the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಕೋವಿಡ್ ಭ್ರಷ್ಟಾಚಾರ; ಕಾಂಗ್ರೆಸ್‌ ವಿರುದ್ಧ ಕೆಂಪಣ್ಣ ಆಯೋಗ ವರದಿಯ ಪ್ರತ್ಯಾಸ್ತ್ರ?

ಜಿ ಮಹಂತೇಶ್ by ಜಿ ಮಹಂತೇಶ್
July 31, 2020
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು:ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಾಗಿರುವ ಅಕ್ರಮಗಳ ಕುರಿತು ಬೀದಿಗಿಳಿದು ಹೋರಾಟಕ್ಕೆ ಕರೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಕುಗ್ಗಿಸಲು ರಾಜಕೀಯ ಪ್ರತ್ಯಾಸ್ತ್ರ ಪ್ರಯೋಗಿಸಲು ರಾಜ್ಯ ಬಿಜೆಪಿ ಸರ್ಕಾರ ಕಾರ್ಯೋನ್ಮುಖವಾಗಿದೆ.

ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್‌ ಹಗರಣ ಕುರಿತು ನ್ಯಾ. ಎಚ್‌.ಎಸ್‌. ಕೆಂಪಣ್ಣ ಆಯೋಗದ ವಿಚಾರಣೆ ವರದಿಯನ್ನು ಬಿಜೆಪಿ ಸರ್ಕಾರವು ಅಸ್ತ್ರವನ್ನಾಗಿಸಿಕೊಳ್ಳಲು ಮುಂದಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ಆದರೆ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಆಯೋಗ ಕ್ಲೀನ್‌ ಚಿಟ್‌ ನೀಡಿದೆ ಎನ್ನಲಾಗಿದೆ. ಆದರೂ ವರದಿಯನ್ನು ಮತ್ತೊಮ್ಮೆ ಅವಲೋಕನ ಮಾಡಲು ಮೂವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ ಎಂದು ಗೊತ್ತಾಗಿದೆ.

ಈ ಸಂಬಂಧ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಇ ವಿ ರಮಣರೆಡ್ಡಿ, ಮಹೇಂದ್ರ ಜೈನ್‌ರೊಂದಿಗೆ ಈಗಾಗಲೇ ಸರಣಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಯಾವ ಮಾಹಿತಿಯೂ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿರುವ ಮುಖ್ಯ ಕಾರ್ಯದರ್ಶಿ ಅವರು ವಿಚಾರಣೆ ವರದಿ ಹೊರಗೆಡವಿರುವ ಅಂಶಗಳು ಮತ್ತು ಎತ್ತಿರುವ ತಕರಾರುಗಳ ಕುರಿತು ವರದಿ ಸಲ್ಲಿಸಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದ್ದ ಅರ್ಕಾವತಿ ಬಡಾವಣೆ ಡಿ ನೋಟಿಫಿಕೇಷನ್‌ ಕುರಿತು ಸಿಬಿಐ ತನಿಖೆ ನಡೆಸುವಂತೆ ಹಲವು ವರ್ಷಗಳ ಹಿಂದೆಯೇ ಬೊಬ್ಬೆ ಹಾಕಿದ್ದ ಬಿಜೆಪಿ ನಾಯಕರು, ಆ ನಂತರ ಇದನ್ನು ಮರೆತು ಬಿಟ್ಟಿದ್ದರು.

ಅಲ್ಲದೆ, ಅರ್ಕಾವತಿ ಬಡಾವಣೆ ಅಕ್ರಮಕ್ಕೆ ಸಂಬಂಧಿಸಿದಂತೆ 2003ರಿಂದ 2018ರವರೆಗೂ ಕಾಗದ ಪತ್ರಗಳನ್ನು ಅಧಿವೇಶನಕ್ಕೆ ಮುನ್ನವೇ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ನೀಡಲಾಗುವುದು ಎಂದು ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದರು. ಹಾಗೆಯೇ ‘ಅರ್ಕಾವತಿ ಬಡಾವಣೆ ಆರಂಭದಿಂದ ಇಲ್ಲಿಯವರೆಗೆ ನಡೆದಿರುವ ಹಗರಣಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಲಾಗುತ್ತಿದೆ. ಎಲ್ಲವನ್ನೂ ಸೇರಿಸಿ ನ್ಯಾಯಾಂಗ ಆಯೋಗಕ್ಕೆ ಸಲ್ಲಿಸಲಾಗುವುದು. ಇದರಿಂದ ಯಾರ ಕಾಲದಲ್ಲಿ ಏನೇನು ನಡೆದಿದೆ ಎನ್ನುವುದು ಗೊತ್ತಾಗುತ್ತದೆ. ಜೆಡಿಎಸ್ ಈ ಹೋರಾಟ ಮುಂದುವರಿಸಲಿದ್ದು, ಸದನದ ಒಳಗೂ ದನಿ ಎತ್ತಲಾಗುವುದು,’’ ಎಂದು ಹೇಳಿದ್ದರು.

ಕೆಂಪಣ್ಣ ಆಯೋಗ ನೀಡಿದ್ದ ವರದಿಯನ್ನು ಕಾಂಗ್ರೆಸ್‌ ಸರ್ಕಾರ ಬಹಿರಂಗಗೊಳಿಸಿರಲಿಲ್ಲ. ಅಲ್ಲದೆ ಕಾಂಗ್ರೆಸ್‌,ಜೆಡಿಎಸ್‌ ಮೈತ್ರಿಕೂಟ ಸರ್ಕಾರದಲ್ಲಿ ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ಆಯೋಗದ ವರದಿಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಿರಲಿಲ್ಲ. ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿ ಅಧಿಕಾರಕ್ಕೇರಿದ್ದ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ ನಡೆದಿರುವ ಅಧಿವೇಶನದಲ್ಲಿಯೂ ಈ ವರದಿಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿರಲಿಲ್ಲ.

ಆದರೀಗ ಕೋವಿಡ್‌ ಭ್ರಷ್ಟಾಚಾರ ಪ್ರಕರಣಗಳನ್ನು ಕಾಂಗ್ರೆಸ್‌ ರಾಜಕೀಯವಾಗಿ ಪ್ರತಿಷ್ಠೆಯನ್ನಾಗಿಸಿಕೊಳ್ಳುತ್ತಿದ್ದಂತೆ ಬಿಜೆಪಿ ದಿಢೀರ್‌ ಎಂದು ಅರ್ಕಾವತಿ ಡಿ ನೋಟಿಫಿಕೇಷನ್‌ ಕುರಿತು ನೀಡಿದ್ದ ಕೆಂಪಣ್ಣ ಆಯೋಗದ ವರದಿಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಮೇಲೆ ಪ್ರತ್ಯಾಸ್ತ್ರ ಪ್ರಯೋಗಿಸಲು ಚಿಂತಿಸಿರುವುದು ಕುತೂಹಲ ಮೂಡಿಸಿದೆ.

ಅರ್ಕಾವತಿ ಡಿ ನೋಟಿಫಿಕೇಷನ್‌ ಪ್ರಕರಣ ಹಿನ್ನೆಲೆ

ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 16 ಹಳ್ಳಿಗಳ 2,750 ಎಕರೆ ಜಮೀನು ಸ್ವಾಧೀನಕ್ಕೆ 2004 ರ ಫೆಬ್ರವರಿಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಅಂತಿಮ ಅಧಿಸೂಚನೆಯಲ್ಲಿದ್ದ ಜಮೀನಿನ ಪೈಕಿ ಒಟ್ಟು 983.33 ಎಕರೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಡಿನೋಟಿಫೈ ಮಾಡಿತ್ತು. ಈ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷದ ನಾಯಕರಾಗಿದ್ದ ಜಗದೀಶ್‌ ಶೆಟ್ಟರ್‌ ಅವರು ವಿಧಾನಸಭೆಯಲ್ಲಿ ಆರೋಪಿಸಿದ್ದರು.

ಈ ಹಗರಣವನ್ನೇ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ಎಬ್ಬಿಸಿದ್ದರು. ಹೀಗಾಗಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌ ಎಸ್‌ ಕೆಂಪಣ್ಣ ನೇತೃತ್ವದಲ್ಲಿ ಏಕ ವ್ಯಕ್ತಿ ತನಿಖಾ ಸಮಿತಿ ನೇಮಿಸಿದ್ದರು.
ಸ್ವಾಧೀನ ಮಾಡಿಕೊಂಡಿದ್ದ ಜಮೀನಿನಲ್ಲಿ 983.33 ಎಕರೆ ಡಿ ನೋಟಿಫಿಕೇಷನ್‌ ಮಾಡಿದ್ದರ ಕುರಿತು ತನಿಖೆ ನಡೆಸಿದ್ದ ಆಯೋಗವು 5 ಅಂಶಗಳ ಕುರಿತು ವಿಚಾರಣೆ ನಡೆಸಿತ್ತು.

ಸ್ವಾಧೀನ ಮಾಡಿಕೊಂಡಿದ್ದ ಜಮೀನಿನಲ್ಲಿ 983.33 ಎಕರೆಯನ್ನು ಡಿನೋಟಿಫೈ ಮಾಡಿರುವ ಸರ್ಕಾರದ ಕ್ರಮ­ದಿಂದ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ಆದೇಶಗಳ ಉಲ್ಲಂಘನೆ ಆಗಿದೆಯೇ, ಅರೆ ನ್ಯಾಯಾಂಗದ ಅಧಿಕಾರ ಹೊಂದಿದ್ದ ನಾಲ್ವರು ಭೂ­ಸ್ವಾಧೀನ ಅಧಿಕಾರಿಗಳು ಜಮೀನು ಮಾಲೀಕರ ಅಹವಾಲು ಆಲಿಸಿ ನೀಡಿರುವ ಆದೇಶಗಳು ಕಾನೂನುಬದ್ಧವಾಗಿ ಇವೆಯೇ, ಜಮೀನು ಮಾಲೀಕರು ಎತ್ತಿದ ತಕರಾರು ಗಳನ್ನು ­ಆಲಿಸಿದ ಬಿಡಿಎ, ಜಮೀನು ಡಿನೋಟಿಫೈ ಮಾಡಲು ತೆಗೆದುಕೊಂಡ ನಿರ್ಣಯಗಳು ನ್ಯಾಯಾಲಯಗಳ ಆದೇಶಕ್ಕೆ ವಿರುದ್ಧವಾಗಿವೆಯೇ ಎಂಬ ಕುರಿತು ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

Tags: ArkavathyArkavathy LayoutassemblyB S YediyurappaBangalore Development AuthorityCorruputionCovid-19de-notificationDKShivkumarh d kumarswamyHS KempannaInvestigative ReportsJagadishShettarJudicial ProbeJusticeLand Scamlokayuktasiddaramaihaಅರ್ಕಾವತಿಎಚ್‌ ಎಸ್ ಕೆಂಪಣ್ಣಎಚ್‌ ಡಿ ಕುಮಾರಸ್ವಾಮಿಕೋವಿಡ್‌-19ಜಗದೀಶ್‌ ಶೆಟ್ಟರ್‌ಡಿ ಕೆ ಶಿವಕುಮಾರ್ಡಿ ನೋಟಿಫಿಕೇಷನ್‌ನಿವೃತ್ತ ನ್ಯಾಯಮೂರ್ತಿನ್ಯಾಯಾಂಗ ತನಿಖೆಬಿ ಎಸ್‌ ಯಡಿಯೂರಪ್ಪಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಭೂ ಹಗರಣಲೋಕಾಯುಕ್ತವಿಧಾನಮಂಡಲಸಿದ್ದರಾಮಯ್ಯಹೈಕೋರ್ಟ್‌
Advertisement Banner
Previous Post

ಸ್ವಜಾತಿ ಮೋಹ ಪರಾಕಾಷ್ಠೆ; ವಿಶ್ವನಾಥ ಹಿರೇಮಠರಿಗೆ ಜಂಟಿ ನಿರ್ದೇಶಕ ಹುದ್ದೆ ಅನುಗ್ರಹ

Next Post

ಪೊಲೀಸ್‌ ಕಮಿಷನರ್‌ ಭಾಸ್ಕರರಾವ್‌ ಎತ್ತಂಗಡಿ; ‘ದಿ ಫೈಲ್‌’ 2 ತಿಂಗಳು ಮೊದಲೇ ಸುಳಿವು ನೀಡಿತ್ತು

ಜಿ ಮಹಂತೇಶ್

ಜಿ ಮಹಂತೇಶ್

Next Post

ಪೊಲೀಸ್‌ ಕಮಿಷನರ್‌ ಭಾಸ್ಕರರಾವ್‌ ಎತ್ತಂಗಡಿ; 'ದಿ ಫೈಲ್‌' 2 ತಿಂಗಳು ಮೊದಲೇ ಸುಳಿವು ನೀಡಿತ್ತು

Discussion about this post

Recommended

ಕಿಟ್‌ ಖರೀದಿಯಲ್ಲಿ ಅಕ್ರಮ; ಲೆಕ್ಕಪತ್ರ ಸಮಿತಿಯನ್ನೇ ದಿಕ್ಕು ತಪ್ಪಿಸುತ್ತಿದೆ ಆರೋಗ್ಯ ಇಲಾಖೆ?

5 years ago

ಬಾಬುವಾಲಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ; ಬುಡಾದ ಅಕ್ರಮಗಳ ಕುರಿತು ಇನ್ನೂ ಸಲ್ಲಿಕೆಯಾಗದ ವರದಿ

1 year ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd