ಜನಸೇವಾ ಟ್ರಸ್ಟ್‌ಗೆ 35 ಎಕರೆ ಗೋಮಾಳ; ಕ್ಯಾಬಿನೆಟ್ ಅನುಮೋದನೆಗೂ ಮುನ್ನ ತಿರಸ್ಕೃತಗೊಂಡಿದ್ದ ಪ್ರಸ್ತಾವನೆ
ಬೆಂಗಳೂರು; ಎಪ್ಪತ್ತು ಕೋಟಿ ರು. ಬೆಲೆಬಾಳುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯೇ ತಿರಸ್ಕೃತಗೊಂಡಿತ್ತು. ...

