ಕಾಮಗಾರಿಗಳಲ್ಲಿ ಭಾರೀ ಭ್ರಷ್ಟಾಚಾರ; ಹೆಚ್ಚಿನ ಲಂಚಕ್ಕೆ ಬೇಡಿಕೆ, ಗುತ್ತಿಗೆದಾರರಿಂದಲೇ ದೂರು, ನಡೆಯದ ತನಿಖೆ
ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ನಡೆಯುತ್ತಿರುವ ಕಾಮಗಾರಿಗಳಲ್ಲಿ ಭಾರೀ ಅಕ್ರಮ ಮತ್ತು ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸರ್ಕಾರಕ್ಕೂ ಹಲವು ದೂರುಗಳು ದಾಖಲಾಗಿವೆ. ...

