the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಮಾರ್ಗಸೂಚಿ ಉಲ್ಲಂಘನೆ; ಎನ್‌ಒಸಿಗೂ ಮುನ್ನವೇ ಖಂಡ್ರೆ ಒಡೆತನದ ಕಂಪನಿಗೆ 60 ಕೋಟಿ ಸಾಲ

thefilestack by thefilestack
August 11, 2021
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಮಾಜಿ ಶಾಸಕ ಪ್ರಕಾಶ್‌ ಖಂಡ್ರೆ ನಿರ್ದೇಶಕರಾಗಿರುವ ಬಾಲ್ಕೇಶ್ವರ ಷುಗರ್ಸ್‌ ಲಿಮಿಟೆಡ್‌ಗೆ ಸಮೂಹ ಬ್ಯಾಂಕ್‌ಗಳಿಂದ ನಿರಪೇಕ್ಷಣಾ ಪತ್ರ ಬರುವ ಮೊದಲೇ ಅಪೆಕ್ಸ್‌ ಬ್ಯಾಂಕ್‌ 60.00 ಕೋಟಿ ರು. ಸಾಲ ಮಂಜೂರು ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ.

ಅಪೆಕ್ಸ್‌ ಬ್ಯಾಂಕ್‌ನ ಆರ್ಥಿಕ ಚಟುವಟಿಕೆಗಳ ಸಂಬಂಧಿಸಿದಂತೆ 2018-19ನೇ ಸಾಲಿನ ಶಾಸನಬದ್ಧ ಲೆಕ್ಕಪರಿಶೋಧನೆ ವರದಿಯು ಬಾಲ್ಕೇಶ್ವರ ಷುಗರ್ಸ್‌ ಕಂಪನಿಗೆ ಸಾಲ ಮಂಜೂರಾತಿಯಲ್ಲಿನ ನ್ಯೂನತೆಗಳನ್ನು ಹೊರಗೆಡವಿದೆ. ಶಾಸನಬದ್ಧ ಲೆಕ್ಕಪರಿಶೋಧನೆ ವರದಿ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬಾಲ್ಕೇಶ್ವರ ಷುಗರ್ಸ್‌ ಲಿಮಿಟೆಡ್‌ಗೆ ಅಪೆಕ್ಸ್‌ ಬ್ಯಾಂಕ್‌, ಪಿಎನ್‌ಬಿ, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ, ಕಾರ್ಪ್‌ ಬ್ಯಾಂಕ್‌, ಐಒಬಿ ಸೇರಿದಂತೆ ಇನ್ನಿತರೆ ಬ್ಯಾಂಕ್‌ಗಳು ನೀಡಿದ್ದ ಒಟ್ಟು ಸಾಲದ ಪೈಕಿ 1,51,07,62,364.00 ರಷ್ಟು ಹೊರಬಾಕಿ ಇದ್ದರೂ ಆ ಎಲ್ಲಾ ಬ್ಯಾಂಕ್‌ಗಳು ನಿರಪೇಕ್ಷಣಾ ಪತ್ರ ನೀಡುವ ಮುನ್ನವೇ ಅಪೆಕ್ಸ್‌ ಬ್ಯಾಂಕ್‌ 60.00 ಕೋಟಿ ರು. ಸಾಲ ಮಂಜೂರು ಮಾಡಿರುವುದು ವರದಿಯಿಂದ ತಿಳಿದು ಬಂದಿದೆ.

ಅಲ್ಲದೆ 2017-18ರ ಲೆಕ್ಕಪರಿಶೋಧನಾ ವರದಿ ಪ್ರಕಾರ ಸಕ್ಕರೆ ಕಾರ್ಖಾನೆಯಲ್ಲಿ 359710 ಕ್ವಿಂಟಾಲ್‌ ಸಕ್ಕರೆ ಹಾಗೂ 18420 ಎಂ ಟಿ ಮೊಲಾಸಿಸ್‌ ದಾಸ್ತಾನಿತ್ತು. ಕಂಪನಿಯು ತೆರಿಗೆಗೆ ಮೊದಲು 597.74 ಲಕ್ಷ ರು.ನಷ್ಟವನ್ನು ಅನುಭವಿಸಿತ್ತು ಎಂಬುದು ವರದಿಯಿಂದ ಗೊತ್ತಾಗಿದೆ.

2019ರ ಮಾರ್ಚ್‌ 11ರಂದು ಸಮೂಹ ಬ್ಯಾಂಕ್‌ಗಳ ಸಭೆ ನಡವಳಿಪ್ರಕಾರ ಸಾಲಗಾರ ಕಂಪನಿಯು ತುರ್ತಾಗಿ ಸ್ಥಾವರದ ನಿರ್ವಹಣೆ ಮತ್ತು ಲೇಬರ್‌ ಗ್ಯಾಂಗ್‌ಗಳಿಗೆ ಪಾವತಿಸಬೇಕಾಗಿರುವುದರಿಂದ 60.00 ಕೋಟಿ ದುಡಿಯುವ ಬಂಡವಾಳವನ್ನು ಬಾಲ್ಕೇಶ್ವರ ಷುಗರ್ಸ್ ಪಡೆದಿತ್ತು. ಅಲ್ಲದೆ ಇದನ್ನು ತುರ್ತಾಗಿ ಮುಗಿಸಬೇಕಾದ ಕೆಲಸವಾದ ಕಾರಣ ಅಪೆಕ್ಸ್‌ ಬ್ಯಾಂಕ್‌ನಿಂದ ಸಾಲ ಪಡೆಯಲು ಸಮೂಹ ಬ್ಯಾಂಕ್‌ಗಳು ನಿರಾಪೇಕ್ಷಣಾ ಪತ್ರ ನೀಡಬೇಕು ಎಂದು ಕೇಳಿಕೊಂಡಿತ್ತು. ಆದರೆ ನಿರಪೇಕ್ಷಣಾ ಪತ್ರ ಬರುವ ಮುನ್ನವೇ ಅಪೆಕ್ಸ್‌ ಬ್ಯಾಂಕ್‌ನಿಂದ ಸಾಲವನ್ನು ಡ್ರಾ ಮಾಡಿತ್ತು ಎಂದು ಲೆಕ್ಕಪರಿಶೋಧನೆ ವರದಿಯು ಬಹಿರಂಗಗೊಳಿಸಿದೆ.

ಬ್ಯಾಂಕ್‌ನ ಸಾಲ ಮತ್ತು ಮುಂಗಡಗಳ ಕೈಪಿಡಿ ಸಂಖ್ಯೆ 9.2.7ರ ಮಾರ್ಗಸೂಚಿ ಪ್ರಕಾರ ಬ್ಯಾಂಕ್‌ ಮಂಜೂರಾದ ಸಾಲದ ಮಿತಿ 60.00 ಕೋಟಿಗಳಲ್ಲಿ 1/3ನ್ನು ಪೂರ್ವಭಾವಿ ವೆಚ್ಚದ ಸಾಲವೆಂದು ಬಿಡುಗಡೆಗೊಳಿಸಬಹುದು. ಸಕ್ಕರೆ ದಾಸ್ತಾನಿನ ಮೇಲೆ 20.00 ಕೋಟಿಗಳ ಪೂರ್ವಭಾವಿ ವೆಚ್ಚದ ಸಾಲ ಹಾಗೂ 2/3ರ ಮಿತಿಯಷ್ಟು ಬಿಡುಗಡೆಗೊಳಿಸಬಹುದು. ಆದರೆ ಬ್ಯಾಂಕ್‌ 2018ರ ಸೆಪ್ಟಂಬರ್‌ 7ರಂದು ಹೆಚ್ಚುವರಿಯಾಗಿ 400.00 ಲಕ್ಷ ಗಳನ್ನು ಪೂರ್ವಭಾವಿ ವೆಚ್ಚ ಸಾಲವೆಂದು ಬಿಡುಗಡೆಗೊಳಿಸಿತ್ತು. ಇದು ಬ್ಯಾಂಕ್‌ನ ಮಾರ್ಗಸೂಚಿಯನ್ನು ಪಾಲಿಸಿಲ್ಲ ಎಂದು ಲೆಕ್ಕಪರಿಶೋಧನೆ ವರದಿಯಲ್ಲಿ ವಿವರಿಸಲಾಗಿದೆ.

ಬೃಹತ್‌ ಮತ್ತು ಕೈಗಾರಿಕೆ ಸಚಿವ ಮುರುಗೇಶ್‌ ಆರ್‌ ನಿರಾಣಿ ಅವರ ಒಡೆತನದ ನಿರಾಣಿ ಷುಗರ್ಸ್‌ ಲಿಮಿಟೆಡ್‌, ಸಹ-ಕಂಪನಿಗೆ ಸೇರಿರುವ ಸ್ಥಿರಾಸ್ತಿಯನ್ನು ಅಡಮಾನವಾಗಿರಿಸಿ 85.00 ಕೋಟಿ ರು. ಸಾಲವನ್ನು ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿದ್ದನ್ನು ಸ್ಮರಿಸಬಹುದು.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ನಿರ್ದೇಶಕರಾಗಿರುವ ಹರ್ಷ ಷುಗರ್ಸ್‌ ಲಿಮಿಟೆಡ್‌ ಅಪೆಕ್ಸ್‌ ಬ್ಯಾಂಕ್‌ನಿಂದ ಮಂಜೂರು ಮಾಡಿಸಿಕೊಂಡ ಹೊಸ ಸಾಲದ ಮೊತ್ತದಲ್ಲಿ ಬಹುತೇಕ ಮೊತ್ತವನ್ನು ಹಳೇ ಸಾಲದ ಬಾಕಿಗೆ ಹೊಂದಾಣಿಕೆ ಮಾಡಿರುವುದನ್ನು ಲೆಕ್ಕ ಪರಿಶೋಧನೆ ವರದಿ ಹೊರಗೆಡವಿತ್ತು.

ಅಪೆಕ್ಸ್‌ ಬ್ಯಾಂಕ್‌ ಸಾಲ ಮಂಜೂರಾತಿ ಮಾಡಿದ್ದ 50.00 ಕೋಟಿ ರು. ಪೈಕಿ 30.81 ಕೋಟಿ ರು. ಗಳನ್ನು ಹಳೇ ಬಾಕಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಅಲ್ಲದೆ ಹೆಚ್ಚುವರಿ ಸಾಲ ಮಂಜೂರಾತಿಗೆ ಸಮೂಹ ಬ್ಯಾಂಕ್‌ಗಳಿಂದ ನಿರಾಪೇಕ್ಷಣಾ ಪತ್ರ ಪಡೆಯದ ಕಾರಣ, ಹೆಚ್ಚುವರಿ ಸಾಲದ ಹೊಣೆಯು ಅಪೆಕ್ಸ್‌ ಬ್ಯಾಂಕ್‌ ಮೇಲೆ ಬಿದ್ದಿದೆ ಎಂದು ಶಾಸನಬದ್ಧ ಲೆಕ್ಕಪರಿಶೋಧಕರು ಬಹಿರಂಗಗೊಳಿಸಿದ್ದನ್ನು ಸ್ಮರಿಸಬಹುದು.

Tags: Apex AuditApex Bank ScamB S YediyurappaBasavaraj BommaiBelli PrakashBhalkeshwar SugarsD K ShivakumarDCC BanksEshwar Khandreh d kumarswamyK N RajannaPrakash KhandreR M Manjunath GowdaS T SomshekharSiddaramaiahSugars Companiesಅಪೆಕ್ಸ್‌ ಬ್ಯಾಂಕ್‌ ಲೆಕ್ಕ ಪರಿಶೋಧನೆಅಪೆಕ್ಸ್‌ ಬ್ಯಾಂಕ್‌ ಹಗರಣಆರ್‌ ಎಂ ಮಂಜುನಾಥಗೌಡಈಶ್ವರ್‌ ಖಂಡ್ರೆಎಚ್‌ ಡಿ ಕುಮಾರಸ್ವಾಮಿಎಸ್‌ ಟಿ ಸೋಮಶೇಖರ್‌ಕೆ ಎನ್‌ ರಾಜಣ್ಣಡಿ ಕೆ ಶಿವಕುಮಾರ್ಡಿಸಿಸಿ ಬ್ಯಾಂಕ್‌ಗಳುಪ್ರಕಾಶ್‌ ಖಂಡ್ರೆಬಸವರಾಜ ಬೊಮ್ಮಾಯಿಬಿ ಎಸ್‌ ಯಡಿಯೂರಪ್ಪಬೆಳ್ಳಿ ಪ್ರಕಾಶ್‌ಭಾಲ್ಕೇಶ್ವರ್‌ ಷುಗರ್ಸ್‌ಸಕ್ಕರೆ ಕಂಪನಿಗಳುಸಿದ್ದರಾಮಯ್ಯ
Advertisement Banner
Previous Post

ಲೋಕಾಯುಕ್ತರ ಆಸ್ತಿವಿವರ; ಕಾಯ್ದೆ ತಿದ್ದುಪಡಿ ಹೊಣೆಗಾರಿಕೆ ಸಿಎಂ ಹೆಗಲಿಗೆ ವರ್ಗಾವಣೆ

Next Post

ಸಹಭಾಗಿ; ಕೆಪಿಎಸ್‌ಸಿ ಅಧ್ಯಕ್ಷರ ನೇಮಕ ಕುರಿತು ‘ದಿ ಫೈಲ್‌’ ವರದಿ ವಿಸ್ತರಿಸಿದ ಪ್ರಜಾವಾಣಿ

thefilestack

thefilestack

Next Post

ಸಹಭಾಗಿ; ಕೆಪಿಎಸ್‌ಸಿ ಅಧ್ಯಕ್ಷರ ನೇಮಕ ಕುರಿತು 'ದಿ ಫೈಲ್‌' ವರದಿ ವಿಸ್ತರಿಸಿದ ಪ್ರಜಾವಾಣಿ

Discussion about this post

Recommended

ಬೇನಾಮಿ ಸ್ವಸಹಾಯ ಸಂಘಗಳಿಗೂ ಲಕ್ಷಾಂತರ ರು ಬಿಡುಗಡೆ; ‘ಐರಾವತ’ದಲ್ಲೂ ‘ಸಮೃದ್ಧಿ’

2 years ago

15ನೇ ಹಣಕಾಸು ಆಯೋಗ; 1,503.70 ಕೋಟಿ ಬಾಕಿ ಉಳಿಸಿಕೊಂಡರೂ ತುಟಿಬಿಚ್ಚದ ಈಶ್ವರಪ್ಪ

5 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd