the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

15ನೇ ಹಣಕಾಸು ಆಯೋಗ; ರಾಜ್ಯ ವಿಪತ್ತು ನಿರ್ವಹಣೆಗೆ ಈವರೆಗೂ ಬಿಡುಗಡೆಯಾಗದ ಅನುದಾನ

thefilestack by thefilestack
May 15, 2023
in GOVERNANCE
0

photo credit; rediffmail

0
SHARES
0
VIEWS
Share on FacebookShare on Twitter

ಬೆಂಗಳೂರು; ಜಿಲ್ಲಾ ಪಂಚಾಯ್ತಿ ಸೇರಿದಂತೆ ಗ್ರಾಮೀಣ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರೋಗ್ಯ ಸೇರಿದಂತೆ ಇನ್ನಿತರೆ ವಲಯಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಅನುದಾನ ಬಿಡುಗಡೆಗೆ ಬಾಕಿ ಉಳಿಸಿಕೊಂಡಿದ್ದ ಕೇಂದ್ರ ಸರ್ಕಾರವು ಇದೀಗ ರಾಜ್ಯ ವಿಪತ್ತು ನಿರ್ವಹಣೆಗೂ ಅನುದಾನ ಬಿಡುಗಡೆ ಮಾಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

 

ಅಷ್ಟೇ ಅಲ್ಲದೇ 15ನೇ ಹಣಕಾಸು ಆಯೋಗದ ಶಿಫಾರಸ್ಸಿನ್ವಯ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಸ್‌ಡಿಎಂಎಫ್‌ ಮಾರ್ಗಸೂಚಿಗಳನ್ನೂ ಹೊರಡಿಸಿಲ್ಲ ಎಂಬುದನ್ನು ಖುದ್ದು ಆರ್ಥಿಕ ಇಲಾಖೆಯೇ ಬಹಿರಂಗಪಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯು 2023ರ ಮೇ 5ರಂದು ಅನಧಿಕೃತ ಟಿಪ್ಪಣಿ ಹೊರಡಿಸಿದೆ. ಇದರ ಪ್ರತಿಯು 'ದಿ ಫೈಲ್‌'ಗೆ ಲಭ್ಯವಾಗಿದೆ.

 

'ಕಂದಾಯ ಇಲಾಖೆಯು ವಿಪತ್ತು ನಿರ್ವಹಣೆಗೆ ಕೈಗೊಂಡ ಕ್ರಮಗಳ ಮಾಹಿತಿಯನ್ನು ಒದಗಿಸುವಂತೆ ಕೋರಲಾಗಿತ್ತು. ಈ ಸಂಬಂಧ ಕಡತ ಸಂಖ್ಯೆ ಕಂಇ 63 ಟಿಎನ್‌ ಆರ್‌ 2023ರಲ್ಲಿನ ಟಿಪ್ಪಣಿಯಲ್ಲಿನ ಮಾಹಿತಿಯಂತೆ 2022-23ನೇ ಸಾಲಿನ 15ನೇ ಕೇಂದ್ರೀಯ ಹಣಕಾಸು ಆಯೋಗದ ಶಿಫಾರಸ್ಸಿನ್ವಯ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಸ್‌ಡಿಎಂಎಫ್‌ಗೆ ಮಾರ್ಗಸೂಚಿಗಳನ್ನು ಹೊರಡಿಸಿರುವುದಿಲ್ಲವೆಂದು ಹಾಗೂ ಎಸ್‌ಡಿಎಂಎಫ್‌ ಅನುದಾನ ಬಿಡುಗಡೆಯಾಗಿಲ್ಲ,' ಎಂದು ಅನಧಿಕೃತ ಟಿಪ್ಪಣಿಯಲ್ಲಿ ಉಲ್ಲೇಖಿಸಿದೆ.

 

ಜಿಲ್ಲಾ ಪಂಚಾಯ್ತಿ ಸೇರಿದಂತೆ ಗ್ರಾಮೀಣ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರೋಗ್ಯ, ವಿಪತ್ತು ನಿರ್ವಹಣೆ ಸೇರಿದಂತೆ ಇನ್ನಿತರೆ ವಲಯಗಳ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವ ಸಂಬಂಧ 15ನೇ ಹಣಕಾಸು ಆಯೋಗ ಮಾಡಿದ್ದ ಶಿಫಾರಸ್ಸಿನ ಒಟ್ಟು ಮೊತ್ತದ ಎರಡನೇ ಕಂತಿನ ಅನುದಾನ ಪೈಕಿ 2021ರ ಡಿಸೆಂಬರ್‌ 10ರ ಅಂತ್ಯಕ್ಕೆ ಒಟ್ಟು 2,142.70 ಕೋಟಿ ರು. ಗಳನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿತ್ತು.
15ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿದ್ದ ಒಟ್ಟು 4,890.53 ಕೋಟಿ ರು. ಪೈಕಿ 2021ರ ನವೆಂಬರ್‌ ಅಂತ್ಯಕ್ಕೆ ಒಟ್ಟು 2,747.83 ಕೋಟಿ ರು.ಗಳನ್ನು ರಾಜ್ಯ ಸರ್ಕಾರವು ಸ್ವೀಕರಿಸಿತ್ತು. ಆದರೆ 2,142.70 ಕೋಟಿ ರು. ಅನುದಾನ ಬಾಕಿ ಉಳಿಸಿಕೊಂಡಿತ್ತು. ಈ ಕುರಿತು 'ದಿ ಫೈಲ್‌' ವರದಿ ಪ್ರಕಟಿಸಿತ್ತು.

 

https://stack.thefile.in/2021/12/governance/9937/

 

2021ರ ಜೂನ್‌ ತಿಂಗಳಿನಿಂದಲೂ ಕೇಂದ್ರ ಸರ್ಕಾರವು ಹಣ ಬಿಡುಗಡೆ ಮಾಡುವಲ್ಲಿನ ವಿಳಂಬದ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ ಏಕರೂಪ್‌ ಕೌರ್‌ ಅವರು ಹಲವು ಬಾರಿ ಇಲಾಖೆಯ ಉನ್ನತ ಅಧಿಕಾರಿಗಳ ಗಮನ ಸೆಳೆದಿದ್ದರೂ 5 ತಿಂಗಳಾದರೂ ಬಾಕಿ ಬರಬೇಕಿರುವ ಒಟ್ಟು 2,142.70 ಕೋಟಿ ರು.ನಲ್ಲಿ ಬಿಡಿಗಾಸೂ ಬಂದಿರಲಿಲ್ಲ.

 

ರಾಜ್ಯಕ್ಕೆ 4,891.00 ಕೋಟಿ ರು. ಅನುದಾನ ಒದಗಿಸಲು ಶಿಫಾರಸ್ಸು ಮಾಡಿತ್ತು. ಇದರಲ್ಲಿ ಮೊದಲನೇ ಕಂತಿನಲ್ಲಿ 2,445.50 ಕೋಟಿ ಹಂಚಿಕೆಯಾಗಿತ್ತು. ಈ ಪೈಕಿ 2021ರ ಜೂನ್‌ ಅಂತ್ಯಕ್ಕೆ ರಾಜ್ಯ ಸರ್ಕಾರಕ್ಕೆ ಕೇವಲ 941.80 ಕೋಟಿ ರು. ಬಿಡುಗಡೆ ಮಾಡಿ ಇನ್ನೂ 1,503.70 ಕೋಟಿ ಬಾಕಿ ಉಳಿಸಿಕೊಂಡಿದೆ. ಈ ಕುರಿತು ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ ಏಕರೂಪ್‌ ಕೌರ್‌ ಅವರು ಸರ್ಕಾರದ ಗಮನಕ್ಕೆ ತಂದಿದ್ದರು. '15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಪ್ರಕಾರ 2021-22ನೇ ಸಾಲಿನ ಮೊದಲ ಕಂತಿನಲ್ಲಿ ಬಾಕಿ ಉಳಿದಿರುವ 1,503.70 ಕೋಟಿ ರು. ಬಿಡುಗಡೆಗೆ ಗಮನಹರಿಸಬೇಕು,' ಎಂದು ಕೋರಿದ್ದರು.

 

ಡಿಸೆಂಬರ್‌ 10ರ ಅಂತ್ಯಕ್ಕೆ ಬಾಕಿ ಎಷ್ಟಿತ್ತು?

 

2021ರ ಜೂನ್‌ ಅಂತ್ಯಕ್ಕೆ 945 ಕೋಟಿ ರು.ಮಾತ್ರ ಸರ್ಕಾರ ಸ್ವೀಕರಿಸಿತ್ತು . 2021ರ ಡಿಸೆಂಬರ್‌ 10ರ ಅಂತ್ಯಕ್ಕೆ 2,142.70 ಕೋಟಿ ರು. ಬಾಕಿ ಉಳಿದಿತ್ತು. ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ 2,377 ಕೋಟಿ ರು.ಗಳನ್ನು 15ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿತ್ತು. ಈ ಪೈಕಿ ನವಂಬರ್‌ ಅಂತ್ಯಕ್ಕೆ 1,188.05 ಕೋಟಿ ರು.ಗಳನ್ನಷ್ಟೇ ರಾಜ್ಯ ಸರ್ಕಾರವು ಸ್ವೀಕರಿಸಿದೆ. 1,188.5 ಕೋಟಿ ರು. ಬಿಡುಗಡೆಗೆ ಬಾಕಿ ಇರಿಸಿಕೊಂಡಿತ್ತು.
ಅದೇ ರೀತಿ ಗ್ರಾಮೀಣ ನೈರ್ಮಲ್ಯೀಕರಣ ಮತ್ತು ವಾಯುಗುಣಮಟ್ಟ ವೃದ್ಧಿಸಲು ಒಟ್ಟು 421 ಕೋಟಿ ರು.ಗಳನ್ನು ಶಿಫಾರಸ್ಸು ಮಾಡಿತ್ತು. ಡಿಸೆಂಬರ್‌ 10ರವರೆಗೆ ಈ ಬಾಬ್ತಿನಲ್ಲಿ ಬಿಡಿಗಾಸನ್ನೂ ರಾಜ್ಯ ಸರ್ಕಾರವು ಸ್ವೀಕರಿಸಿರಲಿಲ್ಲ.

 

ಹಾಗೆಯೇ ನಾನ್‌ ಮಿಲಿಯನ್‌ ಪ್ಲಸ್‌ ಸಿಟಿ ಯೋಜನೆಯಡಿಯಲ್ಲಿ ಒಟ್ಟು 750 ಕೋಟಿ ರು.ಗಳಿಗೆ ಶಿಫಾರಸ್ಸು ಮಾಡಿತ್ತು. ಈ ಪೈಕಿ ನವೆಂಬರ್‌ ಅಂತ್ಯಕ್ಕೆ 375 ಕೋಟಿ ರು. ಗಳನ್ನು ಸ್ವೀಕರಿಸಿದೆಯಾದರೂ ಡಿಸೆಂಬರ್‌ 10ರ ಅಂತ್ಯಕ್ಕೆ ಇನ್ನು 375 ಕೋಟಿ ರು. ಬಿಡುಗಡೆಗೆ ಬಾಕಿ ಇದೆ. ವಿಪತ್ತು ನಿರ್ವಹಣೆಗೆ 395.5 ಕೋಟಿ ಪೈಕಿ 79.10 ಕೋಟಿ ರು.ಗಳನ್ನು ಜೂನ್‌ನಲ್ಲಿ ಬಾಕಿ ಉಳಿಸಿಕೊಂಡಿತ್ತು. ಆದರೆ ಡಿಸೆಂಬರ್‌ 10ರ ತನಕ ಇನ್ನೂ 158.20 ಕೋಟಿ ರು.ಗಳು ಬಿಡುಗಡೆಗೆ ಬಾಕಿ ಇತ್ತು.

 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು 15ನೇ ಹಣಕಾಸು ಆಯೋಗದ ಅನುದಾನಕ್ಕೆ 2021-22ನೇ ಸಾಲಿನ ಕ್ರಿಯಾಯೋಜನೆ ಸಿದ್ಧಪಡಿಸಲು 2021ರ ಜುಲೈ 6ರಂದು ಸುತ್ತೋಲೆ ಹೊರಡಿಸಿತ್ತು. ’15ನೇ ಹಣಕಾಸು ಆಯೋಗದ ಅನುದಾನದಲ್ಲಿ 2021-22ನೇ ಸಾಲಿನ ಆರ್ಥಿಕ ವರ್ಷದಲ್ಲಿ ರಾಜ್ಯಕ್ಕೆ 2,377.00 ಕೋಟಿ ನಿಗದಿಪಡಿಸಿದೆ. ಈ ಅನುದಾನದಲ್ಲಿ ರಾಜ್ಯ ಸರ್ಕಾರವು ಶೇ.85ರಷ್ಟು ಅನುದಾನವನ್ನು ಗ್ರಾಮ ಪಂಚಾಯ್ತಿಗಳಿಗೆ ಶೇ.10ರಷ್ಟು ಅನುದಾನವನ್ನು ತಾಲೂಕು ಪಂಚಾಯ್ತಿಗಳಿಗೆ ಮತ್ತು ಶೇ.5ರಷ್ಟು ಅನುದಾನವನ್ನು ಜಿಲ್ಲಾ ಪಂಚಾಯ್ತಿಗಳಿಗೆ ನಿಗದಿಪಡಿಸಬೇಕಿದೆ,’ ಎಂದು ಸುತ್ತೋಲೆ ಹೊರಡಿಸಿತ್ತು.

Tags: 15th Finance Commission15ನೇ ಹಣಕಾಸುB S YediyurappaBasavaraj BommaiCentral governmentD K ShivakumarFinance Ministergrantsh d kumarswamynarendra modiNirmala SitaramanSiddaramaiahaState Disaster Managementಅನುದಾನಆಯೋಗಆರ್ಥಿಕ ಇಲಾಖೆಕೆ ಎಸ್‌ ಈಶ್ವರಪ್ಪಜಿಲ್ಲಾ ವಿಪತ್ತು ನಿಧಿಡಿ ಕೆ ಶಿವಕುಮಾರ್ಪ್ರಾಧಿಕಾರಬಸವರಾಜ ಬೊಮ್ಮಾಯಿಬಿ ಎಸ್‌ ಯಡಿಯೂರಪ್ಪಬಿಡಿಗಾಸುರಾಜ್ಯ ವಿಪತ್ತು ನಿರ್ವಹಣೆವಿಪತ್ತುಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಭ್ರಷ್ಟಾಚಾರ, ಅಧಿಕಾರ-ಹಣ ದುರುಪಯೋಗ, ಅಕ್ರಮಗಳ ಸುತ್ತ ‘ದಿ ಫೈಲ್‌’ನ ಪ್ರಮುಖ 130 ವರದಿಗಳು

Next Post

ಗ್ರಾಮ ಪಂಚಾಯ್ತಿಗಳಲ್ಲಿ ಲೆಕ್ಕಪರಿಶೋಧನೆ; 251.99 ಕೋಟಿ ರು. ಜಮೆ-ವೆಚ್ಚಕ್ಕೆ ದಾಖಲೆಗಳೇ ಇಲ್ಲ

thefilestack

thefilestack

Next Post

ಗ್ರಾಮ ಪಂಚಾಯ್ತಿಗಳಲ್ಲಿ ಲೆಕ್ಕಪರಿಶೋಧನೆ; 251.99 ಕೋಟಿ ರು. ಜಮೆ-ವೆಚ್ಚಕ್ಕೆ ದಾಖಲೆಗಳೇ ಇಲ್ಲ

Recommended

ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಸಂಪನ್ಮೂಲ ಸಂಗ್ರಹ; ಸಾಲ ವಸೂಲಾತಿಗಿಳಿದ ಸರ್ಕಾರ

4 years ago

ಪಿಎಂ ಕಿಸಾನ್‌ ಜಾರಿಗೊಂಡ ನಂತರವೂ ದೇಶದಲ್ಲಿ 16,854, ಕರ್ನಾಟಕದಲ್ಲಿ 3,573 ರೈತರ ಆತ್ಮಹತ್ಯೆ

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd