the file
No Result
View All Result
Subscribe to get Updates
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version
The File
No Result
View All Result
Home GOVERNANCE

ಮಾತಾಡ್‌ ಮಾತಾಡ್‌ ಕನ್ನಡ ಅಭಿಯಾನಕ್ಕೆ ಆಸಕ್ತಿ, ಕನ್ನಡ ಶಾಲೆಗಳಿಗೆ ಹುದ್ದೆ ಮಂಜೂರಾತಿಗೆ ನಿರಾಸಕ್ತಿ

thefilestack by thefilestack
November 8, 2021
in GOVERNANCE
0
0
SHARES
0
VIEWS
Share on FacebookShare on Twitter

ಬೆಂಗಳೂರು; ಮಾತಾಡ್‌ ಮಾತಾಡ್‌ ಕನ್ನಡ ಅಭಿಯಾನ ಆರಂಭಿಸಿ ಭರ್ಜರಿ ಪ್ರಚಾರ ಪಡೆದಿರುವ ರಾಜ್ಯ ಬಿಜೆಪಿ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ಹುದ್ದೆಗಳ ಮಂಜೂರಾತಿ ಮತ್ತು ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡದಿರುವುದು ಇದೀಗ ಬಹಿರಂಗವಾಗಿದೆ.

ಆದರೆ ಇದೇ ಹೊತ್ತಿನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಹುದ್ದೆಗಳ ಮಂಜೂರಾತಿ ಮತ್ತು ಬಾಕಿ ಇರುವ ಸಾವಿರಾರು ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದೆ. ಕೋವಿಡ್‌ ಪರಿಸ್ಥಿತಿಯನ್ನು ಮುಂದಿರಿಸಿಕೊಂಡು ಚಾಲ್ತಿಯಲ್ಲಿರುವ ಯೋಜನೆಗಳನ್ನೂ ಮುಕ್ತಾಯಗೊಳಿಸುತ್ತಿರುವ ಸರ್ಕಾರವು ಇಲಾಖೆಗಳ ನಡುವೆಯೇ ತಾರತಮ್ಯ ಎಸಗುತ್ತಿದೆ ಎಂಬ ಆರೋಪಕ್ಕೆ ಗುರಿಯಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಬಾಕಿ ಇರುವ ಅನುದಾನ ಬಿಡುಗಡೆ ಮಾಡದೆಯೇ ಉನ್ನತ ಶಿಕ್ಷಣ ಇಲಾಖೆಗೆ ಬಾಕಿ ಇದ್ದ ಸಾವಿರಾರು ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡುತ್ತಿರುವುದೇ ಸರ್ಕಾರದ ತಾರತಮ್ಯಕ್ಕೆ ನಿದರ್ಶನ ಒದಗಿಸಿದಂತಾಗಿದೆ.

ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಅವರ ಉಪಸ್ಥಿತಿಯಲ್ಲಿ 2021ರ ಅಕ್ಟೋಬರ್‌ 11ರಂದು ನಡೆದಿದ್ದ ಸಭೆಯಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಗೆ ಅನುದಾನ ಹಂಚಿಕೆಯಲ್ಲಾಗುತ್ತಿರುವ ತಾರತಮ್ಯವಾಗುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯರು ಪ್ರಸ್ತಾಪಿಸಿರುವುದು ಸಭೆ ನಡವಳಿಯಿಂದ ತಿಳಿದು ಬಂದಿದೆ. ಈ ನಡವಳಿ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

1995ರಿಂದ 2014ನೇ ಸಾಲಿನಲ್ಲಿ ಆರಂಭವಾಗಿರುವ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಯನ್ನು ವೇತಾನುದಾನಕ್ಕೆ ಒಳಪಡಿಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಸಭೆಯಲ್ಲಿ ಚರ್ಚಿಸಲಾಗಿದೆ. ‘2014-15ರವರೆಗೆ ಆರಂಭವಾಗಿರುವ ಕನ್ನಡ ಶಾಲೆಗಳಿಗೆ ವೇತಾನುದಾನವೂ ಇಲ್ಲ, ಬಿಸಿಯೂಟ, ಬೈಸಿಕಲ್‌ ನೀಡುವುದು ಸೇರಿದಂತೆ ಯಾವುದೇ ಸವಲತ್ತು ಸಿಗುತ್ತಿಲ್ಲ,’ ಎಂದು ಪರಿಷತ್‌ ಸದಸ್ಯ ಶ್ರೀಕಂಠೇಗೌಡ ಅವರು ಸಭೆಯಲ್ಲಿ ಪ್ರಸ್ತಾಪಿಸಿರುವುದು ಗೊತ್ತಾಗಿದೆ.

2000ವರೆಗೆ ಶಾಲಾ ಕಾಲೇಜುಗಳನ್ನು ವೇತಾನುದಾನಕ್ಕೆ ಅಳವಡಿಸಲು ಅಂದಾಜು 110 ಕೋಟಿ ರುಪಾಯಿ ವೆಚ್ಚವಾಗಲಿದೆ. ಅಲ್ಲದೆ ಬೋಧಕ-ಬೋಧಕೇತರ ಹುದ್ದೆಗಳನ್ನು ಸೇರಿಸಿದರೆ ಒಟ್ಟು 2,250 ಕೋಟಿ ಹೊರೆಯಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಭೆಗೆ ಉತ್ತರಿಸಿದ್ದಾರೆ.

ಅಲ್ಲದೆ ಕೆಲವು ಶಿಕ್ಷಣ ಸಂಸ್ಥೆಗಳು ವೇತಾನುದಾನಕ್ಕೆ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಸಲ್ಲಿಸಿರುವ ಶಿಕ್ಷಣ ಸಂಸ್ಥೆಗಳ ಪ್ರಸ್ತಾವನೆಗೆ ಹಣಕಾಸು ಇಲಾಖೆ ಅನುಮತಿ ನೀಡಿಲ್ಲ. ಕೊರೊನಾ ಕಾರಣವನ್ನು ಮುಂದಿರಿಸಿರುವ ಹಣಕಾಸು ಇಲಾಖೆಯು ಅನುಮತಿ ನೀಡಿಲ್ಲ ಎಂದೂ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಭೆಗೆ ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

ಆದರೆ ಕೋವಿಡ್‌ ಪರಿಸ್ಥಿತಿ ಇದ್ದರೂ ಉನ್ನತ ಶಿಕ್ಷಣ ಇಲಾಖೆಗೆ ಹುದ್ದೆಗಳ ಮಂಜೂರಾತಿ ಮಾಡುತ್ತಿರುವುದನ್ನು ಪರಿಷತ್‌ ಸದಸ್ಯ ಪುಟ್ಟಣ್ಣ ಅವರು ಬಹಿರಂಗಪಡಿಸಿರುವುದು ನಡವಳಿಯಿಂದ ಗೊತ್ತಾಗಿದೆ.

‘ಕೋವಿಡ್‌ ಪರಿಸ್ಥಿತಿ ಇದ್ದರೂ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಹುದ್ದೆಗಳ ಮಂಜೂರಾತಿ ಹಾಗೂ ಪೆಂಡಿಂಗ್ ಇರುವ ಸಾವಿರಾರು ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಪ್ರಾಥಮಿಕ ಪ್ರೌಢಶಿಕ್ಷಣ ಇಲಾಖೆಗೆ ಮಾತ್ರ ಏಕೆ ಕೊಡುತ್ತಿಲ್ಲ, ಬಿಇಒ, ಡಿಡಿಪಿಐ ಕಚೇರಿಗಳಲ್ಲಿ ವರ್ಷಾನುಗಟ್ಟಲೇ ಕಚೇರಿಗಳಲ್ಲಿ ಕಡತಗಳನ್ನು ಉಳಿಸಿಕೊಳ್ಳುವ ಬಗ್ಗೆ ಆಕ್ಷೇಪಣೆಗಳಿವೆ,’ ಎಂದು ಪುಟ್ಟಣ್ಣ ಅವರು ಸಭೆಯಲ್ಲಿ ಸಚಿವರ ಗಮನಕ್ಕೆ ತಂದಿರುವುದು ನಡವಳಿಯಿಂದ ತಿಳಿದು ಬಂದಿದೆ.

1987ರಿಂದ 1995ರವರೆಗೆ ಉಳಿದಿರುವ ಶಾಲೆ-ಕಾಲೇಜುಗಳು ಸೇರಿ ಒಟ್ಟು 38 ಸಂಸ್ಥೆಗಳಿಗೆ ವೇತಾನುದಾನ ನೀಡುವ ಪ್ರಸ್ತಾವನೆಗಳಿವೆ. ಒಂದೇ ಬಾರಿ ಎನ್ನುವಂತೆ ಮಂಜೂರಾತಿಗೆ ಹಣಕಾಸು ಇಲಾಖೆಗೆ ಕಳಿಸಿದ್ದರೂ ಅನುಮತಿ ದೊರೆತಿಲ್ಲ ಎಂದು ಪ್ರಧಾನ ಕಾರ್ಯದರ್ಶಿ ಮಾಹಿತಿ ಒದಗಿಸಿದ್ದಾರೆ.

1987ರಿಂದ 1994-95ನೇ ಸಾಲಿನ ಅವಧಿಯಲ್ಲಿ ಆರಂಭಗೊಂಡಿರುವ ಶಾಲೆಗಳ ಪೈಕಿ 116 ಪ್ರಾಥಮಿಕ, 32 ಪ್ರೌಢಶಾಲೆ, 29 ಪದವಿ ಪೂರ್ವ ಕಾಲೇಜುಗಳು ಸೇರಿದಂತೆ ಒಟ್ಟು 177 ಶಾಲಾ ಕಾಲೇಜುಗಳನ್ನು ವೇತಾನುದಾನಕ್ಕೆ ಒಳಪಡಿಸಲು ಪ್ರಸ್ತಾವನೆ ಸಲ್ಲಿಕೆಯಾಗಿವೆ. 120 ವಿದ್ಯಾರ್ಥಿಗಳ ಸಂಖ್ಯಾ ಬಲ ಇರುವ 178 ದೈಹಿಕ ಶಿಕ್ಷಕರ ಉಪನ್ಯಾಸಕರ ಹುದ್ದೆಗಳನ್ನು ವೇತನ ಅನುದಾನಕ್ಕೆ ಒಳಪಡಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

Tags: Aided SchoolsB C NageshBasavaraj BommaiBasavaraj HorattiD K ShivakumarDR C N Ashwath NarayanGrants for Kannada Medium Schollsh d kumarswamyK T Srikante GowdaKannada Medium SchoolsLegislature CouncilPrimary EducationPrimary Secondary EducationPuttanna MLCSiddaramaiahಅ ದೇವೇಗೌಡಅನುದಾನ ರಹಿತ ಶಾಲೆಗಳುಅನುದಾನಿತ ಶಾಲೆಗಳಿಗೆ ಅನುದಾನಅನುದಾನಿತ ಶಾಲೆಗಳುಎಚ್‌ ಡಿ ಕುಮಾರಸ್ವಾಮಿಕನ್ನಡ ಮಾಧ್ಯಮಕನ್ನಡ ಶಾಲೆಗಳಿಗೆ ತಾರತಮ್ಯಕನ್ನಡ ಶಾಲೆಗಳುಕೆ ಟಿ ಶ್ರೀಕಂಠೇಗೌಡಡಾ ಸಿ ಎನ್‌ ಅಶ್ವಥ್‌ ನಾರಾಯಣ್‌ಡಿ ಕೆ ಶಿವಕುಮಾರ್ಪುಟ್ಟಣ್ಣ ಎಂಎಲ್‌ಸಿಪ್ರಾಥಮಿಕ ಶಿಕ್ಷಣಪ್ರೌಢಶಿಕ್ಷಣಬಸವರಾಜ ಬೊಮ್ಮಾಯಿಬಸವರಾಜ ಹೊರಟ್ಟಿಬಿ ಸಿ ನಾಗೇಶ್‌ವಿಧಾನಪರಿಷತ್‌ವೇತಾನುದಾನವೈ ಎ ನಾರಾಯಣಸ್ವಾಮಿಶಶಿಲ್‌ ಜಿ ನಮೋಶಿಸಿದ್ದರಾಮಯ್ಯಹುದ್ದೆಗಳ ಮಂಜೂರಾತಿ
Advertisement Banner
Previous Post

‘ದಿ ಫೈಲ್‌’ ವರದಿ ಪರಿಣಾಮ; ಕಡತ ವಿಲೇವಾರಿ ಮಾಡದ ಮೈಗಳ್ಳರಿಗೆ ಸಿಎಂ ತರಾಟೆ

Next Post

‘ದಿ ಫೈಲ್‌’ ವರದಿ ಪರಿಣಾಮ; ಅರಸು ಸಂಶೋಧನೆ ಸಂಸ್ಥೆ ಮುಚ್ಚುವ ನಿರ್ಣಯಕ್ಕೆ ವಿರೋಧ

thefilestack

thefilestack

Next Post

'ದಿ ಫೈಲ್‌' ವರದಿ ಪರಿಣಾಮ; ಅರಸು ಸಂಶೋಧನೆ ಸಂಸ್ಥೆ ಮುಚ್ಚುವ ನಿರ್ಣಯಕ್ಕೆ ವಿರೋಧ

Recommended

ಕ್ವಾರಂಟೈನ್‌ನಿಂದ ತಪ್ಪಿಸಿಕೊಂಡ ಸದಾನಂದಗೌಡ! ಮಾರ್ಗಸೂಚಿ ಉಲ್ಲಂಘಿಸಿದ್ದೇಕೆ?

6 years ago

ಗ್ಯಾರಂಟಿ ಸಮೀಕ್ಷೆ 15 ಜಿಲ್ಲೆಗಳಲ್ಲಷ್ಟೇ ಪ್ರಗತಿ, 16 ರಲ್ಲಿ ಕುಂಠಿತ; ಅಧಿಕಾರಿಶಾಹಿ ವಿರುದ್ಧ ಕಿಡಿ ಕಾರಿದ ಸರ್ಕಾರ

2 years ago

Don't Miss

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

August 16, 2025

ಕಲ್ಯಾಣ ಕರ್ನಾಟಕದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಆರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಮೂವರು ಮಾತ್ರ ಅಮಾನತು

August 14, 2025
the file

THE FILE is run by the File Stack Media Private Limited. It is founded and edited by G Mahantesh, a veteran investigative journalist who has worked in the past for mainstream news television, broadsheet newspapers and digital ventures.

Follow us

Recent News

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

August 18, 2025

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

August 18, 2025

Categories

  • Blog
Support Us
  • About
  • Advertise
  • Privacy & Policy
  • Contact

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd

No Result
View All Result
  • Home
  • CBI/CID
  • RTI
  • GOVERNANCE
  • IT/ED
  • LEGISLATURE
  • LOKAYUKTA
  • About Us
  • Contact Us
  • Kannada Version

© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd