the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home LEGISLATURE

ವೇತನ ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳೂ ಭಾಗಿ; ಸಭಾಪತಿಯಿಂದಲೇ ಸಂಶಯ

thefilestack by thefilestack
August 7, 2021
in LEGISLATURE
0
0
SHARES
0
VIEWS
Share on FacebookShare on Twitter

ಬೆಂಗಳೂರು; ‘ದಿ ಫೈಲ್‌’ ಹೊರಗೆಡವಿದ್ದ ವಿಧಾನ ಪರಿಷತ್‌ ಸಚಿವಾಲಯದಲ್ಲಿ ನಡೆದಿರುವ ವೇತನ ಹಗರಣವು ಮತ್ತೊಂದು ಮಗ್ಗುಲಿಗೆ ಹೊರಳಿದೆ. ಈ ಹಗರಣದಲ್ಲಿ ಆರ್ಥಿಕ ಇಲಾಖೆಯ ಹಲವು ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂಶಯ ವ್ಯಕ್ತಪಡಿಸಿರುವುದು ಅಧಿಕಾರಶಾಹಿಯ ಪಾತ್ರವೂ ಇನ್ನಷ್ಟು ನಿಚ್ಚಳವಾಗಿ ಗೋಚರಿಸಲಾರಂಭಿಸಿದೆ.

ವೇತನ ಹಗರಣ ಬಹಿರಂಗವಾಗುತ್ತಿದ್ದಂತೆ ಕ್ರಮಕ್ಕೆ ಮುಂದಾಗಿದ್ದ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನೂ ಬದಿಗೆ ಸರಿಸಿರುವ ಅಧಿಕಾರಶಾಹಿ ಮೇಲುಗೈ ಸಾಧಿಸಿದೆ. ಸಭಾಪತಿಗಳ ಸೂಚನೆಯಂತೆ ಹಗರಣದ ಕುರಿತು ತನಿಖೆ ನಡೆಸಿ ಸಮಗ್ರ ವರದಿ ಸಲ್ಲಿಸಬೇಕಿದ್ದ ಆರ್ಥಿಕ ಇಲಾಖೆಯು ಇದೀಗ ಪರಿಷತ್‌ನ ಸಚಿವಾಲಯದ ಉನ್ನತ ಅಧಿಕಾರಿಗಳ ತಂಡದ ಜತೆ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಕಿಯೋನಿಕ್ಸ್‌ ಮೂಲಕ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೇಟಾ ಎಂಟ್ರಿ ಆಪರೇಟರ್ಸ್‌ ಸೇರಿದಂತೆ ಇನ್ನಿತರೆ ಹೊರಗುತ್ತಿಗೆ ನೌಕರರಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವೇತನ ಪಾವತಿಸುತ್ತಿದೆ ಎಂದು ತಕರಾರು ತೆಗೆದು ನಂತರ ಇದೇ ಹುದ್ದೆಗಳಿಗೆ ಹೆಚ್ಚುವರಿ ವೇತನವನ್ನೇ ಸಕ್ರಮಗೊಳಿಸಿ ಹೊರಡಿಸಿರುವ ಆದೇಶವು ಸಭಾಪತಿಗಳ ಔಚಿತ್ಯವನ್ನೇ ಪ್ರಶ್ನಿಸಿದಂತಾಗಿದೆ.

ವೇತನ ಹಗರಣಕ್ಕೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಚಿವಾಲಯದ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್‌ಎನ್‌ ಪ್ರಸಾದ್‌ ಅವರೊಂದಿಗೆ ಹಲವು ಬಾರಿ ಚರ್ಚಿಸಿದ್ದರು. ಇದೇ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆ ವರದಿ ನೀಡಬೇಕು ಎಂದು ಸೂಚಿಸಿದ್ದರು.

ಘನತೆಗೆ ಚ್ಯುತಿ ಎಂದ ಹೊರಟ್ಟಿ

ಹಗರಣದ ಕುರಿತು ತನಿಖೆ ನಡೆಸಬೇಕಿದ್ದ ಆರ್ಥಿಕ ಇಲಾಖೆಯು ಹೆಚ್ಚುವರಿ ವೇತನಕ್ಕೆ ಹೆಚ್ಚುವರಿ ಅನುದಾನ ನೀಡಿ 2021ರ ಜುಲೈ 30ರಂದು ಆದೇಶ ಹೊರಡಿಸಿದೆ. ಇಲಾಖೆಯ ಈ ಕ್ರಮವು ಸಭಾಪತಿಗಳ ಘನತೆಗೆ ಚ್ಯುತಿ ತಂದಿದೆ ಎಂದು ಹೊರಟ್ಟಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ 2021ರ ಆಗಸ್ಟ್‌ 5ರಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್‌ಎನ್‌ ಪ್ರಸಾದ್‌ ಅವರಿಗೆ ಟಿಪ್ಪಣಿಯನ್ನೂ ಬರೆದಿದ್ದಾರೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಆರ್ಥಿಕ ಇಲಾಖೆ ಅಧಿಕಾರಿಗಳೂ ಭಾಗಿ

ಅಲ್ಲದೆ ‘ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಸಭಾಪತಿಯವರ ಸೂಚನೆಯನ್ನು ಪಾಲಿಸದೇ ಏಕಾಏಕೀ ಹೆಚ್ಚುವರಿ ಅನುದಾನವನ್ನು ನೀಡಿರುವ ಕ್ರಮವನ್ನು ಅವಲೋಕಿಸಿದರೆ ಪ್ರಕರಣದಲ್ಲಿ ತಮ್ಮ ಇಲಾಖೆಯ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡುತ್ತಿದೆ. ನನ್ನ ಸೂಚನೆಯ ಹೊರತಾಗಿಯೂ ಈ ಪ್ರಕರಣದ ಕುರಿತು ಕೂಲಂಕಷವಾಗಿ ಪರಿಶೀಲಿಸಿ ಸತ್ಯಾಸತ್ಯತೆ ವರದಿ ನೀಡುವ ಬದಲು ವೇತನ ಪಾವತಿಗೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಿರುವುದು ವಿಷಾದನೀಯ,’ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್ಸ್‌, ಡಿಟಿಪಿ ಆಪರೇಟರ್ಸ್‌ಗಳನ್ನು ಹೊರಗುತ್ತಿಗೆ ಅಡಿಯಲ್ಲಿ ನೇಮಕ ಮಾಡಿರುವ ಪರಿಷತ್‌ ಸಚಿವಾಲಯವು ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿಯಾಗಿ ಕಳೆದ ಎರಡೂವರೆ ವರ್ಷಗಳಿಂದ 48,42,564 ರು.ಗಳನ್ನು ಪಾವತಿಸಲಾಗಿತ್ತು. ಈ ಸಂಬಂಧ ತಕರಾರು ತೆಗೆದಿದ್ದ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು 2021ರ ಏಪ್ರಿಲ್‌ 9ರಂದು ಪರಿಷತ್‌ ಸಚಿವಾಲಯದ ಕಾರ್ಯದರ್ಶಿಗೆ ಪತ್ರವನ್ನೂ ಬರೆದಿದ್ದರು.

‘ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವ್ಯತಿರಿಕ್ತವಾಗಿ ಕಿಯೋನಿಕ್ಸ್‌ನಿಂದ ಕರಾರು ಒಪ್ಪಂದ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿರುವುದು ನಿಯಮಬಾಹಿರವಾಗಿರುತ್ತದೆ. ಆದ್ದರಿಂದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿದ್ದಂತೆ ಹುದ್ದೆಗಳ ವೇತನ ಶ್ರೇಣಿಯ ಕನಿಷ್ಠ ವೇತನ ಕಾಯ್ದೆ ಪ್ರಕಾರ ನಿಗದಿಗೊಳಿಸಬೇಕು,’ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಪರಿಷತ್‌ನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.

ಹೆಚ್ಚುವರಿ ಪಾವತಿಸಿದ್ದೆಷ್ಟು?

ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ ಕನಿಷ್ಠ ವೇತನ ಕಾಯ್ದೆಯಡಿ ಆರ್ಥಿಕ ಇಲಾಖೆಯು 22,800 ರು. ನಿಗದಿಪಡಿಸಿದೆ. ಆದರೆ ವಿಧಾನಪರಿಷತ್ತಿನ ಸಚಿವಾಲಯವು ನೀಡುತ್ತಿರುವುದು 42,065 ರು. . ಅಂದರೆ ಹೆಚ್ಚುವರಿಯಾಗಿ 19,265 ರು. ಪ್ರತಿ ತಿಂಗಳೂ ಪಾವತಿಯಾಗುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಹೆಚ್ಚುವರಿಯಾಗಿ ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ 5,58,685 ರು. ಪಾವತಿಯಾಗಿದೆ. ಅದರಂತೆ ಇಬ್ಬರು ಜ್ಯೂನಿಯರ್‌ ಪ್ರೋಗ್ರಾಮರ್‌ಗಳಿಗೆ ಒಟ್ಟು 11,17,370 ರು. ಹೆಚ್ಚುವರಿಯಾಗಿ ಪಾವತಿಯಾದಂತಾಗಿತ್ತು.

ಅದೇ ರೀತಿ ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗೆ 20,000 ರು. ಕನಿಷ್ಠ ವೇತನ ನಿಗದಿಪಡಿಸಿದ್ದರೆ ವಿಧಾನಪರಿಷತ್ತಿನ ಸಚಿವಾಲಯವು 38,266 ರು. ನೀಡುತ್ತಿದೆ. ಹೆಚ್ಚುವರಿ 18,266 ರು. ನಂತೆ ಹೆಚ್ಚುವರಿಯಾಗಿ 5,29,714 ರು. ಪಾವತಿಸಲಾಗಿದೆ. ಅದರಂತೆ ಮೂವರು ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳಿಗೆ ಒಟ್ಟು 15,89,142 ರು. ಪಾವತಿಸಿತ್ತು.

ಹಾಗೆಯೇ ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗೆ 13,284 ರು. ನೀಡಬೇಕಿದ್ದರೆ ವಿಧಾನಪರಿಷತ್ತಿನ ಸಚಿವಾಲಯವು 18,414.25 ರು.ಗಳನ್ನು ಹೆಚ್ಚುವರಿ ನೀಡಿ ಒಟ್ಟು 31,699 ರು. ನಂತೆ ಒಬ್ಬರಿಗೆ 5,34, 013 ರು ಪಾವತಿಯಾಗಿದೆ. ನೀಡುತ್ತಿದೆ. ಅದರಂತೆ ನಾಲ್ವರು ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಹೆಚ್ಚುವರಿಯಾಗಿ 21,36,052 ರು. ರು. ಪಾವತಿಸಿರುವುನ್ನು ಆರ್ಥಿಕ ಇಲಾಖೆ ಹೊರಗೆಡವಿತ್ತು.

‘ವಿಧಾನ ಪರಿಷತ್‌ನ ಲೆಕ್ಕ ಶೀರ್ಷಿಕೆ (2011-02-103-2-01-034)ಯಂತೆ ಕರ್ನಾಟಕ ವಿಧಾನ ಪರಿಷತ್‌ನ ಸಚಿವಾಲಯದಲ್ಲಿ ಶೀಘ್ರಲಿಪಿಗಾರರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಪಡೆದಿದ್ದು ವೇತನವನ್ನು 30,350 ರು.ಗಳಿಗೆ ನಿಗದಿಗೊಳಸಲಾಗಿದೆ. ಇದು ಕನಿಷ್ಠ ವೇತನ ಕಾಯ್ದೆ ಮೀರಿದ್ದರಿಂದ ಪರಿಷ್ಕರಿಸಿ 22,000 ರು.ಗಳಿಗೆ ನಿಗದಿಪಡಿಸಿ 2021-22ನೇ ಸಾಲಿನ ಅಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿದೆ. ಆದ್ದರಿಂದ ಶೀಘ್ರಲಿಪಿಗಾರರ ವೇತನವನ್ನೂ ಮರು ನಿಗದಿಪಡಿಸಬೇಕು,’ ಎಂದು ಆರ್ಥಿಕ ಇಲಾಖೆಯು ಆಡಳಿತ ಇಲಾಖೆಗೆ ನಿರ್ದೇಶಿಸಿತ್ತು.

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳ ಭರ್ತಿಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಶೇ.50ರಷ್ಟನ್ನು ಪದನ್ನೋತಿಯಿಂದ ಶೇ.50ರಷ್ಟು ನೇರ ನೇಮಕಾತಿಯಿಂದ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಇಲ್ಲದ ಪಕ್ಷದಲ್ಲಿ ನಿಯೋಜನೆ ಮೇಲೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವ್ಯತಿರಿಕ್ತವಾಗಿ ಕಿಯೋನಿಕ್ಸ್‌ನಿಂದ ಕರಾರು ಒಪ್ಪಂದ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನಿಯಮಬಾಹಿರವಾಗಿ ಭರ್ತಿ ಮಾಡಿತ್ತು.

ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿದ್ದಂತೆ ಹುದ್ದೆಗಳ ವೇತನ ಶ್ರೇಣಿಯ ಕನಿಷ್ಠ ವೇತನ ಕಾಯ್ದೆ ಪ್ರಕಾರ ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ 22,800 ರು., ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗೆ 20,000 ರು., ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ಡಾಡಾ ಎಂಟ್ರಿ ಆಪರೇಟರ್‌, ಸ್ವಚ್ಛತಾ ಕಾರ್ಮಿಕರಾದ ಸಫಾಯಿ ಕರ್ಮಚಾರಿಗಳಿಗೆ ಆಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿದೆ. ಈ ಹುದ್ದೆಗಳ ಭರ್ತಿಗೆ ಆಡಳಿತ ಇಲಾಖೆಯು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಕ್ರಮ ವಹಿಸಬೇಕು ಎಂದು ಆರ್ಥಿಕ ಇಲಾಖೆಯು ಸೂಚಿಸಿತ್ತು.

Tags: B S YediyurapaBasavaraj BommaiBasavaraj HorattiD K ShivakumarFinance Departmenth d kumarswamyH VishwanathkarnatakaKEONCISLegislature CouncilN Ravikumars r patilSiddaramaiahVishweshwar Hegde Kageriಅಕ್ರಮ ನೇಮಕಾತಿಆರ್ಥಿಕ ಇಲಾಖೆಎಚ್‌ ಡಿ ಕುಮಾರಸ್ವಾಮಿಎಚ್‌ವಿಶ್ವನಾಥ್‌ಎಸ್‌ ಆರ್‌ ಪಾಟೀಲ್‌ಐಎಸ್‌ಎನ್‌ ಪ್ರಸಾದ್‌ಕರ್ನಾಟಕಕಿಯೋನಿಕ್ಸ್‌ಡಿ ಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಬಸವರಾಜ ಹೊರಟ್ಟಿಬಿ ಎಸ್‌ ಯಡಿಯೂರಪ್ಪರಮೇಶ್‌ಬಾಬುವಿಧಾನಪರಿಷತ್‌ವಿಶ್ವೇಶ್ವರ ಹೆಗಡೆ ಕಾಗೇರಿಸಿದ್ದರಾಮಯ್ಯ
Advertisement Banner
Previous Post

ಅನಧಿಕೃತ ಕಟ್ಟಡ; ಅರ್ಜಿದಾರರಿಗೆ ಒಡ್ಡಿರುವ ಬೆದರಿಕೆ ಪಿತೂರಿಯಲ್ಲಿ ಮುನಿರತ್ನರ ಕೈವಾಡವಿದೆಯೇ?

Next Post

ವೇತನ ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳೂ ಭಾಗಿ; ಸಭಾಪತಿಯಿಂದಲೇ ಸಂಶಯ

thefilestack

thefilestack

Next Post

ಇಸ್ಲಾಮಿಯಾ ಸಂಸ್ಥೆಯ ಕಟ್ಟಡ, ಜಾಗ ವಶ; ಸಂಘ ಪರಿವಾರದ ಒತ್ತಡ?

Discussion about this post

Recommended

ಚರ್ಚ್‌ಗಳ ಮೇಲೆ ಗೂಢಚಾರಿಕೆ; ಒಳಾಡಳಿತ ಇಲಾಖೆಯಲ್ಲಿ ಮಾಹಿತಿಯೇ ಲಭ್ಯವಿಲ್ಲ

4 years ago

ಕೃಷಿ ಸಾಲ; 25,547.02 ಕೋಟಿ ರು. ಹೊರಬಾಕಿ, ರೈತರ ಸಾಲಮನ್ನಾ ಪ್ರಸ್ತಾವವಿಲ್ಲವೆಂದ ಕಾಂಗ್ರೆಸ್‌ ಸರ್ಕಾರ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd