಬಲ ವರ್ಗಗಳಿಗೆ ಸೂರು ಕಲ್ಪಿಸಲು ವಿಫಲವಾಯಿತೇ?

5 years ago

ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ಮುಚ್ಚಲು ಹೊರಟ ಬಿಜೆಪಿ ಸರ್ಕಾರ

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd