ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಆರೋಪಿತರ ಮನವಿಯಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಯ ಪ್ರಸ್ತಾಪ
ಬೆಂಗಳೂರು; ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಈಗಾಗಲೇ ಸಚಿವ ಬಿ ನಾಗೇಂದ್ರ ಅವರ ತಲೆದಂಡವೂ ಆಗಿದೆ. ...




