the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಕಾಂಗ್ರೆಸ್‌ ಕಚೇರಿ ಕಟ್ಟಡ ನಿರ್ಮಾಣ; ಪಂಚಾಯ್ತಿಗಳ ಜಾಗದ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್‌ ಭವನ ಟ್ರಸ್ಟ್‌

thefilestack by thefilestack
June 12, 2025
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು;  ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿ, ಸಿ ಎ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌, ಗ್ರಾಮ ಪಂಚಾಯ್ತಿಗಳ ಹೆಸರಿನಲ್ಲಿರುವ ಜಮೀನು, ನಿವೇಶನಗಳ ಮೇಲೂ ಕಣ್ಣು ಹಾಕಿದೆ.

 

ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಾಂಗ್ರೆಸ್‌ ಭವನಗಳನ್ನು ನಿರ್ಮಾಣ ಮಾಡಲು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನೀಡಿರುವ ಗುರಿ ಮುಟ್ಟಲು ಎಲ್ಲಾ ಸಚಿವರೂ ಇದೀಗ ನಗರ ಮತ್ತು ಗ್ರಾಮೀಣ ಸ್ಥಳೀಯ ಸರ್ಕಾರಗಳ ಅಧೀನದಲ್ಲಿರುವ ಮತ್ತು ಅವುಗಳ ಹೆಸರಿನಲ್ಲಿರುವ ಜಮೀನು, ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುತ್ತಿವೆ.

 

ಈ ಪೈಕಿ ಮುಧೋಳ ತಾಲೂಕಿನ ಇಂಗಳಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಝಂಜರಕೊಪ್ಪದ ಸರ್ವೆ ನಂಬರ್‍‌ 145ರಲ್ಲಿನ (ಪ್ಲಾಟ್‌ ನಂ 81) 1077.17 ಚ ಮೀಟರ್‍‌ ಜಾಗವನ್ನು ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಿಸಿಕೊಳ್ಳಲು ಪ್ರಸ್ತಾವಿಸಿದೆ.

 

ಬಾಗಲಕೋಟೆ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯು  ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಆಯುಕ್ತಾಲಯಕ್ಕೆ ಪ್ರಸ್ತಾವವನ್ನು ಸಲ್ಲಿಸಿದ್ದಾರೆ. ಇದರ ಪ್ರತಿ ಮತ್ತು ಇದಕ್ಕೆ ಸಂಬಂಧಿಸಿದ ಕೆಲವು ಟಿಪ್ಪಣಿ ಹಾಳೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

 

ಕಾಂಗ್ರೆಸ್‌ ಪಕ್ಷ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ, ತಾಲೂಕು, ಹೋಬಳಿ ಮಟ್ಟದಲ್ಲಿ ಪ್ರಸ್ತಾವ ಸಲ್ಲಿಸುತ್ತಿರುವ  ಕಾಂಗ್ರೆಸ್‌ ಭವನ ಟ್ರಸ್ಟ್‌, ಯಾವ ಕಾಯ್ದೆ ಅಡಿ ನೋಂದಣಿಯಾಗಿದೆ ಎಂಬ ಬಗ್ಗೆ ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂಬ ಸಂಗತಿಯು ಬಹಿರಂಗವಾದ ನಂತರ ಮುಧೋಳದ ಪ್ರಕರಣವು ಮುನ್ನೆಲೆಗೆ ಬಂದಿದೆ.

 

30 ವರ್ಷಕ್ಕೆ ಗುತ್ತಿಗೆ ಕೋರಿ ಪ್ರಸ್ತಾವ

 

ಮುಧೋಳ ತಾಲೂಕಿನ ಇಂಗಳಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಝಂಜರಕೊಪ್ಪದ ಜಾಗವನ್ನು ಮುಧೋಳ ಬ್ಲಾಕ್‌ ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಬೇಕು ಎಂದು ಬಾಗಲಕೋಟೆ ಜಿಲ್ಲಾ ಪಂಚಾಯ್ತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿರುವುದು ಗೊತ್ತಾಗಿದೆ.

 

https://stack.thefile.in/2025/06/governance/32196/

 

ಇಂಗಳಗಿ ಗ್ರಾಮ ಪಂಚಾಯ್ತಿಯ ಝಂಜರಕೊಪ್ಪದ ಸರ್ವೆ ನಂಬರ್‍‌ 145 ಪ್ಲಾಟ್‌ ನಂಬರ್‍‌ 81ರಲ್ಲಿನ 1,077.17 ಚ ಮೀ ವಿಸ್ತೀರ್ಣದ ಜಾಗದಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ ಕಟ್ಟಡ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ. 2023-24ನೇ ಸಾಲಿನ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಯ ಪ್ರಕಾರ ವಸತಿ ಉದ್ದೇಶದ ಖಾಲಿ ನಿವೇಶನಕ್ಕೆ ಪ್ರತಿ ಚ ಮೀ ಗೆ 4,000 ರು ಇದೆ.

 

 

ಈ ನಿವೇಶನವನ್ನು ಪಂಚಾಯ್ತಿ ವ್ಯಾಪ್ತಿಯ ನಾಗರಿಕ ಸೌಲಭ್ಯಗಳ ಅವಶ್ಯಕತೆಗಳಿಗೆ ಕಾಯ್ದರಿಸಿಕೊಂಡಿದೆ. ಈ ನಿವೇಶನವನ್ನೇ ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ ನೀಡಲು ಅನುಮೋದನೆ ನೀಡಬೇಕು ಎಂದು ಸಿಇಒ ಅವರು ಪ್ರಸ್ತಾವನೆಯಲ್ಲಿ ಕೋರಿರುವುದು ತಿಳಿದು ಬಂದಿದೆ.

 

30 ವರ್ಷಕ್ಕೆ ಗುತ್ತಿಗೆ ನೀಡಲು ಅವಕಾಶಗಳಿವೆಯೇ?

 

ಜಿಲ್ಲಾ, ತಾಲೂಕು ಮತ್ತು   ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಸ್ಥಿರ ಸ್ವತ್ತುಗಳನ್ನು ಗುತ್ತಿಗೆ ನೀಡಲು ಹಿಂದಿನ ಬಿಜೆಪಿ ಸರ್ಕಾರವು 2022ರ ನವೆಂಬರ್‍‌ 23ರಂದು ಮಾರ್ಗಸೂಚಿಗಳನ್ನು ಹೊರಡಿಸಿದೆ.  ಈ ಮಾರ್ಗಸೂಚಿಗಳ ಅನುಗುಣವಾಗಿಯೇ ಸ್ಥಿರ ಸ್ವತ್ತುಗಳನ್ನು ಗುತ್ತಿಗೆ ನೀಡಬೇಕು ಎಂದು ನಿರ್ದೇಶಿಸಿತ್ತು.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಂದ ನಿರ್ವಹಿಸಲಾಗುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳು ನಡೆಸುವ ಶಾಲೆಗಳು, ಕಾಲೇಜುಗಳು, ಹಾಸ್ಟೆಲ್‌ಗಳು, ಅನಾಥಾಲಯಗಳು ಮತ್ತು ಸಮುದಾಯ ಭವನಗಳ ನಿರ್ಮಾಣಕ್ಕೆ ಗುತ್ತಿಗೆ ನೀಡಲು ಅವಕಾಶವಿದೆ.

 

ಅದೇ ರೀತಿ ರಾಜ್ಯ ಸರ್ಕಾರದಿಂದ ಅಂಗೀಕೃತವಾದ ಅಥವಾ ಆದಾಯ ತೆರಿಗೆ ಅಧಿನಿಯಮ 1961ರ ಕಲಂ 12 (2) ಅಡಿಯಲ್ಲಿ ನೋಂದಾಯಿಸಲ್ಪಟ್ಟ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಧರ್ಮಸಂಸ್ಥೆಗಳು ನಡೆಸುತ್ತಿರುವ ಹಾಸ್ಟೆಲ್‌ಗಳು, ಶಾಲಾ ಕಾಲೇಜುಗಳು, ಸ್ತ್ರೀ ಸ್ವೀಕಾರ ಕೇಂದ್ರಗಳು, ಅನಾಥಾಲಯಗಳು, ವಿಕಲಚೇತನರು ಮತ್ತು ಮಾನಸಿಕ ಅಸ್ವಸ್ಥ ನಿಲಯಗಳು, ವೃದ್ಧಾಶ್ರಮಗಳು, ಸಂಕೀರ್ಣಗಳಿಗೆ ಗುತ್ತಿಗೆ ಮಂಜೂರು ಮಾಡಲು ಅವಕಾಶ ಕಲ್ಪಿಸಿದೆ.

 

ಅದೇ ರೀತಿ ಕೇಂದ್ರ, ರಾಜ್ಯ ಸರ್ಕಾರದ ಸ್ವಾಮ್ಯ ಒಳಪಟ್ಟಿರುವ ನಿಯಮ, ಮಂಡಳಿಗಳ ಕಚೇರಿಗಳ, ಮತ್ತಿತರ ಸಾರ್ವಜನಿಕ ಮೂಲ ಸೌಕರ್ಯಗಳ ನಿರ್ಮಾಣ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹಣೆ, ಪ್ರತ್ಯೇಕತೆ ಮತ್ತು ಮರು ಬಳಕೆ ಕೇಂದ್ರಗಳಿಗೆ, ಸಬ್‌ ಸ್ಟೇಷನ್‌ಗಳ, ಟ್ರಾನ್ಸ್‌ಫಾರ್ಮ್‌ಗಳ, ಯಾರ್ಡ್‌ಗಳು, ಮನರಂಜನಾ ಕೇಂದ್ರಗಳು, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರಗಳ ನಿರ್ಮಾಣಕ್ಕೆ ಜಾಗವನ್ನು ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಅವಕಾಶವಿದೆ.

 

ಈ ನಿಯಮಗಳ ಪ್ರಕಾರ ಕಾಂಗ್ರೆಸ್‌ ಪಕ್ಷದ ಕಾರ್ಯಾಲಯ ಕಟ್ಟಡಕ್ಕೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಅವಕಾಶಗಳೇ ಇಲ್ಲ. ಆದರೂ ಮಂಜೂರು ಮಾಡಿಸಿಕೊಳ್ಳಲು ಇಲಾಖೆ ಮೇಲೆ ಒತ್ತಡ ಹೇರಿದೆ ಎಂದು ತಿಳಿದು ಬಂದಿದೆ.

 

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಈ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

 

ಹಿಂದುಳಿದ ಮತ್ತು ನಾಯಕ  ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು  ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್‌ ನಂತರದ  ವಿದ್ಯಾರ್ಥಿ ನಿಲಯ ಸ್ಥಾಪನೆ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗಾಗಿ ಕಾಯ್ದಿರಿಸಿದ್ದ ಸರ್ಕಾರಿ ಜಮೀನನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಲು ಸಚಿವ ಸಂಪುಟವು ಈಚೆಗಷ್ಟೇ ಅನುಮೋದನೆ ನೀಡಿದೆ.

 

https://stack.thefile.in/2025/05/governance/32039/

 

ರಾಜ್ಯದ ನಗರಾಭಿವೃದ್ದಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಬಡಾವಣೆಗಳಲ್ಲಿ ನಾಗರೀಕ ಸೌಲಭ್ಯಗಳ ಉದ್ದೇಶಗಳಿಗಾಗಿ ಮೀಸಲಿಟ್ಟ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌, ಇದೀಗ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ ಜಮೀನುಗಳನ್ನೂ ಮಂಜೂರು ಮಾಡಿಸಿಕೊಳ್ಳಲು ಹೊರಟಿದೆ. ಅಲ್ಲದೇ  ಸರ್ಕಾರಿ ಜಮೀನು ಮಂಜೂರು ಮಾಡಿಸಿಕೊಳ್ಳಲು ಭೂ ಮಂಜೂರಾತಿ ನಿಯಮಗಳನ್ನೂ ಸಡಿಲಿಸಲು ಸಚಿವ ಸಂಪುಟವು ಒಪ್ಪಿಗೆ ನೀಡಿದೆ.

 

ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಅಗಲಕುರ್ಕಿ ಗ್ರಾಮದಲ್ಲಿ ಅನುಮೋದಿತ ಬಡಾವಣೆಯಲ್ಲಿ ನಿವೇಶನ ಕೋರಿದ್ದರು. ಆದರೀಗ ನಗರಾಭಿವೃದ್ದಿ ಇಲಾಖೆಯು  ಸ್ಥಳವನ್ನು ಬದಲಾಯಿಸಿತ್ತು.

 

https://stack.thefile.in/2025/05/governance/31847/

 

ಚಿಕ್ಕಬಳ್ಳಾಪುರ ಜಿಲ್ಲೆಗೆ  ಉಸ್ತುವಾರಿ ಸಚಿವ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್‍‌ ಅವರ ಸೂಚನೆಯಂತೆ ನಗರಾಭಿವೃದ್ದಿ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣಕ್ಕೆ ನಿವೇಶನವನ್ನು ಮಂಜೂರು ಮಾಡಲು ತಯಾರಿ ನಡೆಸಿತ್ತು. ಈ ಕುರಿತು 'ದಿ ಫೈಲ್‌', ಮೇ 5ರಂದೇ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

https://stack.thefile.in/2025/05/governance/31754/

 

 

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ವಶದಲ್ಲಿರುವ ನಿವೇಶನವನ್ನು ಜಿಲ್ಲಾ ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಸಚಿವ ಸಂಪುಟವು ಅನುಮೋದಿಸಿತ್ತು.

 

https://stack.thefile.in/2025/02/governance/29927/

 

ಆದರೀಗ ಆರ್ಥಿಕ ಇಲಾಖೆಯು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಸ್ತಿಯನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಒಪ್ಪಿಗೆ ಸೂಚಿಸಿತ್ತು. ಇದರ ಅಭಿಪ್ರಾಯದ ಮೇರೆಗೆ ಸಚಿವ ಸಂಪುಟವೂ 2025ರ ಫೆ.20ರಂದು ನಡೆದ ಸಭೆಯಲ್ಲಿ ಮಂಜೂರು ಮಾಡಿತ್ತು.

 

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್, ಶಾಸಕ ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ ಮತ್ತಿತರರು ಈ ಪ್ರಸ್ತಾವನೆಗೆ ಶಿಫಾರಸ್ಸು ಮಾಡಿದ್ದರು.  ಇದನ್ನಾಧರಿಸಿ ಆರ್ಥಿಕ ಇಲಾಖೆಯ ಅಭಿಪ್ರಾಯ ಪಡೆಯಲು ಕಡತವನ್ನು ಪೌರಾಡಳಿತ ಇಲಾಖೆಯು ಕಡತವನ್ನು (DMA/DEV/OTH/285/2024)  ಮಂಡಿಸಿದ್ದರು.

 

https://stack.thefile.in/2025/01/governance/28907/

 

ಕೆಪಿಸಿಸಿಗೆ ಕಾರ್ಯಾಲಯ ಕಚೇರಿ ನಿರ್ಮಾಣ ಮಾಡಲು  ಉದ್ದೇಶಿತ ಆಸ್ತಿಯು ಮಹಾನಗರಪಾಲಿಕೆಯ ಆಸ್ತಿಯಾಗಿದೆ.  ಸರ್ಕಾರವು ನಿಗದಿಪಡಿಸಿರುವ ಮಾರ್ಗಸೂಚಿಗಳ ರೀತಿ ಪಾಲಿಕೆಯ ಆಸ್ತಿಗಳನ್ನು ಕೆಲವು ಉದ್ದೇಶಗಳನ್ನು ಹೊರತುಪಡಿಸಿ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಲು ಅವಕಾಶವಿದೆ. ಈ ಪ್ರಕರಣದಲ್ಲಿಯೂ ಸಾರ್ವಜನಿಕ ಹರಾಜು ಮುಖಾಂತರವೇ ಆಸ್ತಿಯನ್ನು ಹಂಚಿಕೆ ಮಾಡಬೇಕಾಗಿದೆ ಎಂದು ತಿಳಿಸಿತ್ತು.

 

ಆದರೆ ಈ ಪ್ರಸ್ತಾವಿತ ವಿಷಯಕ್ಕೆ ಪಾಲಿಕೆಯ ಕೌನ್ಸಿಲ್‌ ಸಭೆಯಲ್ಲಿ ಅನುಮೋದನೆ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರು ಧಾರವಾಡ ಜಿಲ್ಲಾ ಕಾಂಗ್ರೆಸ್‌ ಕಾರ್ಯಾಲಯ ನಿರ್ಮಾಣ ಮಾಡುವ ಸಲುವಾಗಿ ಜಾಗವನ್ನು ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ತಗುಲುವ ವೆಚ್ಚವನ್ನು ಈಗಿನ ಸರ್ಕಾರದ ದರ ಅಥವಾ ಅದಕ್ಕಿಂತ ಕಡಿಮೆ ಬೆಲೆಯನ್ನು ಭರಿಸಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದರು.

 

ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿತ್ತು.

 

https://stack.thefile.in/2022/07/governance/12592/

 

ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಸಂಬಂಧ ಕಾಯ್ದರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ವರದಿ ನೀಡಿದ್ದರೂ ಇದೇ ಜಾಗದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿ ಕಟ್ಟಡ ನಿರ್ಮಾಣ ಮಾಡಲು ಖಾಲಿ ನಿವೇಶನ ಮಂಜೂರು ಮಾಡಲು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ್ದನ್ನು ಸ್ಮರಿಸಬಹುದು.

 

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌ ಸೇರಿದಂತೆ ಸಂಘ ಪರಿವಾರದ ಇನ್ನಿತರೆ ಸಂಘ ಸಂಸ್ಥೆಗಳಿಗೂ ಗೋಮಾಳ, ಸರ್ಕಾರಿ ಜಮೀನು, ಬಿ ಖರಾಬು ಜಮೀನುಗಳನ್ನು ಚಿಲ್ಲರೆ ದರದಲ್ಲಿ ಮಂಜೂರು ಮಾಡಿತ್ತು.

 

https://stack.thefile.in/2022/08/governance/12839/

 

ಇದೀಗ ಕಾಂಗ್ರೆಸ್‌ ಸರ್ಕಾರವು ಸಹ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್‌ ಭವನಗಳಿಗೆ ಕಟ್ಟಡ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧೀನದಲ್ಲಿ ಮತ್ತು ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿರುವ ನಿವೇಶನಗಳ ಮೇಲೆ ಕಣ್ಣು ಹಾಕಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

Tags: BasanagoudaBhavanabjpBuildingscentralCharitablecongressD K ShivakumarDevelopmentEducationalEntertainmentsFoundationsgovernmentkarnatakaKhargeLandLeaseMallikarjun KhargePancayat RajPanchayatsparishadPatilPriyankr ashokRastrothanaReligiousRSSrulesRuralSolidStateTransformersTrustTrustsVillageWasteYatnalಅನಾಥಾಲಯಆರ್‌ ಅಶೋಕ್‌ಇಲಾಖೆಕಾಂಗ್ರೆಸ್‌ಕಾರ್ಯಾಲಯಕಾಲೇಜುಗಳುಗ್ರಾಮೀಣಾಭಿವೃದ್ದಿಟ್ರಸ್ಟ್‌ಡಿ ಕೆ ಶಿವಕುಮಾರ್ಪಂಚಾಯತ್‌ರಾಜ್‌ಪರಿಶಿಷ್ಟ ಜಾತಿಪರಿಶಿಷ್ಟ ಪಂಗಡಪಾಟೀಲಪ್ರಿಯಾಂಕ್‌ ಖರ್ಗೆಬಸನಗೌಡಬಿಜೆಪಿಭವನಮನರಂಜನೆಯತ್ನಾಳವಸತಿ ನಿಲಯವಿಕಲಚೇತನರುವೃದ್ಧಾಶ್ರಮಶಾಲಾಸಂಕೀರ್ಣಸಿಎ ನಿವೇಶನಸಿದ್ದರಾಮಯ್ಯಸ್ತ್ರೀಸ್ವೀಕಾರಹಾಸ್ಟೆಲ್‌ಗಳುಹೆಚ್‌ ಡಿ ಕುಮಾರಸ್ವಾಮಿ
Advertisement Banner
Previous Post

ಕಾಲ್ತುಳಿತ; ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗಸೂಚಿಗಳ ಉಲ್ಲಂಘನೆ, ಹೈಕೋರ್ಟ್‌ಗೆ ಅರ್ಜಿ

Next Post

ಕಾಂಗ್ರೆಸ್‌ ಕಚೇರಿ ಕಟ್ಟಡ ನಿರ್ಮಾಣ; ಪಂಚಾಯ್ತಿಗಳ ಜಾಗದ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್‌ ಭವನ ಟ್ರಸ್ಟ್‌

thefilestack

thefilestack

Next Post

ಟೋಯಿಂಗ್‌ ವಾಹನಗಳ ಬಾಡಿಗೆ; ವರ್ಷಕ್ಕೆ 4.75 ಕೋಟಿ ವೆಚ್ಚದ ಅಂದಾಜು ಪಟ್ಟಿ ಬಹಿರಂಗ

Recommended

ನಿಯಮ ಮೀರಿ 250 ಕೋಟಿ ನಿಶ್ಚಿತ ಠೇವಣಿ; ಮೂಡಾ ಅಕ್ರಮ ಪತ್ತೆ ಹಚ್ಚಿದ ತಾಂತ್ರಿಕ ಸಮಿತಿ

2 years ago

ಪೊಲೀಸ್‌ ಗುಂಪು ವಿಮೆ; ಗೃಹ ಇಲಾಖೆಯಿಂದ ವಿಮಾ ಕಂಪನಿಗೇ ಅತೀ ಹೆಚ್ಚಿನ ಮೊತ್ತ ಪಾವತಿ!

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd