the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ದ ಪಾಲಿಸಿ ಫ್ರಂಟ್‌ಗೆ ಗುತ್ತಿಗೆ; ಪಾರದರ್ಶಕತೆಯಿಲ್ಲದೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ?

thefilestack by thefilestack
December 21, 2023
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಆಡಳಿತ ಕಾರ್ಯತಂತ್ರ ಮತ್ತು ಆರ್ಥಿಕ ಹಿತಾಸಕ್ತಿ ವಿಷಯ, ಮಾಹಿತಿಗಳು ಒಳಗೊಂಡಿದೆ ಎಂದು ಕುಂಟು ನೆಪವೊಡ್ಡಿ ‘ದ ಪಾಲಿಸಿ ಫ್ರಂಟ್‌’ ಗೆ ನೀಡಿರುವ ಗುತ್ತಿಗೆ ಸಂಬಂಧಿತ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ನೀಡಲು ಸರ್ಕಾರವು ನಿರಾಕರಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ  ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಅವರು ಪಾರದರ್ಶಕತೆ ಇಲ್ಲದೆಯೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ ಎಂದು ಪ್ರಶ್ನಿಸಿದ್ದಾರೆ.

 

 

ಸುಳ್ಳು ಸುದ್ದಿಗಳನ್ನು ತಡೆಗಟ್ಟುವಿಕೆ ಮತ್ತು ಸರ್ಕಾರದ ಸಾಧನೆ, ಯೋಜನೆಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ನಿರ್ವಹಣೆ ಮಾಡಲು ಕೆಎಸ್‌ಎಂಸಿ ಅಂಡ್‌ ಎ ಮೂಲಕ    ‘ದ ಪಾಲಿಸಿ ಫ್ರಂಟ್‌’ ಗೆ ತಿಂಗಳಿಗೆ 60 ಲಕ್ಷ ರು.ನಂತೆ ಒಂದು ವರ್ಷಕ್ಕೆ 7.20 ಕೋಟಿ ರು. ಗುತ್ತಿಗೆ ನೀಡಲಾಗಿತ್ತು. ಈ ಸಂಬಂಧ ‘ದಿ ಫೈಲ್‌’ ಆರ್‍‌ಟಿಐ ಅಡಿ ಸಲ್ಲಿಸಿದ್ದ ಅರ್ಜಿಗೆ ಕೆಎಸ್‌ಎಂಸಿ ಅಂಡ್‌ ಎ ಯು ಕಡತವನ್ನು ಒದಗಿಸಿರಲಿಲ್ಲ. ಬದಲಿಗೆ ಕೇವಲ ಕಾರ್ಯಾದೇಶ ನೀಡಿ ಕೈತೊಳೆದುಕೊಂಡಿತ್ತು.

 

ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಅವರು ಈ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

 

ಸಾಮಾಜಿಕ ಮಾಧ್ಯಮದಲ್ಲಿ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳನ್ನು ಪ್ರಚಾರ ಮಾಡಲು ಪಾಲಿಸಿ  ಫ್ರಂಟ್ ಹೆಸರಿನ ಸಂಸ್ಥೆಯೊಂದಿಗೆ ಸರ್ಕಾರವು ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದೆ. ವಾರ್ಷಿಕ ಏಳು ಕೋಟಿ ರೂಪಾಯಿಗೂ ಮೀರಿದ ಈ ಗಣನೀಯ ಒಪ್ಪಂದವನ್ನು ಪಾರದರ್ಶಕವಾಗಿ ಬಹಿರಂಗಪಡಿಸದೆ ನೀಡಲಾಗಿದೆ. ಆರ್‌ಟಿಐ ಕಾಯ್ದೆಯಡಿ ಈ ಬಗ್ಗೆ ಪ್ರಶ್ನಿಸಿದಾಗ ಉತ್ತರ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಪಾರದರ್ಶಕತೆ ಇಲ್ಲದೇ ಖಜಾನೆ ನಿಧಿಯನ್ನು ಹಂಚಿಕೆ ಮಾಡಿದ್ದರೂ  ಹೊಣೆಗಾರಿಕೆಯಿಂದ ಏಕೆ ತಪ್ಪಿಸಿಕೊಳ್ಳುತ್ತಿದ್ದಾರೆ,  ಇದು ಸರ್ಕಾರದ ನೀತಿಯೇ  ಎಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

 

 

ಪಾರದರ್ಶಕತೆಯ ಕೊರತೆಯಿಂದಾಗಿ ಸಾರ್ವಜನಿಕ ನಿಧಿಯ ಜವಾಬ್ದಾರಿಯುತ ಬಳಕೆಯ ಬಗ್ಗೆ ಅನೇಕ  ಪ್ರಶ್ನೆಗಳನ್ನು  ಹುಟ್ಟುಹಾಕಿದೆ.  ಈ ವಿಷಯದಲ್ಲಿ ಸರ್ಕಾರವು  ಜವಾಬ್ದಾರಿಯುತ ಉತ್ತರಗಳನ್ನು ನೀಡಬೇಕು ಮತ್ತು ಇಂತಹ  ಜವಾಬ್ದಾರಿಯನ್ನು ಖಚಿತಪಡಿಸಿಕೊಳ್ಳಲು ಇದು ಸೂಕ್ತ ಸಮಯವಾಗಿದೆ ಎಂದು ಹೇಳಿದ್ದಾರೆ.

 

ಮುಕ್ತ  ಟೆಂಡರ್‍‌ ಆಹ್ವಾನಿಸದೆಯೇ ನಿರ್ದಿಷ್ಟವಾಗಿ ‘ದ ಪಾಲಿಸಿ ಫ್ರಂಟ್‌’ ನಿಂದಲೇ ಸೇವೆ ಪಡೆಯಲು ಎಂಸಿಅಂಡ್‌ಎಯು ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಆರ್ಥಿಕ ಇಲಾಖೆಯು ನೀಡಿದ್ದ  4(ಜಿ) ವಿನಾಯಿತಿಯು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದ ಸಮಗ್ರ ಕಡತವನ್ನು ಒದಗಿಸಲು ನಿರಾಕರಿಸಿರುವುದು ‘ದ ಪಾಲಿಸಿ ಫ್ರಂಟ್‌’ನ ಸುತ್ತ ಎದ್ದಿರುವ ಅನುಮಾನಗಳನ್ನು ಮತ್ತಷ್ಟು ಬಲಪಡಿಸಿದಂತಾಗಿತ್ತು.

 

ವಿಶೇಷವೆಂದರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ 4(ಜಿ) ವಿನಾಯಿತಿ ನೀಡಿರುವ ಆರ್ಥಿಕ ಇಲಾಖೆಯು ಆರ್‌ಟಿಐ ಅಡಿಯಲ್ಲಿ ಸಮಗ್ರ ಕಡತವನ್ನೂ ಒದಗಿಸಿತ್ತು.  ಆದರೆ ಕೆಎಸ್‌ಎಂಸಿ ಅಂಡ್‌ ಎ ಕಂಪನಿಯು ತನ್ನ ಹಂತದಲ್ಲಿ ಇದೇ  ವಿಚಾರಕ್ಕೆ ಸಂಬಂಧಿಸಿದಂತೆ ಸೃಜಿಸಿದ್ದ ಕಡತವನ್ನು ಒದಗಿಸಲು ನಿರಾಕರಿಸಿರುವುದು ಮತ್ತಷ್ಟು ಸಂಶಯಗಳಿಗೆ ಆಸ್ಪದ ಮಾಡಿಕೊಟ್ಟಂತಾಗಿತ್ತು.  ಅದಷ್ಟೇ ಅಲ್ಲ,  ಕಡತವನ್ನು ಒದಗಿಸಲು ನಿರಾಕರಿಸುವ  ಮೂಲಕ ‘ದ ಪಾಲಿಸಿ ಫ್ರಂಟ್‌’  ಮತ್ತು ಅದರ ಹಿಂದಿರುವವರನ್ನು ರಹಸ್ಯವಾಗಿರಿಸಲು ಯತ್ನಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು.

 

ಕೈಗಾರಿಕೆ ಸಚಿವ ಎಂ ಬಿ ಪಾಟೀಲ್‌ ಅವರು ಅಧ್ಯಕ್ಷರಾಗಿರುವ ಕರ್ನಾಟಕ ಸ್ಟೇಟ್‌ ಮಾರ್ಕೇಂಟಿಂಗ್‌ ಕಮ್ಯೂನಿಕೇಷನ್‌ ಅಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ ಕಂಪನಿಯು ಸಾಮಾಜಿಕ ಜಾಲತಾಣಗಳಲ್ಲಿ ‘ದ ಪಾಲಿಸಿ ಫ್ರಂಟ್‌’ ಮೂಲಕ  ಪ್ರಚಾರ ಮಾಡಲು ತಿಂಗಳಿಗೆ 60.00 ಲಕ್ಷ ರು. ನಂತೆ  ಒಟ್ಟಾರೆ ವಾರ್ಷಿಕವಾಗಿ   7.20 ಕೋಟಿ ರು. ವೆಚ್ಚ ಮಾಡುತ್ತಿದೆ. 2023ರ ಅಕ್ಟೋಬರ್ 3ರಂದೇ  ಕಾರ್ಯಾದೇಶವನ್ನೂ ನೀಡಿತ್ತು.

 

 

ಕೋರಿದ್ದ ಮಾಹಿತಿಯಲ್ಲೇನಿತ್ತು?

 

ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸರ್ಕಾರದ ಯೋಜನೆಗಳ ಪ್ರತಿ ದಿನದ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸಲು ಜಾಹೀರಾತು/ಸುದ್ದಿಗಳನ್ನು ಪ್ರಕಟಿಸಲು ದ ಪಾಲಿಸಿ ಫ್ರಂಟ್‌ ಬೆಂಗಳೂರು ಇವರ ಸೇವೆಯನ್ನು 2023-24ನೇ ಸಾಲಿನ ಆಗಸ್ಟ್‌ ತಿಂಗಳಿನಿಂದ ಮಾರ್ಚ್ 2026ರವರೆಗೆ  ಪಡೆಯುವ ಸಂಬಂಧ ಕೆಎಸ್‌ಎಂಸಿ ಅಂಡ್‌ ಎ ಯು ದ ಪಾಲಿಸಿ ಫ್ರಂಟ್‌ ಕಂಪನಿ/ ಸಂಸ್ಥೆ/ಏಜೆನ್ಸಿಗೆ ನೀಡಿರುವ ಕಾರ್ಯಾದೇಶದ ಪ್ರತಿ ಒದಗಿಸುವುದು. ಮತ್ತು ಒಪ್ಪಂದದ ಪ್ರತಿ, ಟರ್ಮ್ಸ್‌ ಆಫ್‌ ರೆಫರೆನ್ಸ್‌, ಟರ್ಮ್ಸ್‌ ಆಫ್‌ ಕಂಡೀಷನ್ಸ್‌, ಇದೇ ವಿಷಯಕ್ಕೆ ಸಂಬಂಧಿಸಿದಂತೆ ತೆರೆದಿರುವ ಸಮಗ್ರ ಕಡತವನ್ನು ಒದಗಿಸಬೇಕು ಎಂದು ಆರ್‌ಟಿಐ ಅರ್ಜಿಯಲ್ಲಿ 2023ರ ನವೆಂಬರ್‌ 21ರಂದು  ಕೋರಿತ್ತು.

 

ಈ ಅರ್ಜಿಯನ್ನು ಒಂದು ತಿಂಗಳವರೆಗೆ ತನ್ನ ಬಳಿ ಇಟ್ಟುಕೊಂಡಿದ್ದ ಕೆಎಸ್‌ಎಂಸಿ ಅಂಡ್‌ ಎ ಯು ಒಂದು ಪುಟದ ಉತ್ತರ ಮತ್ತು ಕಾರ್ಯಾದೇಶ ಪತ್ರವನ್ನಷ್ಟೇ  2023ರ ಡಿಸೆಂಬರ್‌ 15ರಂದು  ನೀಡಿದೆ. ಆದರೆ ಕಡತವನ್ನು ಆರ್‌ಟಿಐ ಅಡಿಯಲ್ಲಿ ಒದಗಿಸಲು ನಿರಾಕರಿಸಿರುವುದು ಚರ್ಚೆಗೆ ಗ್ರಾಸವಾಗಿತ್ತು.

 

ಕಡತ ನಿರಾಕರಿಸಲು ನೀಡಿರುವ ಕಾರಣಗಳಿವು

 

'ತಾವು ಕೋರಿರುವ ಮಾಹಿತಿಗಳು ರಾಜ್ಯದ ಆಡಳಿತ ಕಾರ್ಯತಂತ್ರದ ಮತ್ತು ಆರ್ಥಿಕ ಹಿತಾಸಕ್ತಿಯ ವಿಷಯಗಳನ್ನು ಹಾಗೂ ಮಾಹಿತಿಗಳನ್ನು ಒಳಗೊಂಡಿರುತ್ತದೆ. ಅಲ್ಲದೇ ತಾವು ಕೋರಿರುವ ಮಾಹಿತಿಗಳು ಸಂಸ್ಥೆಯ ಹಾಗೂ ಸರಬರಾಜುದಾರರ/ಟೆಂಡರ್‌ದಾರರ ನಡುವಿನ ಖರೀದಿ ನಿರ್ವಹಣೆಯ ವ್ಯವಹಾರ ಕುರಿತ ಷರತ್ತು ಮತ್ತು ನಿಬಂಧನೆಗಳ ಮಾಹಿತಿಯಾಗಿರುತ್ತದೆ.ಈ ಹಿನ್ನೆಲೆಯಲ್ಲಿ ಸಮಗ್ರ ಕಡತವನ್ನು ಒದಗಿಸಲು ಬರುವುದಿಲ್ಲ,'  ಎಂದು  ಕೆಎಸ್‌ಎಂಸಿ ಅಂಡ್‌ ಎ ಯು ಉತ್ತರ ಒದಗಿಸಿತ್ತು.

 

https://stack.thefile.in/2023/12/rti/20988/

 

 

ಮುಕ್ತ  ಟೆಂಡರ್‍‌ ಆಹ್ವಾನಿಸದೆಯೇ ನಿರ್ದಿಷ್ಟವಾಗಿ ‘ದ ಪಾಲಿಸಿ ಫ್ರಂಟ್‌’ ನಿಂದಲೇ ಸೇವೆ ಪಡೆಯಲು ಎಂಸಿಅಂಡ್‌ಎಯು ಸಲ್ಲಿಸಿದ್ದ ಪ್ರಸ್ತಾವನೆಗೆ 4(ಜಿ) ವಿನಾಯಿತಿ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

 

ವಿಶೇಷವೆಂದರೇ ‘ದ ಪಾಲಿಸಿ ಫ್ರಂಟ್‌‘ ಎಂಬುದು ಭಾರತ ಸರ್ಕಾರದ ಕಂಪನಿ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಣಿಯೇ ಆಗಿಲ್ಲ ಎಂದು ತಿಳಿದು ಬಂದಿದೆ. ಆದರೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಎಂಸಿ ಅಂಡ್‌ ಎ ಮೂಲಕ ‘ದ ಪಾಲಿಸಿ ಫ್ರಂಟ್‌’ ನ ಸೇವೆಯನ್ನು ಒಂದು ವರ್ಷದ ಅವಧಿಯವರೆಗೆ 7.20 ಕೋಟಿ ರು.ಗಳನ್ನು ವೆಚ್ಚದಲ್ಲಿ ಪಡೆದಿರುವುದು ಶಂಕೆಗೆ ಕಾರಣವಾಗಿತ್ತು.

 

ಮತ್ತೊಂದು ವಿಶೇಷವೆಂದರೇ ಇದೇ ಕೆಎಸ್‌ಎಂಸಿಎ ಮೂಲಕ ‘ದ ಪಾಲಿಸಿ ಫ್ರಂಟ್‌’ನ ಸೇವೆಯನ್ನು 2026ರ ಮಾರ್ಚ್‌ವರೆಗೆ 35.68 ಕೋಟಿ ರು. ವೆಚ್ಚದಲ್ಲಿ (ತಿಂಗಳಿಗೆ 99.12 ಲಕ್ಷ ರು. ) ಪಡೆಯಲು ಪ್ರಸ್ತಾವನೆ ಸಲ್ಲಿಸಿತ್ತು. ಕಡೆಯಲ್ಲಿ ಆರ್ಥಿಕ ಇಲಾಖೆಯು ಪ್ರತಿ ತಿಂಗಳ ವೆಚ್ಚವನ್ನು 60.00 ಲಕ್ಷ  ರು ಕ್ಕಿಳಿಸಿದೆಯಲ್ಲದೇ ಸೇವೆಯನ್ನು ಒಂದು ವರ್ಷದ ಅವಧಿಯವರೆಗೆ ಮಾತ್ರ ನಿಗದಿಪಡಿಸಿತ್ತು.

 

ನಿಗೂಢ

 

ವಿಶೇಷವೆಂದರೇ ಆಡಳಿತ ಇಲಾಖೆಯಾದ ವಾರ್ತಾ, ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸ್ತಾಪಿಸಿರುವ ‘ದ ಪಾಲಿಸಿ ಫ್ರಂಟ್‌’ ಹೆಸರು ಕೂಡ ನಿಗೂಢವಾಗಿದೆ. ‘ದ ಪಾಲಿಸಿ ಫ್ರಂಟ್‌’ ಎಂಬುದು ಪ್ರೈವೈಟ್‌ ಲಿಮಿಟೆಡ್ಡೋ, ಸಾರ್ವಜನಿಕ ಸ್ವಾಮ್ಯದ ಕಂಪನಿಯೋ, ಪಾಲುದಾರಿಕೆ ಕಂಪನಿಯೋ, ಎಲ್‌ಎಲ್‌ಪಿಯೋ, ಸರ್ಕಾರೇತರ ಸಂಸ್ಥೆಯೋ, ಇದು ಯಾರಿಗೆ ಸೇರಿದೆ, ಇದರ ಯೋಜನಾ ನಿರ್ದೇಶಕರು ಯಾರು, ಕಂಪನಿಯೇ ಆಗಿದ್ದಲ್ಲಿ ಇದರ ಮಾಲೀಕರು ಯಾರು, ನಿರ್ದಿಷ್ಟವಾಗಿ ಇದಕ್ಕೇ ಗುತ್ತಿಗೆ ನೀಡಬೇಕು ಎಂದು ಶಿಫಾರಸ್ಸು ಮಾಡಿದವರು ಯಾರು, ಇದರ ಪೂರ್ವಾಪರವೇನು, ಈ ಹಿಂದೆ ಸರ್ಕಾರದ ಯೋಜನೆಗಳು, ಸಾಧನೆಗಳ ಪ್ರಚಾರ,  ಸುಳ್ಳು ಸುದ್ದಿಗಳನ್ನು ತಡೆಗಟ್ಟುವಲ್ಲಿ ಕಾರ್ಯನಿರ್ವಹಿಸಿತ್ತೇ  ಎಂಬುದನ್ನು ಟಿಪ್ಪಣಿ ಹಾಳೆಯಲ್ಲಿ ಎಲ್ಲಿಯೂ ಉಲ್ಲೇಖಿಸದೇ ರಹಸ್ಯವಾಗಿರಿಸಿರುವುದನ್ನು ಸ್ಮರಿಸಬಹುದು.

https://stack.thefile.in/2023/11/rti/20314/

 

ಸರ್ಕಾರದ ಸಾಧನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ 2026ರವರೆಗೆ ಪ್ರಚಾರ ಮಾಡಲು ವಾರ್ತಾ, ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು 2023ರ ಆಗಸ್ಟ್‌ 28ರಂದು ಪ್ರಸ್ತಾವವನ್ನು ಸಲ್ಲಿಸಿದ್ದರು.  ಅಲ್ಲದೇ ಸುಳ್ಳು ಸುದ್ದಿಗಳನ್ನು ತಡೆಗಟ್ಟುವ ಉದ್ದೇಶವನ್ನೂ ಇದೇ ಪ್ರಸ್ತಾವನೆಯಲ್ಲಿ ವಿವರಿಸಲಾಗಿತ್ತು.

Tags: AminmattuArvind BelladBelladbjpD K ShivakumarDineshFacebookFronth d kumarswamyInformationInstagramLehar SinghLimitedMediaPolicyPrivatePublicitySiddaramaiahasocialTheTwitterಅಮೀನ್‌ ಮಟ್ಟುಆಯುಕ್ತಎಂ ಬಿ ಪಾಟೀಲ್‌ಎಂಸಿ ಅಂಡ್‌ ಎಕರ್ನಾಟಕಕೈಗಾರಿಕೆಖಜಾನೆಜಾಲತಾಣಟ್ವಿಟರ್‌ಡಿ ಕೆ ಶಿವಕುಮಾರ್ದದ ಪಾಲಿಸಿ ಫ್ರಂಟ್‌ದಿನೇಶ್‌ನಿಂಬಾಳ್ಕರ್‍‌ನೀತಿಪಾರದರ್ಶಕತೆಪಾಲಿಸಿಪ್ರಚಾರಫೇಸ್‌ಬುಕ್‌ಫ್ರಂಟ್‌ಮುಖ್ಯಮಂತ್ರಿವಾರ್ತಾಸಚಿವಸಂಪರ್ಕಸಾಮಾಜಿಕಸಾಮಾಜಿಕ ಜಾಲತಾಣ ನಿರ್ವಹಣೆಸಾರ್ವಜನಿಕಸಿದ್ದರಾಮಯ್ಯಹೆಚ್‌ ಡಿ ಕುಮಾರಸ್ವಾಮಿಹೇಮಂತ್‌
Advertisement Banner
Previous Post

‘ದ ಪಾಲಿಸಿ ಫ್ರಂಟ್‌’ಗೆ 7.20 ಕೋಟಿ ರು. ಮೊತ್ತದ ಗುತ್ತಿಗೆ; ಸಮಗ್ರ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

Next Post

ಸಾವಿರಾರು ಕ್ವಿಂಟಾಲ್‌ ರಾಗಿ, ಉಗ್ರಾಣಗಳಲ್ಲೇ ಹಾಳಾಯಿತೇ?: ವರದಿ ಕೇಳಿದ ಸರ್ಕಾರ

thefilestack

thefilestack

Next Post

ಸಾವಿರಾರು ಕ್ವಿಂಟಾಲ್‌ ರಾಗಿ, ಉಗ್ರಾಣಗಳಲ್ಲೇ ಹಾಳಾಯಿತೇ?: ವರದಿ ಕೇಳಿದ ಸರ್ಕಾರ

Recommended

ಕೆಡಿಪಿ ಪ್ರಕಾರ ಶೇ.35.41ರಷ್ಟೇ ಪ್ರಗತಿ, ಸಿಎಂ ಪ್ರಕಾರ ಶೇ.46ರಷ್ಟು ವೆಚ್ಚ; ವಾಸ್ತವ ಮರೆಮಾಚಲಾಗಿದೆಯೇ?

1 year ago

ಕೊರೊನಾ ಬೆನ್ನ ಹಿಂದೆಯೇ ಬರಲಿದೆ ಮಲೇರಿಯಾ; ಜೋಪಾನ ಎಂದಿದೆ ವಿಶ್ವ ಆರೋಗ್ಯ ಸಂಸ್ಥೆ

6 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd