the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಲಂಚ; ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಉಪ ಆಡಳಿತಾಧಿಕಾರಿ ವಿರುದ್ಧ ವಿಚಾರಣೆ

thefilestack by thefilestack
August 8, 2023
in GOVERNANCE
0
0
SHARES
1
VIEWS
Share on FacebookShare on Twitter

ಬೆಂಗಳೂರು; ನಗರಾಭಿವೃದ್ಧಿ ಇಲಾಖೆಯಲ್ಲಿ ಅಧಿಕಾರಿಗಳ ಮುಂಬಡ್ತಿಗೂ ಕೋಟ್ಯಂತರ ರುಪಾಯಿ ಲಂಚಕ್ಕೆ ಬೇಡಿಕೆ ಇರಿಸಲಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾಧರಿಸಿ ಕಾವೇರಿ ಜಲಾನಯನ ಯೋಜನೆಗಳ  ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಉಪ ಆಡಳಿತಾಧಿಕಾರಿ ಆಗಿರುವ  ಕೆಎಎಸ್‌ ಹಿರಿಯ ಶ್ರೇಣಿ ಅಧಿಕಾರಿ ಎಲಿಷಾ ಆಂಡ್ರೂಸ್‌ ವಿರುದ್ಧ ಇಲಾಖೆ  ವಿಚಾರಣೆ ನಡೆಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ನಿವೃತ್ತ ಜಿಲ್ಲಾ ನ್ಯಾಯಾಧೀಶ ಎ ಕೃಷ್ಣಪ್ಪ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.

 

 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 65 ಇಂಜಿನಿಯರುಗಳಿಗೆ ಮುಂಬಡ್ತಿ ನೀಡಲು ನಗರಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ಲಂಚಕ್ಕೆ ಬೇಡಿಕೆ ಇರಿಸಿದ್ದಾರೆ. ಹಣ ನೀಡಿದ ನಂತರವಷ್ಟೇ ಈ ಸಂಬಂಧದ ಕಡತಕ್ಕೆ ಅನುಮೋದನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ಸಂಬಂಧಿಸಿದ ಇಂಜನಿಯರ್‌ಗಳಿಗೆ ಸಂದೇಶ ರವಾನಿಸಿದ್ದರು ಎಂದು ಹೇಳಲಾಗಿತ್ತು. ಈ ಕುರಿತು 'ದಿ ಫೈಲ್‌' 2022ರ ಮಾರ್ಚ್‌ 30ರಂದು ವರದಿ ಪ್ರಕಟಿಸಿತ್ತು.

 

https://stack.thefile.in/2022/03/governance/11382/

 

ಕಾರ್ಯನಿರ್ವಾಹಕ  (ಎಇಇ) ಹುದ್ದೆಯಿಂದ ಕಾರ್ಯನಿರ್ವಾಹಕ ಇಂಜನಿಯರ್‌ (ಇಇ) 45 ಎಲಿ ಹುದ್ದೆಗೆ ಮತ್ತು 5 ಕಾರ್ಯನಿರ್ವಾಹಕ ಇಂಜಿನಿಯರ್‌ ಹುದ್ದೆಯಿಂದ ಸೂಪರಿಂಡೆಂಟ್‌ ಇಂಜನಿಯರ್‌ (ಎಸ್‌ಇ) ಹುದ್ದೆಗೆ ಮುಂಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ಎಲಿಷಾ ಆಂಡ್ರೂಸ್‌ ಅವರು ಲಂಚಕ್ಕೆ ಬೇಡಿಕೆ ಇರಿಸಿದ್ದರು ಎಂದು ಕರ್ನಾಟಕ ರಾಷ್ಟ್ರಸಮಿತಿಯು ದೂರು ದಾಖಲಿಸಿತ್ತು.

 

ಮುಂಬಡ್ತಿ ನೀಡುವ ಪ್ರಕ್ರಿಯೆಗೆ ಇಲಾಖೆಯಲ್ಲಿ ಚಾಲನೆ ನೀಡಿದ್ದ ಉನ್ನತ ಅಧಿಕಾರಿಯೊಬ್ಬರು ಅನುಮೋದನೆಗೆ ಬಾಕಿ ಇರಿಸಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ. ' ಈ ಕಡತವನ್ನು ಅನುಮೋದಿಸಬೇಕಾದರೆ ಲಂಚ ನೀಡಬೇಕೆಂದು, ನಿಮ್ಮ ಹೆಸರೇಳಿ ನಾಲ್ಕುವರೆ ಕೋಟಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆದಿರುತ್ತಾರೆ (AE ಯಿಂದ AEE ಗೆ ಎರಡು ಕೋಟಿ, AEE ಯಿಂದ EE ಗೆ 1 ಕೋಟಿ ಮತ್ತು EE ಯಿಂದ SE ಗೆ 1.5 ಕೋಟಿ). ಈ ಅಪಾರ ಪ್ರಮಾಣದ ಲಂಚದ ಹಣ ಪಾವತಿಸಲು ಭ್ರಷ್ಟ ಬಿಬಿಎಂಪಿ ಎಂಜಿನಿಯರುಗಳು ಈಗಾಗಲೇ ಗುತ್ತಿಗೆದಾರರಿಂದ ಹಣ ವಸೂಲಿ ಮಾಡಿರುತ್ತಾರೆ,' ಎಂದು ಕರ್ನಾಟಕ ರಾಷ್ಟ್ರಸಮಿತಿಯು ದೂರಿನಲ್ಲಿ ಪ್ರಸ್ತಾಪಿಸಿತ್ತು.

 

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ-3 ಆಗಿದ್ದ ಎಲಿಷಾ ಆಂಡ್ರೂಸ್‌ ಅವರಿಗೆ 2023ರ ಜೂನ್‌ 7ರಂದು ನೋಟೀಸ್‌, ದೋಷಾರೋಪಣೆ ಪಟ್ಟಿ ಜಾರಿಗೊಳಿಸಲಾಗಿತ್ತು. ಅಲ್ಲದೇ ಈ ನೋಟೀಸ್‌, ದೋಷಾರೋಪಣೆ ಪಟ್ಟಿಗೆ ಪ್ರತಿ ರಕ್ಷಣಾ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಒಪ್ಪಿರಲಿಲ್ಲ. ‘ ಪ್ರತಿ ರಕ್ಷಣಾ ಹೇಳಿಕೆಯನ್ನು ಪರಿಶೀಲಿಸಲಾಗಿ ಆಪಾದಿತರ ಸಲ್ಲಿಸಿರುವ ಪ್ರತಿ ರಕ್ಷಣಾ ಹೇಳಿಕೆಯಲ್ಲಿ ಆರೋಪವನ್ನು ಅಲ್ಲಗಳೆಯಲು ಸಮಂಜಸವಾದ ಮತ್ತು ಸಂಪೂರ್ಣವಾದ ಹೇಳಿಕೆ, ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಆದ್ದರಿಂದ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತಿಳಿಯಲು ಆಪಾದಿತರ ವಿರುದ್ಧ ಪೂರ್ಣ ಪ್ರಮಾಣದ ಇಲಾಖೆ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ,’ ಎಂದು ಇಲಾಖೆಯು ಆದೇಶದಲ್ಲಿ ವಿವರಿಸಿದೆ.

 

 

‘ಕೆಲವು ಅಲ್ಪ ಸ್ವಲ್ಪ ಪ್ರಾಮಾಣಿಕತೆಯನ್ನು ಉಳಿಸಿಕೊಂಡಿರುವವರು ಕೂಡ ವಿಧಿಯಿಲ್ಲದೆ, ತಮ್ಮ ದುಡಿಮೆಯ ಹಣ ಮತ್ತು ಸಾಲ ಮಾಡಿ ಹಣ ನೀಡಿರುತ್ತಾರೆ. ಇಲ್ಲಿ ಮಹತ್ವದ ವಿಚಾರವೆಂದರೆ, ಮುಖ್ಯಮಂತ್ರಿಯವರ ಹೆಸರು ಹೇಳಿ ಹಣ ವಸೂಲಿ ಮಾಡುತ್ತಿರುವುದು. ಪದೇ ಪದೇ ಮುಖ್ಯಮಂತ್ರಿಯವರ ಮತ್ತು ಅವರ ಕಛೇರಿಯ ಹೆಸರು ಹೇಳಿ ಹಣ ವಸೂಲಿ ಮಾಡುತ್ತಿರುವುದು ನಡೆಯುತ್ತಲೇ ಇದೆ, ಆದರೂ ಈ ಬಗ್ಗೆ ಯಾವುದೇ ಕ್ರಮ ಅಗದಿರುವುದರಿಂದ ಇಲ್ಲಿ ಮುಖ್ಯಮಂತ್ರಿಯವರ ಕಛೇರಿಯ ಮೇಲೆಯೆ ಅನುಮಾನ ಮೂಡುವಂತೆ ಮಾಡಿದೆ,’ ಎಂದು ಕರ್ನಾಟಕ ರಾಷ್ಟ್ರಸಮಿತಿಯು ದೂರಿನಲ್ಲಿ ತಿಳಿಸಿತ್ತು.

 

ರಾಜ್ಯ ಸರ್ಕಾರದ ಜಲ ಸಂಪನ್ಮೂಲ, ಲೋಕೋಪಯೋಗಿ (ಪಿಡ್ಬ್ಲೂಡಿ) ಮತ್ತು ನಗರಾಭಿವೃದ್ಧಿ ಇಲಾಖೆಗಳ ಕಾಮಗಾರಿಗಳಲ್ಲಿ 40% ಕಮೀಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮಾಡಿರುವ ಆರೋಪವು ನೇರವಾಗಿ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರವು ತನಿಖೆಗೆ ಆದೇಶ ಮಾಡಿ, ಈ ತನಿಖೆಯನ್ನು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ವಹಿಸಿತ್ತು.ಆದರೆ ಅವರು ಇದುವರೆಗೂ ಯಾವುದೇ ವರದಿಯನ್ನು ನೀಡಿರಲಿಲ್ಲ.

 

 

ಇದರ ಮಧ್ಯೆಯೇ ‘ಇದೇ ಅಪರ ಮುಖ್ಯ ಕಾರ್ಯದರ್ಶಿಯವರ ಅಧೀನದಲ್ಲಿರುವ ಉಪ ಕಾರ್ಯದರ್ಶಿಯೊಬ್ಬರು ಈ ಲಂಚದ ಹಣವನ್ನು ಮುಖ್ಯಮಂತ್ರಿಯವರ ಹೆಸರು ಹೇಳಿ ಪಡೆದುಕೊಂಡಿದ್ದಾರೆ. ಪ್ರಸ್ತುತ ಈಗ ಈ ಉಪ ಕಾರ್ಯದರ್ಶಿಯವರನ್ನು ವರ್ಗಾವಣೆ ಮಾಡಲಾಗಿದ್ದು, ಯಾವ ಕಾರಣಕ್ಕೆ ಮಾಡಲಾಗಿದೆ ಎಂದು ತಿಳಿದುಬಂದಿಲ್ಲ. ಈ ವಿಚಾರದ ಬಗ್ಗೆ ತನಿಖೆಯಾಗಬೇಕು ಮತ್ತು ಲಂಚ ಪಡೆದಿರುವವರು ಮತ್ತು ಲಂಚ ನೀಡಿರುವವರಿಬ್ಬರ ಮೇಲೂ ಕ್ರಮವಾಗಬೇಕು,’ ಎಂದು ಕರ್ನಾಟಕ ರಾಷ್ಟ್ರಸಮಿತಿಯು ದೂರಿನಲ್ಲಿ ಒತ್ತಾಯಿಸಿತ್ತು.

 

ಅಲ್ಲದೆ ಇಂತಹ ವಿಚಾರಗಳ ಬಗ್ಗೆ ಕೆ. ಆರ್. ಎಸ್. ಪಕ್ಷವು ಹಲವಾರು ಪತ್ರಗಳನ್ನು ಮತ್ತು ಸಕ್ಷಮ ಪ್ರಾಧಿಕಾರಗಳಿಗೆ ದೂರುಗಳನ್ನು ನೀಡಿದೆ. ಬಹುತೇಕ ಪ್ರಕರಣಗಳಲ್ಲಿ ಈ ಯಾವುದರ ಬಗ್ಗೆಯೂ ಕ್ರಮ ಕೈಗೊಳ್ಳದೇ ಇರುವುದರಿಂದ ಇಂತಹ ಅಕ್ರಮಗಳು ಮತ್ತು ಭ್ರಷ್ಟಾಚಾರ ಮತ್ತಷ್ಟು ಹೆಚ್ಚುತ್ತಿವೆ ಎಂದು ದೂರಿನಲ್ಲಿ ಹೇಳಿತ್ತು.

Tags: Basavaraj BommaiBribeContractorsD K ShivakumardepartmentDPARenquiryh d kumarswamyPromotionRakesh Singh IASSiddaramaiahaUrbanಇಂಜಿನಿಯರ್‌ಇಲಾಖೆ ವಿಚಾರಣೆಎಲಿಷಾ ಆಂಡ್ರೂಸ್‌ಕರ್ನಾಟಕ ರಾಷ್ಟ್ರ ಸಮಿತಿಕಾವೇರಿಕೆಎಎಸ್‌ ಅಧಿಕಾರಿಕೆಎಎಸ್‌ ಅಧಿಕಾರಿಗಳ ಸಂಘಗುತ್ತಿಗೆದಾರರಿಂದ ಹಣ ವಸೂಲಿಜಲಾನಯನಜಿಲ್ಲಾ ನ್ಯಾಯಾಧೀಶಡಿ ಕೆ ಶಿವಕುಮಾರ್ನಗರಾಭಿವೃದ್ಧಿಬಸವರಾಜ ಬೊಮ್ಮಾಯಿಮುಂಬಡ್ತಿಲಂಚಸಿದ್ದರಾಮಯ್ಯಹಣ ವಸೂಲಿಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಟೆಕ್ನಾಲಜಿ ಇನ್ನೋವೇಷನ್‌ ಪಾರ್ಕ್‌ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನವಿಲ್ಲ; ಹೇಳಿಕೆಗಷ್ಟೇ ಸೀಮಿತ

Next Post

ಕಾಮಗಾರಿಗಳಲ್ಲಿ ಅಕ್ರಮ; ಮೊದಲ ಟಿಪ್ಪಣಿಯಲ್ಲಿದ್ದ ಖಡಕ್‌ ಅಧಿಕಾರಿಗಳ ಕೈಬಿಟ್ಟು ತನಿಖಾ ಸಮಿತಿ ರಚನೆ

thefilestack

thefilestack

Next Post

ಕಾಮಗಾರಿಗಳಲ್ಲಿ ಅಕ್ರಮ; ಮೊದಲ ಟಿಪ್ಪಣಿಯಲ್ಲಿದ್ದ ಖಡಕ್‌ ಅಧಿಕಾರಿಗಳ ಕೈಬಿಟ್ಟು ತನಿಖಾ ಸಮಿತಿ ರಚನೆ

Recommended

ಜೆಡಿಎಸ್‌ ಅಭ್ಯರ್ಥಿ ಸೋಲಿಸುವ ಭರದಲ್ಲಿ ಬಿಜೆಪಿ ಗೆಲುವಿಗೆ ದಾರಿಮಾಡಿದ ಕಾಂಗ್ರೆಸ್‌; ತಂತ್ರಗಾರಿಕೆಯಲ್ಲೇ ವಿಫಲ

4 years ago

85 ಕೋಟಿ ಸಾಲಕ್ಕೆ ಸಹ-ಕಂಪನಿಯ ಸ್ಥಿರಾಸ್ತಿ ಒತ್ತೆ;ನಿಬಂಧನೆ ಪಾಲಿಸದ ನಿರಾಣಿ ಷುಗರ್ಸ್‌

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd