the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home RTI

ಸಿಎಂ ಕಾರ್ಯದರ್ಶಿ ಕಚೇರಿ ದುರ್ಬಳಕೆ;ವಿಧಾನಸಭೆ ಸಚಿವಾಲಯ ಅಧಿಕಾರಿಯ ಅನಧಿಕೃತ ಕಾರ್ಯನಿರ್ವಹಣೆ

thefilestack by thefilestack
February 10, 2021
in RTI
0
0
SHARES
0
VIEWS
Share on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಸಿ ಹೊಸೂರ್‌ ಅವರ ಕಚೇರಿಯಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧಿಕಾರಿಯೂ ಸೇರಿದಂತೆ ಹಲವರು ‘ಅನಧಿಕೃತ’ವಾಗಿ ಕಾರ್ಯನಿರ್ವಹಿಸುತ್ತಿರುವುದು ಇದೀಗ ಬಹಿರಂಗವಾಗಿದೆ.

ಮುಖ್ಯಮಂತ್ರಿಗಳ ಕಾರ್ಯದರ್ಶಿ ಕಚೇರಿಗೆ ಅನ್ಯ ಕರ್ತವ್ಯ ಅಥವಾ ನಿಯೋಜನೆ ಮೇಲೆ ತೆರಳದಿದ್ದರೂ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಎಂ ಪಿ ಪ್ರಶಾಂತ್‌ಕುಮಾರ್‌ ಅವರು ಮುಖ್ಯಮಂತ್ರಿ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿಯಾಗಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ಹಲವು ಟಿಪ್ಪಣಿಗಳನ್ನು ಹೊರಡಿಸಿದ್ದಾರೆ.

ಅದೇ ಕಚೇರಿಯಲ್ಲಿ ಅಧಿಕೃತವಾಗಿ ಆಪ್ತ ಕಾರ್ಯದರ್ಶಿ ಕಾರ್ಯನಿರ್ವಹಿಸುತ್ತಿದ್ದರೂ ಮುಖ್ಯಮಂತ್ರಿಗಳ ಕಾರ್ಯದರ್ಶಿಗೆ ಅಧಿಕೃತ ಆಪ್ತ ಕಾರ್ಯದರ್ಶಿ ಎಂದು ಹಲವು ಟಿಪ್ಪಣಿಗಳಿಗೆ ಪ್ರಶಾಂತ್‌ಕುಮಾರ್‌ ಅವರು ಸಹಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಆರ್‌ಟಿಐ ಅಡಿಯಲ್ಲಿ ದಾಖಲೆ ಮತ್ತು ಪ್ರಶಾಂತ್‌ಕುಮಾರ್‌ ಅವರು ಆಪ್ತ ಕಾರ್ಯದರ್ಶಿ ಎಂದು ಸಹಿ ಮಾಡಿ ಹೊರಡಿಸಿರುವ ಟಿಪ್ಪಣಿ ಪ್ರತಿಗಳೂ ಲಭ್ಯವಾಗಿದೆ.

ಕರ್ನಾಟಕ ವಿಧಾನಸಭೆ ಸಚಿವಾಲಯದ ಶಾಖಾಧಿಕಾರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂ ಪಿ ಪ್ರಶಾಂತ್‌ಕುಮಾರ್‌ ಅವರಿಗೆ 2020ರ ಮೇ 29ರಂದು ಅಧೀನ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ದೊರೆತಿತ್ತು. ಇದಾದ ನಂತರ ಎಂ ಪಿ ಪ್ರಶಾಂತ್‌ಕುಮಾರ್‌ ವಿಧಾನಸಭೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧೀನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೇ ಪ್ರಶಾಂತ್‌ಕುಮಾರ್‌ ಅವರು ಅನ್ಯ ಕರ್ತವ್ಯ ಮತ್ತು ನಿಯೋಜನೆ ಮೇಲೆ ತೆರಳಿರುವುದಿಲ್ಲಎಂದು ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಬಿ ಎಂ ಶಂಭು ಅವರು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದ್ದಾರೆ.

ಪ್ರಶಾಂತ್‌ಕುಮಾರ್‌ ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿ ಗಿರೀಶ್‌ ಎಸ್‌ ಹೊಸೂರ್‌ ಅವರ ಕಚೇರಿಗೆ ಅನ್ಯ ಕರ್ತವ್ಯ/ ನಿಯೋಜನೆ ಮೇಲೆ ತೆರಳದಿದ್ದರೂ ಅದೇ ಕಚೇರಿಯಲ್ಲಿ ಕಾರ್ಯನಿರ್ವಹಿಸಿರುವುದು ಮತ್ತು ಅವರ ಆಪ್ತ ಕಾರ್ಯದರ್ಶಿ ಎಂದು ಸಹಿ ಮಾಡಿ ಟಿಪ್ಪಣಿಗಳನ್ನು ಹೊರಡಿಸಿರುವುದು ಹಲವು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

ಮುಖ್ಯಮಂತ್ರಿ ಕಾರ್ಯದರ್ಶಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಹಾಜರಾತಿ ದೃಢೀಕರಣ, ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಗೆ ಸರ್ಕಾರಿ ವಸತಿಗೃಹಗಳಲ್ಲಿ ಕೊಠಡಿ ಕಾಯ್ದಿರಿಸುವುದು ಮತ್ತು ಅನ್ಯ ಕರ್ತವ್ಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಇತರೆ ನೌಕರರಿಗೆ ಹಾಜರಾತಿ ಪ್ರಮಾಣ ಪತ್ರಕ್ಕೆ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿಯೇ ಸಹಿ ಮಾಡಿ ದೃಢೀಕರಿಸಿದ್ದಾರೆ. ಅಲ್ಲದೆ ಪ್ರಶಾಂತ್‌ಕುಮಾರ್‌ ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕಚೇರಿಯ ರವಾನೆ ಪುಸ್ತಕದಲ್ಲಿ ಒಎಸ್‌ಡಿ ಎಂದೇ ಸಹಿ ಮಾಡಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಗಿರೀಶ್‌ ಸಿ ಹೊಸೂರ್‌ ಅವರಿಗೆ ಲೋಕೋಪಯೋಗಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಕೃಷಿ, ಸಾರಿಗೆ, ಅಲ್ಪಸಂಖ್ಯಾತರ ಕಲ್ಯಾಣ, ತೋಟಗಾರಿಕೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಧಾನಸಭೆ, ವಿಧಾನಪರಿಷ್‌ ಸದಸ್ಯರು, ಸಂಸತ್‌ ಸದಸ್ಯರೊಂದಿಗೆ ಸಮನ್ವಯ, ಇಂಧನ ಇಲಾಖೆಯ ಸೇವೆಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿಗಳ ಕಚೇರಿ, ಅಧಿಕಾರಿ, ನೌಕರರ ವರ್ಗಾವಣೆ ವಿಷಯಗಳು ಸೇರಿದಂತೆ ಹಲವು ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ.

Tags: b l santhoshB S YediyurappaBJP KarnatakaChief Minister OfficeChief Minister SecretaryD K ShivakumarGirish C Hosurh d kumarswamyKPCCLegislature AssemblyM P Prashanth KumarM VishalakshiSiddaramaiahSpeakerVidhana SoudhaVishweshwar Hegde Kageriಎಂ ಪಿ ಪ್ರಶಾಂತಕುಮಾರ್‌ಎಂ ವಿಶಾಲಾಕ್ಷಿಎಚ್‌ ಡಿ ಕುಮಾರಸ್ವಾಮಿಕೆಪಿಸಿಸಿಗಿರೀಶ್‌ ಸಿ ಹೊಸೂರ್‌ಡಿ ಕೆ ಶಿವಕುಮಾರ್ಬಿ ಎಲ್‌ ಸಂತೋಷ್‌ಬಿ ಎಸ್‌ ಯಡಿಯೂರಪ್ಪಬಿಜೆಪಿ ಕರ್ನಾಟಕಮುಖ್ಯಮಂತ್ರಿಗಳ ಕಚೇರಿಮುಖ್ಯಮಂತ್ರಿಗಳ ಕಾರ್ಯದರ್ಶಿವಿಧಾನಸಭೆ ಸಚಿವಾಲಯವಿಧಾನಸೌಧವಿಶ್ವೇಶ್ವರ ಹೆಗಡೆ ಕಾಗೇರಿಸಭಾಧ್ಯಕ್ಷಸಿದ್ದರಾಮಯ್ಯ
Advertisement Banner
Previous Post

ಲೈಂಗಿಕ ಕಿರುಕುಳ ಆರೋಪ; ಡಿಐಜಿ ವಿರುದ್ಧ ಲಾಜಿಸ್ಟಿಕ್ಸ್‌ ಕಂಪನಿ ಮಹಿಳಾ ಉದ್ಯೋಗಿ ದೂರು

Next Post

50 ಲಕ್ಷ ಥೈಲಿ ಸಿಕ್ಕಿಬಿದ್ದ ಪ್ರಕರಣ; ಪಿಡಬ್ಲ್ಯುಡಿ ಅಧಿಕಾರಿ ವಿರುದ್ಧ ತನಿಖೆ ವಿಳಂಬ?

thefilestack

thefilestack

Next Post

50 ಲಕ್ಷ ಥೈಲಿ ಸಿಕ್ಕಿಬಿದ್ದ ಪ್ರಕರಣ; ಪಿಡಬ್ಲ್ಯುಡಿ ಅಧಿಕಾರಿ ವಿರುದ್ಧ ತನಿಖೆ ವಿಳಂಬ?

Discussion about this post

Recommended

ಐಎಂಎ ಮನ್ಸೂರ್‌ಖಾನ್‌ ಖರೀದಿಸಿರುವ 5 ಲಕ್ಷ ಷೇರು ಮುಟ್ಟುಗೋಲು; ಆರ್ಥಿಕ ಇಲಾಖೆಗೆ ಮೊರೆ

6 years ago

ವರ್ಗಾವಣೆ, ಸ್ಥಳನಿಯುಕ್ತಿ; ಸಿಎಂ ‘ವಿವೇಚನೆ’ ಅದಲು-ಬದಲು, ಫುಟ್ಬಾಲ್‌ನಂತಾದ ಕೆಎಎಸ್‌ ಅಧಿಕಾರಿಗಳು

3 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd