the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

342 ಪಂಚಾಯ್ತಿಗಳಲ್ಲಿ ನಡೆಯದ ವಾರ್ಡ್‌, ಗ್ರಾಮ ಸಭೆ; ಸಾರ್ವಜನಿಕ ಸಹಭಾಗಿತ್ವದ ಕೊರತೆ ಬಹಿರಂಗ

thefilestack by thefilestack
May 18, 2023
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ಕಾರ್ಯಕ್ಷಮತೆ ಲೆಕ್ಕಪರಿಶೋಧನೆಗೆ ಒಳಪಟ್ಟ ರಾಜ್ಯದ 559 ಗ್ರಾಮ ಪಂಚಾಯ್ತಿಗಳ ಪೈಕಿ 342 ಪಂಚಾಯ್ತಿಗಳಲ್ಲಿ ವಾರ್ಡ್ ಸಭೆ ಮತ್ತು ಗ್ರಾಮ ಸಭೆ, ಜಮಾಬಂದಿಗಳನ್ನೇ ನಡೆಸಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

 

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬೆಂಗಳೂರು ವಿಭಾಗದ 171 ಪಂಚಾಯ್ತಿಗಳ ಪೈಕಿ 75 ಪಂಚಾಯ್ತಿಗಳಲ್ಲಿ ವಾರ್ಡ್‌ ಮತ್ತು ಗ್ರಾಮ ಸಭೆ ನಡೆದಿಲ್ಲ. ಬೆಳಗಾವಿ ವಿಭಾಗದಲ್ಲಿ 97, ಕಲ್ಬುರ್ಗಿ ವಿಭಾಗದಲ್ಲಿ 110, ಮೈಸೂರು ವಿಭಾಗದಲ್ಲಿ 60 ಪಂಚಾಯ್ತಿಗಳಲ್ಲಿ ವಾರ್ಡ್‌ ಮತ್ತು ಗ್ರಾಮ ಸಭೆಗಳನ್ನು ನಡೆಸಿಲ್ಲ ಎಂಬ ಅಂಕಿ ಅಂಶವು ವರದಿಯಿಂದ ತಿಳಿದು ಬಂದಿದೆ.

 

ವಾರ್ಡ್‌ ಸಭೆ ಮತ್ತು ಗ್ರಾಮ ಸಭೆಗಳ ಮೂಲಕ ಯೋಜನೆಗಳನ್ನು ಸಿದ್ಧಪಡಿಸುವುದು ಮತ್ತು ಅನುಷ್ಠಾನ ಹೇಗಾಗುತ್ತಿದೆ ಎಂಬುದರ ಮೇಲೆ ಹದ್ದಿನ ಕಣ್ಣಿಡಲು ಈ ಸಭೆಗಳು ನಡೆಯಬೇಕು. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಸೆಕ್ಷನ್‌ 3(ಸಿ) ಅನ್ವಯ ವಾರ್ಡ್ ಸಭೆ, ಸೆಕ್ಷನ್‌ 3(ಇ) ಅನ್ವಯ ಗ್ರಾಮ ಸಭೆಗಳನ್ನು 6 ತಿಂಗಳ ಅವಧಿಯನ್ನು ಮೀರದಂತೆ ಏರ್ಪಡಿಸಬೇಕು.

 

ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಲು ಹಾಗೂ ರೂಪಿಸಿರುವ ಯೋಜನೆಗಳಲ್ಲಿ ಜನತೆಯ ಆಶೋತ್ತರಗಳಿಗೆ ಹೆಚ್ಚಿನ ಅವಕಾಶ ಲಭ್ಯವಾಗುವ ಉದ್ದೇಶದಿಂದಲೇ ವಾರ್ಡ್ ಮತ್ತು ಗ್ರಾಮ ಸಭೆಗಳನ್ನು ಆಯೋಜಿಸಬೇಕಿತ್ತು. ಅದರೆ 342 ಪಂಚಾಯ್ತಿಗಳಲ್ಲಿ ವಾರ್ಡ್‌ ಸಭೆ ಮತ್ತು ಗ್ರಾಮ ಸಭೆಗಳನ್ನೇ ನಡೆಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಈ ಸಭೆಗಳಲ್ಲಿ ಭಾಗವಹಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಭೆಗಳಲ್ಲಿ ತೆಗೆದುಕೊಳ್ಳಬೇಕಾದ ವಿಷಯಗಳು, ವಿಷಯಗಳನ್ನು ನಿರ್ಣಯಿಸುವ ವಿಧಾನ ಮತ್ತು ನಡವಳಿಗಳ ದಾಖಲೆ ಇತ್ಯಾದಿ ವಿಷಯಗಳ ಬಗ್ಗೆ ದಾಖಲೆಗಳನ್ನು ನಿರ್ವಹಿಸಿಲ್ಲ. ಮತ್ತು ಅವುಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ.

 

‘ಯೋಜನೆಗಳ ಫಲಾನುವಿಗಳ ಆಯ್ಕೆ ಪ್ರಕ್ರಿಯೆ ಮತ್ತು ಗ್ರಾಮ ಪಂಚಾಯ್ತಿಗಳ ಉತ್ತರದಾಯಿತ್ವದ ಪರಿಶೀಲನೆಯಲ್ಲಿ ಸಾರ್ವಜನಿಕ ಸಹಭಾಗಿತ್ವದ ಕೊರತೆ ಇದೆ,’ ಎಂದು ಲೆಕ್ಕಪರಿಶೋಧನೆ ವರದಿಯು ಗಮನಿಸಿರುವುದು ತಿಳಿದು ಬಂದಿದೆ.

 

ಗ್ರಾಮ ಪಂಚಾಯ್ತಿಯಲ್ಲಿ ಅನುಷ್ಠಾನಗೊಳ್ಳುವ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸರ್ಕಾರದ ಎಲ್ಲಾ ಹಂತದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವಲ್ಲಿ ಗ್ರಾಮದ ಎಲ್ಲಾ ನಾಗರೀಕರು ನೇರವಾಗ ಭಾಗಿಯಾಗಬೇಕು. ಆದರೆ ಕಾರ್ಯಕ್ಷಮತೆ ಕೈಗೊಂಡ ಪಂಚಾಯ್ತಿಗಳ ಪೈಕಿ 119 ಪಂಚಾಯ್ತಿಗಳಲ್ಲಿ ಜಮಾಬಂದಿಯನ್ನೇ ನಡೆಸಿಲ್ಲ. ಹೀಗಾಗಿ ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಸ್ಥಳೀಯ ನಾಗರೀಕರು ಭಾಗಿಯಾಗಿದ್ದಾರೆಯೇ ಎಂಬುದನ್ನು ನಿಶ್ಚಿತಪಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಲೆಕ್ಕ ಪರಿಶೋಧನೆ ವರದಿಯು ವಿವರಿಸಿದೆ.

 

‘ಗ್ರಾಮ ಮಟ್ಟದಲ್ಲಿ ಸ್ಥಳೀಯ ಸ್ವಯಂ ಆಡಳಿತದ ಮೂಲ ಘಟಕವಾಗುವ ಉದ್ದೇಶದಿಂದ ರೂಪಿಸಲಾಗಿರುವ ಈ ಸಭೆಗಳನ್ನು ನಿಯಮಿತವಾಗಿ ನಡೆಸದೇ ಇರುವುದರಿಂದ ಗ್ರಾಮ ಪಂಚಾಯ್ತಿಯ ಆಡಳಿತದಲ್ಲಿ ಸಾರ್ವಜನಿಕ ಸಹಭಾಗಿತ್ವ  ಪೂರ್ಣ ಪ್ರಮಾಣದಲ್ಲಿ ಅನುಷ್ಟಾನಗೊಂಡಿರುವುದಿಲ್ಲ,’ ಎಂದು ವರದಿಯು ಉಲ್ಲೇಖಿಸಿದೆ.

Tags: Audit ReportsBasavaraj BommaiD K ShivakumarEvalution ReportGrama SabheGrama Swarajh d kumarswamyH K PatilK S EshwarappaPanchayatRdprSiddaramaiahaVidhana SabheVillage PanchayatWard Sabheಅಧಿಕಾರಶಾಹಿಆಡಿಟ್‌ಉತ್ತರದಾಯಿತ್ವಕುಂದು ಕೊರತೆಗ್ರಾಮ ಸಭೆಗ್ರಾಮೀಣಾಭಿವೃದ್ದಿಜನಪ್ರತಿನಿಧಿಗಳುಜಮಾಬಂದಿಜಿಲ್ಲಾ ಪಂಚಾಯ್ತಿಡಿ ಕೆ ಶಿವಕುಮಾರ್ತಾಲೂಕು ಪಂಚಾಯ್ತಿದಾಖಲೆನಿರ್ಣಯಪಂಚಾಯತ್‌ಫಲಾನುಭವಿಗಳ ಆಯ್ಕೆಬಸವರಾಜ ಬೊಮ್ಮಾಯಿಮೌಲ್ಯಮಾಪನಯೋಜನೆಲೆಕ್ಕ ಪರಿಶೋಧನೆಲೆಕ್ಕಪರಿಶೋಧನೆವಾರ್ಡ್‌ ಸಭೆಸಾರ್ವಜನಿಕ ಸಹಭಾಗಿತ್ವಸಿದ್ದರಾಮಯ್ಯಹೆಚ್‌ ಕೆ ಪಾಟೀಲ್‌ಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

179 ಪಂಚಾಯ್ತಿಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿಗಳೇ ಇಲ್ಲ; ಬಿಜೆಪಿ ಸರ್ಕಾರದ ಆಡಳಿತ ವೈಖರಿಗೆ ಕೈಗನ್ನಡಿ

Next Post

ನರೇಗಾ ಕಾಮಗಾರಿ; ಸಾಮಾಜಿಕ ಲೆಕ್ಕಪರಿಶೋಧನೆಯನ್ನೇ ನಡೆಸದ 274 ಪಂಚಾಯ್ತಿಗಳು

thefilestack

thefilestack

Next Post

ನರೇಗಾ ಕಾಮಗಾರಿ; ಸಾಮಾಜಿಕ ಲೆಕ್ಕಪರಿಶೋಧನೆಯನ್ನೇ ನಡೆಸದ 274 ಪಂಚಾಯ್ತಿಗಳು

Recommended

ಆಗ ವಿಜಯೇಂದ್ರ, ಈಗ ಯತೀಂದ್ರ; ಸಿಎಂ ಸಚಿವಾಲಯದ ಗುತ್ತಿಗೆ ನೌಕರರಲ್ಲಿ ವರುಣಾ ಕ್ಷೇತ್ರದವರ ಸಿಂಹಪಾಲು

3 years ago
agricultural land conversion

ಎರಡು ವರ್ಷಗಳಲ್ಲಿ 2,747 ಎಕರೆ ಕೃಷಿ ಭೂಮಿ ಪರಿವರ್ತನೆ; ಧಾರವಾಡ ಜಿಲ್ಲೆಯಲ್ಲಿಯೇ ಅತಿಹೆಚ್ಚು

7 months ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd